Latest Updates
-
ಡೆಂಗ್ಯೂ ಜ್ವರದಿಂದ ಬೇಗ ಚೇತರಿಸಿಕೊಳ್ಳಬೇಕೇ? ನಿಮ್ಮ ಆಹಾರದಲ್ಲಿ ಇರಲಿ ಈ ಪೌಷ್ಟಿಕಾಂಶಗಳು! -
ಡೆಂಗ್ಯೂ ಜ್ವರದ ಬಳಿಕ ಸುಸ್ತು ಕಾಡುತ್ತಿದೆಯೇ? ಬೇಗ ಚೇತರಿಸಿಕೊಳ್ಳಲು ಈ ಆಹಾರಕ್ರಮ ಪಾಲಿಸಿ, ಮನೆಯಲ್ಲೇ ORS ಮಾಡಿ -
ಓಣಂ ಸದ್ಯದ ಹಬ್ಬದೂಟಕ್ಕೆ ಭಾರಿ ಬೇಡಿಕೆ: ಬೆಂಗಳೂರು-ಕೊಚ್ಚಿಯಲ್ಲಿ ಸ್ಲಾಟ್ಗಳು ಫುಲ್, ಈಗಲೇ ಬುಕ್ ಮಾಡಿ! -
ವರಮಹಾ ಲಕ್ಷ್ಮಿ ವ್ರತ 2026: ಆಗಸ್ಟ್ 21 ಅಥವಾ 28? ದಿನಾಂಕದ ಗೊಂದಲಕ್ಕೆ ಇಲ್ಲಿದೆ ಪರಿಹಾರ! -
ಕಂಟೆಂಟ್ ಕ್ರಿಯೇಟರ್ಗಳೇ ಗಮನಿಸಿ: ಫೋಟೊ ಶೂಟ್ ವೇಳೆ ನೋವು ಮರೆಯಾಗಲು ಈ 12 ನಿಮಿಷದ ವರ್ಕೌಟ್ ಸಾಕು! -
ಫೋಟೋಗ್ರಾಫರ್ಗಳೇ ಎಚ್ಚರ! ನೋವಿಲ್ಲದೆ ಅದ್ಭುತ ಫೋಟೋ ಕ್ಲಿಕ್ಕಿಸಲು ಈ 7 ನಿಮಿಷದ ಮೊಬಿಲಿಟಿ ರಿಸೆಟ್ ಟ್ರೈ ಮಾಡಿ -
ಮಂಗಳ ಗೌರಿ ವ್ರತದ ದಿನ ದಂಪತಿಗಳ ನಡುವೆ ಕಿರಿಕಿರಿ ಬೇಡ: ಪ್ರೀತಿ ಹೆಚ್ಚಿಸಲು ಇಲ್ಲಿದೆ ಬೆಸ್ಟ್ ಟಿಪ್ಸ್ -
ನ್ಯಾಷನಲ್ ಕಪಲ್ಸ್ ಡೇ: ಪ್ರೀತಿಯ ಸಂಭ್ರಮದ ಜೊತೆಗೆ ಡಿಜಿಟಲ್ ಪ್ರೈವೆಸಿ ಮತ್ತು ರೊಮ್ಯಾಂಟಿಕ್ ಡೇಟ್ ಐಡಿಯಾಗಳು -
ವರಮಹಾಲಕ್ಷ್ಮಿ ಹಬ್ಬದ ಸೌಂದರ್ಯಕ್ಕೆ ಸಾಂಪ್ರದಾಯಿಕ ಆಭರಣಗಳ ಮೆರುಗು: ಈ ಬಾರಿಯ ಫ್ಯಾಷನ್ ಟ್ರೆಂಡ್ಸ್ -
ಅಪಾರ್ಟ್ಮೆಂಟ್ನಲ್ಲಿ ಓಣಂ ಸಂಭ್ರಮ: ಮಳೆಗೆ ಹಾಳಾಗದ, ಬಜೆಟ್ ಸ್ನೇಹಿ ಪೂಕಳಂಗೆ ಇಲ್ಲಿದೆ ಸೂಪರ್ ಟಿಪ್ಸ್!
ಈ ವಾರದ 5 ರಾಶಿಯವರಿಗೆ ಅದೃಷ್ಟದ ವಾರವಾಗಲಿದೆ
ಗ್ರಹಗತಿಗಳ ಆಧಾರದ ಮೇಲೆ ವಾರ ಭವಿಷ್ಯ ಹೇಳಲಾಗುವುದು, ಮೇ 22-27ರವರೆಗಿನ ವಾರ ಭವಿಷ್ಯ ನೋಡುವುದಾದರೆ ಈ ರಾಶಿಗಳಿಗೆ ಅದೃಷ್ಟದ ವಾರವಾಗಿದೆ ನೋಡಿ:
ವೃಷಭ ರಾಶಿ
ಈ ವಾರ ವೃಷಭ ರಾಶಿಯವರಿಗೆ ಅದೃಷ್ಟದ ವಾರವಾಗಿದೆ. ಈ ವಾರ ನಿಮ್ಮ ಆದಾಯ ಹೆಚ್ಚಾಗುವ ಸಾಧ್ಯತೆ ಇದೆ, ಆರ್ಥಿಕ ಸ್ಥಿತಿ ಚೆನ್ನಾಗಿರಲಿದೆ. ಈ ವಾರ ವ್ಯಾಪಾರಸ್ಥರು ಬಯಸಿದನ ಪ್ರಗತಿಯನ್ನು ಪಡೆಯಬಹುದು. ಉದ್ಯೋಗಿಗಳಿಗೆ ಈ ವಾರ ಕೆಲಸದಲ್ಲಿ ಯಾವುದೇ ಸಮಸ್ಯೆ ಇರಲ್ಲ. ಅಪರ್ಣವಾಗಿದ್ದ ಕೆಲಸ ಕಾರ್ಯಗಳು ಕೂಡ ಈ ವಾರ ಪ್ರಗತಿಯನ್ನು ಕಾಣಲಿದೆ.

ವೈವಾಹಿಕ ಜೀವನದಲ್ಲಿ ಸಾಮರಸ್ಯ ಇರಲಿದೆ, ಕುಟುಂಬ ಜೀವನ ಚೆನ್ನಾಗಿರಲಿದೆ. ಆದರೆ ನೀವಾಡುವ ಮಾತುಗಳು ನಿಮ್ಮ ಪ್ರೀತಿಪಾತ್ರರನ್ನು ನೋಯಿಸದಂತೆ ನೀವಾಡುವ ಮಾತಿನ ಮೇಲೆ ನಿಗಾ ಇಡಬೇಕಾಗುತ್ತದೆ. ಈ ವಾರ ದೊಡ್ಡ ಖರ್ಚೇನೂ ಇರುವಿದಿಲ್ಲ, ಆರೋಗ್ಯ ಕೂಡ ಸರಾಸರಿಯಾಗಿರುವುದರಿಂದ ಈ ವಾರ ಖುಷಿ-ಖುಷಿಯಿಂದ ಕಳೆಯಬಹುದು.
ಮಿಥುನ ರಾಶಿ
ಈ ವಾರ ಮಿಥುನ ರಾಶಿಯವರಿಗೂ ತುಂಬಾನೇ ಚೆನ್ನಾಗಿದೆ. ನೀವು ಉದ್ಯಮಿಯಾಗಿದ್ದು ಇತ್ತೀಚೆಗೆ ದೊಡ್ಡ ನಷ್ಟ ಅನುಭವಿಸಿದ್ದರೆ ಅದನ್ನು ಸರಿಪಡಿಸಿಕೊಳ್ಳಲು ಈ ವಾರ ಅವಕಾಶ ದೊರೆಯಲಿದೆ. ಅಲ್ಲದೆ ನಿಮ್ಮ ಯಾವುದಾದರೂ ಕೆಲಸಕ್ಕೆ ಅಡಚಣೆ ಉಂಟಾಗಿದ್ದರೆ ಈ ವಾರ ಎಲ್ಲವೂ ಬಗೆಹರಿಯಲಿದೆ. ಉದ್ಯೋಗಸ್ಥರಿಗೆ ಕೆಲಸದ ಒತ್ತಡ ಅಧಿಕವಿದ್ದರೂ ದೊಡ್ಡ ಸಮಸ್ಯೆಯೇನೂ ಆಗುವುದಿಲ್ಲ. ಈ ವಾರ ಹಣದ ವಿಷಯದಲ್ಲಿ ಯಾವುದೇ ತೊಂದರೆ ಇಲ್ಲ, ಆದರೆ ಹಣವನ್ನು ಮಿತಿಯಲ್ಲಿ ಖರ್ಚು ಮಾಡಬೇಕು.
ತುಲಾ ರಾಶಿ
ತುಲಾ ರಾಶಿಯವರಿಗೆ ಈ ವಾರ ಉತ್ತಮವಾಗಿರಲಿದೆ. ಈ ಅವಧಿಯಲ್ಲಿ ನಿಮ್ಮ ಎಲ್ಲಾ ಕೆಲಸಗಳು ನೀವು ಊಹಿಸಿದಂತೆಯೇ ಪೂರ್ಣಗೊಳ್ಳಲಿದೆ. ಉದ್ಯೋಗಗಳಿಗೆ ಕೆಲಸದ ಹೊರೆ ಕಡಿಮೆಯಿರಲಿದೆ. ನೀವು ಸರ್ಕಾರಿ ಉದ್ಯೋಗಿಯಾಗಿದ್ದರೆ ನಿಮ್ಮ ಕೆಲಸ-ಕಾರ್ಯಗಳಿಗೆ ಹಿರಿಯರ ಮಾರ್ಗದರ್ಶನ ಪಡೆಯಿರಿ. ಉದ್ಯಮಿಗಳಿಗೆ ಲಾಭದಾಯಕವಾಗಿದೆ. ಈ ವಾರ ಹಣದ ವಿಷಯದಲ್ಲಿ ಹೆಚ್ಚು ಜಾಗರೂಕರಾಗಿರಿ. ಕೌಟುಂಬಿಕ ಜೀವನದಲ್ಲಿ ಸಂತೋಷ ಇರಲಿದೆ. ಆರೋಗ್ಯದ ಬಗ್ಗೆ ಕಾಳಜಿವಹಿಸಿ.
ಧನು ರಾಶಿ
ನೀವು ವಿದ್ಯಾರ್ಥಿಯಾಗಿದ್ದು, ಉನ್ನತ ಶಿಕ್ಷಣಕ್ಕಾಗಿ ವಿದೇಶಕ್ಕೆ ಹೋಗಲು ಯೋಜಿಸುತ್ತಿದ್ದರೆ ನೀವು ಉತ್ತಮ ಅವಕಾಶವನ್ನು ಪಡೆಯಬಹುದು. ವಾರದ ಕೊನೆಯಲ್ಲಿ, ನೀವು ಅದಕ್ಕೆ ಸಂಬಂಧಿಸಿದ ಕೆಲವು ಒಳ್ಳೆಯ ಸುದ್ದಿಗಳನ್ನು ಸಹ ಪಡೆಯುತ್ತೀರಿ. ಉದ್ಯೋಗಸ್ಥರಿಗೆ ಈ ವಾರ ತುಂಬಾ ಚೆನ್ನಾಗಿದೆ. ನೀವು ಪ್ರಗತಿ ಸಾಧಿಸಬಹುದು.ಕೆಲಸದ ಹೊರೆ ಅಧಿಕವಿದ್ದರೂ ಒಳ್ಳೆಯ ಫಲಿತಾಂಶ ಪಡೆಯಬಹುದು. ವ್ಯಾಪಾರಸ್ಥರಿಗೆ ಈ ವಾರ ಲಾಭದಾಯಕವಾಗಿದೆ. ನೀವು ಆಹಾರ ಪದಾರ್ಥಗಳಿಗೆ ಸಂಬಂಧಿಸಿದ ವ್ಯವಹಾರವನ್ನು ಮಾಡುತ್ತಿದ್ದರೆ, ಈ ಸಮಯವು ನಿಮಗೆ ತುಂಬಾ ಪ್ರಯೋಜನಕಾರಿಯಾಗಿದೆ. ವೈವಾಹಿಕ ಜೀವನದಲ್ಲಿ ಖುಷಿ ಇರಲಿದೆ. ಆರೋಗ್ಯ ಸಮಸ್ಯೆಯಿದ್ದರೆ ಈ ವಾರದಲ್ಲಿ ಸುಧಾರಣೆ ಕಂಡು ಬರಲಿದೆ.
ಮಕರ ರಾಶಿ
ಕೆಲಸದ ವಿಷಯದಲ್ಲಿ ಈ ವಾರ ನಿಮಗೆ ತುಂಬಾ ಅದೃಷ್ಟಕರವಾಗಿದೆ. ನಿಮ್ಮ ಕೆಲಸ-ಕಾರ್ಯಗಳಿಗೆ ಉತ್ತಮವಾಗಿದೆ. ಸಣ್ಣ ವ್ಯಾಪಾರಸ್ಥರಿಗೆ ಈ ವಾರ ಲಾಭದಾಯಕವಾಗಿರುತ್ತದೆ. ನೀವು ಸ್ಟಾಕ್ ಅನ್ನು ಹೆಚ್ಚಿಸಲು ಯೋಜಿಸುತ್ತಿದ್ದರೆ ಈ ಸಮಯವು ಒಳ್ಳೆಯದು. ನಿಮ್ಮ ಆರ್ಥಿಕ ಸ್ಥಿತಿ ಬಲವಾಗಿರುತ್ತದೆ. ಮನೆಯ ಅಲಂಕಾರವನ್ನು ಬದಲಾಯಿಸಲು ನೀವು ಸಾಕಷ್ಟು ಹಣವನ್ನು ಖರ್ಚು ಮಾಡಬಹುದು. ಇದಲ್ಲದೆ, ನೀವು ಆರಾಮದಾಯಕವಾದ ಕೆಲವು ಬೆಲೆಬಾಳುವ ವಸ್ತುಗಳನ್ನು ಸಹ ಖರೀದಿಸುತ್ತೀರಿ. ವೈವಾಹಿಕ ಜೀವನ ಚೆನ್ನಾಗಿರಲಿದೆ. ಆರೋಗ್ಯದ ದೃಷ್ಟಿಯಿಂದ ಈ ಸಮಯ ಚೆನ್ನಾಗಿರಲಿದೆ.



Click it and Unblock the Notifications