Latest Updates
-
ಅಕ್ಟೋಬರ್ ಲಾಂಗ್ ವೀಕೆಂಡ್: ಕಪಲ್ಸ್ ಟ್ರಿಪ್ ಪ್ಲಾನ್ ಮಾಡುವಾಗ ಈ ತಪ್ಪುಗಳನ್ನು ಮಾಡಬೇಡಿ! -
ಅಕ್ಟೋಬರ್ 1 ರಿಂದ ಎಲೆಕ್ಟ್ರಾನಿಕ್ ವಸ್ತುಗಳಿಗೆ ISI ಮಾರ್ಕ್ ಕಡ್ಡಾಯ: ಆನ್ಲೈನ್ ಶಾಪಿಂಗ್ ಮಾಡುವ ಮುನ್ನ ಈ ವಿಷಯ ತಿಳಿಯಿರಿ! -
ಕಾಫಿ ಪ್ರಿಯರೇ ಎಚ್ಚರ! ತೂಕ ಇಳಿಕೆ ಮತ್ತು ಶುಗರ್ ಕಂಟ್ರೋಲ್ ಮಾಡಲು ಕಾಫಿ ಕುಡಿಯುವ ಸೀಕ್ರೆಟ್ ಇಲ್ಲಿದೆ -
ಇಂದಿನಿಂದ ಎಲ್ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ನಿಮ್ಮ ಗ್ಯಾಸ್ ಸಬ್ಸಿಡಿ ಪಡೆಯಲು ಹೀಗೆ ಮಾಡಿ! -
ಮಳೆಗಾಲದಲ್ಲಿ ಫಿಟ್ ಆಗಿರಬೇಕೆ? ಬೆಂಗಳೂರು, ಚೆನ್ನೈ, ಕೊಚ್ಚಿ ಜನರಿಗಾಗಿ ಇಲ್ಲಿದೆ 20 ನಿಮಿಷದ ಸಿಂಪಲ್ ವರ್ಕೌಟ್! -
2026ರ ನವರಾತ್ರಿ ಗರ್ಬಾ: ಪಾಸ್ ವಂಚನೆಗೆ ಬಲಿಯಾಗದಿರಿ, ಸುರಕ್ಷಿತವಾಗಿ ಆನಂದಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ದೆಹಲಿಯಲ್ಲಿ ಕಠಿಣ GRAP ನಿಯಮ ಜಾರಿ: ಮನೆಯ ಗಾಳಿ ಶುದ್ಧವಾಗಿಡಲು ಮತ್ತು ಮಾಲಿನ್ಯ ತಡೆಯಲು ಇಲ್ಲಿವೆ ಸರಳ ಟಿಪ್ಸ್ -
ಹಬ್ಬದ ಸಿಹಿ ಕೊಳ್ಳುವ ಮುನ್ನ ಎಚ್ಚರ: FSSAI ಕಟ್ಟುನಿಟ್ಟಿನ ಕಾರ್ಯಾಚರಣೆ ಮತ್ತು ಹೊಸ ನಿಯಮಗಳೇನು? -
ಮೈಸೂರು ದಸರಾ 2026: ಟಿಕೆಟ್ ಬುಕ್ಕಿಂಗ್ ಆರಂಭ, ಕಂಬಳ ನೋಂದಣಿಗೆ ಇಂದೇ ಕೊನೆಯ ದಿನ! -
ಗಾಂಧಿ ಜಯಂತಿ ವಿಶೇಷ: ಫಿಟ್ನೆಸ್ ಮತ್ತು ಸಮಾಜ ಸೇವೆ ಬೆಸೆಯುವ 'ಪ್ಲಾಗಿಂಗ್'ಗೆ ಸಿದ್ಧರಾಗಿ!
ವರಮಹಾಲಕ್ಷ್ಮಿ ಹಬ್ಬ: ಅಷ್ಟಲಕ್ಷ್ಮಿಯರನ್ನು ಒಲಿಸಿಕೊಳ್ಳಲು ಶಕ್ತಿಶಾಲಿ ಮಂತ್ರಗಳು
ಆಗಸ್ಟ್ 16ಕ್ಕೆ ವರಮಹಾಲಕ್ಷ್ಮಿ ಹಬ್ಬ. ಮಹಿಳೆಯರ ಸಡಗರದ ಹಬ್ಬ, ಅದರಲ್ಲಿಯೂ ಹೊಸದಾಗಿ ಮದುವೆಯಾದ ಹೆಣ್ಮಕ್ಕಳಿಗೆ ಈ ಹಬ್ಬ ತುಂಬಾನೇ ವಿಶೇಷವಾಗಿದೆ.
ಮದುವೆಯಾದ ಮೊದಲ ಐದು ವರ್ಷದಲ್ಲಿ ವರಮಹಾಲಕ್ಷ್ಮಿ ವ್ರತವನ್ನು ಆಚರಿಸುತ್ತಾರೆ, ತಾನು ಸೇರಿದ ಮನೆಯ ಶ್ರೇಯಸ್ಸು, ಗಂಡನ ಆಯುಸ್ಸು, ಆರೋಗ್ಯ ಬಯಸಿ ವರಮಹಾಲಕ್ಷ್ಮಿ ವ್ರತವನ್ನು ಆಚರಿಸುತ್ತಾರೆ. ಈ ಒಂದು ವ್ರತವನ್ನು ಆಚರಿಸುವುದರಿಂದ ಅಷ್ಟ ಲಕ್ಷ್ಮಿಯರನ್ನು ಪೂಜಿಸಿದ ಫಲ ಸಿಗುವುದು.

ವರಮಹಾಲಕ್ಷ್ಮಿ ದಿನದಮದು ಪೂಜೆಗೆ ಶ್ರೇಷ್ಠ ಸಮಯ
ಸಿಂಹ ಲಗ್ನ: ಬೆಳಗ್ಗೆ 05:54ರಿಂದ 08:13ರೊಳಗ ಶುಭ ಸಮಯವಿದೆ
ವೃಶ್ಚಿಕ ಲಗ್ನ: ಮಧ್ಯಾಹ್ನ 12:53 ರಿಂದ 03:13 ರವರೆಗೆ ಪೂಜೆಗೆ ಶುಭ ಸಮಯ
ನಂತರ ಪ್ರದೋಷ ಅಂದರೆ ಸಂಜೆಯ ಸಮಯದಲ್ಲಿ ಮಾಡಬಹುದು.
ಪೂಜೆ ಸಮಯದಲ್ಲಿ ಅಷ್ಟಲಕ್ಷ್ಮಿಯರನ್ನು ಈ ಮಂತ್ರಗಳನ್ನು ಪಠಿಸುತ್ತಾ ಪೂಜಿಸಿ:
ಆದಿ ಲಕ್ಷ್ಮೀ
ಸುಮನಸ ವಂದಿತ ಸುಂದರಿ ಮಾಧವಿ, ಚಂದ್ರ ಸಹೋದರಿ ಹೇಮಮಯೇ
ಮುನಿಗಣಮಂಡಿತ ಮೋಕ್ಷಪ್ರದಾಯಿನಿ, ಮಂಜುಳಾ ಭಾಷಿಣಿ ವೇದನುತೇ |
ಪಂಕಜವಾಸಿನಿ ದೇವಸುಪೂಜಿತ, ಸದ್ಗುಣ ವರ್ಷಿಣಿ ಶಾಂತಿಯುತೆ
ಜಯ ಜಯ ಹೇ ಮಧುಸೂದನ ಕಾಮಿನಿ, ಆದಿಲಕ್ಷ್ಮಿ ಸದಾ ಪಾಲಯ ಮಾಮ್||
ಧನ ಲಕ್ಷ್ಮೀ
ಧಿಮಿಧಿಮಿ ಧಿಂಧಿಮಿ ಧಿಂಧಿಮಿ-ದಿಂಧಿಮಿ, ದುಂಧುಭಿ ನಾದ ಸುಪೂರ್ಣಮಯೇ
ಘುಮಘುಮ ಘುಂಘುಮ ಘುಂಘುಮ ಘುಂಘುಮ, ಶಂಖ ನಿನಾದ ಸುವಾದ್ಯನುತೇ
ವೇದ ಪೂರಾಣೇತಿಹಾಸ ಸುಪೂಜಿತ, ವೈದಿಕ ಮಾರ್ಗ ಪ್ರದರ್ಶಯುತೇ
ಜಯ ಜಯಹೇ ಮಧುಸೂದನ ಕಾಮಿನಿ, ಧನಲಕ್ಷ್ಮಿ ರೂಪೇಣಾ ಪಾಲಯ ಮಾಮ್ ||
ಧೈರ್ಯ ಲಕ್ಷ್ಮಿ
ಜಯವರವರ್ಷಿಣಿ ವೈಷ್ಣವಿ ಭಾರ್ಗವಿ, ಮಂತ್ರ ಸ್ವರೂಪಿಣಿ ಮಂತ್ರಮಯೇ
ಸುರಗಣ ಪೂಜಿತ ಶೀಘ್ರ ಫಲಪ್ರದ, ಜ್ಞಾನ ವಿಕಾಸಿನಿ ಶಾಸ್ತ್ರನುತೇ
ಭವಭಯಹಾರಿಣಿ ಪಾಪವಿಮೋಚನಿ, ಸಾಧು ಜನಾಶ್ರಿತ ಪಾದಯುತೇ
ಜಯ ಜಯಹೇ ಮಧು ಸೂಧನ ಕಾಮಿನಿ, ಧೈರ್ಯಲಕ್ಷ್ಮೀ ಪರಿಪಾಲಯ ಮಾಮ್ ||
ಗಜಲಕ್ಷ್ಮಿ
ಜಯ ಜಯ ದುರ್ಗತಿ ನಾಶಿನಿ ಕಾಮಿನಿ, ಸರ್ವಫಲಪ್ರದ ಶಾಸ್ತ್ರಮಯೇ ರ
ಧಗಜ ತುರಗಪದಾತಿ ಸಮಾವೃತ, ಪರಿಜನ ಮಂಡಿತ ಲೋಕನುತೇ
ಹರಿಹರ ಬ್ರಹ್ಮ ಸುಪೂಜಿತ ಸೇವಿತ, ತಾಪ ನಿವಾರಿಣಿ ಪಾದಯುತೇ
ಜಯ ಜಯಹೇ ಮಧುಸೂದನ ಕಾಮಿನಿ, ಗಜಲಕ್ಷ್ಮೀ ರೂಪೇಣ ಪಾಲಯ ಮಾಮ್ ||
ವಿಜಯಲಕ್ಷ್ಮಿ
ಜಯ ಕಮಲಾಸಿನಿ ಸದ್ಗತಿ ದಾಯಿನಿ, ಜ್ಞಾನವಿಕಾಸಿನಿ ಗಾನಮಯೇ
ಅನುದಿನ ಮರ್ಚಿತ ಕುಂಕುಮ ಧೂಸರ, ಭೂಷಿತ ವಾಸಿತ ವಾದ್ಯನುತೇ
ಕನಕಧರಾಸ್ತುತಿ ವೈಭವ ವಂದಿತ, ಶಂಕರದೇಶಿಕ ಮಾನ್ಯಪದೇ
ಜಯ ಜಯಹೇ ಮಧುಸೂದನ ಕಾಮಿನಿ, ವಿಜಯಲಕ್ಷ್ಮೀ ಪರಿಪಾಲಯ ಮಾಮ್ ||
ಧಾನ್ಯ ಲಕ್ಷ್ಮಿ
ಅಯಿಕಲಿ ಕಲ್ಮಷ ನಾಶಿನಿ ಕಾಮಿನಿ, ವೈದಿಕ ರೂಪಿಣಿ ವೇದಮಯೇ
ಕ್ಷೀರ ಸಮುದ್ಭವ ಮಂಗಳ ರೂಪಿಣಿ, ಮಂತ್ರನಿವಾಸಿನಿ ಮಂತ್ರನುತೇ
ಮಂಗಳದಾಯಿನಿ ಅಂಬುಜವಾಸಿನಿ, ದೇವಗಣಾಶ್ರಿತ ಪಾದಯುತೇ
ಜಯ ಜಯಹೇ ಮಧುಸೂದನ ಕಾಮಿನಿ, ಧಾನ್ಯಲಕ್ಷ್ಮಿ ಪರಿಪಾಲಯ ಮಾಮ್ ||
ಸಂತಾನ ಲಕ್ಷ್ಮಿ
ಅಯಿಖಗ ವಾಹಿನಿ ಮೋಹಿನಿ ಚಕ್ರಿಣಿ, ರಾಗವಿವರ್ಧಿನಿ ಜ್ಞಾನಮಯೇ
ಗುಣಗಣವಾರಧಿ ಲೋಕಹಿತೈಷಿಣಿ, ಸಪ್ತಸ್ವರ ಭೂಷಿತ ಗಾನನುತೇ
ಸಕಲ ಸುರಾಸುರ ದೇವ ಮುನೀಶ್ವರ, ಮಾನವ ವಂದಿತ ಪಾದಯುತೇ
ಜಯ ಜಯಹೇ ಮಧುಸೂದನ ಕಾಮಿನಿ, ಸಂತಾನಲಕ್ಷ್ಮೀ ಪರಿಪಾಲಯ ಮಾಮ್ ||
ವಿದ್ಯಾ ಲಕ್ಷ್ಮಿ
ಪ್ರಣತ ಸುರೇಶ್ವರಿ ಭಾರತಿ ಭಾರ್ಗವಿ, ಶೋಕವಿನಾಶಿನಿ ರತ್ನಮಯೇ
ಮಣಿಮಯ ಭೂಷಿತ ಕರ್ಣವಿಭೂಷಣ, ಶಾಂತಿ ಸಮಾವೃತ ಹಾಸ್ಯಮುಖೇ
ನವನಿಧಿ ದಾಯಿನಿ ಕಲಿಮಲಹಾರಿಣಿ, ಕಾಮಿತ ಫಲಪ್ರದ ಹಸ್ತಯುತೇ
ಜಯ ಜಯಹೇ ಮಧುಸೂದನ ಕಾಮಿನಿ, ವಿದ್ಯಾಲಕ್ಷ್ಮೀ ಸದಾ ಪಾಲಯ ಮಾಮ್ ||



Click it and Unblock the Notifications
