Latest Updates
-
ಮದುವೆಯಾದ ತಕ್ಷಣ ಸ್ವಾತಂತ್ರ್ಯ ಕೊನೆಗೊಳ್ಳುವುದಿಲ್ಲ: ದಾಂಪತ್ಯದಲ್ಲಿ 'ಸಮ್ಮತಿ'ಯ ಮಹತ್ವವೇನು? -
ಕೇರಳದಲ್ಲಿ ಭಾರೀ ಮಳೆ: ಯೆಲ್ಲೋ ಅಲರ್ಟ್ ಘೋಷಣೆ; ನಿಮ್ಮ ಮನೆ ಮತ್ತು ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳು ಅತ್ಯಗತ್ಯ -
ಗಣೇಶ ಹಬ್ಬದ ಪ್ರಸಾದ ತಯಾರಿಸುತ್ತಿದ್ದೀರಾ? ಕಲಬೆರಕೆ ತಡೆಯಲು ಮತ್ತು ಸುರಕ್ಷಿತ ಪ್ರಸಾದಕ್ಕೆ ಇಲ್ಲಿದೆ ಮಹತ್ವದ ಟಿಪ್ಸ್ -
ಐಫೋನ್ 18 ಪ್ರೋ ಮತ್ತು ಡ್ಯುವೋ ಭಾರತದಲ್ಲಿ ಲಾಂಚ್: ಬೆಲೆ, ಆಫರ್ ಮತ್ತು ಪ್ರಿ-ಆರ್ಡರ್ ಮಾಹಿತಿ ಇಲ್ಲಿದೆ! -
ವಿಶ್ವ ಆತ್ಮಹತ್ಯೆ ತಡೆ ದಿನ: ಮಾನಸಿಕ ಆರೋಗ್ಯ ಸುಧಾರಿಸಲು 10 ನಿಮಿಷದ ಸಿಂಪಲ್ ಮಾರ್ನಿಂಗ್ ರೂಟೀನ್ ಮತ್ತು ಹೆಲ್ಪ್ಲೈನ್ ವಿವರಗಳು -
ವಿಚ್ಛೇದನದ ನಂತರವೂ ಜೀವನಾಂಶ ಪಡೆಯಬಹುದೇ? ಮಧ್ಯಪ್ರದೇಶ ಹೈಕೋರ್ಟ್ನಿಂದ ಮಹತ್ವದ ತೀರ್ಪು! -
ದೆಹಲಿ ವಾಯು ಮಾಲಿನ್ಯ: ಮನೆಯಲ್ಲಿ ಶುದ್ಧ ಗಾಳಿ ಪಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ಪ್ಯಾಕ್ ಮಾಡಿದ ಆಹಾರದ ಮೇಲೆ 'ರೆಡ್ ಹೆಕ್ಸಗನ್' ಎಚ್ಚರಿಕೆ: ಇನ್ಮುಂದೆ ತಿನ್ನುವ ಮುನ್ನ ಈ ವಿಷಯ ಗಮನಿಸಿ! -
ಆಪಲ್ 'ಸರ್ಪ್ರೈಸ್ ಆಂಡ್ ಶೈನ್' ಈವೆಂಟ್: ಐಫೋನ್ 18 ಪ್ರೋ ಮತ್ತು ಫೋಲ್ಡಬಲ್ ಆಲ್ಟ್ರಾ ಲಾಂಚ್, ಭಾರತದಲ್ಲಿ ಬೆಲೆ ಎಷ್ಟು? -
ಟಾಟಾ ಮುಂಬೈ ಮ್ಯಾರಥಾನ್ ಡ್ರೀಮ್ ರನ್: ಇಂದೇ ನೋಂದಣಿ ಮುಕ್ತಾಯ, ಓಟಕ್ಕೆ ಸಜ್ಜಾಗಲು 20 ನಿಮಿಷದ ಪ್ಲಾನ್ ಇಲ್ಲಿದೆ!
ಸೆಪ್ಟೆಂಬರ್ 18-23ರ ಆರ್ಥಿಕ ಭವಿಷ್ಯ: 8 ರಾಶಿಯವರಿಗೆ ತುಂಬಾನೇ ಒಳ್ಳೆಯದಿದೆ
ಈ ವಾರ ದ್ವಾದಶ ರಾಶಿಗಳ ಆರ್ಥಿಕ ಭವಿಷ್ಯ ಹೇಗಿರಲಿದೆ ಎಂದು ನೋಡೋಣ...
ಮೇಷ ರಾಶಿ
ಆರ್ಥಿಕ ವಿಷಯದಲ್ಲಿ ಈ ವಾರ ಉತ್ತಮವಾಗಿದೆ, ಈ ವಾರ, ಷೇರು ಮಾರುಕಟ್ಟೆ ಇತ್ಯಾದಿಗಳಲ್ಲಿ ಕೆಲಸ ಮಾಡುವವರಿಗೆ ಲಾಭದ ಸಾಧ್ಯತೆಗಳಿವೆ. ಅಲ್ಲದೆ, ಈ ವಾರದ ನಂತರ ನೀವು ಆಸ್ತಿ ಇತ್ಯಾದಿಗಳಲ್ಲಿ ಹೂಡಿಕೆ ಮಾಡಬಹುದು.
ವೃಷಭ ರಾಶಿ
ಈ ವಾರ ನಿಮಗೆ ಆರ್ಥಿಕವಾಗಿ ಉತ್ತಮವಾಗಿದೆ. ವ್ಯಾಪಾರದಲ್ಲಿ ಲಾಭ ಗಳಿಸುತ್ತೀರಿ, ಆರ್ಥಿಕವಾಗಿ ಯಾವುದೇ ತೊಂದರೆಯಿಲ್ಲ, ಈ ಅವಧಿಯಲ್ಲಿ ಉಳಿತಾಯ ಮಾಡಲು ಸಾಧ್ಯವಾಗುವುದು.

ಮಿಥುನ ರಾಶಿ
ಈ ವಾರ ಮಿಥುನ ರಾಶಿಯವರಿಗೆ ವ್ಯಾಪಾರದಲ್ಲಿ ಕೆಲವು ಏರಿಳಿತಗಳು ಕಂಡುಬರಲಿದೆ. ಈ ವಾರ ಯಾರಿಗಾದರೂ ದೊಡ್ಡ ಮೊತ್ತದ ಹಣವನ್ನು ಸಾಲವಾಗಿ ನೀಡುವುದು ನಿಮಗೆ ಒಳ್ಳೆಯದಲ್ಲ. ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಬೇಡಿ.
ಕರ್ಕ ರಾಶಿ
ಈ ವಾರ ಆರ್ಥಿಕ ಸಮಸ್ಯೆ ಎದುರಾಗಲಿದೆ. ಸಾಲದ ಹಣ ಸರಿಯಾದ ಸಮಯಕ್ಕೆ ಸಿಗದೇ ಇರುವುದರಿಂದ ಆರ್ರಥಿಕ ಸಮಸ್ಯೆ ಉಂಟಾಗುವುದು. ಈ ವಾರ ನಿಮ್ಮ ಕೆಲಸದ ದೊಡ್ಡ ಬದಲಾವಣೆ ಮಾಡಲು ಹೋಗಬೇಡಿ.
ಸಿಂಹ ರಾಶಿ
ಈ ವಾರ ಆರ್ಥಿಕ ಪರಿಸ್ಥಿತಿ ಸುಧಾರಿಸಲಿದೆ. ಉದ್ಯೋಗ ಇತ್ಯಾದಿಗಳಲ್ಲಿ ನಿಮ್ಮ ನಡವಳಿಕೆಯಿಂದ ಅಧಿಕಾರಿಗಳು ಸಂತೋಷಪಡುತ್ತಾರೆ. ಈ ವಾರ ನಿಮಗೆ ಆರ್ಥಿಕವಾಗಿ ಉತ್ತಮವಾಗಿರುತ್ತದೆ.
ಕನ್ಯಾ ರಾಶಿ
ಈ ವಾರ ಆರ್ಥಿಕವಾಗಿ ಒಳ್ಳೆಯದು. ವ್ಯವಹಾರದಲ್ಲಿ ಬದಲಾವಣೆಗಳನ್ನು ಮಾಡಿದರೆ ಇನ್ನೂ ಒಳ್ಳೆಯದು. ಷೇರು ಮಾರುಕಟ್ಟೆ ಇತ್ಯಾದಿಗಳಲ್ಲಿ ಹೂಡಿಕೆ ಮಾಡುವುದು ನಿಮಗೆ ಒಳ್ಳೆಯದು. ಆಸ್ತಿಯಲ್ಲಿ ಹೂಡಿಕೆ ಮಾಡಲು ಈ ಸಮಯ ಉತ್ತಮವಾಗಿದೆ.
ತುಲಾ ರಾಶಿ
ಈ ವಾರ ನಿಮ್ಮ ಹಣಕಾಸಿನ ಬಗ್ಗೆ ಚಿಂತೆ ಕಾಡಬಹುದು. ಅನಾರೋಗ್ಯದ ಕಾರಣ ಈ ವಾರ ನಿಮ್ಮ ಬಜೆಟ್ ಹಾಳಾಗಬಹುದು. ವ್ಯಾಪಾರದಲ್ಲಿ ನೀವು ಜಾಗ್ರತೆವಹಿಸಬೇಕಾಗಿದೆ.
ವೃಶ್ಚಿಕ ರಾಶಿ
ಈ ವಾರ ನೀವು ಕೆಲಸದ ಸ್ಥಳದಲ್ಲಿ ಕೆಲವು ಪ್ರಮುಖ ಯಶಸ್ಸನ್ನು ಪಡೆಯಬಹುದು. ನಿಮ್ಮ ಆರ್ಥಿಕ ಸ್ಥಿತಿಯನ್ನು ಸುಧಾರಿಸುತ್ತದೆ. ನಿಮ್ಮದೇ ಆದ ಕೆಲಸವನ್ನು ಪ್ರಾರಂಭಿಸಲು ನೀವು ಯೋಚಿಸುತ್ತಿದ್ದರೆ, ಈ ವಾರ ಆ ಕೆಲಸ ಶುರು ಮಾಡಬಹುದು.
ಧನು ರಾಶಿ
ಆರ್ಥಿಕ ದೃಷ್ಟಿಯಿಂದ ಈ ವಾರ ಮಹತ್ವದ್ದಾಗಿದೆ. ಕೆಲಸದ ಕ್ಷೇತ್ರದಲ್ಲಿ ನೀವು ಕೆಲವು ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಬಹುದು. ವ್ಯಾಪಾರಸ್ಥರು ಲಾಭ ಗಳಿಸುತ್ತಾರೆ. ಆರ್ಥಿಕ ಸ್ಥಿತಿ ಸುಧಾರಿಸುತ್ತದೆ.
ಮಕರ ರಾಶಿ
ಈ ವಾರ ನಿಮಗೆ ಆರ್ಥಿಕವಾಗಿ ಲಾಭದಾಯಕವಾಗಿರಲಿದೆ. ನೀವು ಕೆಲವು ಸಮಯದಿಂದ ನಿಮ್ಮ ಸ್ವಂತ ಉದ್ಯೋಗವನ್ನು ಮಾಡಲು ಬಯಸಿದರೆ, ಈ ವಾರ ನೀವು ಅದರಲ್ಲಿ ಯಶಸ್ಸನ್ನು ಪಡೆಯಬಹುದು. ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿದ್ದರೆ ಲಾಭ ಗಳಿಸುತ್ತೀರಿ.
ಕುಂಭ ರಾಶಿ
ಈ ವಾರ ನಿಮ್ಮ ಆರ್ಥಿಕ ಸ್ಥಿತಿ ಅಷ್ಟು ಚೆನ್ನಾಗಿರಲ್ಲ, ಆರೋಗ್ಯ ಸಮಸ್ಯೆಗಳಿರಬಹುದು. ಕೆಲಸದಲ್ಲಿ ಗಮನ ಕೊಡಲು ಸಾಧ್ಯವಾಗುವುದಿಲ್ಲ.
ಮೀನ ರಾಶಿ
ಈ ವಾರ ಆರ್ಥಿಕ ಪರಿಸ್ಥಿತಿ ಸುಧಾರಿಸಲಿದೆ. ನಿಮ್ಮ ಸ್ಥಗಿತಗೊಂಡ ಕೆಲಸ ಮತ್ತೆ ಶುರುವಾಗುವುದು, ಆರ್ಥಿಕ ಸ್ಥಿತಿ ಚೆನ್ನಾಗಿರಲಿದೆ. ಈ ವಾರ ನೀವು ಕುಟುಂಬಕ್ಕೆ ವಾಹನ ಮತ್ತು ಮನೆ ಖರೀದಿಸಲು ಯೋಜಿಸಬಹುದು.



Click it and Unblock the Notifications
