Latest Updates
-
ಮಳೆಗಾಲದಲ್ಲಿ ಫಿಟ್ ಆಗಿರಬೇಕೆ? ಬೆಂಗಳೂರು, ಚೆನ್ನೈ, ಕೊಚ್ಚಿ ಜನರಿಗಾಗಿ ಇಲ್ಲಿದೆ 20 ನಿಮಿಷದ ಸಿಂಪಲ್ ವರ್ಕೌಟ್! -
2026ರ ನವರಾತ್ರಿ ಗರ್ಬಾ: ಪಾಸ್ ವಂಚನೆಗೆ ಬಲಿಯಾಗದಿರಿ, ಸುರಕ್ಷಿತವಾಗಿ ಆನಂದಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ದೆಹಲಿಯಲ್ಲಿ ಕಠಿಣ GRAP ನಿಯಮ ಜಾರಿ: ಮನೆಯ ಗಾಳಿ ಶುದ್ಧವಾಗಿಡಲು ಮತ್ತು ಮಾಲಿನ್ಯ ತಡೆಯಲು ಇಲ್ಲಿವೆ ಸರಳ ಟಿಪ್ಸ್ -
ಹಬ್ಬದ ಸಿಹಿ ಕೊಳ್ಳುವ ಮುನ್ನ ಎಚ್ಚರ: FSSAI ಕಟ್ಟುನಿಟ್ಟಿನ ಕಾರ್ಯಾಚರಣೆ ಮತ್ತು ಹೊಸ ನಿಯಮಗಳೇನು? -
ಮೈಸೂರು ದಸರಾ 2026: ಟಿಕೆಟ್ ಬುಕ್ಕಿಂಗ್ ಆರಂಭ, ಕಂಬಳ ನೋಂದಣಿಗೆ ಇಂದೇ ಕೊನೆಯ ದಿನ! -
ಗಾಂಧಿ ಜಯಂತಿ ವಿಶೇಷ: ಫಿಟ್ನೆಸ್ ಮತ್ತು ಸಮಾಜ ಸೇವೆ ಬೆಸೆಯುವ 'ಪ್ಲಾಗಿಂಗ್'ಗೆ ಸಿದ್ಧರಾಗಿ! -
ಡೇಟಿಂಗ್ ಆ್ಯಪ್ ಹನಿಟ್ರ್ಯಾಪ್: ಪಬ್ಗಳಲ್ಲಿ ನಡೆಯುವ ಈ ದಂಧೆಯಿಂದ ಪಾರಾಗುವುದು ಹೇಗೆ? -
IMD ಮಳೆ ಅಲರ್ಟ್: ಬೆಂಗಳೂರು, ಚೆನ್ನೈ, ಕೇರಳದಲ್ಲಿ ಭಾರೀ ಮಳೆ; ಮನೆಯನ್ನು ಸುರಕ್ಷಿತವಾಗಿರಿಸಲು ಈ ಟಿಪ್ಸ್ ಪಾಲಿಸಿ! -
ಇಂದಿನಿಂದ ಎನರ್ಜಿ ಡ್ರಿಂಕ್ಸ್ ನಿಯಮ ಬದಲಾವಣೆ: ಕ್ಯಾನ್ ಖರೀದಿಸುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ಅಪಾರ್ಟ್ಮೆಂಟ್ ಗೇಟ್ನಲ್ಲಿ ಟ್ರಾಫಿಕ್ ಜಾಮ್? ಈ ಸರಳ ಟಿಪ್ಸ್ ಪಾಲಿಸಿದರೆ 5 ನಿಮಿಷದಲ್ಲಿ ಹೊರಬರಬಹುದು!
ಈ ವಾರ ಡಿಸೆಂಬರ್ (17-23) ಈ 4 ರಾಶಿಯವರಿಗೆ ಅನುಕೂಲಕರ
ವೈದಿಕ ಶಾಸ್ತ್ರದ ಪ್ರಕಾರ ದ್ವಾದಶ ರಾಶಿಗಳ ಭವಿಷ್ಯ ನೋಡುವುದಾದರೆ ಈ ವಾರ ಕೆಲವೊಂದು ರಾಶಿಗಳಿಗೆ ತುಂಬಾ ಅನುಕೂಲಕರವಾಗಿದೆ. ಈ ವಾರ ಯಾವೆಲ್ಲಾ ರಾಶಿಗಳಿಗೆ ಅನುಕೂಲಕರವಾಗಿದೆ ಎಂದು ನೋಡೋಣ ಬನ್ನಿ:
ಮಿಥುನ ರಾಶಿ
ಈ ವಾರ ನಿಮಗೆ ಉತ್ತಮವಾಗಿರಲಿದೆ. ಪ್ರೇಮಿಗಳ ನಡುವೆ ಬಾಂಧವ್ಯ ಮತ್ತಷ್ಟು ಹೆಚ್ಚಾಗುವುದು. ಹಣದ ವಿಷಯದಲ್ಲಿ ಈ ವಾರ ನಿಮಗೆ ಉತ್ತಮವಾಗಿದೆ. ನಿಮ್ಮ ಆದಾಯ ಹೆಚ್ಚಿಸಲು ನೀವು ಮಾಡುತ್ತಿರುವ ಪ್ರಯತ್ನಕ್ಕೆ ಫಲ ಸಿಗಲಿದೆ. ಉದ್ಯೋಗಿಗಳಿಗೆ ಇದು ಬದಲಾವಣೆಯ ಸಮಯ. ಈ ಅವಧಿಯಲ್ಲಿ ಹೊಸ ಕೆಲಸದ ಆಫರ್ ಕೂಡ ಬರಬಹುದು, ಇನ್ನು ವಿದೇಶಕ್ಕೆ ಹೋಗಲು ಪ್ರಯತ್ನಿಸುತ್ತಿರುವವರು ಉತ್ತಮ ಸುದ್ದಿಯನ್ನು ಪಡೆಯಬಹುದು. ಆರೋಗ್ಯ ಸುಧಾರಿಸಬಹುದು.

ಸಿಂಹ ರಾಶಿ
ವೃತ್ತಿ ಜೀವನದಲ್ಲಿ ಧನಾತ್ಮಕ ಬದಲಾವಣೆಗಳನ್ನು ಕಂಡು ಬರುವುದು. ನೀವು ಉದ್ಯಮಿಯಾಗಿದ್ದರೆ ಈ ವಾರ ನಿಮ್ಮ ಬ್ಯುಸ್‌ನೆಸ್‌ಗೆ ಅನುಕೂಲಕರವಾಗಿದೆ. ಈ ಅವಧಿಯಲ್ಲಿ ನೀವು ಆರ್ಥಿಕ ಲಾಭವನ್ನು ಪಡೆಯಲು ಸಾಧ್ಯವಾಗುವುದು. ಸರ್ಕಾರಿ ಉದ್ಯೋಗಿಗಳಿಗೆ ಈ ವಾರ ಉತ್ತಮವಾಗಿದೆ. ನಿರುದ್ಯೋಗಿಗಳು ಉತ್ತಮ ಕೆಲಸವನ್ನು ಪಡೆಯುವ ಸಾಧ್ಯತೆ ಇದೆ. ಕೌಟುಂಬಿಕ ಜೀವನದಲ್ಲಿ ಪರಿಸ್ಥಿತಿಗಳು ಒತ್ತಡದಿಂದ ಕೂಡಿರಲಿದೆ.
ತುಲಾ ರಾಶಿ
ಉದ್ಯೋಗಿಗಳಿಗೆ ಈ ವಾರ ತುಂಬಾ ಪ್ರಯೋಜನಕಾರಿಯಾಗಿದೆ. ನಿಮ್ಮ ಕೆಲಸಗಳು ಯಾವುದೇ ಅಡೆತಡೆಯಿಲ್ಲದೆ ಪೂರ್ಣಗೊಳ್ಳುವುದು. ವ್ಯವಹಾರಸ್ಥರಿಗೆ ಲಾಭದಾಯಕವಾಗಿದೆ. ವ್ಯಾಪಾರಸ್ಥರು ಈ ವಾರ ಉತ್ತಮ ಪ್ರಯೋಜನವನ್ನು ಕಾಣಬಹುದು. ನೀವು ಬಟ್ಟೆ ವ್ಯಾಪಾರಸ್ಥರಾಗಿದ್ದರೆ ಈ ಸಮಯವು ನಿಮಗೆ ತುಂಬಾ ಮಂಗಳಕರವಾಗಿರುತ್ತದೆ. ಹಣದ ವಿಷಯದಲ್ಲಿ ಈ ವಾರ ನಿಮಗೆ ತುಂಬಾ ದುಬಾರಿಯಾಗಲಿದೆ. ಆದಾಯಕ್ಕಿಂತ ಹೆಚ್ಚಿನ ಖರ್ಚು ಇರಬಹುದು. ಕೌಟುಂಬಿಕ ಜೀವನ ಸುಖಮಯವಾಗಿರುತ್ತದೆ.
ಮಕರ ರಾಶಿ
ಮನೆಯ ವಾತಾವರಣ ಚೆನ್ನಾಗಿರಲಿದೆ. ಈ ವಾರ ನಿಮಗೆ ಹಣದ ವಿಷಯದಲ್ಲಿ ಉತ್ತಮವಾಗಿದೆ. ವ್ಯಾಪಾರಸ್ಥರು ಆರ್ಥಿಕ ಲಾಭ ಗಳಿಸಲು ಸಾಧ್ಯವಾಗುವುದು. ಈ ಸಮಯದಲ್ಲಿ, ನೀವು ಯಾವುದೇ ಹಳೆಯ ಕುಟುಂಬದ ಸಾಲವನ್ನು ತೀರಿಸುವಲ್ಲಿ ಯಶಸ್ವಿಯಾಗುತ್ತೀರಿ. ಈ ವಾರ ಮಾನಸಿಕ ಒತ್ತಡ ಕಡಿಮೆ ಇರಲಿದೆ. ಆರೋಗ್ಯ ಸಮಸ್ಯೆಯಿದ್ದರೆ ನಿರ್ಲಕ್ಷ್ಯ ಮಾಡಬೇಡಿ.



Click it and Unblock the Notifications
