Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಜುಲೈ 7ರ ರಾಶಿಫಲ: ಈ ದಿನ 7 ರಾಶಿಯವರಿಗೆ ಆರ್ಥಿಕವಾಗಿ ಒಳ್ಳೆಯದಿದೆ
ವೈದಿಕ ಶಾಸ್ತ್ರದ ಪ್ರಕಾರ ಜುಲೈ 7ರ ಭವಿಷ್ಯ ನೀಡಲಾಗಿದ್ದು ಈ ದಿನ ಬಹುತೇಕ ರಾಶಿಯವರಿಗೆ ತುಂಬಾನೇ ಶುಭವಾಗಿದೆ. ಈ ದಿನ ನಿಮ್ಮ ರಾಶಿಗೆ ಹೇಗಿರಲಿದೆ ಎಂದು ನೋಡೋಣ ಬನ್ನಿ:
ದಿನಾಂಕ: ಜುಲೈ 7
ತಿಥಿ: ಪಂಚಮಿ
ನಕ್ಷತ್ರ: ಶತಾಭಿಷ
ಪಕ್ಷ: ಕೃಷ್ಣ ಪಕ್ಷ
ರಾಹುಕಾಲ: ಬೆಳಗ್ಗೆ 10:48ರಿಂದ ಮಧ್ಯಾಹ್ನ 12:25ರವರೆಗೆ
ಮೇಷ ರಾಶಿ
ಇಂದು ಹೆಚ್ಚು ಕೆಲಸದ ಒತ್ತಡ ಅಧಿಕವಿರಲಿದೆ. ನೀವು ಬಿಡುವು ಸಿಕ್ಕಾಗ ನಿಮ್ಮ ಸಮಯವನ್ನು ಸದುಪಯೋಗ ಪಡಿಸಿಕೊಳ್ಳಲು ಪ್ರಯತ್ನಿಸಿ, ಹಣದ ಪರಿಸ್ಥಿತಿ ಚೆನ್ನಾಗಿರಲಿದೆ. ನಿಮ್ಮ ಆರ್ಥಿಕ ಸ್ಥಿತಿಯಲ್ಲಿ ಸುಧಾರಣೆಯ ಬಲವಾದ ಸಾಧ್ಯತೆಯಿದೆ. ಆದರೆ ನೀವು ತುಂಬಾ ಖರ್ಚು ಮಾಡಲು ಸಲಹೆ ನೀಡಲಾಗಿದೆ.
ಅದೃಷ್ಟದ ಬಣ್ಣ: ಮರೂನ್
ಅದೃಷ್ಟದ ಸಂಖ್ಯೆ: 4
ಅದೃಷ್ಟದ ಸಮಯ: ಬೆಳಿಗ್ಗೆ 8:15 ರಿಂದ 10 ರವರೆಗೆ

ವೃಷಭ ರಾಶಿ
ಈ ದಿನ ಸಂಗಾತಿ ರೊಮ್ಯಾಂಟಿಕ್ ಮೂಡ್‌ನಲ್ಲಿರುತ್ತಾರೆ. ನೀವಿಬ್ಬರು ಚಿಕ್ಕ ಟ್ರಿಪ್ ಹೋಗಬಹುದು. ಅವಾಹಿತರಾಗಿದ್ದರೆ ವಿಶೇಷ ವ್ಯಕ್ತಿಯನ್ನು ಭೇಟಿಯಾಗಬಹುದು. ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ. ನಿಮ್ಮ ಆಪ್ತರಿಂದ ಈ ದಿನ ನೀವು ಕೆಲವು ಪ್ರಯೋಜನಕಾರಿ ಸಲಹೆಗಳನ್ನು ಪಡೆಯಬಹುದು. ನಿಮ್ಮ ಆರೋಗ್ಯ ಚೆನ್ನಾಗಿರಲಿದೆ.
ಅದೃಷ್ಟದ ಬಣ್ಣ: ಗಾಢ ಕೆಂಪು
ಅದೃಷ್ಟದ ಸಂಖ್ಯೆ: 11
ಅದೃಷ್ಟದ ಸಮಯ: ಸಂಜೆ 5 ರಿಂದ ರಾತ್ರಿ 8 ರವರೆಗೆ
ಮಿಥುನ ರಾಶಿ
ನೀವು ಉದ್ಯಮಿಯಾಗಿದ್ದರೆ ಮತ್ತು ಹೊಸ ಕೆಲಸವನ್ನು ಪ್ರಾರಂಭಿಸಲಿದ್ದರೆ, ನಿಮ್ಮ ಸ್ವಂತ ನಿರ್ಧಾರಗಳನ್ನು ಎಚ್ಚರಿಕೆಯಿಂದ ತೆಗೆದುಕೊಳ್ಳಿ. ವೈಯಕ್ತಿಕ ಜೀವನದಲ್ಲಿ ಪರಿಸ್ಥಿತಿ ಅಷ್ಟು ಚೆನ್ನಾಗಿರಲ್ಲ. ಈ ದಿನ ನಿಮ್ಮ ಆರ್ಥಿಕ ಸ್ಥಿತಿ ಮತ್ತಷ್ಟು ಸುಧಾರಣೆಯಾಗಲಿದೆ. ನಿಮ್ಮ ಆರೋಗ್ಯದ ಕಡೆ ಗಮನ ಹರಿಸಿ.
ಅದೃಷ್ಟದ ಬಣ್ಣ: ಬಿಳಿ
ಅದೃಷ್ಟದ ಸಂಖ್ಯೆ: 39
ಅದೃಷ್ಟದ ಸಮಯ: ಮಧ್ಯಾಹ್ನ 1 ರಿಂದ ಮಧ್ಯಾಹ್ನ 3 ರವರೆಗೆ
ಕರ್ಕ ರಾಶಿ
ಪ್ರೇಮಿಗಳಿಗೆ ಈ ದಿನ ಅನುಕೂಲಕರವಾಗಿದೆ. ನೀವು ಒಬ್ಬರನ್ನೊಬ್ಬರು ಅರ್ಥ ಮಾಡಿಕೊಳ್ಳಲು ಪ್ರಯತ್ನಿಸಿ. ಈ ರಾಶಿಯ ವಿವಾಹಿತರಿಗೆ ಒಳ್ಳೆಯದಾಗಲಿದೆ. ಹಣಕಾಸಿನ ಪರಿಸ್ಥಿತಿ ಚೆನ್ನಾಗಿರಲಿದೆ. ನಿಮ್ಮ ಆರ್ಥಿಕ ಪ್ರಯತ್ನ ಯಶಸ್ವಿಯಾಗಲಿದೆ. ನಿಮ್ಮ ಆರೋಗ್ಯ ಚೆನ್ನಾಗಿರುತ್ತದೆ.
ಅದೃಷ್ಟದ ಬಣ್ಣ: ಕೆನೆ
ಅದೃಷ್ಟದ ಸಂಖ್ಯೆ: 5
ಅದೃಷ್ಟದ ಸಮಯ: ಬೆಳಿಗ್ಗೆ 4:15 ರಿಂದ 9:00 ರವರೆಗೆ
ಸಿಂಹ ರಾಶಿ
ಹಳೆಯ ವಿಷಯ ನೆನೆಸಿಕೊಂಡು ಮನಸ್ಸಿಗೆ ಬೇಸರ ಮಾಡಿಕೊಳ್ಳಬೇಡಿ. ನಕಾರಾತ್ಮಕ ಆಲೋಚನೆಗಳಿಂದ ದೂರವಿರುವುದು ಒಳ್ಳೆಯದು. ನೀವು ಪ್ರಮುಖ ಕೆಲಸಗಳತ್ತ ಗಮನಹರಿಸಿದರೆ ಒಳ್ಳೆಯದು. ಸಂಗಾತಿಯ ನಡವಳಿಕೆಯಲ್ಲಿ ಸ್ವಲ್ಪ ಬದಲಾವಣೆ ಕಂಡು ಬಂದಂತೆ ಅನಿಸಬಹುದು, ಅವರು ನಿಮ್ಮನ್ನು ನಿರ್ಲಕ್ಷಿಸುತ್ತಿದ್ದಾರೆ ಎಂದು ನೀವು ಭಾವಿಸುವಿರಿ, ಈ ರೀತಿ ಭಾವನೆ ಬಂದರೆ ಅವರ ಜೊತೆ ನೇರವಾಗಿ ಮಾತನಾಡಿ.
ಅದೃಷ್ಟದ ಬಣ್ಣ: ಬೂದು
ಅದೃಷ್ಟದ ಸಂಖ್ಯೆ: 35
ಅದೃಷ್ಟದ ಸಮಯ: ಸಂಜೆ 5:20 ರಿಂದ ರಾತ್ರಿ 8:20 ರವರೆಗೆ
ಕನ್ಯಾ ರಾಶಿ
ನೀವು ವ್ಯಾಪಾರಸ್ಥರಾಗಿದ್ದರೆ ಅಪಾಯಕಾರಿ ನಿರ್ಧಾರಗಳನ್ನು ತೆಗೆದುಕೊಳ್ಳಬೇಡಿ. ಉದ್ಯೋಗಿಗಳು ಹೆಚ್ಚು ಶ್ರಮಿಸಬೇಕಾಗುತ್ತದೆ. ಹಣದ ವಿಷಯದಲ್ಲಿ ಈ ದಿನ ಮಿಶ್ರಫಲ. ಸಂಗಾತಿಯ ಆರೋಗ್ಯ ಚೆನ್ನಾಗಿರಲಿದೆ. ಹಳೆಯ ಕಾಯಿಲೆ ಮರುಕಳಿಸದಂತೆ ಜಾಗ್ರತೆವಹಿಸಿ.
ಅದೃಷ್ಟದ ಬಣ್ಣ: ನೀಲಿ
ಅದೃಷ್ಟದ ಸಂಖ್ಯೆ: 19
ಅದೃಷ್ಟದ ಸಮಯ: ಮಧ್ಯಾಹ್ನ 1 ರಿಂದ ಸಂಜೆ 5 ರವರೆಗೆ
ತುಲಾ ರಾಶಿ
ಮನೆಯ ವಾತಾವರಣ ತುಂಬಾ ಚೆನ್ನಾಗಿರಲಿದೆ. ಈ ದಿನ ನಿಮಗೆ ಒತ್ತಡ ಕಡಿಮೆ ಇರಲಿದೆ. ಕಚೇರಿಯಲ್ಲಿ ನಿಮ್ಮ ಕೆಲಸವನ್ನು ನಿರ್ಲಕ್ಷ್ಯ ಮಾಡಲು ಹೋಗಬೇಡಿ. ಪ್ರೇಮಿಗಳಿಗೆ ಈ ದಿನ ವಿಶೇಷವಾಗಿರಲಿದೆ. ಸಂಗಾತಿ ಜೊತೆ ಮನಸ್ತಾಪ ಉಂಟಾಗಿದ್ದರೆ ಅವರ ಮನವೊಲಿಸಲು ಪ್ರಯತ್ನಿಸಿ.
ಅದೃಷ್ಟದ ಬಣ್ಣ: ಗುಲಾಬಿ
ಅದೃಷ್ಟದ ಸಂಖ್ಯೆ: 7
ಅದೃಷ್ಟದ ಸಮಯ: ಬೆಳಿಗ್ಗೆ 7:50 ರಿಂದ 9:50 ರವರೆಗೆ
ವೃಶ್ಚಿಕ ರಾಶಿ
ಧಾರ್ಮಿಕ ವಿಷಯಗಳಲ್ಲಿ ಆಸಕ್ತಿ ಹೆಚ್ಚಾಗುವುದು. ಕೆಲಸದಲ್ಲಿ, ಇಂದು ನಿಮಗೆ ಏರಿಳಿತಗಳಿಂದ ತುಂಬಿರುತ್ತದೆ. ನಿಮ್ಮ ಕೆಲವು ಪ್ರಮುಖ ಕೆಲಸಗಳಲ್ಲಿ ಅಡೆತಡೆಗಳು ಉಂಟಾಗಬಹುದು. ಸಂಗಾತಿಯ ಬೆಂಬಲ ಸಿಗಲಿದೆ.
ಅದೃಷ್ಟದ ಬಣ್ಣ: ಆಕಾಶ ನೀಲಿ
ಅದೃಷ್ಟದ ಸಂಖ್ಯೆ: 15
ಅದೃಷ್ಟದ ಸಮಯ: ಸಂಜೆ 5 ರಿಂದ ರಾತ್ರಿ 9 ರವರೆಗೆ
ಧನು ರಾಶಿ
ನೀವು ಎಲ್ಲಾ ಚಿಂತೆಗಳನ್ನು ಮರೆತು ಈ ದಿನ ರಿಲ್ಯಾಕ್ಸ್ ಆಗಿರುತ್ತೀರಿ. ನಿಮ್ಮ ಸ್ನೇಹಿತರನ್ನು ಭೇಟಿಯಾಗಬಹುದು. ನಿಮ್ಮ ಆರ್ಥಿಕ ಸ್ಥಿತಿಯನ್ನು ಬಲಪಡಿಸಲು, ನಿಮ್ಮ ಖರ್ಚುಗಳನ್ನು ನೀವು ಕಡಿತಗೊಳಿಸಬೇಕು. ಕೌಟುಂಬಿಕ ಜೀವನ ಸುಖಮಯವಾಗಿರುತ್ತದೆ.
ಅದೃಷ್ಟದ ಬಣ್ಣ: ಕೆನೆ
ಅದೃಷ್ಟದ ಸಂಖ್ಯೆ: 12
ಅದೃಷ್ಟದ ಸಮಯ: ಬೆಳಿಗ್ಗೆ 7 ರಿಂದ 9:50 ರವರೆಗೆ
ಮಕರ ರಾಶಿ
ನೀವು ಹಣಕಾಸಿನ ಮುಗ್ಗಟ್ಟು ಎದುರಿಸಬೇಕಾಗಬಹುದು. ಹಣದ ಕೊರತೆಯಿಂದ ನಿಮ್ಮ ಕೆಲವು ಕೆಲಸಗಳು ಅರ್ಧಕ್ಕೆ ನಿಲ್ಲುವ ಸಾಧ್ಯತೆ ಇದೆ. ಈ ದಿನ ಮನೆಯ ಸದಸ್ಯರ ಬೆಂಬಲ ಸಿಗಲಿದೆ. ನಿಮ್ಮ ಪೋಷಕರು ನೀಡುವ ಸಲಹೆ ನಿರ್ಲಕ್ಷ್ಯ ಮಾಡಲು ಹೋಗಬೇಡಿ. ಆರೋಗ್ಯದ ಕಡೆಗೆ ಗಮನಹರಿಸಿ.
ಅದೃಷ್ಟದ ಬಣ್ಣ: ಕಿತ್ತಳೆ
ಅದೃಷ್ಟದ ಸಂಖ್ಯೆ: 26
ಅದೃಷ್ಟದ ಸಮಯ: ಸಂಜೆ 4:15 ರಿಂದ 7:20 ರವರೆಗೆ
ಕುಂಭ ರಾಶಿ
ದಾಂಪತ್ಯ ಜೀವನ ಚೆನ್ನಾಗಿರಲಿದೆ. ಪ್ರೇಮಿಗಳಿಗೂ ಈ ದಿನ ವಿಶೇಷವಾಗಿರಲಿದೆ. ಈ ದಿನ ನೀವು ಸಂಗಾತಿಯೊಂದಿಗೆ ಖುಷಿಯಾಗಿ ಸಮಯ ಕಳೆಯುತ್ತೀರಿ. ಯಾವುದೇ ಧಾರ್ಮಿಕ ಕಾರ್ಯಕ್ರಮವನ್ನು ಮನೆಯಲ್ಲಿ ಆಯೋಜಿಸಬಹುದು. ನಿಮ್ಮ ಆರೋಗ್ಯ ಚೆನ್ನಾಗಿರುತ್ತದೆ.
ಅದೃಷ್ಟದ ಬಣ್ಣ: ಹಳದಿ
ಅದೃಷ್ಟದ ಸಂಖ್ಯೆ: 16
ಅದೃಷ್ಟದ ಸಮಯ: ಬೆಳಿಗ್ಗೆ 6 ರಿಂದ 8:25 ರವರೆಗೆ
ಮೀನ ರಾಶಿ
ಈ ದಿನ ನಿಮಗೆ ಶುಭವಾಗಿದೆ. ನಿಮ್ಮ ಕೆಲಸವನ್ನು ನೋಡಿ ಕುಟುಂಬದ ಸದಸ್ಯರು ಬಹಳವಾಗಿ ಮೆಚ್ಚುತ್ತಾರೆ. ಸಂಗಾತಿಯ ಯಶಸ್ಸು ನಿಮಗೆ ಖುಷಿ ಕೂಡಲಿದೆ. ಹಣದ ಪರಿಸ್ಥಿತಿ ಉತ್ತಮವಾಗಿರುತ್ತದೆ. ಕೆಲಸದ ದೃಷ್ಟಿಯಿಂದ ಇಂದು ನಿಮಗೆ ಶುಭವಾಗಲಿದೆ.
ಅದೃಷ್ಟದ ಬಣ್ಣ: ನೇರಳೆ
ಅದೃಷ್ಟದ ಸಂಖ್ಯೆ: 20
ಅದೃಷ್ಟದ ಸಮಯ: ಮಧ್ಯಾಹ್ನ 12:45 ರಿಂದ ಮಧ್ಯಾಹ್ನ 3:00 ರವರೆಗೆ



Click it and Unblock the Notifications
