Latest Updates
-
ಗಣೇಶ ವಿಸರ್ಜನೆಗೆ ರೆಡಿಯಾಗಿದ್ದೀರಾ? ಅಪಾರ್ಟ್ಮೆಂಟ್ ನಿವಾಸಿಗಳಿಗಾಗಿ ಇಲ್ಲಿದೆ ಸ್ಮಾರ್ಟ್ ಟಿಪ್ಸ್ ಮತ್ತು ಪಾಲಿಕೆ ಸಹಾಯವಾಣಿ! -
ಹಬ್ಬದ ಸೀಸನ್ನಲ್ಲಿ ಎಚ್ಚರ! ದೆಹಲಿಯಲ್ಲಿ ಕಲಬೆರಕೆ ಸ್ವೀಟ್ಸ್ ದಾಳಿ: 30 ಸೆಕೆಂಡ್ಗಳಲ್ಲಿ ಪರೀಕ್ಷಿಸುವುದು ಹೇಗೆ? -
ಸೆಪ್ಟೆಂಬರ್ 25 ಗಣೇಶ ವಿಸರ್ಜನೆ: ಮುಂಬೈ, ಪುಣೆ, ಹೈದರಾಬಾದ್ನಲ್ಲಿ ಟ್ರಾಫಿಕ್ ರೂಟ್ ಬದಲಾವಣೆ, ಪರ್ಯಾಯ ಮಾರ್ಗಗಳ ಮಾಹಿತಿ ಇಲ್ಲಿದೆ! -
ಗಣೇಶ ವಿಸರ್ಜನೆ ಮೆರವಣಿಗೆ: ಬೆನ್ನು, ಮೊಣಕಾಲು ನೋವು ತಡೆಯಲು 12 ನಿಮಿಷದ ಸ್ಮಾರ್ಟ್ ರೊಟೀನ್ ಇಲ್ಲಿದೆ! -
ಯುಸಿಸಿ ಸಮಿತಿಯಲ್ಲಿ ಭಿನ್ನಮತ: ನಿಮ್ಮ ಮದುವೆ, ಆಸ್ತಿ ಹಕ್ಕಿನ ಮೇಲೆ ಪರಿಣಾಮವೇನು? -
15 ನಿಮಿಷದ ಡೆಂಗ್ಯೂ ಹೋಮ್ ಆಡಿಟ್: ನಿಮ್ಮ ಮನೆಯೇ ಸೊಳ್ಳೆಗಳ ತಾಣವಾಗದಿರಲಿ, ಈ ಸರಳ ಮುನ್ನೆಚ್ಚರಿಕೆಗಳನ್ನು ತಪ್ಪದೇ ಪಾಲಿಸಿ! -
ನಕಲಿ ಪ್ರೋಟೀನ್ ಸಪ್ಲಿಮೆಂಟ್ಸ್ ಎಚ್ಚರಿಕೆ: ನಿಮ್ಮ ಆರೋಗ್ಯಕ್ಕೆ ಕಂಟಕವಾಗುವ ಮುನ್ನ ಈ ಲೇಬಲ್ ಚೆಕ್ ಮಾಡಿ! -
ಒಡಿಶಾ-ಆಂಧ್ರ ಕರಾವಳಿಗೆ ಅಪ್ಪಳಿಸಲಿದೆ 'ಡೀಪ್ ಡಿಪ್ರೆಷನ್': ನಿಮ್ಮ ಸುರಕ್ಷತೆಗಾಗಿ ಈ 15 ನಿಮಿಷಗಳ ಮುನ್ನೆಚ್ಚರಿಕೆ ಮರೆಯದಿರಿ! -
ದೆಹಲಿ-ಎನ್ಸಿಆರ್ನಲ್ಲಿ ಕಳಪೆ AQI: ಶ್ವಾಸಕೋಶದ ಆರೋಗ್ಯಕ್ಕಾಗಿ ಮನೆಯಲ್ಲೇ ಮಾಡಿ ಈ 10 ನಿಮಿಷದ ಸರಳ ವ್ಯಾಯಾಮ -
ರಣವೀರ್-ದೀಪಿಕಾ ದಂಪತಿಗೆ ಹೆಣ್ಣು ಮಗು: ಹೊಸ ಪೋಷಕರಿಗೆ ಸಂಬಂಧಿಕರು ನೀಡಬೇಕಾದ ಗೌರವಯುತ ಬೆಂಬಲವೇನು?
ಭವಿಷ್ಯ: ಈ ವಾರ ಈ 5 ರಾಶಿಯವರಿಗೆ ತುಂಬಾ ಒಳ್ಳೆಯದಿದೆ
ಗ್ರಹಗತಿಗಳ ಸ್ಥಾನದ ಪ್ರಕಾರ ವಾರ ಭವಿಷ್ಯ ನೀಡಲಾಗಿದೆ, ಈ ವಾರ 5 ರಾಶಿಗಳಿಗೆ ತುಂಬಾ ಒಳ್ಳೆಯದಿದೆ, ಈ ವಾರ ಅದೃಷ್ಟದ ಆ ರಾಶಿಗಳಾವುವು ಎಂದು ನೋಡುವುದಾದರೆ....
ಮಿಥುನ ರಾಶಿ
ಮಿಥುನ ರಾಶಿಯವರಿಗೆ ಈ ವಾರ ಉತ್ತಮವಾಗಿರುತ್ತದೆ. ವ್ಯಾಪಾರಸ್ಥರು ಯಾವುದೇ ಪ್ರಮುಖ ನಿರ್ಧಾರ ತೆಗೆದುಕೊಳ್ಳಲು ಹೋಗಬೇಡಿ. ನೀವು ಪಾಲುದಾರಿಕೆಯಲ್ಲಿ ವ್ಯಾಪಾರ ಮಾಡಲು ಯೋಜಿಸುತ್ತಿದ್ದರೆ, ನಿಮ್ಮ ನಿರ್ಧಾರವನ್ನು ಬಹಳ ಎಚ್ಚರಿಕೆಯಿಂದ ತೆಗೆದುಕೊಳ್ಳಿ. ವೈವಾಹಿಕ ಜೀವನದಲ್ಲಿ ಏನಾದರೂ ಸಮಸ್ಯೆಯಿದ್ದರೆ ಮಾತನಾಡುವ ಮೂಲಕ ಬಗೆಹರಿಸಿ. ನಿಮ್ಮ ಆರ್ಥಿಕ ಸ್ಥಿತಿ ಸಾಮಾನ್ಯಕ್ಕಿಂತ ಉತ್ತಮವಾಗಿರುತ್ತದೆ.

ಕರ್ಕ ರಾಶಿ
ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ವಿದ್ಯಾರ್ಥಿಗಳಿಗೆ ಈ ವಾರ ಉತ್ತಮವಾಗಿರುತ್ತದೆ. ವಿದೇಶಕ್ಕೆ ಹೋಗ ಬಯಸುವವರಿಗೂ ಈ ವಾರ ಉತ್ತಮವಾಗಿದೆ, ನಿಮ್ಮ ಆತ್ಮವಿಶ್ವಾಸ ಹೆಚ್ಚಾಗಲಿದೆ. ಆ ಹಣದ ವಿಷಯದಲ್ಲೂ ಈ ವಾರ ನಿಮಗೆ ಮಂಗಳಕರವಾಗಿರುತ್ತದೆ. ಆಸ್ತಿ ವ್ಯವಹಾರ ಮಾಡಿದವರು ಲಾಭ ಕಾಣುವಿರಿ. ಕುಟುಂಬದ ಸದಸ್ಯರ ನಡುವೆ ಇದ್ಧಂಥ ಭಿನ್ನಾಭಿಪ್ರಾಯ ಕೊನೆಯಾಗಲಿದೆ. ಉದ್ಯೋಗ ಹುಡುಕುತ್ತಿರುವವರಿಗೆ ಉತ್ತಮ ಅವಕಾಶ ದೊರೆಯಲಿದೆ. ಆರೋಗ್ಯ ಚೆನ್ನಾಗಿರುತ್ತದೆ.
ಕನ್ಯಾ ರಾಶಿ
ಈ ವಾರ ನಿಮ್ಮ ಪ್ರಮುಖ ಚಿಂತೆಯೊಂದು ದೂರಾಗಲಿದೆ. ಪೂರ್ವಿಕರ ಆಸ್ತಿಗೆ ಸಂಬಂಧಿಸಿದ ವಿವಾದ ಬಗೆಹರಿಯುವ ಸಾಧ್ಯತೆ ಇದೆ. ಉದ್ಯಮಿಗಳು ಬಯಸಿದ ಲಾಭವನ್ನು ಪಡೆಯಬಹುದು. ನಿಮ್ಮ ಆರ್ಥಿಕ ಸ್ಥಿತಿ ಚೆನ್ನಾಗಿರುತ್ತದೆ. ಈ ಅವಧಿಯಲ್ಲಿ ನಿಮ್ಮ ಪರಸ್ಪರ ತಿಳುವಳಿಕೆ ಇನ್ನೂ ಉತ್ತಮವಾಗಿರುತ್ತದೆ. ವಾರದ ಕೊನೆಯಲ್ಲಿ ನೀವು ಆರ್ಥಿಕ ಲಾಭವನ್ನು ಪಡೆಯುವ ಸಾಧ್ಯತೆಯಿದೆ. ಹಣಕ್ಕೆ ಸಂಬಂಧಿಸಿದ ಯಾವುದೇ ಸಮಸ್ಯೆ ಇರಲ್ಲ
ತುಲಾ ರಾಶಿ
ನೀವು ಕೆಲಸವನ್ನು ಬದಲಾಯಿಸಲು ಯೋಚಿಸುತ್ತಿದ್ದರೆ, ಈ ವಾರದಲ್ಲಿ ಅನೇಕ ಒಳ್ಳೆಯ ಅವಕಾಶಗಳನ್ನು ಪಡೆಯಬಹುದು. ಆರ್ಥಿಕ ಸ್ಥಿತಿ ಚೆನ್ನಾಗಿ ಇರುವುದರಿಂದ ಹಳೆಯ ಸಾಲವನ್ನು ತೀರಿಸುವಲ್ಲಿ ನೀವು ಯಶಸ್ವಿಯಾಗುತ್ತೀರಿ. ಈ ಅವಧಿಯಲ್ಲಿ, ನಿಮ್ಮ ಸರಿಯಾದ ನಿರ್ಧಾರಗಳ ಉತ್ತಮ ಫಲಿತಾಂಶಗಳನ್ನು ಪಡೆಯುವ ಸಾಧ್ಯತೆಯಿದೆ. ಈ ಸಮಯದಲ್ಲಿ ಮನೆಯ ವಾತಾವರಣವು ಉತ್ತಮವಾಗಿರುತ್ತದೆ. ನೀವು ತುಂಬಾ ಸಮತೋಲಿತವಾಗಿ ವರ್ತಿಸುವಂತೆ ಸೂಚಿಸಲಾಗಿದೆ. ಹಣಕಾಸಿನ ವಿಚಾರದಲ್ಲಿ ಈ ದಿನ ಉತ್ತಮವಾಗಿದೆ.
ಧನು ರಾಶಿ
ಈ ವಾರ ನೀವು ನೀವು ತುಂಬಾ ಧನಾತ್ಮಕವಾಗಿರುತ್ತೀರಿ. ನಿಮ್ಮ ಕೆಲಸ -ಕಾರ್ಯಗಳು ಉತ್ತಮವಾಗಿ ಪೂರ್ಣಗೊಳ್ಳಲಿದೆ. ಉದ್ಯೋಗ ಅಥವಾ ವ್ಯವಹಾರವಾಗಿರಲಿ, ಈ ಸಮಯವು ನಿಮಗೆ ತುಂಬಾ ಅದೃಷ್ಟದಿಂದ ಕೂಡಿರುತ್ತದೆ. ವಾರದ ಕೊನೆಯಲ್ಲಿ ನೀವು ಆರ್ಥಿಕ ಲಾಭವನ್ನು ಸಹ ಪಡೆಯುತ್ತೀರಿ. ಚಿಕ್ಕ-ಪುಟ್ಟ ಆರೋಗ್ಯ ಸಮಸ್ಯೆಗಳಿದ್ದರೆ ನಿರ್ಲಕ್ಷ್ಯ ಮಾಡಬೇಡಿ.



Click it and Unblock the Notifications
