Latest Updates
-
2026ರ ನವರಾತ್ರಿ ಗರ್ಬಾ: ಪಾಸ್ ವಂಚನೆಗೆ ಬಲಿಯಾಗದಿರಿ, ಸುರಕ್ಷಿತವಾಗಿ ಆನಂದಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ದೆಹಲಿಯಲ್ಲಿ ಕಠಿಣ GRAP ನಿಯಮ ಜಾರಿ: ಮನೆಯ ಗಾಳಿ ಶುದ್ಧವಾಗಿಡಲು ಮತ್ತು ಮಾಲಿನ್ಯ ತಡೆಯಲು ಇಲ್ಲಿವೆ ಸರಳ ಟಿಪ್ಸ್ -
ಹಬ್ಬದ ಸಿಹಿ ಕೊಳ್ಳುವ ಮುನ್ನ ಎಚ್ಚರ: FSSAI ಕಟ್ಟುನಿಟ್ಟಿನ ಕಾರ್ಯಾಚರಣೆ ಮತ್ತು ಹೊಸ ನಿಯಮಗಳೇನು? -
ಮೈಸೂರು ದಸರಾ 2026: ಟಿಕೆಟ್ ಬುಕ್ಕಿಂಗ್ ಆರಂಭ, ಕಂಬಳ ನೋಂದಣಿಗೆ ಇಂದೇ ಕೊನೆಯ ದಿನ! -
ಗಾಂಧಿ ಜಯಂತಿ ವಿಶೇಷ: ಫಿಟ್ನೆಸ್ ಮತ್ತು ಸಮಾಜ ಸೇವೆ ಬೆಸೆಯುವ 'ಪ್ಲಾಗಿಂಗ್'ಗೆ ಸಿದ್ಧರಾಗಿ! -
ಡೇಟಿಂಗ್ ಆ್ಯಪ್ ಹನಿಟ್ರ್ಯಾಪ್: ಪಬ್ಗಳಲ್ಲಿ ನಡೆಯುವ ಈ ದಂಧೆಯಿಂದ ಪಾರಾಗುವುದು ಹೇಗೆ? -
IMD ಮಳೆ ಅಲರ್ಟ್: ಬೆಂಗಳೂರು, ಚೆನ್ನೈ, ಕೇರಳದಲ್ಲಿ ಭಾರೀ ಮಳೆ; ಮನೆಯನ್ನು ಸುರಕ್ಷಿತವಾಗಿರಿಸಲು ಈ ಟಿಪ್ಸ್ ಪಾಲಿಸಿ! -
ಇಂದಿನಿಂದ ಎನರ್ಜಿ ಡ್ರಿಂಕ್ಸ್ ನಿಯಮ ಬದಲಾವಣೆ: ಕ್ಯಾನ್ ಖರೀದಿಸುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ಅಪಾರ್ಟ್ಮೆಂಟ್ ಗೇಟ್ನಲ್ಲಿ ಟ್ರಾಫಿಕ್ ಜಾಮ್? ಈ ಸರಳ ಟಿಪ್ಸ್ ಪಾಲಿಸಿದರೆ 5 ನಿಮಿಷದಲ್ಲಿ ಹೊರಬರಬಹುದು! -
ಬೆಳಗಿನ ವಾಕಿಂಗ್ ಹೋಗ್ತಿದ್ದೀರಾ? ಡೆಂಗ್ಯೂ ಸೊಳ್ಳೆಗಳಿಂದ ಪಾರಾಗಲು ಈ ಸರಳ ಟಿಪ್ಸ್ ಮಿಸ್ ಮಾಡ್ಬೇಡಿ!
ಒಂದೇ ತಟ್ಟೆಯಲ್ಲಿ ಬಿರಿಯಾನಿ ಸವಿದ ರಕ್ಷಿತ್, ರಿಷಬ್ ಶೆಟ್ಟಿ: ಈ ಕುಚಿಕು ಫ್ರೆಂಡ್ಸ್ ವೀಡಿಯೋ ವೈರಲ್!
ಕನ್ನಡ ಸಿನಿಮಾ ಇಂಡಸ್ಟ್ರಿಗೆ ರಕ್ಷಿತ್ ಶೆಟ್ಟಿ, ರಿಷಬ್ ಶೆಟ್ಟಿ ಬಹಳಷ್ಟು ಒಳ್ಳೆಯ ಸಿನಿಮಾಗಳನ್ನು ಕೊಟ್ಟಿದ್ದಾರೆ. ಅಷ್ಟೇ ಅಲ್ಲ, ಇವರು ಉತ್ತಮ ನಟರೂ ಹೌದು. ಕಾಂತಾರಾ ಬಂದ್ಮೇಲೆ ರಿಷಬ್ ಶೆಟ್ಟಿ ದೇಶದಾದ್ಯಂತ ಮಾತ್ರವಲ್ಲದೇ ವಿದೇಶದಲ್ಲೂ ಕೂಡ ತಮ್ಮ ಛಾಪು ಮೂಡಿಸಿದ್ದಾರೆ.
ರಕ್ಷಿತ್ ಶೆಟ್ಟಿ ಸಿನಿಮಾಗಳನ್ನು ಮಾಡೋದಕ್ಕೆ ಸಾಕಷ್ಟು ಸಮಯ ತೆಗೆದುಕೊಂಡರೂ ಕೂಡ ತುಂಬಾನೇ ಅದ್ಭುತ ಸಿನಿಮಾಗಳನ್ನು ಭಾರತೀಯ ಚಿತ್ರ ರಂಗಕ್ಕೆ ಪರಿಚಯಿಸುತ್ತಾರೆ. ಇವರು ನಟಿಸಿ, ನಿರ್ದೇಶನ ಮಾಡಿರೋ ಸಾಮಾನ್ಯ ಎಲ್ಲಾ ಸಿನಿಮಾಗಳು ಕೂಡ ಸೂಪರ್ ಹಿಟ್ ಆಗಿದೆ. ಹಾಗಂತ ಇವರಿಗೆ ಈ ಯಶಸ್ಸು ಅಷ್ಟು ಸುಲಭವಾಗಿ ಸಿಕ್ಕಿದ್ದಲ್ಲ.

ನಮಗೆಲ್ಲಾ ಗೊತ್ತಿರೋ ಹಾಗೆ ರಿಷಭ್ ಹಾಗೂ ರಕ್ಷಿತ್ ತಮ್ಮ ಆರಂಭದ ದಿನಗಳಿಂದಾನೂ ಜೊತೆಯಲ್ಲಿಯೇ ಇದ್ದವರು. ಅದೆಷ್ಟು ಏಳು-ಬೀಳುಗಳನ್ನು ಕಂಡ ನಂತರ ಸಿನಿಮಾ ರಂಗದಲ್ಲಿ ಗಟ್ಟಿಯಾಗಿ ನೆಲೆ ನಿಂತಿದ್ದಾರೆ. ರಕ್ಷಿತ್ ಶೆಟ್ಟಿ ಹಾಗೂ ರಿಷಬ್ ಶೆಟ್ಟಿ ಸಿನಿಮಾ ಬರುತ್ತೆ ಅಂದ್ರೆ ಜನರಿಗೆ ಯಾವತ್ತಿಗೂ ಒಂದು ಕುತೂಹಲ ಇದ್ದೇ ಇರುತ್ತೆ. ಹಾಗೆಯೇ ಇವರು ಕೂಡ ಜನರಿಗೆ ನಿರಾಶೆ ಮೂಡಿಸಿದವರಲ್ಲ.
ಅದೇ ರೀತಿ ರಕ್ಷಿತ್ ಶೆಟ್ಟಿ ಹಾಗೂ ರಿಷಬ್ ಶೆಟ್ಟಿ ಎಷ್ಟು ದೊಡ್ಡ ಮಟ್ಟಕ್ಕೆ ಬೆಳೆದ್ರೂ ಕೂಡ ತಮ್ಮ ಸ್ನೇಹವನ್ನು ಬಿಟ್ಟು ಕೊಟ್ಟವರಲ್ಲ. ಏನೇ ವಿಶೇಷ ಸಂದರ್ಭ ಇದ್ದರೂ ಕೂಡ ಅವರ ಗ್ಯಾಂಗ್ ಜೊತೆಗೆ ಸೆಲೆಬ್ರೇಟ್ ಮಾಡ್ತಾರೆ. ಆ ಫೋಟೋಗಳನ್ನು ನಾವು ಸಹಜವಾಗಿ ಸೋಶಿಯಲ್ ಮೀಡಿಯಾದಲ್ಲಿ ನೋಡ್ತಿರ್ತೀವಿ.
ಇತ್ತೀಚಿಗೆ ಅಂತಹದ್ದೇ ಒಂದು ವಿಶೇಷವಾದ ವಿಡಿಯೋವೊಂದು ಸೋಶಿಯಲ್ ಮಿಡಿಯಾದಲ್ಲಿ ವೈರಲ್ ಆಗ್ತಿದೆ. ಆ ವಿಡಿಯೋದಲ್ಲಿ ರಕ್ಷಿತ್, ರಿಷಬ್ ಹಾಗೂ ಪ್ರಮೋದ್ ಶೆಟ್ಟಿ ಒಂದೇ ತಟ್ಟೆಯಲ್ಲಿ ಬಿರಿಯಾನಿ ತಿನ್ನುತ್ತಿರುತ್ತಾರೆ. ಅದೂ ಕೂಡ ತುಂಬಾ ಸಂತೋಷದಿಂದ ನಗು ನಗುತ್ತಾ ಊಟ ಮಾಡುತ್ತಿರುತ್ತಾರೆ. ಈ ವಿಡಿಯೋವನ್ನು ಶೀತಲ್ ಶೆಟ್ಟಿ ತಮ್ಮ ಇನ್ಸ್ ಸ್ಟಾಗ್ರಾಂ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ.
ಈ ವಿಡಿಯೋ ಪೋಸ್ಟ್ ಮಾಡಿದ ಕೆಲವೇ ಕ್ಷಣಗಳಲ್ಲಿ ಈ ವಿಡಿಯೋ ಲಕ್ಷಾಂತರ ವೀಕ್ಷಣೆಯನ್ನು ಪಡೆದುಕೊಂಡಿದ್ದು ಮಾತ್ರವಲ್ಲದೇ ಅನೇಕ ಮಂದಿ ಈ ವಿಡಿಯೋವನ್ನು ಮೆಚ್ಚಿಕೊಂಡಿದ್ದಾರೆ. ಸ್ನೇಹ ಅಂದ್ರೆ ಈ ರೀತಿ ಇರಬೇಕು ಅಂತ ಹೇಳಿದ್ದಾರೆ.
ರಕ್ಷಿತ್ ಹಾಗೂ ರಿಷಬ್ ಶೆಟ್ಟಿ ಸಾಮಾನ್ಯ ಸ್ನೇಹಿತರ ಬಳಗ ಹೊಂದಿದ್ದಾರೆ. ಸಾಮಾನ್ಯವಾಗಿ ಎಲ್ಲಾ ವಿಶೇಷ ಕಾರ್ಯ ಕ್ರಮಗಳಲ್ಲೂ ಇವರೆಲ್ಲಾ ಒಟ್ಟಾಗಿ ಕಾಣಿಸಿಕೊಳ್ಳುತ್ತಾರೆ. ಇನ್ನೂ ಸಿನಿಮಾಗಳ ವಿಚಾರಕ್ಕೆ ಬಂದರೆ ಇಬ್ಬರೂ ಕೂಡ ಕನ್ನಡ ಚಲನಚಿತ್ರ ರಂಗಕ್ಕೆ ಉತ್ತಮ ಸಿನಿಮಾಗಳನ್ನು ನೀಡಿದ್ದಾರೆ. ಇನ್ನೂ ನಟನೆಯ ಬಗ್ಗೆ ನೋ ಕಮೆಂಟ್ಸ್. ಅದ್ಭುತ ನಟರು ಇವರಿಬ್ಬರು.
ಇವರೆಲ್ಲರ ಸ್ನೇಹ ಇದೇ ರೀತಿ ಇರಲಿ ಎಂದು ಆಶಿಸೋಣ.



Click it and Unblock the Notifications
