Latest Updates
-
ಎಲ್ಜಿಪಿ ಬಳಸದೆ ನೀರಿನಿಂದ ಅಡುಗೆ ಮಾಡಿ: ರವಿಶಂಕರ್ ಗುರೂಜಿ ವಿಡಿಯೋ ವೈರಲ್ -
ಬೇಸಿಗೆಯ ಉರಿಗೆ ಪೈನಾಪಲ್ ರಸಂ ಮಾಡಿ: ಎಷ್ಟು ಸುಲಭ ಮಾಡೋದು ಗೊತ್ತಾ? -
ಅಕ್ಕಿ ಬೇಡ, ನೆನೆಸೋ ಸಮಯವೂ ಬೇಡ.. ತಕ್ಷಣ ಮಾಡಿ ಈ ದೋಸೆ! ಈ ಟ್ರಿಕ್ ಗೊತ್ತಿದ್ರೆ ಯಾರೂ ಮಾಡಬಹುದು -
ಸುಡು ಬಿಸಿಲಲ್ಲೂ ನಿಮ್ಮ ಮುಖ ಹಾಲಿನಂತೆ ಬೆಳ್ಳಗಾಗುತ್ತೆ! ಕೇವಲ 2 ನಿಮಿಷ ಈ ಮಸಾಜ್ ಸಾಕು.. ಮುಖ ಹೊಳೆಯುತ್ತೆ! -
ಮಾರ್ಚ್ 15ಕ್ಕೆ ರೇವತಿ ನಕ್ಷತ್ರಕ್ಕೆ ಶುಕ್ರ ಸಂಚಾರ: ಈ 4 ರಾಶಿಯವರಿಗೆ ಹೆಚ್ಚಲಿದೆ ಸಂಕಷ್ಟ! -
ಜಿಡ್ಡು ಬೊಜ್ಜು ಬೆಣ್ಣೆಯಂತೆ ಕರಗುತ್ತೆ! ದಿನಾ ಈ ಮ್ಯಾಜಿಕಲ್ ಸೂಪ್ ಕುಡಿಯಿರಿ.. 15 ದಿನಗಳಲ್ಲಿ ಕೊಬ್ಬು ಮಾಯ -
ಮೆಂತ್ಯ ಸೊಪ್ಪಿನ ಮೊಟ್ಟೆ ಪಲ್ಯ: ಊಟ, ತಿಂಡಿಯೊಂದಿಗೆ ಇದು ಬೆಸ್ಟ್! -
ಕಾಲಾಷ್ಟಮಿ 2026: ನಾಳೆ ಕಾಲಾಷ್ಟಮಿ ಆಚರಣೆ, ಶಿವನ ಉಗ್ರವತಾರ ಕಾಲಭೈರವನ ಪೂಜಿಸುವುದು ಏಕೆ? -
ಅಜ್ಜಿಯ ಕಾಲದ ಅಮೃತ! ಬೇಸಿಗೆಯಲ್ಲಿ ದೇಹ ತಂಪಾಗಿರಬೇಕಾ? ಒಂದು ಗ್ಲಾಸ್ ಸಾಕು.. ಟ್ರೈ ಮಾಡಿ ನೋಡಿ -
ಗುರು ನೇರ ಸಂಚಾರ: ಮಾರ್ಚ್ 11 ರಿಂದ ಗಜಕೇಸರಿ ಯೋಗ.. ಈ ರಾಶಿಯವರ ಸಕಲ ಕಷ್ಟಗಳಿಗೂ ಮುಕ್ತಿ ಸಿಗುವ ಕಾಲ
ಕರ್ಕಾಟಕ ರಾಶಿಯಲ್ಲಿ ಶುಕ್ರ ಸಂಚಾರ : ದ್ವಾದಶ ರಾಶಿಗಳ ಮೇಲೆ ಇದರ ಪರಿಣಾಮ ಹೇಗಿರಲಿದೆ?
ಆಗಸ್ಟ್ 7 ರಂದು ಶುಕ್ರನು ಮಿಥುನ ರಾಶಿಯಿಂದ ಕರ್ಕಾಟಕ ರಾಶಿಗೆ ಪ್ರವೇಶ ಮಾಡಲಿದ್ದಾನೆ. ಇದರಿಂದ ಕೆಲ ರಾಶಿಯ ಮೇಲೆ ಶುಭ ಪರಿಣಾಮಗಳಾದರೆ, ಇನ್ನೂ ಕೆಲವು ರಾಶಿಯವರ ಮೇಲೆ ಅಶುಭ ಪರಿಣಾಮಗಳಾಗಲಿದೆ. ಕರ್ಕಾಟಕ ರಾಶಿಗೆ ಶುಕ್ರನ ಆಗಮನದಿಂದ ಕೆಲವು ರಾಶಿಯವರಿಗೆ ಖರ್ಚುಗಳು ವಿಪರೀತವಾಗಿ ಹೆಚ್ಚಾಗಬಹುದು.
ಇನ್ನೂ ಕೆಲವು ರಾಶಿಯವರಲ್ಲಿ ಅನ್ಯೋನ್ಯತೆ ಉತ್ತಮಗೊಳ್ಳುವ ಸಾಧ್ಯತೆ ಇರುತ್ತದೆ. ಅಷ್ಟಕ್ಕು ಶುಕ್ರನು ಕರ್ಕಾಟಕ ರಾಶಿಗೆ ಪ್ರವೇಶ ಮಾಡಿರೋದ್ರಿಂದ ದ್ವಾದಶ ರಾಶಿಗಳ ಮೇಲೆ ಇದರ ಪರಿಣಾಮ ಹೇಗಿದೆ ಅನ್ನೋದನ್ನು ತಿಳಿಯೋಣ.

ಮೇಷ ರಾಶಿ
ಕರ್ಕಾಟಕ ರಾಶಿಗೆ ಶುಕ್ರನು ಪ್ರವೇಶ ಮಾಡಿರೋದ್ರಿಂದ ಮೇಷ ರಾಶಿಯವರಿಗೆ ಸಾಮಾಜಿಕ ಗೌರವ ದೊರೆಯುತ್ತದೆ. ಸ್ವಂತ ವ್ಯಾಪಾರ ಮಾಡುವವರು ಸಾಕಷ್ಟು ಪ್ರಗತಿ ಕಾಣುತ್ತಾರೆ. ಉದ್ಯೋಗಸ್ಥರಿಗೆ ಇದು ಒಳ್ಳೆಯ ಸಮಯ. ಪ್ರತಿಯೊಂದು ಕೆಲಸದಲ್ಲಿಯೂ ಯಶಸ್ಸು ಕಾಣುತ್ತೀರಿ. ಸರ್ಕಾರಿ ನೌಕರಿ ಸಿಗುವ ನಿರೀಕ್ಷೇಯಿದೆ. ನಿಮ್ಮ ವೈವಾಹಿಕ ಜೀವನದಲ್ಲಿ ಪ್ರೇಮ ಸಂಬಂಧಗಳು ಹಾಗೆಯೇ ಇರುತ್ತದೆ. ನಿಮ್ಮ ಸಂಗಾತಿಯೊಂದಿಗೆ ಉತ್ತಮ ಸಮಯವನ್ನು ಕಳೆಯುತ್ತೀರಿ. ನಿಮ್ಮ ಆರೋಗ್ಯ ಚೆನ್ನಾಗಿರುತ್ತದೆ.
ವೃಷಭ ರಾಶಿ
ಈ ಸಮಯದಲ್ಲಿ ವೃಷಭ ರಾಶಿಯವರು ಸಾಮಾಜಿಕವಾಗಿ ತುಂಬಾ ಕ್ರಿಯಾಶೀಲರಾಗಿರುತ್ತಾರೆ. ನಿಮ್ಮ ವೈಯಕ್ತಿಕ ಜೀವನದಲ್ಲಿ ಯಾವುದೇ ಬದಲಾವಣೆಯನ್ನು ತರಲು ನೀವು ಬಯಸಿದರೆ, ಈ ಸಮಯವು ನಿಮಗೆ ತುಂಬಾ ಅನುಕೂಲಕರವಾಗಿರುತ್ತದೆ. ನಿಮ್ಮ ವ್ಯವಹಾರದಲ್ಲಿ ನೀವು ಅಪಾರ ಆರ್ಥಿಕ ಲಾಭವನ್ನು ಪಡೆಯುತ್ತೀರಿ. ಉದ್ಯೋಗದಲ್ಲಿರುವವರಿಗೆ ಮತ್ತು ತಮ್ಮ ಉದ್ಯೋಗವನ್ನು ಬದಲಾಯಿಸಲು ಬಯಸುವವರಿಗೆ ಈ ಸಮಯವು ತುಂಬಾನೇ ಒಳ್ಳೆಯದು. ನಿಮ್ಮ ಸಂಗಾತಿಯೊಂದಿಗೆ ಕೊಂಚ ಮನಸ್ಥಾಪ ಏರ್ಪಡಬಹುದು.
ಮಿಥುನ ರಾಶಿ
ಮಿಥುನ ರಾಶಿಯವರು ತಮ್ಮ ಕುಟುಂಬದೊಂದಿಗೆ ಉತ್ತಮ ಸಂಬಂಧವನ್ನು ಹೊಂದಿರುತ್ತಾರೆ. ಈಗಾಗಲೇ ಯಾವುದೇ ಕೌಟುಂಬಿಕ ಕಲಹ ನಡೆಯುತ್ತಿದ್ದರೆ ಅದು ದೂರವಾಗುತ್ತದೆ. ವಿದೇಶಿ ಕೆಲಸದಲ್ಲಿ ಇರುವವರಿಗೆ ಉತ್ತಮ ಲಾಭ ದೊರೆಯುತ್ತದೆ. ವೃತ್ತಿಯಲ್ಲಿ ಬಡ್ತಿ ಹೊಂದುತ್ತಾರೆ. ಮತ್ತು ದಾಂಪತ್ಯ ಜೀವನ ಚೆನ್ನಾಗಿರುತ್ತದೆ. ಜೀವನ ಸಂಗಾತಿಯೊಂದಿಗೆ ಸಮಯ ಉತ್ತಮವಾಗಿರುತ್ತದೆ. ಆರೋಗ್ಯದ ದೃಷ್ಟಿಯಿಂದ ಸಮಯವು ತುಂಬಾ ಅನುಕೂಲಕರವಾಗಿರುತ್ತದೆ.
ಕರ್ಕಾಟಕ ರಾಶಿ
ಕರ್ಕಾಟಕ ರಾಶಿಯವರಿಗೆ ಈ ಸಮಯದಲ್ಲಿ ಸಂಯಮವು ಹೆಚ್ಚಾಗುತ್ತದೆ. ಇದರಿಂದ ನೀವು ಸಮಾಜದಲ್ಲಿ ಪ್ರತಿಷ್ಠಿತ ಸ್ಥಾನವನ್ನು ಪಡೆಯುತ್ತೀರಿ. ನೀವು ಉತ್ತಮ ಸ್ಥಾನವನ್ನು ಪಡೆಯಬಹುದು. ಆರ್ಥಿಕವಾಗಿ ನಿಮ್ಮ ವೆಚ್ಚಗಳು ಹೆಚ್ಚಾಗಬಹುದು. ನೀವು ಕೆಲವು ಮಾನಸಿಕ ಒತ್ತಡವನ್ನು ಹೊಂದಬಹುದು. ವೈವಾಹಿಕ ಜೀವನದಲ್ಲಿ ವಿವಾದಗಳು ಕೊನೆಗೊಳ್ಳುತ್ತವೆ. ಜೀವನದಲ್ಲಿ ಕೆಲವೊಂದು ಸಮಸ್ಯೆಗಳನ್ನು ಎದುರಿಸಬಹುದು. ನಿಮ್ಮ ಯಾವುದೇ ಹಳೆಯ ಕಾಯಿಲೆಗಳಿಂದ ನೀವು ಮುಕ್ತಿ ಹೊಂದಬಹುದು.
ಸಿಂಹ ರಾಶಿ
ಸಿಂಹ ರಾಶಿಯವರು ಯಾರು ವಿದೇಶಗಳೊಂದಿಗೆ ಸಂಬಂಧ ಹೊಂದಿರುತ್ತಾರೆಯೋ ಅವರು ಆರ್ಥಿಕ ಲಾಭವನ್ನು ಪಡೆಯುತ್ತಾರೆ. ನೀವು ಉದ್ಯೋಗ ಅಥವಾ ವ್ಯಾಪಾರಕ್ಕಾಗಿ ವಿದೇಶಕ್ಕೆ ಹೋಗಲು ಬಯಸಿದರೆ ಈ ಪರಿಸ್ಥಿತಿಯು ಅನುಕೂಲಕರವಾಗಿರುತ್ತದೆ. ನಿಮ್ಮ ಮಾತನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳಿ. ಶಿಕ್ಷಣದ ದೃಷ್ಟಿಯಿಂದ ಈ ಸಮಯ ಒಳ್ಳೆಯದು. ಸರ್ಕಾರಿ ನೌಕರಿ ಸಿಗುವ ಸಾಧ್ಯತೆಗಳು ಇದೆ. ದಾಂಪತ್ಯ ಜೀವನದಲ್ಲಿ ಮಧುರತೆ ಹೆಚ್ಚಾಗಿ ಇರುತ್ತದೆ. ಆರೋಗ್ಯದ ಬಗ್ಗೆ ಜಾಗರೂಕರಾಗಿರಬೇಕು. ಈ ಅವಧಿಯಲ್ಲಿ ನಿಮ್ಮ ರಹಸ್ಯ ಶತ್ರುಗಳು ಹೆಚ್ಚಾಗಬಹುದು.
ಕನ್ಯಾ ರಾಶಿ
ಈ ಸಮಯದಲ್ಲಿ ಸಂಬಂಧಗಳ ಬಗ್ಗೆ ಜಾಗರೂಕರಾಗಿರಬೇಕು. ಆದಾಯದಲ್ಲಿ ಹೆಚ್ಚಳ ಮತ್ತು ಆರ್ಥಿಕ ಲಾಭವನ್ನು ಪಡೆಯುವ ಸಾಧ್ಯತೆಯಿದೆ. ಯಾವುದೇ ರೀತಿಯ ವ್ಯವಹಾರವನ್ನು ಪ್ರಾರಂಭಿಸಲು ಸಮಯವು ಅನುಕೂಲಕರವಾಗಿರುತ್ತದೆ. ಹಲವು ದಿನಗಳ ಹಿಂದೆ ಕೊಟ್ಟ ಹಣವೂ ವಾಪಸ್ ಬರುವ ನಿರೀಕ್ಷೆ ಇದೆ. ಈ ಅವಧಿಯಲ್ಲಿ ನೀವು ಕೆಲವು ಮಾನಸಿಕ ಒತ್ತಡವನ್ನು ಅನುಭವಿಸಬಹುದು. ಸಹೋದರನೊಂದಿಗಿನ ಸಂಬಂಧವು ಹದಗೆಡಬಹುದು. ಪ್ರತಿಸ್ಪರ್ಧಿಯ ಎದುರು ನೀವು ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡುತ್ತೀರಿ. ಉದ್ಯೋಗಸ್ಥರಿಗೆ ಉತ್ತಮ ಯೋಗವಿದೆ. ವ್ಯಾಪಾರಸ್ಥರಿಗೆ ಕೆಲವೊಂದು ಸಮಸ್ಯೆ ಎದುರಾಗುತ್ತದೆ. ವೈವಾಹಿಕ ಜೀವನ ಚೆನ್ನಾಗಿರುತ್ತದೆ.
ತುಲಾ ರಾಶಿ
ಈ ಸಮಯದಲ್ಲಿ ಹಣವನ್ನು ಬುದ್ಧಿವಂತಿಕೆಯಿಂದ ಹೂಡಿಕೆ ಮಾಡಿ. ನಿಮ್ಮ ವೈವಾಹಿಕ ಜೀವನದಲ್ಲಿ ಎದುರಾಗಬಹುದು. ಈ ಸಮಯದಲ್ಲಿ ನೀವು ಕೆಲಸದ ಕ್ಷೇತ್ರದಲ್ಲಿ ಪ್ರಗತಿಯನ್ನು ಪಡೆಯುತ್ತೀರಿ. ಮತ್ತು ನೀವು ಸರ್ಕಾರಿ ಕೆಲಸದಲ್ಲಿ ಯಶಸ್ಸನ್ನು ಪಡೆಯುತ್ತೀರಿ. ಸ್ನೇಹಿತರು ಅಥವಾ ಸಂಬಂಧಿಕರಿಂದ ಬೆಂಬಲ ಸಿಗುತ್ತದೆ. ತುಲಾ ರಾಶಿಯ ಜನರು ವೃತ್ತಿಪರವಾಗಿ ಸಾಕಷ್ಟು ಲಾಭವನ್ನು ಪಡೆಯುತ್ತಾರೆ. ಉದ್ಯಮಿಗಳು ಮತ್ತು ಉದ್ಯೋಗಿಗಳು ಕೆಲವು ಸವಾಲುಗಳನ್ನು ಎದುರಿಸಬೇಕಾಗಬಹುದು. ಈ ಅವಧಿಯು ನಿಮಗೆ ಮಂಗಳಕರವೆಂದು ಪರಿಗಣಿಸಲಾಗುತ್ತದೆ.
ವೃಶ್ಚಿಕ ರಾಶಿ
ವೃಶ್ಚಿಕ ರಾಶಿಯವರಿಗೆ ವೃತ್ತಿಪರ ಬಡ್ತಿ ದೊರೆಯಲಿದೆ. ವಿದೇಶಿ ಗ್ರಾಹಕರಿಂದ ಲಾಭವಾಗಲಿದೆ. ಧಾರ್ಮಿಕ ಕಾರ್ಯಗಳಿಗೆ ಒಲವು ತೋರುತ್ತೀರಿ. ವೈವಾಹಿಕ ಜೀವನದಲ್ಲಿ ಪ್ರೀತಿ ಮತ್ತು ವಾತ್ಸಲ್ಯ ಹೆಚ್ಚಾಗುತ್ತದೆ. ಶಿಕ್ಷಣಕ್ಕೆ ಸಂಬಂಧಿಸಿದಂತೆ ಜನರು ಪ್ರಯೋಜನಗಳನ್ನು ಪಡೆಯುತ್ತಾರೆ. ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಯಶಸ್ಸು ಕಾಣುವಿರಿ. ದೀರ್ಘಕಾಲದ ಅನಾರೋಗ್ಯ ಸಮಸ್ಯೆಗಳು ದೂರವಾಗುತ್ತದೆ. ಆರೋಗ್ಯದಲ್ಲಿ ಸುಧಾರಣೆ ಕಂಡುಬರುವುದು.
ಧನು ರಾಶಿ
ಧನು ರಾಶಿಯವರು ಈ ಅವಧಿಯಲ್ಲಿ ಕಠಿಣ ಸ್ಪರ್ಧೆಯನ್ನು ಎದುರಿಸಬೇಕಾಗಬಹುದು. ಈ ಅವಧಿಯಲ್ಲಿ ಯಾರಿಂದಲೂ ಹಣವನ್ನು ಎರವಲು ಪಡೆಯಬೇಡಿ. ಇದರಿಂದ ನಿಮ್ಮ ಕಷ್ಟಗಳು ಹೆಚ್ಚಾಗಬಹುದು. ಈ ಸಮಯದಲ್ಲಿ ಪ್ರತಿಯೊಂದು ವ್ಯವಹಾರವನ್ನು ಬಹಳ ಎಚ್ಚರಿಕೆಯಿಂದ ಮಾಡಿ. ವಿದ್ಯಾರ್ಥಿಗಳು ಅಡೆತಡೆಗಳನ್ನು ಎದುರಿಸಬಹುದು. ಹಣ ನಷ್ಟವಾಗಬಹುದು. ನೀವು ಕಠಿಣ ಸವಾಲುಗಳನ್ನು ಎದುರಿಸಬೇಕಾಗಬಹುದು. ಯಾರಿಂದಲೂ ಸಾಲ ಪಡೆಯಬೇಡಿ. ಯಾಕಂದ್ರೆ ನೀವು ಹಣವನ್ನು ಕಳೆದುಕೊಳ್ಳಬಹುದು.
ಮಕರ ರಾಶಿ
ನಿಮ್ಮ ಜೀವನದಲ್ಲಿ ಸಂತೋಷ ಕಾಣುತ್ತೀರಿ. ವಿದೇಶಿ ವ್ಯಾಪಾರದಲ್ಲಿ ನೀವು ಯಶಸ್ಸನ್ನು ಪಡೆಯಬಹುದು. ನೀವು ಯಾವತ್ತೋ ಕೊಟ್ಟ ಹಣವನ್ನು ಮರಳಿ ಪಡೆಯಬಹುದು. ಮಕರ ರಾಶಿಯ ವಿದ್ಯಾರ್ಥಿಗಳು ತಮ್ಮ ಅಧ್ಯಯನದಲ್ಲಿ ಹೆಚ್ಚು ಶ್ರಮಿಸಬೇಕಾಗಬಹುದು. ವಿದೇಶದಲ್ಲಿ ಇರುವವರಿಗೆ ಈ ಸಮಯವು ತುಂಬಾ ಅನುಕೂಲಕರವಾಗಿದೆ. ಆರೋಗ್ಯದ ದೃಷ್ಟಿಯಿಂದ ಈ ಸಮಯ ಉತ್ತಮವಾಗಿರುತ್ತದೆ.
ಕುಂಭ ರಾಶಿ
ಕುಂಭ ರಾಶಿಯವರು ಈ ಅವಧಿಯಲ್ಲಿ ಜೀವನದಲ್ಲಿ ಯಶಸ್ಸನ್ನು ಪಡೆಯಲು ಶ್ರಮಿಸಬೇಕಾಗುತ್ತದೆ. ಅಲ್ಲದೆ ಈ ಸಮಯದಲ್ಲಿ ನಿಮ್ಮ ಖರ್ಚುಗಳು ಕೂಡ ಹೆಚ್ಚಾಗಬಹುದು. ವಿವಾಹಿತರು ತಮ್ಮ ಸಂಗಾತಿಯೊಂದಿಗೆ ಕೆಲವು ಸಮಸ್ಯೆಗಳನ್ನು ಎದುರಿಸಬಹುದು. ಆದ್ದರಿಂದ ಸಾಧ್ಯವಾದಷ್ಟು ಖರ್ಚುಗಳನ್ನು ನಿಯಂತ್ರಿಸಿ. ಈ ಸಮಯದಲ್ಲಿ ಯಶಸ್ಸು ಸಾಧಿಸಲು ಸಾಕಷ್ಟು ಶ್ರಮ ಹಾಕಬೇಕಾಗುತ್ತದೆ. ನಿಮ್ಮ ವಿರೋಧಿಗಳು ನಿಮ್ಮ ಮೇಲೆ ಪ್ರಾಬಲ್ಯ ಸಾಧಿಸಲು ಪ್ರಯತ್ನಿಸುತ್ತಾರೆ. ಈ ಸಮಯವು ವ್ಯವಹಾರದಲ್ಲಿ ತೊಡಗಿರುವವರಿಗೆ ಉತ್ತಮವಾಗಿದೆ. ನಿಮ್ಮ ಮಾತು ಮತ್ತು ಕೋಪವನ್ನು ನಿಯಂತ್ರಿಸಿ. ಪ್ರೀತಿಯಲ್ಲಿರುವವರಿಗೆ ಈ ಸಂಚಾರವು ಉತ್ತಮವಾಗಿರುತ್ತದೆ. ಧನ ಲಾಭವನ್ನು ಪಡೆಯುತ್ತೀರಿ
ಮೀನ ರಾಶಿ
ನಿಮ್ಮ ಜೀವನದಲ್ಲಿ ನೀವು ಪ್ರೀತಿ, ಮಾಧುರ್ಯ ಮತ್ತು ವಾತ್ಸಲ್ಯವನ್ನು ಕಾಣುತ್ತೀರಿ. ಯಶಸ್ಸು ಮತ್ತು ಲಾಭವೂ ಸಾಧ್ಯವಿದೆ. ಈ ಸಮಯದಲ್ಲಿ ನಿಮ್ಮ ಏಕಾಗ್ರತೆ ಹೆಚ್ಚಾಗುತ್ತದೆ. ನೀವು ಅನುಕೂಲಕರ ಫಲಿತಾಂಶಗಳನ್ನು ಪಡೆಯುತ್ತೀರಿ. ಸಂಗಾತಿಯೊಂದಿಗೆ ಸಮಯ ಉತ್ತಮವಾಗಿರುತ್ತದೆ. ಮತ್ತು ವೃತ್ತಿಪರವಾಗಿ ಧನಾತ್ಮಕ ಫಲಿತಾಂಶಗಳನ್ನು ಪಡೆಯುತ್ತೀರಿ. ನಿಮ್ಮ ಆಯ್ಕೆಯ ಕೆಲಸ ನಿಮಗೆ ಸಿಗುತ್ತದೆ. ಆರೋಗ್ಯ ಸಮಸ್ಯೆ ಎದುರಾಗುತ್ತದೆ.



Click it and Unblock the Notifications












