Latest Updates
-
ಮಳೆಗಾಲದಲ್ಲಿ ಫಿಟ್ ಆಗಿರಬೇಕೆ? ಬೆಂಗಳೂರು, ಚೆನ್ನೈ, ಕೊಚ್ಚಿ ಜನರಿಗಾಗಿ ಇಲ್ಲಿದೆ 20 ನಿಮಿಷದ ಸಿಂಪಲ್ ವರ್ಕೌಟ್! -
2026ರ ನವರಾತ್ರಿ ಗರ್ಬಾ: ಪಾಸ್ ವಂಚನೆಗೆ ಬಲಿಯಾಗದಿರಿ, ಸುರಕ್ಷಿತವಾಗಿ ಆನಂದಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ದೆಹಲಿಯಲ್ಲಿ ಕಠಿಣ GRAP ನಿಯಮ ಜಾರಿ: ಮನೆಯ ಗಾಳಿ ಶುದ್ಧವಾಗಿಡಲು ಮತ್ತು ಮಾಲಿನ್ಯ ತಡೆಯಲು ಇಲ್ಲಿವೆ ಸರಳ ಟಿಪ್ಸ್ -
ಹಬ್ಬದ ಸಿಹಿ ಕೊಳ್ಳುವ ಮುನ್ನ ಎಚ್ಚರ: FSSAI ಕಟ್ಟುನಿಟ್ಟಿನ ಕಾರ್ಯಾಚರಣೆ ಮತ್ತು ಹೊಸ ನಿಯಮಗಳೇನು? -
ಮೈಸೂರು ದಸರಾ 2026: ಟಿಕೆಟ್ ಬುಕ್ಕಿಂಗ್ ಆರಂಭ, ಕಂಬಳ ನೋಂದಣಿಗೆ ಇಂದೇ ಕೊನೆಯ ದಿನ! -
ಗಾಂಧಿ ಜಯಂತಿ ವಿಶೇಷ: ಫಿಟ್ನೆಸ್ ಮತ್ತು ಸಮಾಜ ಸೇವೆ ಬೆಸೆಯುವ 'ಪ್ಲಾಗಿಂಗ್'ಗೆ ಸಿದ್ಧರಾಗಿ! -
ಡೇಟಿಂಗ್ ಆ್ಯಪ್ ಹನಿಟ್ರ್ಯಾಪ್: ಪಬ್ಗಳಲ್ಲಿ ನಡೆಯುವ ಈ ದಂಧೆಯಿಂದ ಪಾರಾಗುವುದು ಹೇಗೆ? -
IMD ಮಳೆ ಅಲರ್ಟ್: ಬೆಂಗಳೂರು, ಚೆನ್ನೈ, ಕೇರಳದಲ್ಲಿ ಭಾರೀ ಮಳೆ; ಮನೆಯನ್ನು ಸುರಕ್ಷಿತವಾಗಿರಿಸಲು ಈ ಟಿಪ್ಸ್ ಪಾಲಿಸಿ! -
ಇಂದಿನಿಂದ ಎನರ್ಜಿ ಡ್ರಿಂಕ್ಸ್ ನಿಯಮ ಬದಲಾವಣೆ: ಕ್ಯಾನ್ ಖರೀದಿಸುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ಅಪಾರ್ಟ್ಮೆಂಟ್ ಗೇಟ್ನಲ್ಲಿ ಟ್ರಾಫಿಕ್ ಜಾಮ್? ಈ ಸರಳ ಟಿಪ್ಸ್ ಪಾಲಿಸಿದರೆ 5 ನಿಮಿಷದಲ್ಲಿ ಹೊರಬರಬಹುದು!
ವಾರ ಭವಿಷ್ಯ: ಡಿಸೆಂಬರ್ 10-17ರವರೆ ಈ 4 ರಾಶಿಯವರು ಜಾಗ್ರತೆವಹಿಸಿದರೆ ಒಳ್ಳೆಯದು
ಗ್ರಹಗತಿಗಳ ಸ್ಥಾನದ ಆಧಾರದ ಮೇಲೆ ವಾರ ಭವಿಷ್ಯ ನೀಡಲಾಗುವುದು. ಈ ವಾರದ ಭವಿಷ್ಯ ನೋಡುವುದಾದರೆ ಈ ನಾಲ್ಕು ರಾಶಿಯವರು ಹೆಚ್ಚಿನ ಜಾಗ್ರತೆವಹಿಸಬೇಕು, ಬನ್ನಿ ಆ ರಾಶಿಗಳು ಯಾವುವು ಎಂದು ನೋಡೋಣ:

ಕರ್ಕ ರಾಶಿ
ಈ ವಾರ ಕೆಲಸದಲ್ಲಿ ತುಂಬಾನೇ ಗಮನಹರಿಸಬೇಕು, ಇಲ್ಲದಿದ್ದರೆ ನೀವು ಪ್ರತಿಕೂಲ ಪರಿಸ್ಥಿತಿಗಳನ್ನು ಎದುರಿಸಬೇಕಾಗುತ್ತದೆ. ನಿಮಗೆ ವಹಿಸಿದ ಯಾವುದೇ ಕೆಲಸದಲ್ಲಿ ನಿರ್ಲಕ್ಷ್ಯ ಮಾಡಬೇಡಿ. ಈ ವಾರ ಯಾವುದೇ ಪ್ರಮುಖ ವ್ಯವಹಾರ ನಿರ್ಧಾರಗಳನ್ನು ತೆಗೆದುಕೊಳ್ಳಬೇಡಿ. ಈ ಅವಧಿಯಲ್ಲಿ ಆರೋಗ್ಯದ ಕಡೆಯೂ ಹೆಚ್ಚಿನ ಗಮನಹರಿಸಬೇಕು.
ಈ ವಾರ ಹಣಕಾಸಿನ ಅಡೆತಡೆಗಳಿಂದಾಗಿ ಅದು ನಿಮ್ಮ ಕೆಲಸದ ಮೇಲೆ ಪ್ರಭಾವ ಬೀರುವುದು, ಇದರಿಂದಾಗಿ ನೀವು ಹಲವಾರು ರೀತಿಯ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ನೀವು ವೃತ್ತಿಪರ ನಿರ್ಧಾರಗಳನ್ನು ತೆಗೆದುಕೊಳ್ಳುವಾಗ ನೀವು ಹೆಚ್ಚು ಜಾಗರೂಕರಾಗಿರಬೇಕು
ಪರಿಹಾರ: ಶನಿವಾರ ಶನಿ ದೇವಾಲಯಕ್ಕೆ ಭೇಟಿ ನೀಡಿ.
ಸಿಂಹ ರಾಶಿ
ಸಿಂಹ ರಾಶಿಯವರಿಗೆ ಈ ವಾರ ಏರಳಿತಗಳಿಂದ ಕೂಡಿರಲಿದೆ.ಈ ಅವಧಿಯಲ್ಲಿ ನಿಮ್ಮ ಕೆಲಸವನ್ನು ಪೂರ್ಣಗೊಳಿಸಲು ಹೆಚ್ಚು ಕಷ್ಟಪಡಬೇಕಾಗುತ್ತದೆ. ವ್ಯಾಪಾರಿಗಳು ಈ ಅವಧಿಯಲ್ಲಿ ಹೆಚ್ಚಿನ ಸಮಸ್ಯೆಗಳನ್ನು ಎದುರಿಸಬಹುದು, ಇದರಿಂದ ಲಾಭಗಳಿಸಲು ಕಷ್ಟವಾಗುವುದು. ಈ ವಾರ ನೀವು ಹಣದ ಬಗ್ಗೆ ಹೆಚ್ಚಿನ ಜಾಗ್ರತೆವಹಿಸಬೇಕು, ಮಿತಿಮೀರಿ ಖರ್ಚು ಮಾಡಬೇಡಿ. ಮನೆಯ ಜವಾಬ್ದಾರಿ, ಕೆಲಸದ ಒತ್ತಡವು ನಿಮ್ಮನ್ನು ಈ ವಾರ ತುಂಬಾ ಸುಸ್ತಾಗಿಸುತ್ತದೆ.
ಹಿರಿಯರು ನೀಡಿದ ಸಲಹೆಯನ್ನು ನಿರ್ಲಕ್ಷ್ಯ ಮಾಡಬೇಡಿ. ಬಾಕಿಯಿರುವ ಕೆಲಸವನ್ನು ಪ್ರಾರಂಭಿಸಲು ನೀವು ಯೋಚಿಸುತ್ತಿದ್ದರೆ, ಈ ವಾರ ಪ್ರತಿಕೂಲವಾಗಿರುತ್ತದೆ. ಏಕೆಂದರೆ ಈ ವಾರವೂ ನೀವು ಹಿಂದೆ ಅಪೂರ್ಣವಾದ ಕಾರ್ಯಗಳನ್ನು ಪುನರಾರಂಭಿಸುವಲ್ಲಿ ತೊಂದರೆಗಳನ್ನು ಎದುರಿಸಬಹುದು. ಆರೋಗ್ಯ ಹದಗೆಡುವ ಸಾಧ್ಯತೆ ಇದೆ.
ಪರಿಹಾರ: ಪ್ರತಿದಿನ 11 ಬಾರಿ 'ಓಂ ನಮಃ ಶಿವಾಯ' ಜಪಿಸಿ.
ಕನ್ಯಾ ರಾಶಿ
ಕಚೇರಿಯಲ್ಲಿ ನಡೆಯುತ್ತಿರುವುದರ ಬಗ್ಗೆ ನೀವು ಜಾಗರೂಕರಾಗಿರಬೇಕು, ಇಲ್ಲದಿದ್ದರೆ ಅವರ ಸಂಚಿಗೆ ನೀವು ಬಲಿಯಾಗಬಹುದು, ಯಾವುದೇ ಗಾಸಿಪ್‌ಗೆ ಒಳಗಾಗಬೇಡಿ. ವ್ಯಾಪಾರಸ್ಥರಿಗೆ ಇದು ಸವಾಲಿನ ವಾರ. ಈ ಅವಧಿಯಲ್ಲಿ ನೀವು ಮಿತಿಯಲ್ಲಿ ಖರ್ಚು ಮಾಡದಿದ್ದರೆ ತೊಂದರೆಯಾಗಬಹುದು. ಈ ಅವಧಿಯಲ್ಲಿ ನೀವು ಆರೋಗ್ಯದ ಕಡೆಗೂ ಗಮನಹರಿಸಬೇಕು.
ಈ ವಾರ ನಿಮಗೆ ಹೆಚ್ಚು ಲಾಭದಾಯಕವಾಗಿಲ್ಲ, ಅತಿಯಾದ ಖರ್ಚು ಮಾಡುವುದನ್ನು ತಪ್ಪಿಸಿ. ಹಣಕಾಸಿನ ಅಡೆತಡೆಗಳಿಂದ ಕುಟುಂಬದಲ್ಲಿ ಭಿನ್ನಾಭಿಪ್ರಾಯ ಉಂಟಾಗಬಹುದು. ಈ ವಾರ ಆತುರದಲ್ಲಿ ಯಾವುದೇ ನಿರ್ಧಾರ ತೆಗೆದುಕೊಳ್ಳಬೇಡಿ ಎಂದು ಸಲಹೆ ನೀಡಲಾಗುವುದು. ಯಾರ ಜೊತೆಯೂ ಅಹಂಕಾರದಿಂದ ವರ್ತಿಸಬೇಡಿ.
ಪರಿಹಾರ: ಬುಧವಾರದಂದು ಬಡ ಮಕ್ಕಳಿಗೆ ಪುಸ್ತಕಗಳನ್ನು ದಾನ ಮಾಡಿ.
ವೃಶ್ಚಿಕ ರಾಶಿ
ನೀವು ಯಾರನ್ನಾದರೂ ಪ್ರೀತಿಸುತ್ತಿದ್ದರೆ ಈ ವಾರ ನಿಮಗೆ ಸ್ವಲ್ಪ ವಿವಾದಾತ್ಮಕವಾಗಿರುತ್ತದೆ. ಮೂರನೇ ವ್ಯಕ್ತಿಯ ಹಸ್ತಕ್ಷೇಪದಿಂದಾಗಿ ನಿಮ್ಮ ನಡುವೆ ಭಿನ್ನಾಭಿಪ್ರಾಯ ಬರಬಹುದು. ಹಣಕಾಸಿನ ಪರಿಸ್ಥಿತಿ ಹದಗೆಡಬಹುದು. ಆರ್ಥಿಕವಾಗಿ ಈ ವಾರ ಉತ್ತಮವಾಗಿಲ್ಲ. ನೀವು ವ್ಯಾಪಾರಸ್ಥರಾಗಿದ್ದರೆ ನಿಮ್ಮ ವ್ಯಾಪಾರ ಯೋಜನೆಗಳನ್ನು ಬೇರೆಯವರ ಜೊತೆ ಹೇಳಲು ಹೋಗಬೇಡಿ.
ರಕ್ತದೊತ್ತಡ, ಮಧುಮೇಹ ಅಥವಾ ಸ್ಥೂಲಕಾಯದಿಂದ ಬಳಲುತ್ತಿರುವ ರೋಗಿಗಳು ಈ ವಾರ ವಿಶೇಷ ಕಾಳಜಿ ವಹಿಸಬೇಕು. ಹಣ ಉಳಿತಾಯ ಮಾಡಲು ಕಷ್ಟವಾಗುವುದು. ಕುಟುಂಬ ವಿಷಯದಲ್ಲಿ ಮಾನಸಿಕ ಒತ್ತಡ ಹೆಚ್ಚಾಗುವುದು. ಏನಾದರೂ ಆರೋಗ್ಯ ಸಮಸ್ಯೆಯಿದ್ದರೆ ಔಷಧವನ್ನು ನಿಯಮಿತವಾಗಿ ತೆಗೆದುಕೊಳ್ಳಿ.
ಪರಿಹಾರ: ಪ್ರತಿದಿನ ಹನುಮಾನ್ ಚಾಲೀಸವ ಪಠಿಸಿ.



Click it and Unblock the Notifications
