Latest Updates
-
2026ರ ನವರಾತ್ರಿ ಗರ್ಬಾ: ಪಾಸ್ ವಂಚನೆಗೆ ಬಲಿಯಾಗದಿರಿ, ಸುರಕ್ಷಿತವಾಗಿ ಆನಂದಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ದೆಹಲಿಯಲ್ಲಿ ಕಠಿಣ GRAP ನಿಯಮ ಜಾರಿ: ಮನೆಯ ಗಾಳಿ ಶುದ್ಧವಾಗಿಡಲು ಮತ್ತು ಮಾಲಿನ್ಯ ತಡೆಯಲು ಇಲ್ಲಿವೆ ಸರಳ ಟಿಪ್ಸ್ -
ಹಬ್ಬದ ಸಿಹಿ ಕೊಳ್ಳುವ ಮುನ್ನ ಎಚ್ಚರ: FSSAI ಕಟ್ಟುನಿಟ್ಟಿನ ಕಾರ್ಯಾಚರಣೆ ಮತ್ತು ಹೊಸ ನಿಯಮಗಳೇನು? -
ಮೈಸೂರು ದಸರಾ 2026: ಟಿಕೆಟ್ ಬುಕ್ಕಿಂಗ್ ಆರಂಭ, ಕಂಬಳ ನೋಂದಣಿಗೆ ಇಂದೇ ಕೊನೆಯ ದಿನ! -
ಗಾಂಧಿ ಜಯಂತಿ ವಿಶೇಷ: ಫಿಟ್ನೆಸ್ ಮತ್ತು ಸಮಾಜ ಸೇವೆ ಬೆಸೆಯುವ 'ಪ್ಲಾಗಿಂಗ್'ಗೆ ಸಿದ್ಧರಾಗಿ! -
ಡೇಟಿಂಗ್ ಆ್ಯಪ್ ಹನಿಟ್ರ್ಯಾಪ್: ಪಬ್ಗಳಲ್ಲಿ ನಡೆಯುವ ಈ ದಂಧೆಯಿಂದ ಪಾರಾಗುವುದು ಹೇಗೆ? -
IMD ಮಳೆ ಅಲರ್ಟ್: ಬೆಂಗಳೂರು, ಚೆನ್ನೈ, ಕೇರಳದಲ್ಲಿ ಭಾರೀ ಮಳೆ; ಮನೆಯನ್ನು ಸುರಕ್ಷಿತವಾಗಿರಿಸಲು ಈ ಟಿಪ್ಸ್ ಪಾಲಿಸಿ! -
ಇಂದಿನಿಂದ ಎನರ್ಜಿ ಡ್ರಿಂಕ್ಸ್ ನಿಯಮ ಬದಲಾವಣೆ: ಕ್ಯಾನ್ ಖರೀದಿಸುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ಅಪಾರ್ಟ್ಮೆಂಟ್ ಗೇಟ್ನಲ್ಲಿ ಟ್ರಾಫಿಕ್ ಜಾಮ್? ಈ ಸರಳ ಟಿಪ್ಸ್ ಪಾಲಿಸಿದರೆ 5 ನಿಮಿಷದಲ್ಲಿ ಹೊರಬರಬಹುದು! -
ಬೆಳಗಿನ ವಾಕಿಂಗ್ ಹೋಗ್ತಿದ್ದೀರಾ? ಡೆಂಗ್ಯೂ ಸೊಳ್ಳೆಗಳಿಂದ ಪಾರಾಗಲು ಈ ಸರಳ ಟಿಪ್ಸ್ ಮಿಸ್ ಮಾಡ್ಬೇಡಿ!
ಉಡುಪಿಯ ವೈದ್ಯೆಗೆ ಮಿಸೆಸ್ ಅರ್ಥ್ ಇಂಟರ್‌ನ್ಯಾಷನಲ್ ಟೂರಿಸಂ ಕಿರೀಟ
ಜಾಗತಿಕ ಮಟ್ಟದಲ್ಲಿ ಭಾರತವು ಗಮನಾರ್ಹ ಸಾಧನೆ ಮಾಡಿದ್ದು, ಶ್ರುತಿ ಬಲ್ಲಾಳ್ ಮತ್ತು ಪ್ರಗತಿ ಅನೂನ್ ಪ್ರತಿಷ್ಠಿತ ಮಿಸೆಸ್ ಅರ್ಥ್ ಇಂಟರ್‌ನ್ಯಾಶನಲ್ ಟೂರಿಸಂ ಪ್ರಶಸ್ತಿ ಮುಡಿಗೇರಿಸಿಕೊಂಡಿದ್ದಾರೆ. ಉಡುಪಿಯ ಖ್ಯಾತ ಮಧುಮೇಹ ತಜ್ಞೆ ಡಾ.ಶೃತಿ ಬಲ್ಲಾಳ್ ಫಿಲಿಪೈನ್ಸ್ನ ಮನಿಲಾದಲ್ಲಿ ನಡೆದ ಅಂತರರಾಷ್ಟ್ರೀಯ ಸ್ಪರ್ಧೆಯಲ್ಲಿ ಪ್ರತಿಷ್ಠಿತ ಮಿಸೆಸ್ ಅರ್ಥ್ ಇಂಟರ್‌ನ್ಯಾಶನಲ್ ಟೂರಿಸಂ 2024 ಕಿರೀಟ ಗೆಲ್ಲುವ ಮೂಲಕ ಕೀರ್ತಿ ತಂದಿದ್ದಾರೆ.
ಆಸ್ಟ್ರಲ್ ಪೇಜೆಂಟ್ಸ್ ಮಿಸ್ ಮತ್ತು ಮಿಸೆಸ್ ಇಂಡಿಯಾ ಆಸ್ಟ್ರಲ್ ಬ್ಯಾನರ್ ಅಡಿಯಲ್ಲಿ ಭಾರತವನ್ನು ಪ್ರತಿನಿಧಿಸುವ ಡಾ. ಶ್ರುತಿ ಬಲ್ಲಾಳ್ ಮಿಸೆಸ್ ವಿಭಾಗದಲ್ಲಿ ವಿಜಯಶಾಲಿಯಾದರು, ಪ್ರಗತಿ ಅನೂನ್ ಎಲೈಟ್ ಮಿಸೆಸ್ ವಿಭಾಗದಲ್ಲಿ ಕಿರೀಟವನ್ನು ಮುಡಿಗೇರಿಸಿಕೊಂಡರು. 9 ದಿನಗಳ ಕಾಲ ನಡೆದಿದ್ದ ಈ ಕಾರ್ಯಕ್ರಮಕ್ಕೆ 17 ದೇಶಗಳ ಪ್ರತಿನಿದಿಗಳು ಭಾಗಿಯಾಗಿದ್ದರು.

ಡಾ.ಶೃತಿ ಬಲ್ಲಾಳ್ ಈ ಹಿಂದೆ ಬೆಂಗಳೂರಿನಲ್ಲಿ ಆಗಸ್ಟ್ ತಿಂಗಳಲ್ಲಿ ನಡೆದಿದ್ದ ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿ ಮಿಸೆಸ್ ಇಂಡಿಯಾ ಅರ್ಥ್ ಇಂಟರ್‌ನ್ಯಾಷನಲ್ ಪ್ರಶಸ್ತಿ ಗೆದ್ದು ಅಂತರರಾಷ್ಟ್ರೀಯ ಸ್ಪರ್ಧೆಗೆ ಆಯ್ಕೆಯಾಗಿದ್ದರು. ಈಗ ಅಂತಾರಾಷ್ಟ್ರೀಯ ವೇದಿಕೆಯಲ್ಲೂ ಅವರು ಕಿರೀಟ ಗೆದ್ದು ಬೀಗಿದ್ದಾರೆ. ಅಂತರರಾಷ್ಟ್ರೀಯ ಮಟ್ಟದ ಈ ಸ್ಪರ್ಧೆಯಲ್ಲಿ ಬುದ್ದಿ ಮತ್ತೆ, ದಯೆ, ಪರಿಸರದ ಬಗ್ಗೆ ತೋರಿದ ಬದ್ಧತೆ ಹೀಗೆ ಹಲವು ವಿಚಾರಗಳನ್ನು ಗಣನೆಗೆ ತೆಗೆದುಕೊಳ್ಳಲಾಗುತ್ತದೆ.
ಡಾ.ಶೃತಿ ಬಲ್ಲಾಳ್ ಉಡುಪಿಯ ಖ್ಯಾತ ಮಧುಮೇಹ ತಜ್ಞೆ ಎಂಬ ಕೀರ್ತಿ ಸಹ ಪಡೆದಿದ್ದಾರೆ. ಮನಿಲಾದಲ್ಲಿ ನಡೆದ ಅಂತರಾಷ್ಟ್ರೀಯ ಸ್ಪರ್ಧೆಯು ಬಹಳ ಸವಾಲಿನದ್ದಾಗಿತ್ತು. ಇಲ್ಲಿ 10 ದಿನಗಳ ಕಾಲ ನಡೆದ ಸೌಂದರ್ಯದ ಜೊತೆಗೆ ಬುದ್ದಿಮತ್ತೆ, ದಯೆ, ಪರಿಸರದ ಬಗ್ಗೆ ತೋರಿದ ಬದ್ದತೆಯು ಜ್ಯೂರಿಗಳ ಗಮನ ಸೆಳೆದು ಈ ಪ್ರಶಸ್ತಿಯನ್ನು ಗೆದ್ದುಕೊಂಡೆ ಎಂದು ಅವರು ತಮ್ಮ ಹೆಜ್ಜೆ ಗುರುತಿನ ಕುರಿತು ಹೇಳಿಕೊಂಡಿದ್ದಾರೆ.
5 ದೇಶಗಳಲ್ಲಿ ಪರಿಸರದ ಬಗ್ಗೆ ಜಾಗೃತಿಗಾಗಿ ಕೆಲಸ ಮಾಡಲು ಶೃತಿ ಬಲ್ಲಾಳ್ ಅವರನ್ನು ಈ ಸಮಿತಿಯು ಆಯ್ಕೆ ಮಾಡಿದೆ, ಇದು ಕೂಡ ಇನ್ನೊಂದು ಕೀರ್ತಿಯ ವಿಚಾರವಾಗಿದೆ. ಈ ಅಂತರಾಷ್ಟ್ರೀಯ ಸ್ಪರ್ಧೆಗೆ ತನ್ನನ್ನು ಆಸ್ಟ್ರಲ್ ಮಿಸೆಸ್ ಇಂಡಿಯಾದ ಕರ್ನಾಟಕ ನಿರ್ದೇಶಕಿ ಪ್ರತಿಭಾ ಸೌನ್ಶಿಮಠ್ ಅವರು ಮಾರ್ಗದರ್ಶನ ಮಾಡಿದ್ದರು ಎಂದು ಕೃತಜ್ಞತೆ ಸಲ್ಲಿಸಿದ್ದಾರೆ.
ಇವರು ಮಧುಮೇಹ ರೋಗದ ಬಗ್ಗೆ ಜಾಗೃತಿ ಮೂಡಿಸುವುದು, ಶೀಘ್ರದಲ್ಲಿ ಪತ್ತೆ ಹಚ್ಚುವುದು ಸೇರಿದಂತೆ ರೋಗ ಬರದಂತೆ ತಡೆಯುವುದಕ್ಕಾಗಿ ನೂರಕ್ಕೂ ಹೆಚ್ಚು ಮಾಹಿತಿ ಶಿಬಿರಗಳನ್ನು ಆಯೋಜಿಸಿ ಸೈ ಎನಿಸಿಕೊಂಡಿದ್ದಾರೆ. ಈಗ ಮತ್ತೊಂದು ಕಿರೀಟ ಅವರ ಮುಡಿಗೇರಿದೆ.



Click it and Unblock the Notifications
