Latest Updates
-
ಎಲ್ಜಿಪಿ ಬಳಸದೆ ನೀರಿನಿಂದ ಅಡುಗೆ ಮಾಡಿ: ರವಿಶಂಕರ್ ಗುರೂಜಿ ವಿಡಿಯೋ ವೈರಲ್ -
ಬೇಸಿಗೆಯ ಉರಿಗೆ ಪೈನಾಪಲ್ ರಸಂ ಮಾಡಿ: ಎಷ್ಟು ಸುಲಭ ಮಾಡೋದು ಗೊತ್ತಾ? -
ಅಕ್ಕಿ ಬೇಡ, ನೆನೆಸೋ ಸಮಯವೂ ಬೇಡ.. ತಕ್ಷಣ ಮಾಡಿ ಈ ದೋಸೆ! ಈ ಟ್ರಿಕ್ ಗೊತ್ತಿದ್ರೆ ಯಾರೂ ಮಾಡಬಹುದು -
ಸುಡು ಬಿಸಿಲಲ್ಲೂ ನಿಮ್ಮ ಮುಖ ಹಾಲಿನಂತೆ ಬೆಳ್ಳಗಾಗುತ್ತೆ! ಕೇವಲ 2 ನಿಮಿಷ ಈ ಮಸಾಜ್ ಸಾಕು.. ಮುಖ ಹೊಳೆಯುತ್ತೆ! -
ಮಾರ್ಚ್ 15ಕ್ಕೆ ರೇವತಿ ನಕ್ಷತ್ರಕ್ಕೆ ಶುಕ್ರ ಸಂಚಾರ: ಈ 4 ರಾಶಿಯವರಿಗೆ ಹೆಚ್ಚಲಿದೆ ಸಂಕಷ್ಟ! -
ಜಿಡ್ಡು ಬೊಜ್ಜು ಬೆಣ್ಣೆಯಂತೆ ಕರಗುತ್ತೆ! ದಿನಾ ಈ ಮ್ಯಾಜಿಕಲ್ ಸೂಪ್ ಕುಡಿಯಿರಿ.. 15 ದಿನಗಳಲ್ಲಿ ಕೊಬ್ಬು ಮಾಯ -
ಮೆಂತ್ಯ ಸೊಪ್ಪಿನ ಮೊಟ್ಟೆ ಪಲ್ಯ: ಊಟ, ತಿಂಡಿಯೊಂದಿಗೆ ಇದು ಬೆಸ್ಟ್! -
ಕಾಲಾಷ್ಟಮಿ 2026: ನಾಳೆ ಕಾಲಾಷ್ಟಮಿ ಆಚರಣೆ, ಶಿವನ ಉಗ್ರವತಾರ ಕಾಲಭೈರವನ ಪೂಜಿಸುವುದು ಏಕೆ? -
ಅಜ್ಜಿಯ ಕಾಲದ ಅಮೃತ! ಬೇಸಿಗೆಯಲ್ಲಿ ದೇಹ ತಂಪಾಗಿರಬೇಕಾ? ಒಂದು ಗ್ಲಾಸ್ ಸಾಕು.. ಟ್ರೈ ಮಾಡಿ ನೋಡಿ -
ಗುರು ನೇರ ಸಂಚಾರ: ಮಾರ್ಚ್ 11 ರಿಂದ ಗಜಕೇಸರಿ ಯೋಗ.. ಈ ರಾಶಿಯವರ ಸಕಲ ಕಷ್ಟಗಳಿಗೂ ಮುಕ್ತಿ ಸಿಗುವ ಕಾಲ
ಮಾಸಿಕ ರಾಶಿಫಲ: ಗ್ರಹಗತಿಗಳ ಪ್ರಕಾರ ಜೂನ್ ತಿಂಗಳು ವೃಶ್ಚಿಕ ರಾಶಿಯವರಿಗೆ ಹೇಗಿರಲಿದೆ?
ಗ್ರಹಗತಿಗಳ ಆಧಾರದ ಮೇಲೆ ಜೂನ್ 2023ರ ರಾಶಿಫಲ ನೀಡಲಾಗಿದ್ದು ನಾವಿಲ್ಲಿ ವೃಶ್ಚಿಕ ರಾಶಿಯವರಿಗೆ ಜೂನ್ ತಿಂಗಳು ಹೇಗಿರಲಿದೆ? ಅವರ ಆರ್ಥಿಕ ಭವಿಷ್ಯ, ವೃತ್ತಿ ಜೀವನ ಭವಿಷ್ಯ, ವ್ಯಾಪಾರ, ಆರೋಗ್ಯ, ಕುಟುಂಬ ಹಾಗೂ ಪ್ರೀತಿಯ ಭವಿಷ್ಯದ ಬಗ್ಗೆ ಹೇಳಲಾಗಿದೆ. ಅಷ್ಟಕ್ಕು ಜೂನ್ ತಿಂಗಳಲ್ಲಿ ವೃಶ್ಚಿಕ ರಾಶಿಯವರ ಬಾಳಿನಲ್ಲಿ ಏನೆಲ್ಲಾ ಬದಲಾವಣೆಗಳು ಆಗಲಿದೆ ಅನ್ನೋದನ್ನು ತಿಳಿಯೋಣ.
ಈ ತಿಂಗಳಿನಲ್ಲಿ ವೃಶ್ಚಿಕ ರಾಶಿಯವರ ಹನ್ನೆರಡನೇ ಮನೆಯಲ್ಲಿ ಕೇತು ಇರುತ್ತಾನೆ. ಇದರಿಂದಾಗಿ ಈ ತಿಂಗಳಿನಲ್ಲಿ ನೀವು ಅಸುರಕ್ಷಿತರಾಗಬಹುದು ಮತ್ತು ನೀವು ಚಂಚಲತೆಯನ್ನು ಅನುಭವಿಸಬಹುದು. ಗುರು ಆರನೇ ಮನೆಯಲ್ಲಿ ಇರೋದ್ರಿಂದ ಯೋಚಿಸಿ ಹಣ ಖರ್ಚು ಮಾಡಬೇಕಾಗುತ್ತದೆ. ಇಲ್ಲದಿದ್ದರೆ ನಷ್ಟ ಉಂಟಾಗಬಹುದು. ಇದಿಷ್ಟೇ ಅಲ್ಲದೇ, ಗುರು ಮತ್ತು ಕೇತು ಪ್ರತಿಕೂಲ ಸ್ಥಾನದಲ್ಲಿರೋದ್ರಿಂದ ನೀವು ಸಾಲ ತೆಗೆದುಕೊಳ್ಳುವ ಸಾಧ್ಯತೆಯಿದೆ. ಯಾಕಂದ್ರೆ ವೆಚ್ಚ ಇದ್ದಕ್ಕಿದ್ದಂತೆ ಹೆಚ್ಚಾಗಬಹುದು.

ವೃತ್ತಿ ಭವಿಷ್ಯ
ಶನಿಯು ನಿಮ್ಮ ನಾಲ್ಕನೇ ಮನೆಯಲ್ಲಿ ಇರುವ ಕಾರಣ ಈ ರಾಶಿಯವರು ಮಿಶ್ರ ಫಲಿತಾಂಶಗಳನ್ನು ಪಡೆಯುತ್ತಾರೆ. ಈ ಕಾರಣದಿಂದಾಗಿ ನೀವು ನಿಮ್ಮ ಕೆಲಸವನ್ನು ಪೂರ್ಣಗೊಳಿಸಲು ಅಗತ್ಯಕ್ಕಿಂತ ಹೆಚ್ಚಿನ ಸಮಯವನ್ನು ತೆಗೆದುಕೊಳ್ಳುತ್ತೀರಿ. ಅಲ್ಲದೆ, ನೀವು ಕೆಲಸವನ್ನು ಬಹಳ ಎಚ್ಚರಿಕೆಯಿಂದ ಮಾಡಬೇಕು. ಇಲ್ಲದಿದ್ದರೆ ತಪ್ಪುಗಳನ್ನು ಮಾಡುವ ಸಾಧ್ಯತೆಗಳಿವೆ. ಈ ತಿಂಗಳು ಕೇತು ನಿಮ್ಮ ಆರನೇ ಮನೆಯಲ್ಲಿ ಇರುತ್ತಾನೆ. ಹೀಗಾಗಿ ಈ ರಾಶಿಯವರು ತಮ್ಮ ವೃತ್ತಿಜೀವನದಲ್ಲಿ ಸಮಸ್ಯೆಗಳನ್ನು ಎದುರಿಸಬೇಕಾಗಬಹುದು.
ನಿಮಗೆ ಕೆಲಸದಲ್ಲಿ ತೃಪ್ತಿ ಸಿಗದಿರಬಹುದು. ಅಥವಾ ಕೆಲಸದಲ್ಲಿ ಬದಲಾವಣೆ ಆಗುವ ಸಾಧ್ಯತೆ ಇದೆ. ಇನ್ನೂ ಕೆಲವರು ಉದ್ಯೋಗಕ್ಕೆ ಸಂಬಂಧಿಸಿದಂತೆ ಸ್ಥಳಾಂತರಗೊಳ್ಳುವ ಸಾಧ್ಯತೆಯಿದೆ.
ವೃಶ್ಚಿಕ ರಾಶಿಯ ಉದ್ಯೋಗಸ್ಥರು ಕೆಲಸದ ಬಗ್ಗೆ ಜಾಗರೂಕರಾಗಿರಬೇಕು. ಏಕೆಂದರೆ ಕೆಲಸದ ಬಗ್ಗೆ ಮೆಚ್ಚುಗೆಯ ಕೊರತೆಯಿಂದಾಗಿ ಉದ್ಯೋಗದಲ್ಲಿ ಬದಲಾವಣೆಯ ಸಾಧ್ಯತೆಯಿದೆ. ನಿಮ್ಮ ಗಮನ ಕೆಲಸದ ಕಡೆ ಇಲ್ಲದಿರೋದ್ರಿಂದ ಕೆಲಸದಲ್ಲಿ ನೀವು ತಪ್ಪುಗಳನ್ನು ಮಾಡುವ ಸಾಧ್ಯತೆಯಿದೆ.
ವ್ಯಾಪಾರ ಭವಿಷ್ಯ
ಗುರುವು ನಿಮ್ಮ ಆರನೇ ಮನೆಯಲ್ಲಿ ಇರೋದ್ರಿಂದ ಸ್ವಂತ ವ್ಯವಹಾರವನ್ನು ಹೊಂದಿರುವರು ಈ ತಿಂಗಳು ವ್ಯವಹಾರದಲ್ಲಿ ಉತ್ತಮ ಫಲಿತಾಂಶಗಳನ್ನು ಪಡೆಯುವ ಸಾಧ್ಯತೆಯಿಲ್ಲ. ಆದ್ದರಿಂದ ನೀವು ಸರಾಸರಿಗಿಂತ ಕಡಿಮೆ ಲಾಭವನ್ನು ಪಡೆಯುವ ಸಾಧ್ಯತೆಯಿದೆ. ನಿಮ್ಮ ನಾಲ್ಕನೇ ಮನೆಯಲ್ಲಿ ಶನಿ ಇರೋದ್ರಿಂದ ನಿಮ್ಮ ಪ್ರತಿಸ್ಪರ್ಧಿಗಳಿಂದ ನೀವು ಕಠಿಣ ಸ್ಪರ್ಧೆಯನ್ನು ಎದುರಿಸುವ ಸಾಧ್ಯತೆಯಿದೆ.
ಆರ್ಥಿಕ ಭವಿಷ್ಯ
ಈ ತಿಂಗಳು ವೃಶ್ಚಿಕ ರಾಶೀಯವರು ಹಣಕ್ಕೆ ಸಂಬಂಧಿಸಿದಂತೆ ಮಿಶ್ರ ಫಲಿತಾಂಶಗಳನ್ನು ಪಡೆಯುವ ಸಾಧ್ಯತೆಯಿದೆ. ಜೂನ್‌ನಲ್ಲಿ ನಿಮ್ಮ ವೆಚ್ಚಗಳು ಮತ್ತು ಲಾಭಗಳು ಹೆಚ್ಚಾಗುತ್ತವೆ. ಈ ತಿಂಗಳು ಗುರು ನಿಮ್ಮ ಆರನೇ ಮನೆಯಲ್ಲಿ ಕುಳಿತುಕೊಳ್ಳುತ್ತಾನೆ. ಇದು ನಿಮ್ಮ ಖರ್ಚುಗಳಲ್ಲಿ ಹೆಚ್ಚಳವನ್ನು ಸೂಚಿಸುತ್ತದೆ. ಅನೇಕ ಬಾರಿ ನಿಮ್ಮ ಕೈಯಿಂದ ಖರ್ಚು ನಿಭಾಯಿಸೋದಕ್ಕೆ ಸಾಧ್ಯವಾಗೋದಿಲ್ಲ. ಖರ್ಚು ನಿಭಾಯಿಸಲು ನೀವು ಸಾಲ ತೆಗೆದುಕೊಳ್ಳಬೇಕಾದ ಅವಶ್ಯಕತೆ ಇರುತ್ತದೆ.
ಈ ತಿಂಗಳಿನಲ್ಲಿ ಕೇತು ನಿಮ್ಮ ಹನ್ನೆರಡನೇ ಮನೆಯಲ್ಲಿ ಮತ್ತು ಗುರು ನಿಮ್ಮ ಆರನೇ ಮನೆಯಲ್ಲಿ ಇರೋದ್ರಿಂದ ಈ ರಾಶಿಯವರಿಗೆ ತೊಂದರೆ ಹೆಚ್ಚಾಗುತ್ತದೆ. ಶನಿಯು ನಾಲ್ಕನೇ ಮನೆಯಲ್ಲಿ ಪ್ರತಿಕೂಲ ಸ್ಥಿತಿಯಲ್ಲಿರುತ್ತಾನೆ. ಈ ಕಾರಣದಿಂದಾಗಿ ಕುಟುಂಬದ ಖರ್ಚುಗಳು ಹೆಚ್ಚಾಗಬಹುದು. ನಿಮ್ಮ ನಾಲ್ಕನೇ ಮನೆಯಲ್ಲಿ ಶನಿ ಕುಳಿತಿರುವುದರಿಂದ ಸೌಕರ್ಯಗಳ ಕೊರತೆ ಉಂಟಾಗಬಹುದು.
ನಿಮ್ಮ ಆರೋಗ್ಯಕ್ಕಾಗಿ ನೀವು ಹಣವನ್ನು ಖರ್ಚು ಮಾಡಬೇಕಾಗಬಹುದು. ಇದರಿಂದಾಗಿ ನೀವು ಹಣವನ್ನು ಉಳಿಸಲು ಸಾಧ್ಯವಾಗುವುದಿಲ್ಲ.
ಆರೋಗ್ಯ ಭವಿಷ್ಯ
ರಾಹು ಆರನೇ ಮನೆಯಲ್ಲಿರುವುದರಿಂದ ಈ ರಾಶಿಯವರು ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಾಧ್ಯವಾಗುತ್ತದೆ. ಈ ತಿಂಗಳು ಎರಡನೇ ಮತ್ತು ಐದನೇ ಮನೆಯ ಅಧಿಪತಿಯಾಗಿ ಗುರು ನಿಮ್ಮ ಆರನೇ ಮನೆಯಲ್ಲಿರುತ್ತಾನೆ. ಇಷ್ಟೇ ಅಲ್ಲ, ಶನಿಯು ಈಗಾಗಲೇ ನಿಮ್ಮ ನಾಲ್ಕನೇ ಮನೆಯಲ್ಲಿ ಇರೋದ್ರಿಂದ ನಿಮ್ಮ ಸೌಕರ್ಯಗಳು ಕಡಿಮೆಯಾಗಬಹುದು. ಮಂಗಳನು ಪ್ರತಿಕೂಲವಾದ ಸ್ಥಾನದಲ್ಲಿರೋದ್ರಿಂದ ನೀವು ಭುಜದ ನೋವಿನ ಸಮಸ್ಯೆ ಎದುರಿಸಬೇಕಾಗಬಹುದು.
ಮಂಗಳ ಮತ್ತು ಕೇತು ಹನ್ನೆರಡನೇ ಮನೆಯಲ್ಲಿ ಅಶುಭ ಸ್ಥಾನದಲ್ಲಿ ಕುಳಿತಿದ್ದಾರೆ. ಹೀಗಾಗಿ ನಿಮ್ಮಲ್ಲಿ ಅಭದ್ರತೆಯ ಭಾವನೆ ಉಂಟಾಗಬಹುದು. ಹನ್ನೆರಡನೇ ಮನೆಯಲ್ಲಿ ಕೇತು ಇರೋದ್ರಿಂದ ತಲೆನೋವು, ಜೀರ್ಣಕ್ರಿಯೆ ಮತ್ತು ನಿದ್ರೆಗೆ ಸಂಬಂಧಿಸಿದ ಸಮಸ್ಯೆಗಳಿಂದ ನೀವು ಬಳಲುವ ಸಾಧ್ಯತೆಯಿದೆ. ಅಲ್ಲದೆ, ನಿಮ್ಮ ಆರೋಗ್ಯದ ಬಗ್ಗೆ ನೀವು ಚಿಂತಿತರಾಗಬಹುದು.
ಪ್ರೀತಿ ಮತ್ತು ವೈವಾಹಿಕ ಜೀವನ
ನಿಮ್ಮ ನಾಲ್ಕನೇ ಮನೆಯಲ್ಲಿ ಶನಿಯು ನೆಲೆಸಿರುವುದರಿಂದ ಪ್ರೀತಿಯಲ್ಲಿ ಇರುವವರು ಈ ತಿಂಗಳಲ್ಲಿ ಜಾಗರೂಕರಾಗಿರಬೇಕು. ನಿಮ್ಮ ನಾಲ್ಕನೇ ಮನೆಯಲ್ಲಿ ಶನಿಯ ಉಪಸ್ಥಿತಿಯಿಂದಾಗಿ ಸಂಬಂಧದಲ್ಲಿ ಪ್ರೀತಿಯ ಕೊರತೆ ಉಂಟಾಗಬಹುದು. ನಿಮ್ಮಿಬ್ಬರ ನಡುವೆ ಪರಸ್ಪರ ತಿಳುವಳಿಕೆ ಮತ್ತು ಸಮನ್ವಯದ ಕೊರತೆ ಉಂಟಾಗಬಹುದು. ಕೇತು ನಿಮ್ಮ ಹನ್ನೆರಡನೇ ಮನೆಯಲ್ಲಿ ನೆಲೆಸಿರುತ್ತಾನೆ. ಹೀಗಾಗಿ ಸಂತೋಷ ಮತ್ತು ಪ್ರೀತಿ ನಿಮ್ಮ ಸಂಬಂಧದಿಂದ ದೂರವಿರುತ್ತದೆ.
ಈ ರಾಶಿಯ ವಿವಾಹಿತರಿಗೆ ಜೂನ್ ತಿಂಗಳು ತುಂಬಾ ವಿಶೇಷವಾಗಿರುವುದಿಲ್ಲ. ಏಕೆಂದರೆ ಗುರು ನಿಮ್ಮ ಆರನೇ ಮನೆಯಲ್ಲಿ ಕುಳಿತುಕೊಳ್ಳುತ್ತಾನೆ. ಮತ್ತು ಮಂಗಳನು ನಿಮ್ಮ ಒಂಬತ್ತನೇ ಮನೆಯಲ್ಲಿ ದುರ್ಬಲ ಸ್ಥಾನದಲ್ಲಿರುತ್ತಾನೆ. ಈ ಕಾರಣದಿಂದಾಗಿ ವಿವಾಹಿತರು ತಮ್ಮ ವೈವಾಹಿಕ ಜೀವನದಲ್ಲಿ ಏರಿಳಿತಗಳನ್ನು ಎದುರಿಸಬೇಕಾಗಬಹುದು.
ಪರಿಹಾರ
* ಪ್ರತಿದಿನ ಹನುಮಾನ್ ಚಾಲೀಸಾ ಮಂತ್ರ ಪಠಿಸಿ.
* "ಓಂ ಕೇತ್ವೇ ನಮಃ" ಎಂದು ಪ್ರತಿದಿನ 108 ಬಾರಿ ಜಪಿಸಿ.
* ಪ್ರತಿದಿನ 41 ಬಾರಿ "ಓಂ ನಮೋ ಭಗವತೇ ವಾಸುದೇವಾಯ" ಎಂದು ಜಪಿಸಿ.



Click it and Unblock the Notifications











