Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ತುಲಾ ರಾಶಿಯಲ್ಲಿ ಅಕ್ಟೋಬರ್ 30ರಿಂದ ತ್ರಿಗ್ರಹಿ ಯೋಗ: ಈ ರಾಶಿಯವರು ಜಾಗ್ರತೆವಹಿಸಬೇಕು
ತುಲಾ ರಾಶಿಯಲ್ಲಿ ಕೇತುವಿದೆ, ಮಂಗಳ ಗ್ರಹವಿದೆ, ಸೂರ್ಯ ಹಾಗೂ ಬುಧ ಕೂಡ ಇದೇ ರಾಶಿಯನ್ನು ಪ್ರವೇಶಿಸಿದೆ. ಕೇತು ಅಕ್ಟೋಬರ್ 30ಕ್ಕೆ ರಾಶಿ ಬದಲಾಯಿಸಲಿದೆ. ನಂತರ ತ್ರಿಗ್ರಹಿ ಯೋಗ ಸಂಭವಿಸಲಿದೆ, ಇದನ್ನು ವೈದಿಕ ಜ್ಯೋತಿಷ್ಯದಲ್ಲಿ ಅತ್ಯಂತ ಅಶುಭ ಯೋಗವೆಂದು ಪರಿಗಣಿಸಲಾಗಿದೆ. ಈ ಸಮಯದಲ್ಲಿ ಮಿಥುನ, ಕನ್ಯಾ, ಧನು ರಾಶಿಯವರನ್ನು ಹೊರತು ಪಡಿಸಿ ಉಳಿದವರು ಜಾಗ್ರತೆವಹಿಸಬೇಕು.
ಉದ್ಯೋಗಸ್ಥರು ಜಾಗರೂಕರಾಗಿರಬೇಕು. ಈ ಅವಧಿಯಲ್ಲಿ ಯಾವುದೇ ವಿವಾದಕ್ಕೆ ತಲೆ ಹಾಕದಿರುವುದು ಒಳ್ಳೆಯದು. ಕುಟುಂಬದಲ್ಲಿಯೂ ಅನೇಕ ಸಮಸ್ಯೆಗಳು ಎದುರಾಗಬಹುದು, ಈ ಸಮಸ್ಯೆಗಳನ್ನು . ಈ ಅವಧಿಯಲ್ಲಿ ಈ ಜನರು ಹಣದ ವ್ಯವಹಾರಗಳನ್ನು ಮಾಡಬಾರದು, ಇಲ್ಲದಿದ್ದರೆ ಅವರು ಕೆಲವು ದೊಡ್ಡ ತೊಂದರೆಗೆ ಸಿಲುಕಬಹುದು. ಅದೇ ಸಮಯದಲ್ಲಿ, ವಿದ್ಯಾರ್ಥಿಗಳಿಗೆ ಅಧ್ಯಯನದ ಕಡೆಗೆ ಗಮನಹರಿಸಲು ಕಷ್ಟವಾಗುವುದು. ವ್ಯಾಪಾರಿಗಳು ಯಾವುದೇ ದೊಡ್ಡ ಹೂಡಿಕೆ ಮಾಡದಂತೆ ಸಲಹೆ ನೀಡಲಾಗುವುದು.

ಇನ್ನು ಕಾನೂನು ವಿಷಯದಲ್ಲಿ ತುಂಬಾನೇ ಜಾಗ್ರತೆವಹಿಸಬೇಕು, ಅನಗ್ಯತವಾಗಿ ಸಮಸ್ಯೆಗಳನ್ನು ನಿಮ್ಮ ಮೇಲೆ ಎಳೆದುಕೊಳ್ಳಬೇಡಿ. ಇಲ್ಲದಿದ್ದರೆ ಕಾನೂನು ಸಂಬಂಧಿತ ಸಮಸ್ಯೆಗಳನ್ನು ಎದುರಿಸಬಹುದು. ವೈವಾಹಿಕ ಜೀವನದಲ್ಲಿ ಸಮಸ್ಯೆಗಳು ಹೆಚ್ಚಾಗದತೆ ಜಾಗ್ರತೆವಹಿಸಿ. ಕುಟುಂಬದ ಸದಸ್ಯರ ಆರೋಗ್ಯದ ಬಗ್ಗೆ ನೀವು ಚಿಂತಿಸಬೇಕಾಗಬಹುದು. ಹಣಕಾಸಿನ ನಷ್ಟದ ಸಾಧ್ಯತೆ ಇದೆ, ಆದ್ದರಿಂದ ಹೊಸ ವ್ಯವಹಾರವನ್ನು ಪ್ರಾರಂಭಿಸಲು ಈ ಸಮಯ ಸೂಕ್ತವಲ್ಲ, ಸೂರ್ಯ ತುಲಾ ರಾಶಿಯಿಂದ ವೃಶ್ಚಿಕ ರಾಶಿಗೆ ಸಂಚರಿಸಿದಾಗ ಈ ಕುರಿತು ಯೋಚಿಸಬಹುದು.
ಉದ್ಯೋಗದಲ್ಲಿರುವವರು ಜಾಗರೂಕರಾಗಿರಬೇಕು. ಕಛೇರಿಯಲ್ಲಿ ಸಹೋದ್ಯೋಗಿಗಳ ಜೊತೆ ಭಿನ್ನಾಭಿಪ್ರಾಯ ಉಂಟಾಗುವ ಸಾಧ್ಯತೆ ಇದೆ. ಈ ಅವಧಿಯಲ್ಲಿ ನೀವು ಯಾವುದೇ ಕೆಲಸ ಮಾಡಿದರೂ ಅದರ ಫಲಿತಾಂಶ ತುಂಬಾ ತಡವಾಗಿ ಸಿಗುವುದರಿಂದ ಆದ್ದರಿಂದ ತಾಳ್ಮೆ ಮುಖ್ಯ. ವ್ಯಾಪಾರಸ್ಥರು ಪ್ರಯಾಣ ಮಾಡುವುದನ್ನು ತಪ್ಪಿಸಬೇಕು, ಇಲ್ಲದಿದ್ದರೆ ನಷ್ಟವಾಗುವ ಸಾಧ್ಯತೆ ಇದೆ. ಈ ಅವಧಿಯಲ್ಲಿ ನಿಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸುವ ಅವಶ್ಯಕತೆಯಿದೆ.
ನಿಮ್ಮ ಮಾತಿನ ಕಡೆ ತುಂಬಾನೇ ಗಮನಹರಿಸಿ, ಇಲ್ಲದಿದ್ದರೆ ನೀವು ನಷ್ಟವನ್ನು ಅನುಭವಿಸಬೇಕಾಗಬಹುದು. ಕಾನೂನು ಪ್ರಕರಣದಲ್ಲಿ ಸಿಲುಕದಂತೆ ನೋಡಿಕೊಳ್ಳಿ, ನೀವು ಸೋಲನ್ನು ಎದುರಿಸಬೇಕಾಗಬಹುದು. ಕುಟುಂಬ, ಮಕ್ಕಳ ನಡವಳಿಕೆಯಿಂದಾಗಿ ನೀವು ತೊಂದರೆಗೊಳಗಾಗಬಹುದು.
ಈ ರಾಶಿಯವರಿಗೆ ಒಳ್ಳೆಯದು
ಮಿಥುನ ರಾಶಿಯವರಿಗೆ ಈ ಅವಧಿ ಉತ್ತಮವಾಗಿದೆ. ಷೇರು ಮಾರುಕಟ್ಟೆಯಲ್ಲಿ ತೊಡಗಿಸಿಕೊಂಡವರು ಲಾಭ ಗಳಿಸಬಹುದು. ವ್ಯಾಪಾರಸ್ಥರು ಈ ಅವಧಿಯಲ್ಲಿ ಉತ್ತಮ ಲಾಭ ಪಡೆಯುತ್ತಾರೆ. ಈ ಅವಧಿಯಲ್ಲಿ ಆರ್ಥಿಕ ಸ್ಥಿತಿ ಚೆನ್ನಾಗಿರಲಿದೆ.
ಕನ್ಯಾ ರಾಶಿ
ಈ ಅವಧಿಯಲ್ಲಿ ನೀವು ಆದಾಯಕ್ಕೆ ಸಂಬಂಧಿಸಿದಂತೆ ಹೊಸ ಅವಕಾಶಗಳನ್ನು ಪಡೆಯಬಹುದು, ವ್ಯಾಪಾರಸ್ಥರು ಈ ಅವಧಿಯಲ್ಲಿ ಅಧಿಕ ಲಾಭ ಗಳಿಸುವ ಸಾಧ್ಯತೆ ಇದೆ, ಈ ಅವಧಿಯಲ್ಲಿ ನಿಮ್ಮ ಆರೋಗ್ಯ ಚೆನ್ನಾಗಿರಲಿದೆ.
ಧನು ರಾಶಿ
ಧನು ರಾಶಿಯವರು ಈ ಅವಧಿಯಲ್ಲಿ ಉತ್ತಮ ಆರ್ಥಿಕ ಲಾಭವನ್ನು ಪಡೆಯುತ್ತಾರೆ. ಆರ್ಥಿಕವಾಗಿ ಈ ಅವಧಿ ಉತ್ತಮವಾಗಿರಲಿದೆ. ಈ ಅವಧಿ ನಿಮಗೆ ಉತ್ತಮವಾಗಿದೆ.



Click it and Unblock the Notifications