Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಸಂಖ್ಯಾಶಾಸ್ತ್ರ ಪ್ರಕಾರ ಈ ವಾರದ(ಜುಲೈ 30-ಆಗಸ್ಟ್6) ಭವಿಷ್ಯ ಹೇಗಿದೆ?
ಸಂಖ್ಯಾಶಾಸ್ತ್ರ ಪ್ರಕಾರ ಈ ವಾರ ನಿಮ್ಮ ಜನ್ಮ ಸಂಖ್ಯೆಗೆ (ನಿಮ್ಮ ಜನ್ಮ ದಿನಾಂಕದ ಪ್ರಕಾರ ಸಂಖ್ಯೆ ಬರುತ್ತದೆ) ಹೇಗಿದೆ ಎಂದು ನೋಡೋಣ ಬನ್ನಿ...
ಸಂಖ್ಯೆ 1( ಜನ್ಮ ದಿನಾಂಕ 1, 10, 19, 28)
ಈ ವಾರ ನೀವು ಆರ್ಥಿಕ ಲಾಭಗಳನ್ನು ಪಡೆಯಬಹುದು, ನಿಮ್ಮ ಆರ್ಥಿಕ ಸ್ಥಿತಿಯು ಬಲಗೊಳ್ಳುತ್ತದೆ. ವೃತ್ತಿಯಲ್ಲಿ ಪ್ರಗತಿಯ ಸಾಧ್ಯತೆಗಳಿವೆ. ನಿಮ್ಮ ಕಠಿಣ ಪರಿಶ್ರಮವು ಯಶಸ್ವಿಯಾಗಲಿದೆ, ಮನೆಯ ವಾತಾವರಣ ಶಾಂತವಾಗಿರುತ್ತದೆ, ಪ್ರಿತಿಪಾತ್ರರ ಜೊತೆ ಉತ್ತಮವಾಗಿ ಸಮಯ ಕಳೆಯಲು ಸಾಧ್ಯವಾಗುವುದು. ವಾರದ ಕೊನೆಯಲ್ಲಿ, ನೀವು ದೂರದ ಪ್ರಯಾಣವನ್ನು ಸಹ ಮಾಡಬಹುದು.

ಸಂಖ್ಯೆ 2 (ಜನ್ಮ ದಿನಾಂಕ 2, 11, 20, 29)
ಈ ವಾರ ಹಣದ ಚಿಂತೆ ಇರಲ್ಲ, ಆರ್ಥಿಕ ಸ್ಥಿತಿಯು ಚೆನ್ನಾಗಿರುತ್ತದೆ, ನೀವು ಕೆಲವು ಒಳ್ಳೆಯ ಕೆಲಸಗಳಿಗೆ ಹಣವನ್ನು ಖರ್ಚು ಮಾಡಬಹುದು. ಈ ಅವಧಿಯಲ್ಲಿ ನೀವು ಅಗತ್ಯವಿರುವವರಿಗೆ ಸಹಾಯ ಮಾಡುವ ಅವಕಾಶವನ್ನು ಪಡೆಯಬಹುದು. ವಿದ್ಯಾರ್ಥಿಗಳು ಬಯಸಿದ ಫಲಿತಾಂಶಗಳನ್ನು ಪಡೆಯುತ್ತಾರೆ. ಪರೀಕ್ಷೆಯಲ್ಲಿ ಉತ್ತಮ ಯಶಸ್ಸನ್ನು ಗಳಿಸಬಹುದು. ಉದ್ಯಮಿಗಳಿಗೆ ಈ ಸಮಯವು ತುಂಬಾ ಅನುಕೂಲಕರವಾಗಿರುತ್ತದೆ.
ಸಂಖ್ಯೆ 3 (ಜನ್ಮ ದಿನಾಂಕ 3, 12, 21, 30)
ನೀವು ಕೆಟ್ಟಸ್ನೇಹವನ್ನು ಬಿಡಬೇಕು ಇಲ್ಲದಿದ್ದರೆ ನೀವು ತೊಂದರೆಗೆ ಸಿಲುಕಬಹುದು. ಅದು ಉದ್ಯೋಗ ಅಥವಾ ವ್ಯವಹಾರವಾಗಿರಲಿ, ಈ ಸಮಯವು ನಿಮಗೆ ತುಂಬಾ ಒಳ್ಳೆಯದು. ಈ ಅವಧಿಯಲ್ಲಿ ನೀವು ತಾಳ್ಮೆಯಿಂದಿರಲು ಸಲಹೆ ನೀಡಲಾಗಿದೆ. ಆರೋಗ್ಯದ ದೃಷ್ಟಿಯಿಂದ ಈ ವಾರ ನಿಮಗೆ ತುಂಬಾ ಒಳ್ಳೆಯದು. ಈ ಸಮಯದಲ್ಲಿ ನೀವು ದೈಹಿಕವಾಗಿ ಮತ್ತು ಮಾನಸಿಕವಾಗಿ ತುಂಬಾ ಸದೃಢರಾಗಿರುತ್ತೀರಿ.
ಸಂಖ್ಯೆ 4( ಜನ್ಮ ದಿನಾಂಕ 4, 13, 22, 31)
ಕೆಲಸದ ಸ್ಥಳದಲ್ಲಿ ನಿಮ್ಮ ಸ್ಥಾನವು ಮತ್ತಷ್ಟು ಬಲವಾಗಿರುತ್ತದೆ. ಈ ಅವಧಿಯಲ್ಲಿ ನಿಮ್ಮ ಗೌರವ ಹೆಚ್ಚಾಗುತ್ತದೆ. ಉನ್ನತ ಅಧಿಕಾರಿಗಳು ಸಹ ನಿಮ್ಮೊಂದಿಗೆ ತುಂಬಾ ಸಂತೋಷವಾಗಿರುತ್ತಾರೆ. ವ್ಯಾಪಾರಸ್ಥರು ಈ ಅವಧಿಯಲ್ಲಿ ಆಲೋಚಿಸದೆ ಯಾವುದೇ ನಿರ್ಧಾರ ತೆಗೆದುಕೊಳ್ಳಬೇಡಿ. ಕೌಟುಂಬಿಕ ಜೀವನ ಸುಖಮಯವಾಗಿರುತ್ತದೆ. ಪ್ರೀತಿಪಾತ್ರರ ಪ್ರೀತಿ ಮತ್ತು ಬೆಂಬಲ ಸಿಗಲಿದೆ.
ಸಂಖ್ಯೆ 5( ಜನ್ಮ ದಿನಾಂಕ 5, 14, 23)
ಈ ವಾರ ಮನೆಯ ವಾತಾವರಣ ಚೆನ್ನಾಗಿರುತ್ತದೆ. ನಿಮ್ಮ ಕುಟುಂಬದಲ್ಲಿ ಯಾವುದೇ ವಯಸ್ಸಾದ ಸದಸ್ಯರು ಇದ್ದರೆ, ಅವರ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸುವ ಅವಶ್ಯಕತೆಯಿದೆ. ಈ ಸಮಯವು ವಿದ್ಯಾರ್ಥಿಗಳಿಗೆ ಬಹಳ ಮಹತ್ವದ್ದಾಗಿದೆ. ಶಿಕ್ಷಣಕ್ಕೆ ಸಂಬಂಧಿಸಿದ ಯಾವುದೇ ಪ್ರಯತ್ನದಲ್ಲಿ ನೀವು ಯಶಸ್ಸನ್ನು ಪಡೆಯಬಹುದು. ಆರ್ಥಿಕ ಪರಿಸ್ಥಿತಿಯು ಬಲವಾಗಿರುತ್ತದೆ, ನೀವು ನಿಮ್ಮ ನಿರ್ಧಾರಗಳನ್ನು ಬಹಳ ಬುದ್ಧಿವಂತಿಕೆಯಿಂದ ತೆಗೆದುಳ್ಳಿ, ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ಬೇಡ.
ಸಂಖ್ಯೆ 6 (ಜನ್ಮ ದಿನಾಂಕ 6, 15, 24)
ಈ ವಾರ ನಿಮಗೆ ಕೆಲವು ಹೊಸ ಸವಾಲುಗಳನ್ನು ಎದುರಾಗಬಹುದು. ಈ ಅವಧಿಯಲ್ಲಿ ನೀವು ತುಂಬಾ ಜಾಗರೂಕರಾಗಿರಲು ಸಲಹೆ ನೀಡಲಾಗಿದೆ. ಅನಗ್ಯತ ವಿವಾದಗಳಿಗೆ ತಲೆ ಹಾಕಬೇಡಿ. ಕೆಲಸದ ಸ್ಥಳದಲ್ಲಿ ನೀವು ತುಂಬಾ ಸಮತೋಲಿತವಾಗಿ ವರ್ತಿಸಬೇಕು. ಈ ಅವಧಿಯಲ್ಲಿ ಕೆಲಸದ ಹೊರೆ ಅಧಿಕ ಇರಲಿದೆ. ಇದರಿಂದ ಅತ್ಯಧಿಕ ಮಾನಸಿಕ ಒತ್ತಡ ಉಂಟಾಗಬಹುದು.
ಸಂಖ್ಯೆ 7( ಜನ್ಮ ದಿನಾಂಕ 7, 16, 25)
ದೊಡ್ಡ ಹೂಡಿಕೆ ಮಾಡದಂತೆ ಉದ್ಯಮಿಗಳಿಗೆ ಸಲಹೆ ನೀಡಲಾಗಿದೆ. ಉದ್ಯೋಗಿಗಳು ತಮ್ಮ ಎಲ್ಲಾ ಕೆಲಸಗಳನ್ನು ಸಮಯಕ್ಕೆ ಪೂರ್ಣಗೊಳಿಸಬೇಕು. ನಿರ್ಲಕ್ಷ್ಯ ಮಾಡಬೇಡಿ, ವಿದ್ಯಾರ್ಥಿಗಳು ಉತ್ತಮ ಯಶಸ್ಸನ್ನು ಪಡೆಯಬಹುದು. ಪರೀಕ್ಷೆಯಲ್ಲಿ ನೀವು ಬಯಸಿದ ಫಲಿತಾಂಶವನ್ನು ಪಡೆಯುತ್ತೀರಿ. ಕೌಟುಂಬಿಕ ಜೀವನದಲ್ಲಿ ಸಂತೋಷ ಮತ್ತು ಶಾಂತಿ ಇರುತ್ತದೆ. ಮನೆಯ ಸದಸ್ಯರಿಂದ ಒಳ್ಳೆಯ ಸುದ್ದಿ ಪಡೆಯಬಹುದು.
ಸಂಖ್ಯೆ 8 ( ಜನ್ಮ ದಿನಾಂಕ 8, 17, 26)
ವ್ಯಾಪಾರಸ್ಥರಿಗೆ ಈ ವಾರ ಉತ್ತಮವಾಗಿರುತ್ತದೆ. ಆದರೆ, ಹಣದ ವಿಷಯದಲ್ಲಿ ನೀವು ಜಾಗರೂಕರಾಗಿರಬೇಕು. ಉದ್ಯೋಗಿಗಳು ಅತಿಯಾದ ಕೆಲಸದ ಹೊರೆ ಮೈ ಮೇಲೆ ಹಾಕಿಕೊಳ್ಳಬೇಡಿ. ಮಗುವಿನ ಕಡೆಯಿಂದ ಸಂತೋಷ ಇರುತ್ತದೆ. ಶಿಕ್ಷಣ ಕ್ಷೇತ್ರದಲ್ಲಿ ಅವರ ಸಾಧನೆ ಉತ್ತಮವಾಗಿರುತ್ತದೆ. ಈ ಅವಧಿಯಲ್ಲಿ ನಿಮ್ಮ ಆರೋಗ್ಯ ಚೆನ್ನಾಗಿರುತ್ತದೆ.
ಸಂಖ್ಯೆ 9 ( ಜನ್ಮ ದಿನಾಂಕ 9, 18, 27)
ಆರೋಗ್ಯದ ತೊಂದರೆ ಎದುರಾಗಬಹುದು, ಆಲಸ್ಯ, ಸೋಮಾರಿತನ ಹೆಚ್ಚಾಗುವುದು. ಇದಲ್ಲದೇ ವಾಹನ ಇತ್ಯಾದಿಗಳನ್ನು ಅತ್ಯಂತ ಜಾಗರೂಕತೆಯಿಂದ ಉಪಯೋಗಿಸುವಂತೆಯೂ ಸೂಚಿಸಲಾಗಿದೆ. ಹಣದ ವಿಷಯದಲ್ಲಿ ಈ ವಾರ ದುಬಾರಿಯಾಗಲಿದೆ. ಆದಾಯಕ್ಕಿಂತ ಹೆಚ್ಚಿನ ಖರ್ಚು ಇರಬಹುದು. ನಿಮ್ಮ ಕೋಪವನ್ನು ನಿಯಂತ್ರಿಸಿ.



Click it and Unblock the Notifications