Latest Updates
-
ಐಟಿಆರ್ ಗಡುವು ಮಿಸ್ ಆಯ್ತಾ? ದಂಡ ತಪ್ಪಿಸಲು ಈಗಲೇ ಈ ಕೆಲಸ ಮಾಡಿ, ಆರ್ಥಿಕ ನಷ್ಟದಿಂದ ಪಾರಾಗಿ! -
ಕರ್ನಾಟಕದಲ್ಲಿ ಭಾರಿ ಮಳೆ: ನಿಮ್ಮ ಮನೆ ಮತ್ತು ಕುಟುಂಬವನ್ನು ಸುರಕ್ಷಿತವಾಗಿಡಲು ಇಂದೇ ಈ ಕೆಲಸ ಮಾಡಿ! -
ಪೀನಟ್ ಬಟರ್ನಲ್ಲಿ ವಿಷಕಾರಿ ಶಿಲೀಂಧ್ರ? ನಿಮ್ಮ ಆರೋಗ್ಯ ಕಾಪಾಡಲು ಈ ವಿಷಯಗಳನ್ನು ಮರೆಯದಿರಿ -
ಫ್ರೆಂಡ್ಶಿಪ್ ಡೇ: ಕೊನೆಯ ನಿಮಿಷದಲ್ಲಿ ಸ್ನೇಹಿತರಿಗೆ ನೀಡಲು 499 ರೂ. ಒಳಗಿನ ಬೆಸ್ಟ್ ಗಿಫ್ಟ್ ಐಡಿಯಾಗಳು! -
CWG 2026: ಗಂಟೆಗಟ್ಟಲೆ ಟಿವಿ ಮುಂದೆ ಕುಳಿತು ಪಂದ್ಯ ನೋಡುವಿರಾ? ಈ 8 ನಿಮಿಷದ ವರ್ಕೌಟ್ ಮಿಸ್ ಮಾಡ್ಬೇಡಿ! -
ಶ್ರಾವಣ ಮಾಸದ ಉಪವಾಸ: ದಂಪತಿಗಳೇ, ಹಬ್ಬದ ಆಚರಣೆಯಲ್ಲಿ ಗೊಂದಲ ಬೇಡ, ಈ ಟಿಪ್ಸ್ ಫಾಲೋ ಮಾಡಿ! -
ಬೆಂಗಳೂರಿನಲ್ಲಿ ಹೊಸ ನಿಯಮ: ಆಗಸ್ಟ್ 15ರೊಳಗೆ ನಿಮ್ಮ ಮನೆ ಸ್ವಚ್ಛಗೊಳಿಸದಿದ್ದರೆ ಬೀಳಲಿದೆ ಭಾರಿ ದಂಡ! -
ಎನರ್ಜಿ ಡ್ರಿಂಕ್ಸ್ ಪ್ರಿಯರೇ ಎಚ್ಚರ! FSSAI ಹೊಸ ನಿಯಮದ ಹಿಂದಿನ ಅಸಲಿ ಸತ್ಯವೇನು? -
ಭಾರತದ ಆಕಾಶದಲ್ಲಿ ಬೆಂಕಿಯ ಉಂಡೆಗಳ ಸಂಭ್ರಮ: ಈ ಅದ್ಭುತ ಉಲ್ಕಾಪಾತವನ್ನು ಮಿಸ್ ಮಾಡ್ಬೇಡಿ! -
ಶ್ವಾಸಕೋಶದ ಆರೋಗ್ಯಕ್ಕೆ 7 ನಿಮಿಷದ ಬೆಳಗಿನ ಅಭ್ಯಾಸ: ಕಲುಷಿತ ಗಾಳಿಯಿಂದ ರಕ್ಷಣೆ ಪಡೆಯುವುದು ಹೇಗೆ?
ಜುಲೈ 9ರ ರಾಶಿಭವಿಷ್ಯ: ರಾಶಿಫಲ ಪ್ರಕಾರ ಈ ಭಾನುವಾರ ನಿಮ್ಮ ರಾಶಿಗೆ ಹೇಗಿರಲಿದೆ?
ವೈದಿಕ ಶಾಸ್ತ್ರದ ಪ್ರಕಾರ ಜುಲೈ 9ರ ಭವಿಷ್ಯ ನೀಡಲಾಗಿದ್ದು ಭಾನುವಾರ ಯಾವ ರಾಶಿಯವರಿಗೆ ಹೇಗಿರಲಿದೆ ಎಂದು ನೋಡೋಣ...
ದಿನಾಂಕ: ಜುಲೈ 9
ತಿಥಿ: ಸಪ್ತಮಿ
ನಕ್ಷತ್ರ: ಉತ್ತರ ಭಾದ್ರಪದ
ಪಕ್ಷ: ಕೃಷ್ಣ ಪಕ್ಷ
ರಾಹುಕಾಲ: ಸಂಜೆ 05:14ರಿಂದ 06:50ರವರೆಗೆ
ಮೇಷ ರಾಶಿ
ಇಂದು ಹಣದ ವಿಷಯದಲ್ಲಿ ಈ ದಿನ ತುಂಬಾ ದುಬಾರಿಯಾಗಲಿದೆ. ಈ ದಿನ ಆರ್ಥಿಕ ಸ್ಥಿತಿ ಹದಗೆಡಲಿದೆ. ಸಂಗಾತಿಯ ಕೆಟ್ಟ ನಡವಳಿಕೆಯು ನಿಮ್ಮ ಭಾವನೆಗಳನ್ನು ನೋಯಿಸಬಹುದು. ಅಂತಹ ಪರಿಸ್ಥಿತಿಯಲ್ಲಿ, ನೀವು ನಿಮ್ಮನ್ನು ನಿಯಂತ್ರಿಸಿಕೊಳ್ಳಬೇಕು. ಆರೋಗ್ಯಕ್ಕೆ ಸಂಬಂಧಿಸಿದಂತೆ ಹೆಚ್ಚು ಜಾಗ್ರತೆವಹಿಸಲು ಸಲಹೆ ನೀಡಲಾಗಿದೆ.
ಅದೃಷ್ಟದ ಬಣ್ಣ: ಹಳದಿ
ಅದೃಷ್ಟದ ಸಂಖ್ಯೆ: 7
ಅದೃಷ್ಟದ ಸಮಯ: ಬೆಳಗ್ಗೆ 5 ರಿಂದ 9:50 ರವರೆಗೆ

ವೃಷಭ ರಾಶಿ
ಕಚೇರಿಯಲ್ಲಿ ಉನ್ನತ ಅಧಿಕಾರಿಗಳೊಂದಿಗೆ ಮಾತನಾಡುವಾಗ ನಿಮ್ಮ ಮಾತಿನ ಕಡೆ ಗಮನವಿರಲಿ. ಕೆಲಸದ ಕಡೆ ಗಮನ ನೀಡಲು ಸಾಧ್ಯವಾಗುವುದಿಲ್ಲ. ಆದರೆ ಕೆಲಸದ ಕಡೆ ನಿರ್ಲಕ್ಷ್ಯ ಮಾಡದಿರುವುದು ಒಳ್ಳೆಯದು. ನಿಮ್ಮ ಆರ್ಥಿಕ ಸ್ಥಿತಿ ಸಾಮಾನ್ಯಕ್ಕಿಂತ ಉತ್ತಮವಾಗಿರುತ್ತದೆ. ತಂದೆಯ ಕಡೆಯಿಂದ ಲಾಭ ಸಾಧ್ಯ. ಆರೋಗ್ಯದ ಬಗ್ಗೆ ಕಾಳಜಿ ವಹಿಸಿ, ನಿರ್ಲಕ್ಷ್ಯವು ದುಬಾರಿಯಾಗಬಹುದು.
ಅದೃಷ್ಟದ ಬಣ್ಣ: ಕಿತ್ತಳೆ
ಅದೃಷ್ಟದ ಸಂಖ್ಯೆ: 25
ಅದೃಷ್ಟದ ಸಮಯ: ಸಂಜೆ 6:20 ರಿಂದ ರಾತ್ರಿ 8:20 ರವರೆಗೆ
ಮಿಥುನ ರಾಶಿ
ಮನೆಯರೊಂದಿಗೆ ಖುಷಿಯಾಗಿ ಸಮಯ ಕಳೆಯುತ್ತೀರಿ. ಕಚೇರಿಯಲ್ಲಿ ನಿಮ್ಮ ಸ್ಥಾನವು ಬಲವಾಗಿರುತ್ತದೆ. ಪ್ರೇಮಿಗಳಿಗೆ, ವಿವಾಹಿತರಿಗೆ ಈ ದಿನ ಚೆನ್ನಾಗಿರಲಿದೆ. ಈ ದಿನ ನಿಮಗೆ ವಿಶೇಷವಾಗಿರಲಿದೆ.
ಅದೃಷ್ಟದ ಬಣ್ಣ: ಗಾಢ ಕೆಂಪು
ಅದೃಷ್ಟದ ಸಂಖ್ಯೆ: 6
ಅದೃಷ್ಟದ ಸಮಯ: ಬೆಳಿಗ್ಗೆ 9 ರಿಂದ ಮಧ್ಯಾಹ್ನ 12 ರವರೆಗೆ
ಕರ್ಕ ರಾಶಿ
ಸಂಗಾತಿಯೊಂದಿಗಿನ ಸಂಬಂಧದಲ್ಲಿ ಪ್ರೀತಿ ಹೆಚ್ಚಾಗಲಿದೆ. ಮಕ್ಕಳ ವಿದ್ಯಾಭ್ಯಾಸಕ್ಕೆ ಸಂಬಂಧಿಸಿದ ಚಿಂತೆ ದೂರವಾಗಲಿದೆ. ಶಿಕ್ಷಣ ಕ್ಷೇತ್ರದಲ್ಲಿ ಅವರ ಸಾಧನೆ ಉತ್ತಮವಾಗಿರುತ್ತದೆ. ಹಣದ ವಿಚಾರದಲ್ಲಿ ಸ್ವಲ್ಪ ಜಾಗ್ರತೆ ವಹಿಸುವಂತೆ ಸಲಹೆ ನೀಡಲಾಗಿದೆ.
ಅದೃಷ್ಟದ ಬಣ್ಣ: ನೀಲಿ
ಅದೃಷ್ಟದ ಸಂಖ್ಯೆ: 12
ಅದೃಷ್ಟದ ಸಮಯ: ಸಂಜೆ 5 ರಿಂದ ರಾತ್ರಿ 8 ರವರೆಗೆ
ಸಿಂಹ ರಾಶಿ
ಆರೋಗ್ಯ ಸಂಬಂಧಿ ಸಮಸ್ಯೆ ಎದುರಾಗಬಹುದು. ಕೆಟ್ಟ ಚಟಗಳಿಂದ ದೂರವಿರಿ. ನಿಮ್ಮ ಕೆಲಸದ ಮೇಲೆ ಸಂಪೂರ್ಣವಾಗಿ ಗಮನಹರಿಸಲು ಸಲಹೆ ನೀಡಲಾಗಿದೆ. ನಿರ್ಲಕ್ಷ್ಯವು ನಿಮ್ಮ ಪ್ರಗತಿಯನ್ನು ತಡೆಯಬಹುದು. ನಿಮ್ಮ ಸಂಗಾತಿಗೆ ಸಾಕಷ್ಟು ಸಮಯವನ್ನು ನೀಡಲು ಪ್ರಯತ್ನಿಸಿ.
ಅದೃಷ್ಟದ ಬಣ್ಣ: ಆಕಾಶ ನೀಲಿ
ಅದೃಷ್ಟದ ಸಂಖ್ಯೆ: 20
ಅದೃಷ್ಟದ ಸಮಯ: ಬೆಳಿಗ್ಗೆ 7:15 ರಿಂದ ಮಧ್ಯಾಹ್ನ 1 ರವರೆಗೆ
ಕನ್ಯಾ ರಾಶಿ
ವೈಯಕ್ತಿಕ ಜೀವನದಲ್ಲಿ ಪರಿಸ್ಥಿತಿಯು ಚೆನ್ನಾಗಿರಲಿದೆ. ಇಂದು ನೀವು ಪ್ರಭಾವಿ ಮತ್ತು ಪ್ರತಿಷ್ಠಿತ ವ್ಯಕ್ತಿಯನ್ನು ಭೇಟಿ ಮಾಡಬಹುದು. ನಿಮ್ಮ ಆರ್ಥಿಕ ಸ್ಥಿತಿಯು ಬಲವಾಗಿರುತ್ತದೆ. ನೀವು ನಿಮ್ಮ ಸೌಕರ್ಯಕ್ಕಾಗಿ ದುಬಾರಿ ವಸ್ತು ಖರಿದಿಸಬಹುದು, ಆರೋಗ್ಯದ ದೃಷ್ಟಿಯಿಂದ ದಿನವು ಉತ್ತಮವಾಗಿರುತ್ತದೆ.
ಅದೃಷ್ಟದ ಬಣ್ಣ: ಮರೂನ್
ಅದೃಷ್ಟದ ಸಂಖ್ಯೆ: 2
ಅದೃಷ್ಟದ ಸಮಯ: ಮಧ್ಯಾಹ್ನ 3:30 ರಿಂದ ಸಂಜೆ 6:20 ರವರೆಗೆ
ತುಲಾ ರಾಶಿ
ಕುಟುಂಬ ಜೀವನದಲ್ಲಿ ಪರಿಸ್ಥಿತಿ ಚೆನ್ನಾಗಿರಲಿದೆ. ಮನೆಯ ಇತರ ಸದಸ್ಯರ ಅಗತ್ಯತೆಗಳನ್ನು ಸಹ ನೀವು ನೋಡಿಕೊಳ್ಳಬೇಕು. ಇಂದು ಹಣದ ವಿಷಯದಲ್ಲಿ ಉತ್ತಮವಾಗಿರಲಿದೆ. ಸಂಗಾತಿಯೊಂದಿಗೆ ರೊಮ್ಯಾಂಟಿಕ್ ಆಗಿ ಕಳೆಯುತ್ತೀರಿ.
ಅದೃಷ್ಟದ ಬಣ್ಣ: ಬಿಳಿ
ಅದೃಷ್ಟದ ಸಂಖ್ಯೆ: 16
ಅದೃಷ್ಟದ ಸಮಯ: ಸಂಜೆ 5 ರಿಂದ 9:15 ರವರೆಗೆ
ವೃಶ್ಚಿಕ ರಾಶಿ
ವ್ಯಾಪಾರಸ್ಥರಿಗೆ ಇಂದು ಉತ್ತಮವಾಗಿದೆ. ನಿಮ್ಮ ಸ್ಥಗಿತಗೊಂಡ ಕೆಲಸವನ್ನು ಊರ್ಣಗಳಿಸಲು ಸಾಧ್ಯವಾಗುವುದು, ಇದರಿಂದ ನೀವು ಆರ್ಥಿಕ ಲಾಭವನ್ನು ಪಡೆಯುವ ಸಾಧ್ಯತೆಯಿದೆ. ನಿಮ್ಮ ಸಂಗಾತಿಯ ತಿಳುವಳಿಕೆಯೊಂದಿಗೆ, ನಿಮ್ಮ ಯಾವುದೇ ಪ್ರಮುಖ ಸಮಸ್ಯೆಗಳು ಪರಿಹರಿಸಲ್ಪಡುತ್ತವೆ.
ಅದೃಷ್ಟದ ಬಣ್ಣ: ಹಸಿರು
ಅದೃಷ್ಟದ ಸಂಖ್ಯೆ: 18
ಅದೃಷ್ಟದ ಸಮಯ: ಬೆಳಿಗ್ಗೆ 10:30 ರಿಂದ ಮಧ್ಯಾಹ್ನ 12 ರವರೆಗೆ
ಧನು ರಾಶಿ
ಈ ದಿನ ನಿಮಗೆ ಉತ್ತಮವಾಗಿರಲಿದೆ. ಮನೆಯಲ್ಲಿ ಯಾವುದೇ ಶುಭ ಕಾರ್ಯಗಳು ನಡೆಯಬಹುದು. ನಿಮ್ಮ ಜೀವನ ಸಂಗಾತಿಯ ಸಂಪೂರ್ಣ ಬೆಂಬಲವನ್ನು ನೀವು ಪಡೆಯುತ್ತೀರಿ. ನೀವು ಅವಿವಾಹಿತರಾಗಿದ್ದರೆ ನೀವು ಬಯಸಿದ ಜೀವನ ಸಂಗಾತಿಯನ್ನು ಪಡೆಯಬಹುದು. ನಿಮ್ಮ ಆರ್ಥಿಕ ಸ್ಥಿತಿ ಉತ್ತಮವಾಗಿರುತ್ತದೆ.
ಅದೃಷ್ಟದ ಬಣ್ಣ: ಗುಲಾಬಿ
ಅದೃಷ್ಟದ ಸಂಖ್ಯೆ: 21
ಅದೃಷ್ಟದ ಸಮಯ: ಬೆಳಿಗ್ಗೆ 6:15 ರಿಂದ 9:00 ರವರೆಗೆ
ಮಕರ ರಾಶಿ
ಹಣದ ವಿಷಯದಲ್ಲಿ ಚೆನ್ನಾಗಿರಲಿದೆ. ವೈವಾಹಿಕ ಜೀವನದಲ್ಲಿ ಭಿನ್ನಾಭಿಪ್ರಾಯ ಹೆಚ್ಚಾಗಬಹುದು. ಸಂಗಾತಿಯ ತಪ್ಪು ನಡವಳಿಕೆಯು ನಿಮ್ಮ ಸಂಬಂಧದಲ್ಲಿಸಮಸ್ಯೆ ತರಬಹುದು. ಕೆಲಸಕ್ಕೆ ಸಂಬಂಧಿಸಿದ ಯಾವುದೇ ಪ್ರಯತ್ನದಲ್ಲಿ ಯಶಸ್ಸಿನ ಕೊರತೆಯಿಂದಾಗಿ, ಇಂದು ನಿಮ್ಮ ಆತ್ಮವಿಶ್ವಾಸ ಕುಸಿಯಬಹುದು.
ಅದೃಷ್ಟದ ಬಣ್ಣ: ಬಿಳಿ
ಅದೃಷ್ಟದ ಸಂಖ್ಯೆ: 30
ಅದೃಷ್ಟದ ಸಮಯ: ಮಧ್ಯಾಹ್ನ 3:30 ರಿಂದ ರಾತ್ರಿ 8 ರವರೆಗೆ
ಕುಂಭ ರಾಶಿ
ಈ ದಿನ ನಿಮ್ಮ ಆರ್ಥಿಕ ಸ್ಥಿತಿ ಚೆನ್ನಾಗಿರಲಿದೆ. ಸಂಗಾತಿಯ ಜೊತೆ ಭಿನ್ನಾಭಿಪ್ರಾಯವಿರಬಹುದು. ನಿಮ್ಮ ಸಂಬಂಧದ ಬಗ್ಗೆ ನೀವು ಪ್ರಾಮಾಣಿಕವಾಗಿರಬೇಕು. ಸುಳ್ಳನ್ನು ಆಶ್ರಯಿಸುವುದನ್ನು ತಪ್ಪಿಸಿ.
ಅದೃಷ್ಟದ ಬಣ್ಣ: ಮರೂನ್
ಅದೃಷ್ಟದ ಸಂಖ್ಯೆ: 36
ಅದೃಷ್ಟದ ಸಮಯ: ಬೆಳಿಗ್ಗೆ 8:25 ರಿಂದ 11 ರವರೆಗೆ
ಮೀನ ರಾಶಿ
ಮನೆಯ ಸದಸ್ಯರ ಆರೋಗ್ಯದಲ್ಲಿ ಹಠಾತ್ ಕುಸಿತದಿಂದಾಗಿ ನಿಮಗೆ ಆತಂಕ ಉಂಟಾಗಬಹುದು. ಹಣದ ವಿಷಯದಲ್ಲಿ ದಿನವು ದುಬಾರಿಯಾಗಲಿದೆ. ವೆಚ್ಚಗಳ ಹೆಚ್ಚಳದಿಂದಾಗಿ ನಿಮ್ಮ ಬಜೆಟ್ ಅಸಮತೋಲನವಾಗಬಹುದು. ಕೆಲಸದ ವಿಷಯದಲ್ಲಿ ಇಂದು ನಿಮಗೆ ಮಿಶ್ರಫಲ.
ಅದೃಷ್ಟದ ಬಣ್ಣ: ಕಂದು
ಅದೃಷ್ಟದ ಸಂಖ್ಯೆ: 8
ಅದೃಷ್ಟದ ಸಮಯ: ಸಂಜೆ 4 ರಿಂದ ಸಂಜೆ 7 ರವರೆಗೆ



Click it and Unblock the Notifications
