Latest Updates
-
ಐಫೋನ್ 18 ಪ್ರೋ ಪ್ರೀ-ಆರ್ಡರ್: ₹7,000 ಕ್ಯಾಶ್ಬ್ಯಾಕ್ ಪಡೆಯುವುದು ಹೇಗೆ? ನಕಲಿ ಆಫರ್ಗಳಿಂದ ಎಚ್ಚರ! -
ದೆಹಲಿ ಮಳೆ: ಜಾರಿ ಬೀಳದಂತೆ ಎಚ್ಚರ, ಬೆನ್ನುನೋವಿನಿಂದ ಮುಕ್ತಿ ಪಡೆಯಲು 12 ನಿಮಿಷದ ವರ್ಕೌಟ್ ರೂಟಿನ್! -
ಗಣೇಶೋತ್ಸವದ ಸಂಭ್ರಮದಲ್ಲಿ ದಂಪತಿಗಳ ಜಗಳ ಬೇಡ: ಸಮಯ ಮತ್ತು ಬಜೆಟ್ ನಿರ್ವಹಣೆಗೆ ಇಲ್ಲಿದೆ ಸಿಂಪಲ್ ಪ್ಲಾನ್! -
ಗಣೇಶೋತ್ಸವ 2026: ಮಳೆಯ ನಡುವೆಯೂ ಪರಿಸರ ಸ್ನೇಹಿ ಹಬ್ಬ ಆಚರಣೆಗೆ ಇಲ್ಲಿದೆ ಸರಳ ಟಿಪ್ಸ್! -
ಪ್ಯಾಕ್ ಮಾಡಿದ ಆಹಾರದಲ್ಲಿ ಸಕ್ಕರೆ, ಉಪ್ಪು ಹೆಚ್ಚಿದ್ದರೆ ಕೆಂಪು ಲೇಬಲ್: ಸುಪ್ರೀಂ ಕೋರ್ಟ್ ಪ್ರಶ್ನೆ, ಗ್ರಾಹಕರಿಗೆ ಸಿಗುತ್ತಾ ಪರಿಹಾರ? -
ಝೊಮ್ಯಾಟೋದಲ್ಲಿ 'ಪೇ ಆನ್ ಡೆಲಿವರಿ' ಶುಲ್ಕದ ಶಾಕ್: ನಿಮ್ಮ ಬಿಲ್ ಹೆಚ್ಚಾಗುತ್ತಿದೆಯೇ? ಬಚಾವ್ ಆಗೋದು ಹೇಗೆ? -
ಗಣೇಶೋತ್ಸವದ ಮಳೆ ಮತ್ತು ದರ್ಶನದ ಕ್ಯೂ: ಆಯಾಸವಿಲ್ಲದೆ ಬಪ್ಪನ ದರ್ಶನ ಪಡೆಯಲು ಇಲ್ಲಿದೆ ಬೆಸ್ಟ್ ಟಿಪ್ಸ್! -
ಅಮಾವಾಸ್ಯೆಯ ದಿನ ಜಗಳ ಬೇಡ: ದಂಪತಿಗಳ ನಡುವಿನ ಪ್ರೀತಿ ಹೆಚ್ಚಿಸಲು ಈ ಸಂಭಾಷಣೆ ಸೂತ್ರಗಳು -
ಆರೆಂಜ್ ಅಲರ್ಟ್: ಭಾರಿ ಮಳೆಯಿಂದ ಮನೆ ರಕ್ಷಿಸಲು ಈ 5 ಟಿಪ್ಸ್ ಪಾಲಿಸಿ, ಸುರಕ್ಷಿತವಾಗಿರಿ! -
ಪ್ರೊಟೀನ್ ಪೌಡರ್ನಲ್ಲಿ ಹುಳುಗಳು! ಬಾಲಿವುಡ್ ನಟಿಯ ಆತಂಕ, ಎಫ್ಡಿಎ ತನಿಖೆ ಮತ್ತು ನೀವು ತಿಳಿಯಲೇಬೇಕಾದ ಸುರಕ್ಷತಾ ಟಿಪ್ಸ್
ಉಡುಪಿಯ ಬಾಹ್ಯಾಕಾಶ ವಿಜ್ಞಾನಿ ರಾಮಚಂದ್ರ ರಾವ್ ಗೌರವ ಸಮರ್ಪಿಸಿದ ಗೂಗಲ್
ಇಂದಿನ ಗೂಗಲ್ ಡೂಡಲ್ ಗಮನಿಸಿದ್ದೀರಾ? ನಮ್ಮ ಹೆಮ್ಮೆಯ ಬಾಹ್ಯಾಕಾಶ ವಿಜ್ಞಾನಿ ಉಡುಪಿಯ ರಾಮಚಂದ್ರ ರಾವ್ ಅವರ 89ನೇ ಹುಟ್ಟುಹಬ್ಬಕ್ಕೆ ಗೂಗಲ್ ಡೂಡಲ್ ಮೂಲಕ ಶುಭ ಕೋರಿದೆ. ಇವರು 'ಭಾರತದ ಸ್ಯಾಟಲೈಟ್ ಮ್ಯಾನ್' ಎಂದೇ ಪ್ರಸಿದ್ಧರಗಿದ್ದರು.

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ (ISRO) ಅಧ್ಯಕ್ಷರಾಗಿದ್ದ ರಾವ್ 1975ರಲ್ಲಿ ಭಾರತ ಬಾಹ್ಯಾಕಾಶಕ್ಕೆ ಕಳುಹಿಸಿದ ಮೊದಲ ಉಪಗ್ರಹ 'ಆರ್ಯಭಟ' ಮೇಲ್ವಿಚಾರಣೆಯ ಹೊಣೆ ಹೊತ್ತಿದ್ದರು.
ಪ್ರೊಫೆಸರ್ ರಾವ್ ಅವರು ಕರ್ನಾಟಕದ ಉಡುಪಿಯವರು. 1932ರಲ್ಲಿ ಇವರ ಜನನ. ಇವರು ವಿದ್ಯಾಭ್ಯಾಸ ಮುಗಿಸಿದ ಬಳಿಕ ಕಾಸ್ಮಿಕ್ ರೇ ಭೌತಶಾಸ್ತ್ರಜ್ಞರಾಗಿ ಹಾಗೂ ಡಾ. ವಿಕ್ರಮ್ ಸಾರಾಭಾಯ್ ಅವರ ಸಹಾಯಕರಾಗಿ ತಮ್ಮ ವೃತ್ತಿ ಜೀವನ ಪ್ರಾರಂಭಿಸಿದರು. ಇವರು ತಮ್ಮ ಡಾಕ್ಟರೇಟ್ ಪದವಿ ಬಳಿಕ ಯು ಎಸ್‌ಗೆ ತೆರಳುತ್ತಾರೆ. ಅಲ್ಲಿ ಪ್ರಾಧ್ಯಾಪಕರಾಗಿ ಕೆಲಸ ಮಾಡಿದ್ದರು, ನಾಸಾದಲ್ಲೂ ಬಾಹ್ಯಾಕಾಶ ಶೋಧಕಗಳಲ್ಲಿ ಪ್ರಯೋಗಗಳನ್ನು ನಡೆಸಿದರು.
1966ರಲ್ಲಿ ಭಾರತಕ್ಕೆ ಮರಳಿದರು. 1972ರಲ್ಲಿ ನಮ್ಮ ದೇಶದ ಉಪಗ್ರಹ ಕಾರ್ಯಕ್ರಮವನ್ನು ಮುನ್ನಡೆಸುವ ಬಾಹ್ಯಾಕಾಶ ವಿಜ್ಞಾನದ ಪ್ರಮುಖ ಸಂಸ್ಥೆಯಾದ ಫಿಸಿಕಲ್ ರಿಸರ್ಚ್ ಲ್ಯಾಬೊರೇಟರಿನಲ್ಲಿ ಕಾರ್ಯ ನಿರ್ವಹಿಸಿದರು. 1984ರಿಂದ 94ರವರೆಗೆ ಇಸ್ರೋದಲ್ಲಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದರು.
2013ರಲ್ಲಿ ಸ್ಯಾಟಲೈಟ್ ಹಾಲ್ ಆಫ್ ಫೇಮ್‌ಗೆ ಸೇರ್ಪಡೆಯಾದ ಮೊದಲ ಭಾರತೀಯ ಎಂಬ ಹೆಗ್ಗಳಿಕೆ ಇವರದ್ದು. ಬಾಹ್ಯಾಕಾಶ ವಿಜ್ಞಾನಿ 2017ರಲ್ಲಿ ಬಾಹ್ಯಾಕಾಶದಲ್ಲಿ ತಾವು ಒಂದು ನಕ್ಷತ್ರವಾದರು. ಬಾಹ್ಯಾಕಾಶದಲ್ಲಿ ಸಾಧನೆ ಮಾಡ ಬಯಸುವವರಿಗೆ ರಾವ್ ಸ್ಪೂರ್ತಿಯಾಗಿದ್ದಾರೆ.



Click it and Unblock the Notifications
