Latest Updates
-
ಗರ್ಬಾ ರಾತ್ರಿಯಲ್ಲಿ ಸುರಕ್ಷಿತವಾಗಿರಲು ಹೀಗೆ ಮಾಡಿ: ಮಿಶ್ರ ಧರ್ಮದ ಜೋಡಿಗಳಿಗೆ ಅಗತ್ಯವಿರುವ ಐಡಿ ಪರಿಶೀಲನೆ ಮತ್ತು ಹೆಲ್ಪ್ಲೈನ್ -
ಆಯುಧ ಪೂಜೆ: ಕೇವಲ ₹399ರಲ್ಲಿ ಮನೆ ಮತ್ತು ಬಾಲ್ಕನಿ ಅಲಂಕಾರಕ್ಕೆ ಇಲ್ಲಿದೆ ಬೆಸ್ಟ್ ಟಿಪ್ಸ್! -
ಮಳೆಗಾಲದ ನವರಾತ್ರಿ ಪ್ರಯಾಣ: ಉಪವಾಸದ ಆಹಾರ ಹಾಳಾಗದಂತೆ ತಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ದುರ್ಗಾ ಪೂಜಾ ಸಂಭ್ರಮ: ಇಂದಿನಿಂದ ಕೋಲ್ಕತ್ತಾದಲ್ಲಿ ಬೆಳಗಿನ ಜಾವ 4 ಗಂಟೆಯವರೆಗೆ ಮೆಟ್ರೋ ಸೇವೆ, ಪಂಡಾಲ್ ದರ್ಶನಕ್ಕೆ ಇನ್ನು ಸುಲಭ! -
ನವರಾತ್ರಿ ಗರ್ಬಾ ಆಡುವ ಮುನ್ನ ಈ 9 ನಿಮಿಷದ ವಾರ್ಮ್-ಅಪ್ ಮಿಸ್ ಮಾಡ್ಬೇಡಿ! -
ನವರಾತ್ರಿ ಡೇ 6: ಗರ್ಬಾ ಅಖಾಡದಲ್ಲಿ ಕಪಲ್ಸ್ಗೆ ಇಲ್ಲಿದೆ ಸುವರ್ಣ ನಿಯಮಗಳು! -
ಈಶಾನ್ಯ ಮಾನ್ಸೂನ್ ಆರಂಭ: ಮಳೆಗಾಲದ ತೇವಾಂಶದಿಂದ ಮನೆಯನ್ನು ರಕ್ಷಿಸಲು 30 ನಿಮಿಷಗಳ ಸಿಂಪಲ್ ಪ್ಲಾನ್ -
ದೆಹಲಿ ಮಾಲಿನ್ಯದ ನಡುವೆ ಆರೋಗ್ಯ ರಕ್ಷಣೆ: ರೋಗನಿರೋಧಕ ಶಕ್ತಿ ಹೆಚ್ಚಿಸುವ ಸರಳ ಬಿಸಿ ಆಹಾರಗಳಿವು! -
ವಿಶ್ವ ಆಹಾರ ದಿನ: ಕೇವಲ 15 ನಿಮಿಷದಲ್ಲಿ ಸಿದ್ಧವಾಗುವ ₹120 ಒಳಗಿನ ಬೆಸ್ಟ್ ವೆಜ್ ಪ್ರೋಟೀನ್ ಡಯಟ್ ಪ್ಲಾನ್! -
ವಿಶ್ವ ಬೆನ್ನುಮೂಳೆ ದಿನ: ಬೆನ್ನುನೋವಿಗೆ ಗುಡ್ ಬೈ ಹೇಳಲು ಕೇವಲ 5 ನಿಮಿಷದ 'ಸ್ಪೈನ್ ರಿಸೆಟ್' ರೂಟಿನ್!
ಜುಲೈ3-8ರ ಭವಿಷ್ಯ: ಈ 5 ರಾಶಿಯವರಿಗೆ ಈ ದಿನಗಳು ತುಂಬಾನೇ ಶುಭವಾಗಿದೆ
ಗ್ರಹಗತಿಗಳ ಆಧಾರದ ಮೇಲೆ ಜುಲೈ 3-8ರ ವಾರ ಭವಿಷ್ಯ ನೋಡಿದರೆ ಈ ವಾರ ಈ 5 ರಾಶಿಗಳಿಗೆ ತುಂಬಾನೇ ಮಂಗಳಕರವಾಗಿದೆ ನೋಡಿ....
ವೃಷಭ ರಾಶಿ
ವೃಷಭ ರಾಶಿಯವರಿಗೆ ಈ ವಾರ ತುಂಬಾ ಚೆನ್ನಾಗಿರಲಿದೆ. ಸಈ ವಾರ ನಿಮ್ಮ ಕೆಲಸ ಕಾರ್ಯಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸುತ್ತೀರಿ. ಹಣಕ್ಕೆ ಸಂಬಂಧಿಸಿದ ನಿರ್ಧಾರವನ್ನು ಮಾತ್ರ ಹುಷಾರಾಗಿ ತೆಗೆದುಕೊಳ್ಳಿ. ಇನ್ನು ಕುಟುಂಬದಲ್ಲಿ ಇದ್ದ ಚಿಕ್ಕ ಪುಟ್ಟ ಸಮಸ್ಯೆ ಈ ವಾರ ಬಗೆಹರಿಯಲಿದೆ. ಈ ವಾರ ಕುಟುಂಬದಲ್ಲಿ ಸಂತೋಷದ ವಾತಾವರಣ ಇರಲಿದೆ. ಇನ್ನು ಕೆಲಸಕ್ಕಾಗಿ ಹುಡುಕುತ್ತಿರುವವರಿಗೆ ಈ ವಾರ ಶುಭ ಸುದ್ದಿ ಸಿಗಲಿದೆ. ವ್ಯಾಪಾರಸ್ಥರು ಒಳ್ಳೆಯ ಲಾಭವನ್ನು ಪಡೆಯಬಹುದು. ಪ್ರೇಮಿಗಳಿಗೂ ಈ ಅ ವಾರ ಉತ್ತಮವಾಗಿರಲಿದೆ. ವೈವಾಹಿಕ ಜೀವನದಲ್ಲಿ ಹೊಂದಾಣಿಕೆ, ಖುಷಿ ಇರಲಿದೆ.

ಮಿಥುನ ರಾಶಿ
ಮಿಥುನ ರಾಶಿಯವರಿಗೆ ಈ ವಾರ ಉತ್ತಮವಾಗಿದೆ. ಈ ವಾರ ನಿಮ್ಮ ಕೆಲಸ ಕಾರ್ಯಗಳು ಬಯಸಿದಂತೆ ನೆರವೇರಲಿದೆ. ವ್ಯಾಪಾರಸ್ಥರಿಗೆ ಲಾಭದ ವಾರವಾಗಲಿದೆ. ಈ ವಾರ ನಿಮ್ಮ ಕೆಲಸ ಕಾರ್ಯಗಳಿಗೆ ಕುಟುಂಬದವರ ಬೆಂಬಲ ಕೂಡ ಸಿಗುವುದರಿಂದ ನಿಮ್ಮ ಆತ್ಮವಿಶ್ವಾಸ ಹೆಚ್ಚಾಗಲಿದೆ. ಉದ್ಯೋಗಿಗಳಿಗೆ ವೃತ್ತಿ ಜೀವನದಲ್ಲಿ ಬೆಳೆಯಲು ಅವಕಾಶ ದೊರೆಯಲಿದೆ. ನಿಮಗೆ ಸಿಕ್ಕ ಅವಕಾಶವನ್ನು ಉತ್ತಮವಾಗಿ ಬಳಸಿಕೊಳ್ಳಿ. ದಾಂಪತ್ಯ ಜೀವನ ಚೆನ್ನಾಗಿರಲಿದೆ. ಆರೋಗ್ಯ ಕೂಡ ಉತ್ತಮವಾಗಿರಲಿದೆ.
ಕರ್ಕ ರಾಶಿ
ಈ ವಾರ ಕರ್ಕ ರಾಶಿಯರಿಗೆ ತುಂಬಾನೇ ಒಳ್ಳೆಯದಿದೆ. ಈ ವಾರ ನಿಮ್ಮ ಯೋಜಿತ ಕೆಲಸಗಳು ಸಮಯಕ್ಕೆ ಸರಿಯಾಗಿ ಪೂರ್ಣಗೊಳ್ಳುವುದರಿಂದ ಯಾವುದೇ ಸಮಸ್ಯೆ ಇರಲ್ಲ. ನೀವು ಆಸ್ತಿ ಖರೀದಿಸಲು ಅಥವಾ ಮಾರಾಟ ಮಾಡಲು ಯೋಚಿಸುತ್ತಿದ್ದರೆ ಈ ವಾರ ಸಾಧ್ಯವಾಗಲಿದೆ, ಇದರಲ್ಲಿ ನೀವು ಉತ್ತಮ ಲಾಭವನ್ನು ಪಡೆಯುವ ಸಾಧ್ಯತೆಯಿದೆ. ವ್ಯಾಪಾರದಲ್ಲಿ ನೀವು ನಿರೀಕ್ಷೆಗಿಂತ ಹೆಚ್ಚಿನ ಲಾಭವನ್ನು ಪಡೆಯುತ್ತೀರಿ. ಕುಟುಂಬ ಜೀವನದಲ್ಲಿ ನೆಮ್ಮದಿ, ಖುಷಿ ಇರಲಿದೆ. ಪ್ರೇಮ ಜೀವನಕ್ಕೂ ಈ ಅವಾರ ಅನುಕೂಲಕರವಾಗಿದೆ, ಆರೊಗ್ಯ ಚೆನ್ನಾಗಿರಲಿದೆ.
ಸಿಂಹ ರಾಶಿ
ಸಿಂಹ ರಾಶಿಯವರಿಗೆ ಈ ವಾರ ಅತ್ಯುತ್ತಮವಾಗಿದೆ. ಈ ವಾರ ನಿಮ್ಮ ಮುಖ್ಯವಾದ ಕನಸು ನನಸಾಗಲಿದೆ. ಈ ಅವಧಿಯಲ್ಲಿ ಧಾರ್ಮಿಕ ಕಾರ್ಯಗಳಲ್ಲಿ ಹೆಚ್ಚು ಆಸಕ್ತಿ ತೋರಿಸಬಹುದು. ನಿಮ್ಮ ಸೌಕರ್ಯಗಳು ಹೆಚ್ಚಾಗಲಿದೆ. ಮನೆಗೆ ನೀವು ತುಂಬಾ ಸಮಯದಿಂದ ಬಯಸುತ್ತಿದ್ದ ವಸ್ತು ತರುವುದರಿಂದ ಸಂತೋಷ ಹೆಚ್ಚಾಗಲಿದೆ. ಜೀವನ ಸಂಗಾತಿಯೊಂದಿಗೆ ಸಂಬಂಧ ಮಧುರವಾಗಿರುತ್ತದೆ. ಆರೋಗ್ಯ ಚೆನ್ನಾಗಿರಲಿದೆ.
ಕುಂಭ ರಾಶಿ
ಕುಂಭ ರಾಶಿಯವರಿಗೆ ಈ ವಾರ ಉದ್ಯೋಗಿಗಳಿಗೆ ಹಾಗೂ ವ್ಯವಹಾರಸ್ಥರಿಗೆ ಅನುಕೂಲಕರವಾಗಿದೆ. ಈ ವಾರ ನೀವು ಮಾಡುವ ಪ್ರಯಾಣ ಲಾಭದಾಯಕವಾಗಿರಲಿದೆ. ವಾರದ ಮಧ್ಯದಲ್ಲಿ, ನೀವು ಧಾರ್ಮಿಕ ಮತ್ತು ಸಾಮಾಜಿಕ ಕಾರ್ಯಗಳಲ್ಲಿ ನಿರತರಾಗಿರುತ್ತೀರಿ. ಸ್ಮರ್ಧಾತ್ಮಕ ಪರೀಕ್ಷೆಗೆ ತಯಾರ ವಿದ್ಯಾರ್ಥಿಗಳಿಗೆ ಈ ಸಮಯ ಮಂಗಳಕರವಾಗಿದೆ. ಉದ್ಯೋಗಿಗಳಿಗೆ ಈ ಸಮಯದಲ್ಲಿ ಮೇಲಾಧಿಕಾರಿಗಳ ಮಾರ್ಗದರ್ಶನ ಹಾಗೂ ಬೆಂಬಲ ಸಿಗಲಿದೆ. ದಾಂಪತ್ಯ ಜೀವನ ಚೆನ್ನಾಗಿರಲಿದೆ.



Click it and Unblock the Notifications
