Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ವಾರ ಭವಿಷ್ಯ (ಜೂ4-10): ಈ 5 ರಾಶಿಯವರಿಗೆ ತುಂಬಾನೇ ಲಾಭದಾಯಕ
ಈ ವಾರದಲ್ಲಿ ಪ್ರಮುಖ ಗ್ರಹವಾದ ಬುಧ ವೃಷಭ ರಾಶಿಗೆ ಸಂಚರಿಸಲಿದೆ. ಗುರು , ರಾಹು ಮೇಷದಲ್ಲಿದೆ, ಶನಿ ಕುಂಭ ರಾಶಿಯಲ್ಲಿ, ಸೂರ್ಯ ಕೂಡ ವೃಷಭ ರಾಶಿಯಲ್ಲಿದೆ. ಪ್ರಮುಖ ಗ್ರಹಗಳ ಸ್ಥಾನಕ್ಕೆ ತಕ್ಕಂತೆ ಅವು ನಿಮ್ಮ ರಾಶಿಯ ಮೇಲೆ ಪ್ರಭಾವ ಬೀರಲಿದೆ. ವೈದಿಕ ಶಾಸ್ತ್ರದ ಪ್ರಕಾರ ಈ ಗ್ರಹಗತಿಗಳ ಪ್ರಭಾವದಿಂದಾಗಿ ಈ ವಾರ ಈ 5 ರಾಶಿಯವರಿಗೆ ತುಂಬಾನೇ ಅನುಕೂಲಕರವಾಗಿರಲಿದೆ ನೋಡಿ:

ಸಿಂಹ ರಾಶಿ
ಈ ಅವಧಿಯಲ್ಲಿ ವೃತ್ತಿಗೆ ಸಂಬಂಧಿಸಿದ ಯಾವುದೇ ಸಮಸ್ಯೆ ಇದ್ದರೆ ಅದು ಬಗೆಹರಿಯಲಿದೆ. ನಿಮ್ಮ ವೃತ್ತಿಜೀವನದಲ್ಲಿ ಪ್ರಗತಿ ಉಂಟಾಗಲಿದೆ. ನೀವು ಸ್ವಂತ ವ್ಯವಹಾರ ಮಾಡಲು ಬಯಸುವುದಾದರೆ ಆ ನಿಟ್ಟಿನಲ್ಲಿ ಪ್ರಯತ್ನಿಸಬಹುದು. ಆರ್ಥಿಕ ಸ್ಥಿತಿ ಚೆನ್ನಾಗಿರಲಿದೆ. ಹಣಕಾಸಿನ ಸ್ಥಿತಿ ಚೆನ್ನಾಗಿರಲಿದೆ. ಕೌಟುಂಬಿಕ ಜೀವನ ಸುಖಮಯವಾಗಿರುತ್ತದೆ. ನೀವು ವಿವಾಹ ಪ್ರಾಯವರಾದರೆ ಮದುವೆ ಮಾತುಕತೆ ನಡೆಯಬಹುದು. ಪ್ರೇಮಿಗಳಿಗೆ ಅನುಕೂಲಕರವಾಗಿದೆ. ನಿಮ್ಮ ಸಂಗಾತಿಯೊಂದಿಗಿನ ಸಂಬಂಧದಲ್ಲಿ ಉತ್ತಮ ಹೊಂದಾಣಿಕೆ ಇರಲಿದೆ. ಆರೋಗ್ಯದಲ್ಲೂ ದೊಡ್ಡ ಸಮಸ್ಯೆಗಳಿರಲ್ಲ.
ತುಲಾ ರಾಶಿ
ತುಲಾ ರಾಶಿಯವರಿಗೆ ಈ ವಾರ ಕೆಲಸದ ವಿಷಯದಲ್ಲಿ ತುಂಬಾ ಕಾರ್ಯನಿರತವಾಗಿರುತ್ತದೆ. ಆದರೆ ನೀವು ನಿಮ್ಮ ಪ್ರಯತ್ನಕ್ಕೆ ತಕ್ಕ ಫಲ ಪಡೆಯುವಿರಿ. ಈ ಸಮಯದಲ್ಲಿ, ನಿಮ್ಮ ಸಂಪೂರ್ಣ ಗಮನ ಕೆಲಸದ ಕಡೆ ಕೊಡಲು ಸಾಧ್ಯವಾಗುವುದು. ಉದ್ಯಮಿಗಳ ಪ್ರಮುಖ ಕೆಲಸ ಯಾವುದೋ ಕಾರಣಕ್ಕೆ ಸ್ಥಗಿತವಾಗಿದ್ದರೆ ಈ ಅವಧಿಯಲ್ಲಿ ಮತ್ತೆ ಪ್ರಾರಂಭವಾಗಲಿದೆ. ನೀವು ಉತ್ತಮ ಆರ್ಥಿಕ ಲಾಭವನ್ನು ಪಡೆಯುವ ಸಾಧ್ಯತೆಯಿದೆ. ಇನ್ನು ಹಣಕಾಸಿನ ದೃಷ್ಟಿಯಿಂದ ನೋಡುವುದಾದರೆ ಈ ದಿನ ಉತ್ತಮವಾಗಿರಲಿದೆ. ಆರೋಗ್ಯ ಕೂಡ ಚೆನ್ನಾಗಿರಲಿದೆ.
ವೃಶ್ಚಿಕ ರಾಶಿ
ಕೆಲಸದ ಬಗ್ಗೆ ಹೇಳುವುದಾದರೆ ಈ ವಾರ ನಿಮಗೆ ತುಂಬಾ ಚೆನ್ನಾಗಿರಲಿದೆ. ಕೆಲಸ ನಿಮ್ಮ ಯೋಜನೆಯಂತೆಯೇ ಪೂರ್ನಗೊಳ್ಳಲಿದೆ. ಉದ್ಯೋಗಸ್ಥರು ತಮ್ಮ ವ್ಯವಹಾರವನ್ನು ಮುಂದುವರಿಸಲು ಬಯಸಿದರೆ ಅಥವಾ ಯಾವುದೇ ಹೊಸ ಕೆಲಸವನ್ನು ಪ್ರಾರಂಭಿಸಲು ಬಯಸಿದರೆ, ಈ ಸಮಯವು ನಿಮಗೆ ತುಂಬಾನೇ ಶುಭವಾಗಿದೆ. ಮತ್ತೊಂದೆಡೆ, ನೀವು ನಿಮ್ಮ ಕೆಲಸವನ್ನು ಬದಲಾಯಿಸಲು ಬಯಸಿದರೆ ನಿಮಗೆ ಒಳ್ಳೆಯ ಅವಕಾಶಗಳು ದೊರೆಯಲಿದೆ. ಪ್ರೇಮಿಗಳಿಗೆ, ವಿವಾಹಿತರಿಗೆ ಈ ಸಮಯ ರೊಮ್ಯಾಂಟಿಕ್ ಆಗಿರಲಿದೆ. ಹಣಕ್ಕೆ ಸಂಬಂಧಿಸಿದ ಚಿಂತೆಗಳು ಕೊನೆಗೊಳ್ಳಲಿದೆ. ನೀವು ಹೊಸ ಆದಾಯದ ಮೂಲವನ್ನು ಪಡೆಯಬಹುದು. ಶೀಘ್ರದಲ್ಲೇ ನೀವು ಸಾಲದಿಂದ ಮುಕ್ತರಾಗುತ್ತೀರಿ.
ಧನು ರಾಶಿ
ಪೂರ್ವಜರ ಆಸ್ತಿಗೆ ಸಂಬಂಧಿಸಿದ ಯಾವುದೇ ವಿವಾದವು ನ್ಯಾಯಾಲಯದಲ್ಲಿ ನಡೆಯುತ್ತಿದ್ದರೆ ಅದರ ತೀರ್ಪು ನಿಮ್ಮ ಪರವಾಗಿ ಬರಬಹುದು. ಈ ಅವಧಿಯಲ್ಲಿ ಉದ್ಯಮಿಗಳು ಹೂಡಿಕೆ ಮಾಡಲು ಅವಕಾಶವನ್ನು ಪಡೆಯಬಹುದು. ಆದರೆ, ನೀವು ಯೋಚಿಸದೆ ಯಾವುದೇ ನಿರ್ಧಾರ ತೆಗೆದುಕೊಳ್ಳಲು ಹೋಗಬೇಡಿ. ಸಂಗಾತಿಯಿಂದ ಭಾವನಾತ್ಮಕ ಬೆಂಬಲ ಸಿಗಲಿದೆ. ನಿಮ್ಮ ಎಲ್ಲಾ ಪ್ರಮುಖ ನಿರ್ಧಾರಗಳಲ್ಲಿ ನಿಮ್ಮ ಆತ್ಮೀಯರು ನಿಮಗೆ ಬೆಂಬಲ ನೀಡುತ್ತಾರೆ. ಆರೋಗ್ಯದ ದೃಷ್ಟಿಯಿಂದ ಈ ವಾರ ನಿಮಗೆ ಉತ್ತಮವಾಗಿರುತ್ತದೆ.
ಮೀನ ರಾಶಿ
ದಾಂಪತ್ಯ ಜೀವನದಲ್ಲಿ ನೆಮ್ಮದಿ ಇರಲಿದೆ. ಆದರೆ ನಿಮ್ಮ ಬಜೆಟ್‌ಗಿಂತ ಹೆಚ್ಚು ಖರ್ಚು ಮಾಡುವ ತಪ್ಪನ್ನು ಮಾಡಬೇಡಿ. ಉದ್ಯೋಗಸ್ಥರಿಗೆ ಈ ವಾರ ಬಹಳ ಶುಭವಾಗಿರಲಿದೆ. ಚಿಲ್ಲರೆ ವ್ಯಾಪಾರಿಗಳು ಉತ್ತಮ ಆರ್ಥಿಕ ಲಾಭವನ್ನು ಪಡೆಯಬಹುದು. ನಿಮ್ಮ ವ್ಯವಹಾರವನ್ನು ಮುಂದಕ್ಕೆ ಕೊಂಡೊಯ್ಯಲು ನೀವು ಅವಕಾಶವನ್ನು ಪಡೆಯಬಹುದು. ವಾರದ ಕೊನೆಯಲ್ಲಿ ನೀವು ಇದ್ದಕ್ಕಿದ್ದಂತೆ ಕೆಲವು ಒಳ್ಳೆಯ ಸುದ್ದಿಗಳನ್ನು ಪಡೆಯಬಹುದು. ಈ ಸಮಯವು ನಿಮಗೆ ತುಂಬಾ ಆಹ್ಲಾದಕರವಾಗಿರುತ್ತದೆ. ಈ ಸಮಯದಲ್ಲಿ ನಿಮ್ಮ ಆರೋಗ್ಯ ಉತ್ತಮವಾಗಲಿದೆ.



Click it and Unblock the Notifications
