Latest Updates
-
ರಾಹು-ಕೇತು ಸಂಯೋಗದಿಂದ ಕಾಳಸರ್ಪ ಯೋಗ: ಈ ಎಲ್ಲಾ ರಾಶಿಯವರಿಗೆ ಅದೃಷ್ಟದ ಸಮಯ! -
ಸಂಕಷ್ಟಗಳು ದೂರ, ಐಶ್ವರ್ಯ ಹತ್ತಿರ! ಕೇತು ಸಂಚಾರದಿಂದ ಇವರ ಜೀವನವೇ ಬಂಗಾರ.. ಯಾರಿಗೆ ರಾಜಯೋಗ? -
ಬೇಕರಿ ಸ್ಟೈಲ್ ಕಚೋರಿ ರೆಸಿಪಿ.. ಮನೆಯಲ್ಲೇ ಈ 4 ಟೇಸ್ಟಿ ಕಚೋರಿ ಮಾಡಿ! ಹೊಸಬರಿಗೆ ಕೂಡ ಸುಲಭ -
ಆರ್ಥಿಕ ದೃಷ್ಟಿಯಿಂದ ಈ ದಿನ ಅನುಕೂಲಕರ! ಪ್ರಣಯ ಜೀವನವು ಸುಖಮಯ -
March 11 Horoscope: ಪ್ರಯಾಣಗಳಲ್ಲಿ ನಿಮಗೆ ಶುಭವಿಲ್ಲ! ಅಪಾಯದ ಮುನ್ಸೂಚನೆ! -
ಎಲ್ಜಿಪಿ ಬಳಸದೆ ನೀರಿನಿಂದ ಅಡುಗೆ ಮಾಡಿ: ರವಿಶಂಕರ್ ಗುರೂಜಿ ವಿಡಿಯೋ ವೈರಲ್ -
ಬೇಸಿಗೆಯ ಉರಿಗೆ ಪೈನಾಪಲ್ ರಸಂ ಮಾಡಿ: ಎಷ್ಟು ಸುಲಭ ಮಾಡೋದು ಗೊತ್ತಾ? -
ಅಕ್ಕಿ ಬೇಡ, ನೆನೆಸೋ ಸಮಯವೂ ಬೇಡ.. ತಕ್ಷಣ ಮಾಡಿ ಈ ದೋಸೆ! ಈ ಟ್ರಿಕ್ ಗೊತ್ತಿದ್ರೆ ಯಾರೂ ಮಾಡಬಹುದು -
ಸುಡು ಬಿಸಿಲಲ್ಲೂ ನಿಮ್ಮ ಮುಖ ಹಾಲಿನಂತೆ ಬೆಳ್ಳಗಾಗುತ್ತೆ! ಕೇವಲ 2 ನಿಮಿಷ ಈ ಮಸಾಜ್ ಸಾಕು.. ಮುಖ ಹೊಳೆಯುತ್ತೆ! -
ಮಾರ್ಚ್ 15ಕ್ಕೆ ರೇವತಿ ನಕ್ಷತ್ರಕ್ಕೆ ಶುಕ್ರ ಸಂಚಾರ: ಈ 4 ರಾಶಿಯವರಿಗೆ ಹೆಚ್ಚಲಿದೆ ಸಂಕಷ್ಟ!
ವಾರಭವಿಷ್ಯ: ಜುಲೈ 16ರಿಂದ 22ರವರೆಗೆ 12 ರಾಶಿಗಳ ರಾಶಿಫಲ ಹೇಗಿದೆ?
ಗ್ರಹಗತಿಗಳ ಸ್ಥಾನದ ಪ್ರಕಾರ ದ್ವಾದಶ ರಾಶಿಗಳ ಈ ವಾರದ ಭವಿಷ್ಯ ನೀಡಲಾಗಿದ್ದು ಈ ವಾರ ನಿಮ್ಮ ರಾಶಿಫಲ ಹೇಗಿದೆ ನೋಡಿ:
ಮೇಷ ರಾಶಿ
ಈ ವಾರ ನಿಮ್ಮ ಸಂಪೂರ್ಣ ಗಮನ ಹಣದ ಮೇಲೆ ಇರಲಿದೆ. ನಿಮ್ಮ ಆರ್ಥಿಕ ಸ್ಥಿತಿಯನ್ನು ಬಲಪಡಿಸಲು ನೀವು ತುಂಬಾ ಶ್ರಮಿಸಬೇಕಾಗುವುದು. ಶೀಘ್ರದಲ್ಲೇ ಅದರ ಸಂಪೂರ್ಣ ಫಲಿತಾಂಶ ಪಡೆಯುತ್ತೀರಿ. ನಿಮ್ಮ ನಡವಳಿಕೆಯ ಬಗ್ಗೆ ವಿಶೇಷ ಕಾಳಜಿ ವಹಿಸಲು ಸಲಹೆ ನೀಡಲಾಗಿದೆ. ಆರೋಗ್ಯದ ವಿಷಯದಲ್ಲಿ ಈ 7 ದಿನಗಳು ನಿಮಗೆ ಏರಿಳಿತಗಳಿಂದ ಕೂಡಿರಲಿದೆ. ಆಹಾರದಲ್ಲಿನ ಅಜಾಗರೂಕತೆಯಿಂದ ಆರೋಗ್ಯವು ಹದಗೆಡಬಹುದು. ಇದಲ್ಲದೆ, ನೀವು ಒತ್ತಡದ ಸಂದರ್ಭಗಳನ್ನು ತಪ್ಪಿಸಬೇಕು.
ಅದೃಷ್ಟದ ಬಣ್ಣ: ಪೀಚ್
ಅದೃಷ್ಟದ ಸಂಖ್ಯೆ: 31
ಅದೃಷ್ಟದ ದಿನ: ಗುರುವಾರ

ವೃಷಭ ರಾಶಿ
ಪ್ರಣಯ ಜೀವನದ ಬಗ್ಗೆ ಹೇಳುವುದಾದರೆ ಕೆಲ ಸಮಸ್ಯೆಗಳು ಇರಬಹುದು. ನಿಮ್ಮ ಭಾವನೆಗಳನ್ನು ನಿಯಂತ್ರಿಸಲು ನಿಮಗೆ ಸಲಹೆ ನೀಡಲಾಗಿದೆ. ಸಂಗಾತಿಯ ಜೊತೆ ಅನಗ್ಯತ ಚರ್ಚೆ ಮಾಡಬೇಡಿ. ಅರ್ಥವಿಲ್ಲದ ಮನಸ್ತಾಪಗಳು ಸಮಸ್ಯೆಯನ್ನು ಮತ್ತಷ್ಟು ಹೆಚ್ಚಿಸಬಹುದು. ಆರ್ಥಿಕ ಜೀವನ ಚೆನ್ನಾಗಿರಲಿದೆ. ಹಣಕ್ಕೆ ಸಂಬಂಧಿಸಿದ ಯಾವುದೇ ದೊಡ್ಡ ವಹಿವಾಟನ್ನು ನೀವು ಮಾಡಬಹುದು. ಆರೋಗ್ಯದ ಬಗ್ಗೆ ಹೇಳುವುದಾದರೆ ಈ ವಾರ ಮಿಶ್ರಫಲ.
ಅದೃಷ್ಟದ ಬಣ್ಣ: ಹಸಿರು
ಅದೃಷ್ಟದ ಸಂಖ್ಯೆ: 4
ಅದೃಷ್ಟದ ದಿನ: ಭಾನುವಾರ
ಮಿಥುನ ರಾಶಿ
ನೀವು ಸ್ವಲ್ಪ ಸಮಯದಿಂದ ಕೆಲಸದಲ್ಲಿ ತುಂಬಾ ಬ್ಯುಸಿಯಾಗಿದ್ದರೆ, ಈ ವಾರ ನಿಮಗೆ ಉತ್ತಮವಾಗಿರುತ್ತದೆ. ಕೆಲಸದ ಹೊರೆ ಕಡಿಮೆಯಾಗುವ ಸಾಧ್ಯತೆ ಇದೆ. ಅಂತಹ ಪರಿಸ್ಥಿತಿಯಲ್ಲಿ,ನೀವು ನಿಮ್ಮ ಪ್ರೀತಿ ಪಾತ್ರರ ಜೊತೆ ಸಾಕಷ್ಟು ಸಮಯ ಕಳೆಯಲು ಸಾಧ್ಯವಾಗುವುದು. ಹಣದ ವಿಷಯದಲ್ಲಿ ಈ ಏಳು ದಿನಗಳು ನಿಮಗೆ ಉತ್ತಮವಾಗಿರುತ್ತದೆ. ನಿಮ್ಮ ಬಜೆಟ್ ಅನ್ನು ಗಮನದಲ್ಲಿಟ್ಟುಕೊಂಡು ಖರ್ಚು ಮಾಡಿ, ಇಲ್ಲದಿದ್ದರೆ ನೀವು ಭವಿಷ್ಯದಲ್ಲಿ ಆರ್ಥಿಕ ಬಿಕ್ಕಟ್ಟನ್ನು ಎದುರಿಸಬೇಕಾಗುತ್ತದೆ.
ಅದೃಷ್ಟದ ಬಣ್ಣ: ನೇರಳೆ
ಅದೃಷ್ಟದ ಸಂಖ್ಯೆ: 10
ಅದೃಷ್ಟದ ದಿನ: ಸೋಮವಾರ
ಕರ್ಕ ರಾಶಿ
ವೃತ್ತಿ ಸಂಬಂಧಿತ ಸಮಸ್ಯೆ ಎದುರಾಗಬಹುದು. ಆದರೆ ನೀವು ಸಂಪೂರ್ಣ ಧೈರ್ಯ ಮತ್ತು ಆತ್ಮವಿಶ್ವಾಸದಿಂದ ಅವುಗಳನ್ನು ಎದುರಿಸುತ್ತೀರಿ. ವೈವಾಹಿಕ ಜೀವನದಲ್ಲಿ ನಡೆಯುವ ಯಾವುದೇ ಪ್ರಮುಖ ಸಮಸ್ಯೆ ಕೊನೆಯಾಗಲಿದೆ. ಈ ಸಮಯದಲ್ಲಿ, ಸಂಗಾತಿಯ ನಡವಳಿಕೆಯಲ್ಲಿ ಸಕಾರಾತ್ಮಕ ಬದಲಾವಣೆಗಳು ಕಂಡುಬರಲಿದೆ. ನಿಮ್ಮ ಆರ್ಥಿಕ ಸ್ಥಿತಿ ಉತ್ತಮವಾಗಿರುತ್ತದೆ. ಹಣದ ಬಗ್ಗೆ ನೋಡುವುದಾದರೆ ಈ ವಾರ ಉತ್ತಮವಾಗಿದೆ. ಸರ್ಕಾರಿ ಕೆಲಸ ಮಾಡುವವರಿಗೆ ಪ್ರಗತಿಯಾಗಲಿದೆ. ನೀವು ಉನ್ನತ ಸ್ಥಾನವನ್ನು ಪಡೆಯುವ ಸಾಧ್ಯತೆಯಿದೆ. ನಿಮ್ಮ ಆರೋಗ್ಯಕ್ಕೆ ಸಂಬಂಧಿಸಿದಂತೆ ಹೇಳುವುದಾದರೆ ಹವಾಮಾನ ಬದಲಾವಣೆಯಿಂದ ಕೆಲವು ಸಮಸ್ಯೆಗಳು ಉಂಟಾಗಬಹುದು.
ಅದೃಷ್ಟದ ಬಣ್ಣ: ಗುಲಾಬಿ
ಅದೃಷ್ಟದ ಸಂಖ್ಯೆ: 12
ಅದೃಷ್ಟದ ದಿನ: ಶುಕ್ರವಾರ
ಸಿಂಹ ರಾಶಿ
ಕೆಲಸದ ಸ್ಥಳದಲ್ಲಿ, ಆತುರ ಮತ್ತು ಭಯದಿಂದ ಕೆಲಸ ಮಾಡಬೇಡಿ, ಬಾಸ್ ನಿಮಗೆ ಕೆಲವು ಪ್ರಮುಖ ಜವಾಬ್ದಾರಿಯನ್ನು ನೀಡಿದ್ದರೆ, ನೀವು ತಪ್ಪಾಗದಂತೆ ಎಚ್ಚರವಹಿಸಿ ಮಾಡಿ. ಒಂದು ಸಣ್ಣ ತಪ್ಪು ನಿಮ್ಮ ಶ್ರಮವನ್ನು ಹಾಳು ಮಾಡಬಹುದು. ನಿಮ್ಮ ಆರ್ಥಿಕ ಸ್ಥಿತಿ ಉತ್ತಮವಾಗಿರುತ್ತದೆ. ನಿಮ್ಮ ಆದಾಯವನ್ನು ಹೆಚ್ಚಿಸಲು ನೀವು ಪ್ರಯತ್ನಿಸುತ್ತಿದ್ದರೆ ವಾರದ ಕೊನೆಯಲ್ಲಿ ನೀವು ಒಳ್ಳೆಯ ಸುದ್ದಿಯನ್ನು ಪಡೆಯಬಹುದು. ಸಂಗಾತಿಯೊಂದಿಗಿನ ಸಂಬಂಧ ಚೆನ್ನಾಗಿರಲಿದೆ. ಈ ಅವಧಿಯಲ್ಲಿ ವಾಹನವನ್ನು ಎಚ್ಚರಿಕೆಯಿಂದ ಚಲಾಯಿಸಿ.
ಅದೃಷ್ಟದ ಬಣ್ಣ: ಕೆಂಪು
ಅದೃಷ್ಟದ ಸಂಖ್ಯೆ: 8
ಅದೃಷ್ಟದ ದಿನ: ಶನಿವಾರ
ಕನ್ಯಾ ರಾಶಿ
ಕನ್ಯಾ ರಾಶಿಯ ವಿದ್ಯಾರ್ಥಿಗಳಿಗೆ ಈ ವಾರವು ಏರಿಳಿತಗಳಿಂದ ಕೂಡಿರಲಿದೆ. ವಿಶೇಷವಾಗಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ವ್ಯಕ್ತಿಗಳು ತಮ್ಮ ಅಧ್ಯಯನದಲ್ಲಿ ಅಡಚಣೆ ಎದುರಿಸಬಹುದು. ನಿಮ್ಮ ಆರ್ಥಿಕ ಸ್ಥಿತಿ ಉತ್ತಮವಾಗಿರುತ್ತದೆ. ಮನೆಯ ಅಲಂಕಾರದಲ್ಲಿ ಬದಲಾವಣೆಗಳನ್ನು ಮಾಡಲು ನೀವು ಕೆಲವು ಅಗತ್ಯ ಖರೀದಿಗಳನ್ನು ಸಹ ಮಾಡಬಹುದು. ಕೆಲಸದ ಸ್ಥಳದಲ್ಲಿ ನಿಮ್ಮ ಸ್ಥಾನವು ಬಲವಾಗಿರುತ್ತದೆ. ನೀವು ಬಡ್ತಿ ಪಡೆಯುವ ಸಾಧ್ಯತೆ ಇದೆ. ಕೌಟುಂಬಿಕ ಜೀವನದಲ್ಲಿ ಸಂತೋಷ ಮತ್ತು ಶಾಂತಿ ಇರಲಿದೆ. ಆರೋಗ್ಯದ ಬಗ್ಗೆ ಹೇಳುವುದಾದರೆ ಈ ಅವಧಿ ಉತ್ತಮವಾಗಿರುತ್ತದೆ.
ಅದೃಷ್ಟದ ಬಣ್ಣ: ಮರೂನ್
ಅದೃಷ್ಟದ ಸಂಖ್ಯೆ: 21
ಅದೃಷ್ಟದ ದಿನ: ಬುಧವಾರ
ತುಲಾ ರಾಶಿ
ಆರ್ಥಿಕ ದೃಷ್ಟಿಯಿಂದ ಈ ವಾರ ನಿಮಗೆ ತುಂಬಾ ಒಳ್ಳೆಯದಿದೆ. ಈ ಅವಧಿಯಲ್ಲಿ ನೀವು ಹಣವನ್ನು ಗಳಿಸಲು ಉತ್ತಮ ಅವಕಾಶವನ್ನು ಪಡೆಯಬಹುದು. ನೀವು ಕಷ್ಟಪಟ್ಟು ದುಡಿದ ಹಣವನ್ನು ಸರಿಯಾಗಿ ಬಳಸಿದರೆ, ಭವಿಷ್ಯದಲ್ಲಿ ನೀವು ಉತ್ತಮ ಫಲಿತಾಂಶಗಳನ್ನು ಪಡೆಯುತ್ತೀರಿ. ಕೆಲಸದ ಬಗ್ಗೆ ಹೇಳುವುದಾದರೆ ಈ ವಾರ ಉದ್ಯೋಗಿಗಳಿಗೆ ಸವಾಲಿನ ನಿರೀಕ್ಷೆಯಿದೆ. ಕೆಲಸದ ಹೊರೆ ಹೆಚ್ಚು ಇರಲಿದೆ. ಉನ್ನತ ಅಧಿಕಾರಿಗಳಿಂದ ಕೆಲಸದಲ್ಲಿ ಒತ್ತಡವೂ ಹೆಚ್ಚಾಗಬಹುದು. ಕೆಲಸದ ಜೊತೆಗೆ ನಿಮ್ಮ ಆರೋಗ್ಯದ ಬಗ್ಗೆಯೂ ಕಾಳಜಿ ವಹಿಸಿ. ನಿರ್ಲಕ್ಷ್ಯವು ದುಬಾರಿಯಾಗಲಿದೆ.
ಅದೃಷ್ಟದ ಬಣ್ಣ: ಆಕಾಶ ನೀಲಿ
ಅದೃಷ್ಟದ ಸಂಖ್ಯೆ: 5
ಅದೃಷ್ಟದ ದಿನ: ಸೋಮವಾರ
ವೃಶ್ಚಿಕ ರಾಶಿ
ನೀವು ಯಾರೊಂದಿಗಾದರೂ ಸಾಲವನ್ನು ಪಡೆದಿದ್ದರೆ, ಈ ಅವಧಿಯಲ್ಲಿ ಅದನ್ನು ಮರುಪಾವತಿಸಲು ಒತ್ತಡ ಹೆಚ್ಚಾಗುವ ಸಾಧ್ಯತೆಯಿದೆ. ಈ ಸಮಯದಲ್ಲಿ ನೀವು ಮಾನಸಿಕವಾಗಿ ಸಾಕಷ್ಟು ಒತ್ತಡಕ್ಕೆ ಒಳಗಾಗುತ್ತೀರಿ. ಈ ಸಮಯದಲ್ಲಿ ನೀವು ತಾಳ್ಮೆಯಿಂದಿರುವುದು ಉತ್ತಮ. ಸರಿಯಾದ ಸಮಯ ಬಂದಾಗ ನಿಮ್ಮ ಸಮಸ್ಯೆ ಬಗೆಹರಿಯುತ್ತದೆ. ಈ ಅವಧಿಯಲ್ಲಿ ಯಾವುದೇ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಲು ಹೋಗಬೇಡಿ, ಅದು ವೈಯಕ್ತಿಕ ಜೀವನದಲ್ಲಿ ಆಗಿರಲಿ, ವೃತ್ತಿ ಬದುಕಿನಲ್ಲಿ ಆಗಿರಲಿ. ವಾರದ ಕೊನೆಯಲ್ಲಿ, ಮನೆಯ ಸದಸ್ಯರ ಆರೋಗ್ಯದಲ್ಲಿ ಕ್ಷೀಣತೆ ಕಂಡು ಬರಲಿದೆ. ಆಸ್ಪತ್ರೆಗೆ ಅಂತ ಹಣ ಖರ್ಚಾಗಬಹುದು.
ಅದೃಷ್ಟದ ಬಣ್ಣ: ಬಿಳಿ
ಅದೃಷ್ಟದ ಸಂಖ್ಯೆ: 21
ಅದೃಷ್ಟದ ದಿನ: ಶುಕ್ರವಾರ
ಧನು ರಾಶಿ
ವಾರದ ಆರಂಭವು ನಿಮಗೆ ತುಂಬಾ ಅದ್ಭುತವಾಗಿರುತ್ತದೆ. ಈ ಅವಧಿಯಲ್ಲಿ ನೀವು ಕೆಲವು ಒಳ್ಳೆಯ ಸುದ್ದಿಗಳನ್ನು ಪಡೆಯಬಹುದು. ಮಾನಸಿಕವಾಗಿಯೂ ನೀವು ತುಂಬಾ ಸದೃಢರಾಗಿರುತ್ತೀರಿ. ಮನೆಯಲ್ಲಿ ಮದುವೆಯಾಗಬಹುದಾದ ಸದಸ್ಯರಿದ್ದರೆ, ಅವರಮದುವೆ ಕೂಡಿ ಬರಬಹುದು. ನಿಮ್ಮ ಆರೋಗ್ಯದಲ್ಲಿ ದೊಡ್ಡ ಸುಧಾರಣೆ ಕಂಡು ಬರಲಿದೆ. ವಾರದ ಕೊನೆಯಲ್ಲಿ, ನೀವು ಕೆಲಸದ ನಿಮಿತ್ತ ಪ್ರಯಾಣಿಸಬೇಕಾಗಬಹುದು. ನಿಮ್ಮ ಈ ಪ್ರಯಾಣವು ನಿಮಗೆ ಲಾಭದಾಯಕವಾಗಿರಲಿದೆ.
ಅದೃಷ್ಟದ ಬಣ್ಣ: ಹಸಿರು
ಅದೃಷ್ಟದ ಸಂಖ್ಯೆ: 10
ಅದೃಷ್ಟದ ದಿನ: ಮಂಗಳವಾರ
ಮಕರ ರಾಶಿ
ಆರೋಗ್ಯದ ವಿಷಯದಲ್ಲಿ, ಈ ವಾರ ನಿಮಗೆ ಒಳ್ಳೆಯದಲ್ಲ. ಅಂತಹ ಪರಿಸ್ಥಿತಿಯಲ್ಲಿ, ಕಳಪೆ ಆರೋಗ್ಯವು ನಿಮ್ಮ ಕೆಲಸದ ಮೇಲೆ ಕೆಟ್ಟ ಪರಿಣಾಮ ಬೀರಬಹುದು. ಈ ಅವಧಿಯಲ್ಲಿ ನಿಮ್ಮ ಕೆಲವು ಪ್ರಮುಖ ಕಾರ್ಯಗಳು ಅಪೂರ್ಣವಾಗಿ ಉಳಿಯುತ್ತವೆ. ಸಂಗಾತಿಯ ನಡವಳಿಕೆಯಲ್ಲಿ ಸ್ವಲ್ಪ ಬದಲಾವಣೆ ಕಂಡುಬರುವುದು. ನಿಮ್ಮ ಆತ್ಮೀಯರೊಂದಿಗೆ ಹೆಚ್ಚು ಸಮಯ ಕಳೆಯಲು ನೀವು ಪ್ರಯತ್ನಿಸಬೇಕು. ವಾರದ ಮಧ್ಯದಲ್ಲಿ ನೀವು ಹಣಕಾಸಿನ ಲಾಭವನ್ನು ಪಡೆಯಬಹುದು. ಇದೆಲ್ಲವೂ ನಿಮ್ಮ ಶ್ರಮದ ಫಲ. ನೀವು ದೊಡ್ಡ ಮತ್ತು ಪ್ರಮುಖ ಹಣಕಾಸಿನ ನಿರ್ಧಾರವನ್ನು ಸಹ ಈ ಅವಧಿಯಲ್ಲಿ ತೆಗೆದುಕೊಳ್ಳಬಹುದು.
ಅದೃಷ್ಟದ ಬಣ್ಣ: ಹಳದಿ
ಅದೃಷ್ಟದ ಸಂಖ್ಯೆ: 9
ಅದೃಷ್ಟದ ದಿನ: ಶನಿವಾರ
ಕುಂಭ ರಾಶಿ
ನಿಮ್ಮ ಬೆಲೆಬಾಳುವ ವಸ್ತುಗಳನ್ನು ಬಹಳ ಜಾಗ್ರತೆಯಿಂದ ನೋಡಿಕೊಳ್ಳಿ, ಇಲ್ಲದಿದ್ದರೆ ಕಳ್ಳತನವಾಗುವ ಸಾಧ್ಯತೆಯಿದೆ. ಹಣದ ವಿಷಯದಲ್ಲಿ ಈ ವಾರ ನಿಮಗೆ ಉತ್ತಮವಾಗಿರುತ್ತದೆ. ನೀವು ಬುದ್ಧಿವಂತಿಕೆಯಿಂದ ಖರ್ಚು ಮಾಡುತ್ತೀರಿ. ಇತರರ ಮಾತುಕೇಳಿ ಯಾವುದೇ ಹಣಕಾಸಿನ ನಿರ್ಧಾರವನ್ನು ತೆಗೆದುಕೊಳ್ಳುವುದನ್ನು ತಪ್ಪಿಸಿ. ವ್ಯಾಪಾರಸ್ಥರು ಲಾಭ ಗಳಿಸಲು ಕಷ್ಟಪಡಬೇಕಾಗಬಹುದು. ಉದ್ಯೋಗಿಗಳ ಪ್ರಗತಿಯಲ್ಲಿ ಅಡಚಣೆ ಉಂಟಾಗಬಹುದು. ಒಟ್ಟಾರೆಯಾಗಿ, ಈ ವಾರ ನಿಮಗೆ ಏರಿಳಿತಗಳಿಂದ ಕೂಡಿರಲಿದೆ.
ಅದೃಷ್ಟದ ಬಣ್ಣ: ಕಿತ್ತಳೆ
ಅದೃಷ್ಟದ ಸಂಖ್ಯೆ: 35
ಅದೃಷ್ಟದ ದಿನ: ಭಾನುವಾರ
ಮೀನ ರಾಶಿ
ವೈವಾಹಿಕ ಜೀವನ ಉತ್ತಮವಾಗಿರುತ್ತದೆ. ಜೀವನ ಸಂಗಾತಿಯಿಂದ ಒಳ್ಳೆಯ ಸುದ್ದಿ ಸಿಗಲಿದೆ. ನಿಮ್ಮ ಆರ್ಥಿಕ ಸ್ಥಿತಿಯನ್ನು ಬಲಪಡಿಸಲು ನೀವು ಇತ್ತೀಚೆಗೆ ನಿರ್ಧಾರವನ್ನು ತೆಗೆದುಕೊಂಡಿದ್ದರೆ, ಅದರಿಂದ ನೀವು ಉತ್ತಮ ಫಲಿತಾಂಶಗಳನ್ನು ಪಡೆಯಬಹುದು. ಶೀಘ್ರದಲ್ಲೇ ನೀವು ಎಲ್ಲಾ ಸಾಲಗಳನ್ನು ಮರುಪಾವತಿಸಲು ಸಾಧ್ಯವಾಗುತ್ತದೆ. ನೀವು ವಿದ್ಯಾರ್ಥಿಯಾಗಿದ್ದರೆ ಮತ್ತು ವಿದೇಶದಲ್ಲಿ ಅಧ್ಯಯನ ಮಾಡಲು ಬಯಸಿದರೆ, ನಿಮ್ಮ ಪ್ರಯತ್ನಗಳನ್ನು ಮತ್ತಷ್ಟು ಚುರುಕುಗೊಳಿಸಬೇಕು. ಆರೋಗ್ಯ ಸಾಧಾರಣವಾಗಿರಲಿದೆ.
ಅದೃಷ್ಟದ ಬಣ್ಣ: ಕೆಂಪು
ಅದೃಷ್ಟದ ಸಂಖ್ಯೆ: 11
ಅದೃಷ್ಟದ ದಿನ: ಬುಧವಾರ



Click it and Unblock the Notifications











