Latest Updates
-
ಡೆಂಗ್ಯೂ ಜ್ವರದಿಂದ ಬೇಗ ಚೇತರಿಸಿಕೊಳ್ಳಬೇಕೇ? ನಿಮ್ಮ ಆಹಾರದಲ್ಲಿ ಇರಲಿ ಈ ಪೌಷ್ಟಿಕಾಂಶಗಳು! -
ಡೆಂಗ್ಯೂ ಜ್ವರದ ಬಳಿಕ ಸುಸ್ತು ಕಾಡುತ್ತಿದೆಯೇ? ಬೇಗ ಚೇತರಿಸಿಕೊಳ್ಳಲು ಈ ಆಹಾರಕ್ರಮ ಪಾಲಿಸಿ, ಮನೆಯಲ್ಲೇ ORS ಮಾಡಿ -
ಓಣಂ ಸದ್ಯದ ಹಬ್ಬದೂಟಕ್ಕೆ ಭಾರಿ ಬೇಡಿಕೆ: ಬೆಂಗಳೂರು-ಕೊಚ್ಚಿಯಲ್ಲಿ ಸ್ಲಾಟ್ಗಳು ಫುಲ್, ಈಗಲೇ ಬುಕ್ ಮಾಡಿ! -
ವರಮಹಾ ಲಕ್ಷ್ಮಿ ವ್ರತ 2026: ಆಗಸ್ಟ್ 21 ಅಥವಾ 28? ದಿನಾಂಕದ ಗೊಂದಲಕ್ಕೆ ಇಲ್ಲಿದೆ ಪರಿಹಾರ! -
ಕಂಟೆಂಟ್ ಕ್ರಿಯೇಟರ್ಗಳೇ ಗಮನಿಸಿ: ಫೋಟೊ ಶೂಟ್ ವೇಳೆ ನೋವು ಮರೆಯಾಗಲು ಈ 12 ನಿಮಿಷದ ವರ್ಕೌಟ್ ಸಾಕು! -
ಫೋಟೋಗ್ರಾಫರ್ಗಳೇ ಎಚ್ಚರ! ನೋವಿಲ್ಲದೆ ಅದ್ಭುತ ಫೋಟೋ ಕ್ಲಿಕ್ಕಿಸಲು ಈ 7 ನಿಮಿಷದ ಮೊಬಿಲಿಟಿ ರಿಸೆಟ್ ಟ್ರೈ ಮಾಡಿ -
ಮಂಗಳ ಗೌರಿ ವ್ರತದ ದಿನ ದಂಪತಿಗಳ ನಡುವೆ ಕಿರಿಕಿರಿ ಬೇಡ: ಪ್ರೀತಿ ಹೆಚ್ಚಿಸಲು ಇಲ್ಲಿದೆ ಬೆಸ್ಟ್ ಟಿಪ್ಸ್ -
ನ್ಯಾಷನಲ್ ಕಪಲ್ಸ್ ಡೇ: ಪ್ರೀತಿಯ ಸಂಭ್ರಮದ ಜೊತೆಗೆ ಡಿಜಿಟಲ್ ಪ್ರೈವೆಸಿ ಮತ್ತು ರೊಮ್ಯಾಂಟಿಕ್ ಡೇಟ್ ಐಡಿಯಾಗಳು -
ವರಮಹಾಲಕ್ಷ್ಮಿ ಹಬ್ಬದ ಸೌಂದರ್ಯಕ್ಕೆ ಸಾಂಪ್ರದಾಯಿಕ ಆಭರಣಗಳ ಮೆರುಗು: ಈ ಬಾರಿಯ ಫ್ಯಾಷನ್ ಟ್ರೆಂಡ್ಸ್ -
ಅಪಾರ್ಟ್ಮೆಂಟ್ನಲ್ಲಿ ಓಣಂ ಸಂಭ್ರಮ: ಮಳೆಗೆ ಹಾಳಾಗದ, ಬಜೆಟ್ ಸ್ನೇಹಿ ಪೂಕಳಂಗೆ ಇಲ್ಲಿದೆ ಸೂಪರ್ ಟಿಪ್ಸ್!
ಶುಕ್ರ ಗೋಚಾರ ಫಲ: 23 ದಿನಗಳವರೆಗೆ ಈ 3 ರಾಶಿಯವರೆಗೆ ಶುಕ್ರದೆಸೆ
ವೈದಿಕ ಜ್ಯೋತಿಷ್ಯದಲ್ಲಿ ಶುಕ್ರನಿಗೆ ತುಂಬಾನೇ ಮಹತ್ವದ ಸ್ಥಾನವಿದೆ, ಶುಕ್ರವು ಸಂತೋಷ, ವೈಭವ ಮತ್ತು ಸಮೃದ್ಧಿಯ ಅಂಶವಾಗಿದೆ.ಈ ತಿಂಗಳಿನಲ್ಲಿ ಆಗಸ್ಟ್ 7ಕ್ಕೆ ಶುಕ್ರ ಕರ್ಕ ರಾಶಿಗೆ ಪ್ರವೇಶಿಸಲಿದೆ. ಶುಕ್ರನು ತುಲಾ ಮತ್ತು ವೃಷಭ ರಾಶಿಯ ಅಧಿಪತಿ ಶುಕ್ರ ಪ್ರತಿ 23 ದಿನಕ್ಕೊಮ್ಮೆ ರಾಶಿ ಬದಲಾಯಿಸುತ್ತಲೇ ಇರುತ್ತದೆ. ಶುಕ್ರನ ಈ ಬದಲಾವಣೆ 12 ರಾಶಿಗಳ ಮೇಲೆ ಪ್ರಭಾವ ಬೀರಲಿದೆ. ಈ ಶುಕ್ರ ಸಂಚಾರ ಕೆಲವರ ಪಾಲಿಗೆ ಶುಕ್ರದೆಸೆಯಾಗಿದೆ. ಶುಕ್ರ ಕರ್ಕರಾಶಿಯಲ್ಲಿ ಇರುವಷ್ಟೂ ಸಮಯ ಈ 3 ರಾಶಿಯವರಿಗೆ ಶುಕ್ರದೆಸೆ ನೋಡಿ...

ವೃಷಭ ರಾಶಿ
ಆಗಸ್ಟ್ 07 ರಂದು ಶುಕ್ರ ಕರ್ಕ ರಾಶಿಗೆ ಪ್ರವೇಶ ಮಾಡಿದಾಗ ಅದು ನಿಮಗೆ ತುಂಬಾ ಮಂಗಳಕರವಾಗಿರುತ್ತದೆ. ನಿಮ್ಮ ಸೌಕರ್ಯಗಳು ಹೆಚ್ಚಾಗಲಿದೆ. ಮನೆಗೆ ಐಷಾರಾಮಿ ವಸ್ತುಗಳನ್ನು ಖರೀದಿಸುತ್ತೀರಿ. ನೀವು ತುಂಬಾ ಸಮಯದಿಂದ ಗಾಡಿ ಖರೀದಿಸಲು ಬಯಸುತ್ತಿದ್ದರೆ ಈ ಅವಧಿಯಲ್ಲಿ ಸಾಧ್ಯವಾಗುವುದು. ಈ ಸಮಯದಲ್ಲಿ ಹಳೆಯ ಸಾಲದಿಂದ ಮುಕ್ತರಾಗಲು ಸಾಧ್ಯವಾಗುವುದು. ವೃತ್ತಿ ಜೀವನದಲ್ಲಿ ಹೊಸ ಅವಕಾಶಗಳು ದೊರೆಯಲಿದೆ. ಇನ್ನು ವೈಯಕ್ತಿಕ ಜೀವನ ಕೂಡ ತುಂಬಾ ಚೆನ್ನಾಗಿರಲಿದೆ, ಸಾಮಾಜಿಕವಾಗಿ ಈ ಅವಧಿಯಲ್ಲಿ ನಿಮ್ಮ ಸ್ಥಾನಮಾನ ಹೆಚ್ಚಾಗಲಿದೆ. ಈ ಅವಧಿಯಲ್ಲಿ ಆರ್ಥಿಕ ಲಾಭ ಹೆಚ್ಚಾಗಲಿದೆ, ಇದರಿಂದಾಗಿ ಉಳಿತಾಯ ಮಾಡಲು ಸಾಧ್ಯವಾಗುವುದು. ಸಂಗಾತಿಯೊಂದಿಗಿನ ಸಂಬಂಧ ಉತ್ತಮವಾಗಿರಲಿದೆ, ನಿಮ್ಮಿಬ್ಬರ ನಡುವೆ ಹೊಂದಾಣಿಕೆ ಚೆನ್ನಾಗಿರಲಿದೆ, ಪ್ರೇಮಿಗಳಿಗೂ ಈ ಅವಧಿ ತುಂಬಾನೇ ಚೆನ್ನಾಗಿರಲಿದೆ.
ಸಿಂಹ ರಾಶಿ
ಕರ್ಕದಲ್ಲಿ ಶುಕ್ರ ಸಂಚಾರ ಸಿಂಹರಾಶಿಯವರಿಗೆ ಶುಕ್ರದೆಸೆ ಇರಲಿದೆ. ನಿಮ್ಮ ಎಲ್ಲಾ ಕೆಲಸಗಳಲ್ಲಿ ಯಶಸ್ವಿಯಾಗುತ್ತೀರಿ. ಪೂರ್ವಜರ ಆಸ್ತಿಯಿಂದ ನಿಮಗೆ ದೊಡ್ಡ ಲಾಭ ಉಂಟಾಗಲಿದೆ. ವೈವಾಹಿಕ ಜೀವನ ಚೆನ್ನಾಗಿರಲಿದೆ, ಉದ್ಯೋಗಸ್ಥರು ತಮ್ಮ ವೃತ್ತಿಜೀವನದಲ್ಲಿ ಹೊಸ ಎತ್ತರವನ್ನು ತಲುಪಲು ಸಾಧ್ಯವಾಗುವುದು. ಸಿಂಹ ರಾಶಿಯವರಿಗೆ ಆರ್ಥಿಕವಾಗಿ ಈ ಅವಧಿ ತುಂಬಾ ಚೆನ್ನಾಗಿದೆ, ಈ ಅವಧಿಯಲ್ಲಿ ವ್ಯವಹಾರ ಮಾಡುವವರು ಉತ್ತಮ ಲಾಭ ಪಡೆಯಲು ಸಾಧ್ಯವಾಗುವುದು. ಉದ್ಯೋಗಕ್ಕಾಗಿ ವಿದೇಶಕ್ಕೆ ಹೋಗಲು ಬಯಸುವವರಿಗೆ ಈ ಅವಧಿ ಅನುಕೂಲಕರವಾಗಿದೆ, ವಿದೇಶದಲ್ಲಿ ಅವಕಾಶಗಳು ದೊರೆಯಲಿದೆ. ವಿದ್ಯಾರ್ಥಿಗಳಿಗೆ ಈ ಅವಧಿ ಅನುಕೂಲಕರವಾಗಿದೆ, ದಾಂಪತ್ಯ ಜೀವನದಲ್ಲಿ ಮಾಧುರ್ಯ ಹೆಚ್ಚಾಗಲಿದೆ.
ಕರ್ಕ ರಾಶಿ
ಕರ್ಕ ರಾಶಿಯವರಿಗೆ ಈ ಸಂಚಾರ ತುಂಬಾನೇ ಅದೃಷ್ಟಕರವಾಗಿದೆ. ಈ ಸಮಯದಲ್ಲಿ ಹಠಾತ್ ಹಣ ಲಾಭವಾಗಲಿದೆ, ಸಾಮಾಜಿಕವಾಗಿ ನಿಮ್ಮ ಗೌರವ ಹೆಚ್ಚಾಗುವುದು, ನಿಮ್ಮಲ್ಲಿ ಆತ್ಮವಿಶ್ವಾಸ ಹೆಚ್ಚಾಗಲಿದೆ. ಕುಟುಂಬದಲ್ಲಿ ಖುಷಿಯ ವಾತಾವರಣ ಇರಲಿದೆ. ಹೂಡಿಕೆಯಿಂದ ಹಣದ ಲಾಭವಾಗಲಿದೆ. ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡುವವರಿಗೆ ಈ ಅವಧಿ ಅನುಕೂಲಕರವಾಗಿದೆ. ಪ್ರೇಮಿಗಳಿಗೆ, ವಿವಾಹಿತರಿಗೆ ಈ ಸಮಯ ರೊಮ್ಯಾಂಟಿಕ್ ಆಗಿರಲಿದೆ. ನಿಮ್ಮ ಹಾಗೂ ಸಂಗಾತಿಯ ನಡುವೆ ಪ್ರೀತಿ ಹಾಗೂ ಹೊಂದಾಣಿಕೆ ಹೆಚ್ಚಾಗಲಿದೆ. ಈ ಅವಧಿಯಲ್ಲಿ ಯಾವುದೇ ಆರೋಗ್ಯ ಸಮಸ್ಯೆಯಿದ್ದರೆ ಅದರಿಂದ ಮುಕ್ತರಾಗಬಹುದು.



Click it and Unblock the Notifications