Latest Updates
-
2026ರ ನವರಾತ್ರಿ ಗರ್ಬಾ: ಪಾಸ್ ವಂಚನೆಗೆ ಬಲಿಯಾಗದಿರಿ, ಸುರಕ್ಷಿತವಾಗಿ ಆನಂದಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ದೆಹಲಿಯಲ್ಲಿ ಕಠಿಣ GRAP ನಿಯಮ ಜಾರಿ: ಮನೆಯ ಗಾಳಿ ಶುದ್ಧವಾಗಿಡಲು ಮತ್ತು ಮಾಲಿನ್ಯ ತಡೆಯಲು ಇಲ್ಲಿವೆ ಸರಳ ಟಿಪ್ಸ್ -
ಹಬ್ಬದ ಸಿಹಿ ಕೊಳ್ಳುವ ಮುನ್ನ ಎಚ್ಚರ: FSSAI ಕಟ್ಟುನಿಟ್ಟಿನ ಕಾರ್ಯಾಚರಣೆ ಮತ್ತು ಹೊಸ ನಿಯಮಗಳೇನು? -
ಮೈಸೂರು ದಸರಾ 2026: ಟಿಕೆಟ್ ಬುಕ್ಕಿಂಗ್ ಆರಂಭ, ಕಂಬಳ ನೋಂದಣಿಗೆ ಇಂದೇ ಕೊನೆಯ ದಿನ! -
ಗಾಂಧಿ ಜಯಂತಿ ವಿಶೇಷ: ಫಿಟ್ನೆಸ್ ಮತ್ತು ಸಮಾಜ ಸೇವೆ ಬೆಸೆಯುವ 'ಪ್ಲಾಗಿಂಗ್'ಗೆ ಸಿದ್ಧರಾಗಿ! -
ಡೇಟಿಂಗ್ ಆ್ಯಪ್ ಹನಿಟ್ರ್ಯಾಪ್: ಪಬ್ಗಳಲ್ಲಿ ನಡೆಯುವ ಈ ದಂಧೆಯಿಂದ ಪಾರಾಗುವುದು ಹೇಗೆ? -
IMD ಮಳೆ ಅಲರ್ಟ್: ಬೆಂಗಳೂರು, ಚೆನ್ನೈ, ಕೇರಳದಲ್ಲಿ ಭಾರೀ ಮಳೆ; ಮನೆಯನ್ನು ಸುರಕ್ಷಿತವಾಗಿರಿಸಲು ಈ ಟಿಪ್ಸ್ ಪಾಲಿಸಿ! -
ಇಂದಿನಿಂದ ಎನರ್ಜಿ ಡ್ರಿಂಕ್ಸ್ ನಿಯಮ ಬದಲಾವಣೆ: ಕ್ಯಾನ್ ಖರೀದಿಸುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ಅಪಾರ್ಟ್ಮೆಂಟ್ ಗೇಟ್ನಲ್ಲಿ ಟ್ರಾಫಿಕ್ ಜಾಮ್? ಈ ಸರಳ ಟಿಪ್ಸ್ ಪಾಲಿಸಿದರೆ 5 ನಿಮಿಷದಲ್ಲಿ ಹೊರಬರಬಹುದು! -
ಬೆಳಗಿನ ವಾಕಿಂಗ್ ಹೋಗ್ತಿದ್ದೀರಾ? ಡೆಂಗ್ಯೂ ಸೊಳ್ಳೆಗಳಿಂದ ಪಾರಾಗಲು ಈ ಸರಳ ಟಿಪ್ಸ್ ಮಿಸ್ ಮಾಡ್ಬೇಡಿ!
ವಾರ ಭವಿಷ್ಯ: ಈ ವಾರ ಈ ನಾಲ್ಕು ರಾಶಿಯವರಿಗೆ ತುಂಬಾನೇ ಶುಭವಾಗಿದೆ
ಹೊಸ ವಾರ ಶುರುವಾಗಿದೆ, ಈ ವಾರದ ರಾಶಿಫಲದ ಪ್ರಕಾರ ನವೆಂಬರ್ 18-25ರ ಅವಧಿ ಕೆಲವೊಂದು ರಾಶಿಯವರಿಗೆ ತುಂಬಾನೇ ಅದ್ಭುತವಾಗಿದೆ. ಈ ವಾರ 4 ರಾಶಿಯವರು ಅತ್ಯಂತ ಶುಭ ಫಲವನ್ನು ಕಾಣಬಹುದು, ಆ ರಾಶಿಗಳು ಯಾವುವು ಎಂದು ನೋಡುವುದಾದರೆ.......
ವೃಷಭ ರಾಶಿ
ಈ ಅವಧಿ ವೃಷಭ ರಾಶಿಯವರಿಗೆ ಅದ್ಭುತವಾಗಿರಲಿದೆ. ಈ ಅವಧಿಯಲ್ಲಿ ಮನೆಯ ವಾತಾವರಣವು ತುಂಬಾ ಉತ್ತಮವಾಗಿರುತ್ತದೆ, ಈ ವಾರ ಆರ್ಥಿಕ ದೃಷ್ಟಿಯಿಂದ ಉತ್ತಮವಾಗಿರುವುದರಿಂದ ಹಣದ ಚಿಂತೆ ಇರುವುದಿಲ್ಲ, ವ್ಯಾಪಾರಸ್ಥರು ಉತ್ತಮ ಲಾಭ ಗಳಿಸಬಹುದು. ಉದ್ಯೋಗದಲ್ಲಿ, ವ್ಯವಹಾರದಲ್ಲಿ ಈ ಅವಧಿಯಲ್ಲಿ ಉತ್ತಮ ಫಲಿತಾಂಶ ಕಾಣುವಿರಿ, ಉದ್ಯೋಗಸ್ಥರು ಈ ವಾರ ಪ್ರಗತಿ ಕಾಣುವಿರಿ. ಆದರೆ ನಿಮ್ಮ ಮೇಲೆ ಜವಾಬ್ದಾರಿಗಳ ಹೊರೆ ಹೆಚ್ಚಾಗಬಹುದು. ನಿಮ್ಮ ಕೆಲಸಗಳನ್ನು ಸರಿಯಾದ ಯೋಜನೆಗಳ ಮೂಲಕ ಮಾಡಲು ಪ್ರಯತ್ನಿಸಿದರು ತುಂಬಾ ಒಳ್ಳೆಯದು. ಆರೋಗ್ಯದ ದೃಷ್ಟಿಯಿಂದಲೂ ಈ ವಾರ ಉತ್ತಮವಾಗಿದೆ.

ಮಿಥುನ ರಾಶಿ
ಈ ವಾರ ಮಿಥುನ ರಾಶಿಯವರಿಗೆ ಅನುಕೂಲಕರವಾಗಿದೆ. ಈ ವಾರ ಅಪೂರ್ಣವಾಗಿರುವ ಕೆಲಸವನ್ನು ಪೂರ್ಣಗೊಳಿಸಲು ಸಾಧ್ಯವಾಗುವುದು. ಇನ್ನು ವಿದೇಶಕ್ಕೆ ಹೋಗಲು ಪ್ರಯತ್ನಿಸುತ್ತಿರುವವರಿಗೆ ಈ ಅವಾರ ಅನುಕೂಲಕರವಾಗಿದೆ, ಈ ಅವಧಿಯಲ್ಲಿ ವೃತ್ತಿ ಜೀವನದಲ್ಲಿ ಹೊಸತನ ಕಾಣುವಿರಿ. ಹಣದ ವಿಷಯದಲ್ಲಿ ಈ ವಾರ ನಿಮಗೆ ತುಂಬಾ ಶುಭಕರವಾಗಿರುತ್ತದೆ. ಹಣಕಾಸಿನ ತೊಂದರೆಗಳಿಂದ ಹೊರಬರಲು ಸಾಧ್ಯವಾಗುವುದು. ಕುಟುಂಬದಲ್ಲಿ ಸಂತೋಷದ ವಾತಾವರಣ ಇರಲಿದೆ. ವೈವಾಹಿಕ ಬದುಕು ತುಂಬಾ ಚೆನ್ನಾಗಿರಲಿದೆ, ಈ ವಾರ ಆರೋಗ್ಯದ ದೃಷ್ಟಿಯಿಂದಲೂ ಉತ್ತಮವಾಗಿದೆ.
ಕರ್ಕ ರಾಶಿ
ಕರ್ಕ ರಾಶಿಯವರಿಗೆ ಈ ವಾರ ಅದ್ಭುತವಾಗಿರಲಿದೆ. ಹಣಕಾಸಿನ ದೃಷ್ಟಿಯಿಂದ ಈ ವಾರ ನಿಮಗೆ ತುಂಬಾ ಒಳ್ಳೆಯದಿದೆ. ಪ್ರಮುಖ ಹಣಕಾಸಿನ ನಿರ್ಧಾರಗಳನ್ನು ತೆಗೆದುಕೊಳ್ಳಲು ಈ ಸಮಯ ಅನುಕೂಲಕರವಾಗಿದೆ. ಉದ್ಯೋಗಿಗಳು ತಮ್ಮ ಕಠಿಣ ಪರಿಶ್ರಮಕ್ಕೆ ಶೀಘ್ರದಲ್ಲಿಯೇ ಉತ್ತಮ ಪ್ರತಿಫಲ ಪಡೆಯುವಿರಿ. ವ್ಯಾಪಾರಸ್ಥರಿಗೆ ಆರ್ಥಿಕವಾಗಿ ಒಳ್ಳೆಯದಿದೆ, ಆದರೆ ಆತುರದಿಂದ ಯಾವುದೇ ನಿರ್ಧಾರ ತೆಗೆದುಕೊಳ್ಳಬೇಡಿ. ಕುಟುಂಬ ಜೀವನದಲ್ಲಿ ಪರಿಸ್ಥಿತಿ ಸಾಮಾನ್ಯವಾಗಿರುತ್ತದೆ. ಹಣದ ಪರಿಸ್ಥಿತಿ ಚೆನ್ನಾಗಿರಲಿದೆ.
ತುಲಾ ರಾಶಿ
ಈ ವಾರದಲ್ಲಿ ನಿಮ್ಮಲ್ಲಿ ಧೈರ್ಯ, ಆತ್ಮವಿಶ್ವಾಸವು ಹೆಚ್ಚಾಗುತ್ತದೆ. ಈ ಸಮಯದಲ್ಲಿ ಪ್ರತಿಯೊಂದು ವಿಷಯದಲ್ಲಿಯೂ ನೀವು ಸಕಾರಾತ್ಮಕ ಬದಲಾವಣೆಗಳನ್ನು ನೋಡುತ್ತೀರಿ. ಹಣಕಾಸಿನ ಸ್ಥಿತಿ ತುಂಬಾ ಚೆನ್ನಾಗಿರಲಿದೆ, ಆರ್ಥಿಕ ಲಾಭ ಪಡೆಯುವಿರಿ. ಹಣಕ್ಕೆ ಸಂಬಂಧಿಸಿದಂತೆ ಬಾಕಿ ಉಳಿದಿರುವ ಕೆಲಸಗಳು ಪೂರ್ಣಗೊಳ್ಳುತ್ತವೆ. ನೀವು ಕಷ್ಟಪಟ್ಟು ಸಂಪಾದಿಸಿದ ಹಣವನ್ನು ಸರಿಯಾದ ಸ್ಥಳದಲ್ಲಿ ಹೂಡಿಕೆ ಮಾಡಿದರೆ, ಶೀಘ್ರದಲ್ಲೇ ನಿಮ್ಮ ಎಲ್ಲಾ ಆರ್ಥಿಕ ಸಮಸ್ಯೆಗಳು ದೂರವಾಗುತ್ತವೆ. ವ್ಯಾಪಾರಸ್ಥರು ನೀವು ಬಯಸಿದ ಫಲಿತಾಂಶಗಳನ್ನು ಪಡೆಯಬಹುದು. ಈ ಅವಧಿಯಲ್ಲಿ ನಿಮ್ಮ ವ್ಯಾಪಾರ ವೃದ್ಧಿಯಾಗುತ್ತದೆ. ಏನಾದರೂ ಆರೋಗ್ಯ ಸಮಸ್ಯೆಯಿದ್ದರೆ ಸುಧಾರಣೆ ಕಾಣುವಿರಿ.



Click it and Unblock the Notifications
