Latest Updates
-
ವಿಶ್ವ ಆಸ್ಟಿಯೋ ಪೋರೋಸಿಸ್ ದಿನ: ಮೂಳೆಗಳನ್ನು ಗಟ್ಟಿಗೊಳಿಸಲು ಮನೆಯಲ್ಲೇ ಮಾಡಿ ಈ 12 ನಿಮಿಷಗಳ ಸರಳ ವ್ಯಾಯಾಮ! -
ಗರ್ಬಾ ರಾತ್ರಿಯಲ್ಲಿ ಸುರಕ್ಷಿತವಾಗಿರಲು ಹೀಗೆ ಮಾಡಿ: ಮಿಶ್ರ ಧರ್ಮದ ಜೋಡಿಗಳಿಗೆ ಅಗತ್ಯವಿರುವ ಐಡಿ ಪರಿಶೀಲನೆ ಮತ್ತು ಹೆಲ್ಪ್ಲೈನ್ -
ಆಯುಧ ಪೂಜೆ: ಕೇವಲ ₹399ರಲ್ಲಿ ಮನೆ ಮತ್ತು ಬಾಲ್ಕನಿ ಅಲಂಕಾರಕ್ಕೆ ಇಲ್ಲಿದೆ ಬೆಸ್ಟ್ ಟಿಪ್ಸ್! -
ಮಳೆಗಾಲದ ನವರಾತ್ರಿ ಪ್ರಯಾಣ: ಉಪವಾಸದ ಆಹಾರ ಹಾಳಾಗದಂತೆ ತಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ದುರ್ಗಾ ಪೂಜಾ ಸಂಭ್ರಮ: ಇಂದಿನಿಂದ ಕೋಲ್ಕತ್ತಾದಲ್ಲಿ ಬೆಳಗಿನ ಜಾವ 4 ಗಂಟೆಯವರೆಗೆ ಮೆಟ್ರೋ ಸೇವೆ, ಪಂಡಾಲ್ ದರ್ಶನಕ್ಕೆ ಇನ್ನು ಸುಲಭ! -
ನವರಾತ್ರಿ ಗರ್ಬಾ ಆಡುವ ಮುನ್ನ ಈ 9 ನಿಮಿಷದ ವಾರ್ಮ್-ಅಪ್ ಮಿಸ್ ಮಾಡ್ಬೇಡಿ! -
ನವರಾತ್ರಿ ಡೇ 6: ಗರ್ಬಾ ಅಖಾಡದಲ್ಲಿ ಕಪಲ್ಸ್ಗೆ ಇಲ್ಲಿದೆ ಸುವರ್ಣ ನಿಯಮಗಳು! -
ಈಶಾನ್ಯ ಮಾನ್ಸೂನ್ ಆರಂಭ: ಮಳೆಗಾಲದ ತೇವಾಂಶದಿಂದ ಮನೆಯನ್ನು ರಕ್ಷಿಸಲು 30 ನಿಮಿಷಗಳ ಸಿಂಪಲ್ ಪ್ಲಾನ್ -
ದೆಹಲಿ ಮಾಲಿನ್ಯದ ನಡುವೆ ಆರೋಗ್ಯ ರಕ್ಷಣೆ: ರೋಗನಿರೋಧಕ ಶಕ್ತಿ ಹೆಚ್ಚಿಸುವ ಸರಳ ಬಿಸಿ ಆಹಾರಗಳಿವು! -
ವಿಶ್ವ ಆಹಾರ ದಿನ: ಕೇವಲ 15 ನಿಮಿಷದಲ್ಲಿ ಸಿದ್ಧವಾಗುವ ₹120 ಒಳಗಿನ ಬೆಸ್ಟ್ ವೆಜ್ ಪ್ರೋಟೀನ್ ಡಯಟ್ ಪ್ಲಾನ್!
ತಾಪಮಾನ ಏರಿಕೆ ನಡುವೆ ಭಾರೀ ಮಳೆಯ ಎಚ್ಚರಿಕೆ..! ಯೆಲ್ಲೋ ಅಲರ್ಟ್ ಘೋಷಿಸಿದ ಐಎಂಡಿ!
ದೇಶದಲ್ಲಿ ಬೇಸಿಗೆ ಆರಂಭಕ್ಕೂ ಮುನ್ನ ಹೀಟ್ ವೇವ್ ಜನರ ನಿದ್ದೆಗೆಡಿಸಿದೆ. ಈಗಾಗಲೆ ರಾಜ್ಯದ ಹಲವು ಭಾಗದಲ್ಲಿ ಗರಿಷ್ಟ ತಾಪಮಾನ ಏರಿಕೆ ಆಗುತ್ತಿರುವುದು ಎಲ್ಲರಲ್ಲೂ ಆತಂಕ ಹುಟ್ಟಿಸಿದೆ. ಏಕೆಂದರೆ ಇನ್ನು ಕೂಡ ಹಲವು ತಿಂಗಳ ಬೇಸಿಗೆ ಬಾಕಿ ಉಳಿದಿದೆ. ಅದರಲ್ಲೂ ಏಪ್ರಿಲ್ ಹಾಗೂ ಮೇ ತಿಂಗಳಲ್ಲಿನಲ್ಲಿ ಈ ತಾಪಮಾನ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.
ಅದರಲ್ಲೂ ಕರಾವಳಿ ಭಾಗದಲ್ಲಿ ಬಿಸಿಗಾಳಿಯಿಂದ ಜನರು ತತ್ತರಿಸಿದ್ದಾರೆ. ಮುಂಬೈಯಿಂದ ಹಿಡಿದು ರಾಜ್ಯ ಕರಾವಳಿ ಭಾಗದಲ್ಲೂ ತಾಪಮಾನ ಏರಿಕೆಯಾಗಿದೆ. ಹಾಗೆ ಈಗ ಈ ತಾಪಮಾನ ಮತ್ತಷ್ಟು ಏರಿಕಾಗುವ ಭೀತಿ ಕೂಡ ಇದೆ. ಒಂದು ಕಡೆ ಈ ರೀತಿ ತಾಪಮಾನ ಏರಿಕೆ, ಬಿಸಿಲು ಕಾಡುತ್ತಿದ್ದರೆ ಮತ್ತೊಂದು ಕಡೆ ಭೀಕರ ಮಳೆಯ ಮುನ್ಸೂಚನೆಯೂ ಇದೆ.

ಉತ್ತರ ಭಾರತದ ಹಲವು ಭಾಗದಲ್ಲಿ ಭಾರೀ ಮಳೆಯಾಗುವ ಸೂಚನೆ ಇದೆ ಎಂದು ಐಎಂಡಿ ಮಾಹಿತಿ ಹಂಚಿಕೊಂಡಿದೆ. ಬಿಸಿಗಾಳಿಯ ನಡುವೆ ಈ ಮಳೆ ಆಗಮನದ ಸುದ್ದಿ ಹಲವಿಗೆ ತಂಪು ತಂದಿದೆ. ಆದ್ರೆ ಉತ್ತರ ಭಾತರದ ಕೆಲವು ಭಾಗದಲ್ಲಿ ಮಾತ್ರವೇ ಮಳೆಯ ಸೂಚನೆ ನೀಡಲಾಗಿದೆ. ಉಳಿದಂತೆ ಹಲವು ಕಡೆ ಬಿಸಿಗಾಳಿ ಮುಂದುವರೆಯಲಿದೆ ಎಂದಿದೆ
ಜಮ್ಮು ಮತ್ತು ಕಾಶ್ಮೀರ, ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡ ಸೇರಿದಂತೆ ಉತ್ತರ ಭಾರತದ ಗುಡ್ಡಗಾಡು ಪ್ರದೇಶಗಳಲ್ಲಿ ಭಾರೀ ಮಳೆ ಮತ್ತು ಹಿಮಪಾತವಾಗುತ್ತಿದ್ದು, ಪಂಜಾಬ್‌ನಲ್ಲಿ ಆಲಿಕಲ್ಲು ಮಳೆಯಾಗುವ ನಿರೀಕ್ಷೆಯಿದೆ. ಮುಂದಿನ 24 ಗಂಟೆಗಳಲ್ಲಿ ಪಂಜಾಬ್, ಹಿಮಾಚಲ ಪ್ರದೇಶ ಮತ್ತು ಜಮ್ಮುವಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗೆ ಆರೆಂಜ್ ಅಲರ್ಟ್ ಘೋಷಿಸಿದೆ.
ಉತ್ತರಾಖಂಡದಲ್ಲಿ ಮಳೆಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಹಾಗೆ ಗೋವಾ ಮತ್ತು ಕೊಂಕಣದ ಪ್ರತ್ಯೇಕ ಪ್ರದೇಶಗಳಲ್ಲಿ ಒಣ ಹವೆ ಮುಂದುವರೆಯಲಿದ್ದು, ಇಲ್ಲಿಯೂ ಯೆಲ್ಲೋ ಅಲರ್ಟ್ ಘೋಷಣೆಯಾಗಿದೆ. ಹಾಗೆ ದೆಹಲಿಯಲ್ಲಿ ಮಂಜು ಕವಿದ ವಾತಾವರಣ ಇರಲಿದೆ. ರಾಷ್ಟ್ರ ರಾಜಧಾನಿಯಲ್ಲಿ ಗರಿಷ್ಠ 28 ರಿಂದ 30 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗುವ ನಿರೀಕ್ಷೆ ಕೂಡ ಇದೆ.
ದಕ್ಷಿಣದಲ್ಲಿ ತಾಪಮಾನ ಮತ್ತಷ್ಟು ಏರಿಕೆ
ಉತ್ತರ ಭಾರತದ ಕೆಲವು ಭಾಗದಲ್ಲಿ ಭಾರಿ ಮಳೆಯ ಮುನ್ಸೂಚನೆ ನೀಡಲಾಗಿದೆ. ಆದ್ರೆ ದಕ್ಷಿಣ ಭಾರತದಲ್ಲಿ ಬಿಸಿಗಾಳಿ ಅಬ್ಬರಿಸಲಿದೆ ಎಂದಿದೆ. ಬೆಳಗಾವಿಯ ವಿಮಾನ ನಿಲ್ದಾಣದಲ್ಲಿ ರಾಜ್ಯದಲ್ಲಿಯೇ ಕಡಿಮೆ ಎಂಬಂತೆ 16.4 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ತಾಪಮಾನ ದಾಖಲಾಗಿದೆ. ಹಾಗೆ ಕಾರವಾರದಲ್ಲಿ ಗರಿಷ್ಠ 38 ಡಿಗ್ರಿ ದಾಖಲಾಗಿತ್ತು. ಇನ್ನೆರಡು ದಿನ ತಾಪಮಾದಲ್ಲಿ ಯಾವುದೇ ದೊಡ್ಡ ಬದಲಾವಣೆ ಆಗುವುದಿಲ್ಲ ಎಂದಿದೆ.
ಬೆಂಗಳೂರಿನಲ್ಲಿ ಮುಂದಿನ 24 ಗಂಟೆಗಳ ಕಾಲ ಮೋಡ ಕವಿದ ವಾತಾವರಣ ಇರಲಿದೆ ಹಾಗೆ ತಾಪಮಾನ ಕೂಡ ಏರಿಕೆಯಾಗಲಿದೆ. ಆದ್ರೆ ಯಾವುದೇ ಮಳೆ ಮುನ್ಸೂಚನೆ ಇಲ್ಲ. ಇಲ್ಲಿ ಗರಿಷ್ಠ 33 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ 20 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಲಿದೆ.



Click it and Unblock the Notifications
