ಸಂಖ್ಯಾಶಾಸ್ತ್ರ: ಮೇ21-27ರವರೆಗಿನ ವಾರ ಭವಿಷ್ಯ ಹೇಗಿರಲಿದೆ ನೋಡಿ

ಸಂಖ್ಯಾ ಶಾಸ್ತ್ರದಲ್ಲಿ ನಮ್ಮ ಜನ್ಮ ದಿನಾಂಕದಲ್ಲಿ 1-9 ಸಂಖ್ಯೆಗಳು ಬರುವುದು, ಉದಾಹರಣೆಗೆ ನಿಮ್ಮ ದಿನಾಂಕ 10 ಆದರೆ ನಿಮ್ಮ ಸಂಖ್ಯೆ 1+0=1 ಆಗಿದೆ. ಸಂಖ್ಯಾಶಾಸ್ತ್ರ ಪ್ರಕಾರ ನಿಮ್ಮ ಜನ್ಮ ದಿನಾಂಕಕ್ಕೆ ಅನುಸಾರ ಮೇ21ರಿಂದ ಮೇ 27ರವರೆಗಿನ ವಾರ ಭವಿಷ್ಯ ಹೇಗಿರಲಿದೆ ಎಂದು ನೋಡೋಣ ಬನ್ನಿ

ಸಂಖ್ಯೆ 1 (ಜನ್ಮ ದಿನಾಂಕ 1,10,19,28)
ಹಣದ ವಿಷಯದಲ್ಲಿ, ಈ ವಾರ ನಂಬರ್ 1 ಜನರಿಗೆ ತುಂಬಾ ಒಳ್ಳೆಯದು. ಈ ಸಮಯದಲ್ಲಿ ನಿಮ್ಮ ಆದಾಯವು ಹೆಚ್ಚಾಗಬಹುದು. ನಿಮ್ಮ ಕಠಿಣ ಪರಿಶ್ರಮ ಮತ್ತು ತಿಳುವಳಿಕೆಯಿಂದ ನೀವು ಉತ್ತಮ ಹಣವನ್ನು ಗಳಿಸಬಹುದು. ವಿದ್ಯಾರ್ಥಿಗಳು ಉನ್ನತ ಶಿಕ್ಷಣಕ್ಕಾಗಿ ವಿದೇಶಕ್ಕೆ ಹೋಗಲು ಬಯಸಿದರೆ ನೀವು ಬಯಸಿದ ಕಾಲೇಜಿನಲ್ಲಿ ಪ್ರವೇಶ ಪಡೆಯಬಹುದು. ಕೌಟುಂಬಿಕ ಜೀವನದಲ್ಲಿ ಸ್ವಲ್ಪ ಏರುಪೇರು ಇರಬಹುದು. ಈ ಅವಧಿಯಲ್ಲಿ ಕುಟುಂಬ ಸದಸ್ಯರ ನಡುವೆ ಸ್ವಲ್ಪ ಮನಸ್ತಾಪ ಇರಬಹುದು, ಆದರೆ ತಾಳ್ಮೆಯಿಂದ ಪರಿಸ್ಥಿತಿ ನಿಭಾಯಿಸಿ. ನೀವು ಆರೋಗ್ಯದ ಬಗ್ಗೆ ಚಿಂತೆ ಮಾಡುತ್ತಿದ್ದರೆ ನಿಮ್ಮ ಆರೋಗ್ಯದಲ್ಲಿ ಸುಧಾರಣೆ ಕಂಡು ಬರಲಿದೆ.

Weekly Numerology Prediction From May 21 To May 27 In Kannada

ಸಂಖ್ಯೆ 2 (ಜನ್ಮ ದಿನಾಂಕ 2,11,20,29)
ಕೆಲಸದ ಸ್ಥಳದಲ್ಲಿ ನಿಮ್ಮ ನಡವಳಿಕೆ ಕಡೆಗೆ ಸಂಪೂರ್ಣವಾಗಿ ಗಮನಹರಿಸಬೇಕು . ಈ ಸಮಯದಲ್ಲಿ, ಸಹೋದ್ಯೋಗಿಗಳೊಂದಿಗೆ ಭಿನ್ನಾಭಿಪ್ರಾಯ ಉಂಟಾಗಬಹುದು, ಸ್ಪರ್ಧೆ ಉಂಟಾಗಬಹುದು. ಅವುಗಳು ನಿಮ್ಮ ಮನಸ್ಸಿನ ಮೇಲೂ ಕೆಟ್ಟ ಪ್ರಭಾವ ಬೀರಬಹುದು. ಈ ಅವಧಿಯಲ್ಲಿ ವ್ಯಾಪಾರಸ್ಥರು ಯಾವುದೇ ಹೊಸ ಕೆಲಸವನ್ನು ಪ್ರಾರಂಭಿಸಬಹುದು. ಈ ಅವಧಿಯಲ್ಲಿ ನೀವು ದೊಡ್ಡ ಹೂಡಿಕೆ ಮಾಡಲು ಅವಕಾಶವನ್ನು ಪಡೆಯುತ್ತೀರಿ. ಕುಟುಂಬದೊಂದಿಗೆ ಹೆಚ್ಚಿನ ಸಮಯ ಕಳೆಯಲು ಸಾಧ್ಯವಾಗುವುದು. ವಿದ್ಯಾರ್ಥಿಗಳು ತಮ್ಮ ಅಧ್ಯಯನದ ಬಗ್ಗೆ ಯಾವುದೇ ರೀತಿಯ ನಿರ್ಲಕ್ಷ್ಯ ಮಾಡಬಾರದು. ನಿಮ್ಮ ಶ್ರಮಕ್ಕೆ ತಕ್ಕ ಫಲಿತಾಂಶ ದೊರೆಯಲಿದೆ, ಏನಾದರೂ ಆರೋಗ್ಯ ಸಮಸ್ಯೆಯಿದ್ದರೆ ಸಮಯಕ್ಕೆ ಸರಿಯಾಗಿ ಆರೋಗ್ಯ ಸೇವಿಸಿ.

ಸಂಖ್ಯೆ 3 (ಜನ್ಮ ದಿನಾಂಕ 3,12,21,30)
ಕೆಲಸದ ವಿಷಯದಲ್ಲಿ ಈ ವಾರ ನಿಮಗೆ ಏರಿಳಿತಗಳಿಂದ ಕೂಡಿರಲಿದೆ. ಕೆಲಸದಲ್ಲಿ ಗಮನ ಕೊಡಲು ಸಾಧ್ಯವಾಗುವುದಿಲ್ಲ. ಕೆಲಸದ ಜಾಗದಲ್ಲೂ ಕೆಲ ಸಮಸ್ಯೆಗಳಿರಬಹುದು. ಕೋಪ ಮತ್ತು ಆತುರದಲ್ಲಿ ಯಾವುದೇ ಕೆಲಸವನ್ನು ಮಾಡಬೇಡಿ. ಉದ್ಯಮಿಗಳು ಯಾವುದೇ ಹೊಸ ವ್ಯವಹಾರ ಪ್ರಸ್ತಾಪವನ್ನು ಆಲೋಚನೆ ಮಾಡದೆ ಸ್ವೀಕರಿಸಲು ಹೋಗಬೇಡಿ . ನೀವು ವಿದ್ಯಾರ್ಥಿಯಾಗಿದ್ದರೆ, ಈ ಅವಧಿಯಲ್ಲಿ ನಿಮ್ಮ ಶಿಕ್ಷಣದಲ್ಲಿ ಅಡಚಣೆ ಉಂಟಾಗಬಹುದು. ಈ ವಾರ ಹಣದ ವಿಷಯದಲ್ಲಿ ತುಂಬಾ ದುಬಾರಿಯಾಗಲಿದೆ. ಖರ್ಚು ಹೆಚ್ಚಾಗಬಹುದು.

ಸಂಖ್ಯೆ 4 (ಜನ್ಮ ದಿನಾಂಕ ( 4,13,22,31)
ಈ ವಾರ ನಿಮಗೆ ಹೊಸ ಭರವಸೆ ಸಿಗಲಿದೆ. ನಿಮ್ಮ ಕೆಲಸಗಳಲ್ಲಿ ನೀವು ಕೆಲವು ಅನುಭವಿ ಜನರಿಂದ ಮಾರ್ಗದರ್ಶನವನ್ನು ಪಡೆಯಬಹುದು. ಉದ್ಯೋಗಸ್ಥರಿಗೆ ವಿದೇಶ ಪ್ರವಾಸಕ್ಕೆ ಅವಕಾಶ ದೊರೆಯಲಿದೆ. ನೀವು ಈಗಾಗಲೇ ವಿದೇಶದಲ್ಲಿ ಕೆಲಸ ಮಾಡುತ್ತಿದ್ದರೆ, ಈ ಅವಧಿಯಲ್ಲಿ ನೀವು ಪ್ರಗತಿ ಸಾಧಿಸಬಹುದು. ವ್ಯಾಪಾರಸ್ಥರು ಹೊಸ ವ್ಯವಹಾರದಲ್ಲಿ ತಮ್ಮ ಅದೃಷ್ಟವನ್ನು ಪ್ರಯತ್ನಿಸಬಹುದು. ವಾರದ ಕೊನೆಯಲ್ಲಿ, ನೀವು ಆರ್ಥಿಕ ಲಾಭವನ್ನು ಗಳಿಸುವ ಸಾಧ್ಯತೆಯಿದೆ. ಪ್ರೇಮಿಗಳು ಈ ಅವಧಿಯಲ್ಲಿ ಜಾಗ್ರತೆವಹಿಸಿ.

ಸಂಖ್ಯೆ 5 (ಜನ್ಮ ದಿನಾಂಕ 5,14,23)
ಅನಗ್ಯತ ವಿಷಯಗಳು ನಿಮ್ಮ ಮಾನಸಿಕ ಒತ್ತಡ ಹೆಚ್ಚಿಸಬಹುದು. ಯಾವುದೇ ಪ್ರಮುಖ ನಿರ್ಧಾರ ತೆಗೆದುಕೊಳ್ಳಲು ಆತುರಪಡಬೇಡಿ. ನಿಮ್ಮ ಪ್ರೀತಿಪಾತ್ರರ ಸಲಹೆಯನ್ನು ನೀವು ತೆಗೆದುಕೊಳ್ಳಬೇಕು. ನೀವು ಕೆಲಸದಲ್ಲಿ ಯಾವುದೇ ರೀತಿಯ ಬದಲಾವಣೆಯ ಬಗ್ಗೆ ಯೋಚಿಸುತ್ತಿದ್ದರೆ ಸ್ವಲ್ಪ ಸಮಯ ಕಾಯುವುದು ಒಳ್ಳೆಯದು. ಉದ್ಯೋಗವಿರಲಿ, ವ್ಯವಹಾರವಿರಲಿ, ಈ ಸಮಯದಲ್ಲಿ ನೀವು ತುಂಬಾ ಜಾಗರೂಕರಾಗಿರಬೇಕು. ನಿಮ್ಮ ಸಂಗಾತಿಯೊಂದಿಗೆ ಉತ್ತಮ ನಡವಳಿಕೆಯನ್ನು ಇಟ್ಟುಕೊಳ್ಳಿ. ಅನಾವಶ್ಯಕ ವಿಷಯಗಳಿಗೆ ಜಗಳ ಬೇಡ ಎಂಬ ಸಲಹೆ ನೀಡಲಾಗುವುದು. ವಿದ್ಯಾರ್ಥಿಗಳು ತಮ್ಮ ಅಧ್ಯಯನದತ್ತ ಸಂಪೂರ್ಣ ಗಮನಹರಿಸಬೇಕು.

ಸಂಖ್ಯೆ 6 (ಜನ್ಮ ದಿನಾಂಕ 6,15,24)
ನಿಮ್ಮ ಆರೋಗ್ಯಕ್ಕೆ ಸಂಬಂಧಿಸಿದಂತೆ, ಈ ಅವಧಿಯಲ್ಲಿ ನೀವು ಉತ್ತಮ ಆರೋಗ್ಯವನ್ನು ಅನುಭವಿಸಬಹುದು. ಮನೆಯ ಸದಸ್ಯರ ಆರೋಗ್ಯದ ಬಗ್ಗೆ ನಿಮ್ಮ ಕಾಳಜಿ ಸ್ವಲ್ಪ ಹೆಚ್ಚಾಗಬಹುದು. ಅದು ಉದ್ಯೋಗವಾಗಲಿ ಅಥವಾ ವ್ಯವಹಾರವಾಗಲಿ, ನಿಮ್ಮ ಸ್ಥಗಿತಗೊಂಡ ಕೆಲಸವು ಪೂರ್ಣಗೊಳ್ಳಲಿದೆ. ವೈದ್ಯಕೀಯ, ಕಾನೂನು, ಇಂಜಿನಿಯರಿಂಗ್ ಇತ್ಯಾದಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಈ ಸಮಯ ಬಹಳ ಮಹತ್ವದ್ದಾಗಿದೆ. ನೀವು ದೊಡ್ಡ ಯಶಸ್ಸನ್ನು ಪಡೆಯಬಹುದು. ಆರ್ಥಿಕ ಭಾಗವು ಬಲವಾಗಿ ಉಳಿಯಲಿದೆ. ಈ ಸಮಯದಲ್ಲಿ ನೀವು ಕೆಲವು ಅಮೂಲ್ಯವಾದ ವಸ್ತುಗಳನ್ನು ಪಡೆಯಬಹುದು. ವಾರದ ಕೊನೆಯಲ್ಲಿನಿಮ್ಮ ಸ್ನೇಹಿತರನ್ನು ಭೇಟಿ ಮಾಡುವ ಅವಕಾಶವನ್ನು ಪಡೆಯುತ್ತೀರಿ. ಕುಟುಂಬದ ಜಿತೆ ಶುಭ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತೀರಿ.

ಸಂಖ್ಯೆ 7 (ಜನ್ಮ ದಿನಾಂಕ 7,16,25)
ನಿಮ್ಮ ಅದೃಷ್ಟ ಬಲವಾಗಿರಲಿದೆ. ನೀವು ಪ್ರತಿ ಕೆಲಸದಲ್ಲಿ ಯಶಸ್ಸನ್ನು ಪಡೆಯುತ್ತೀರಿ. ವ್ಯಾಪಾರಸ್ಥರಿಗೆ ಈ ಸಮಯವು ತುಂಬಾ ಅನುಕೂಲಕರವಾಗಿರುತ್ತದೆ. ದೊಡ್ಡ ಗ್ರಾಹಕರೊಂದಿಗೆ ವ್ಯವಹರಿಸಲು ನೀವು ಅವಕಾಶವನ್ನು ಪಡೆಯಬಹುದು. ಈ ಸಮಯದಲ್ಲಿ ನಿಮ್ಮ ವ್ಯವಹಾರವನ್ನು ಮುಂದಕ್ಕೆ ಕೊಂಡೊಯ್ಯಲು ನೀವು ನಿರ್ಧರಿಸುತ್ತೀರಿ. ಉದ್ಯೋಗಸ್ಥರಿಗೆ ಈ ಸಮಯ ಅನುಕೂಲಕರವಾಗಿದೆ. ನಿಮ್ಮ ಆರ್ಥಿಕ ಸ್ಥಿತಿ ಉತ್ತಮವಾಗಿರಲಿದೆ. ಈ ಅವಧಿಯಲ್ಲಿ, ನೀವು ಪೂಜೆ ಮತ್ತು ದಾನದಂತಹ ಧಾರ್ಮಿಕ ಕಾರ್ಯಗಳಿಗೆ ಹಣವನ್ನು ಖರ್ಚು ಮಾಡುತ್ತೀರಿ. ಮನೆಯ ಸದಸ್ಯರಿಂದ ಒಳ್ಳೆಯ ಸುದ್ದಿ ಸಿಗಲಿದೆ. ಈ ಸಮಯದಲ್ಲಿ ಮನೆಯ ವಾತಾವರಣ ತುಂಬಾ ಚೆನ್ನಾಗಿರುತ್ತದೆ. ಆರೋಗ್ಯದ ದೃಷ್ಟಿಯಿಂದ ಈ ವಾರ ನಿಮಗೆ ಉತ್ತಮವಾಗಿರುತ್ತದೆ.

ಸಂಖ್ಯೆ 8 (ಜನ್ಮ ದಿನಾಂಕ 8, 17, 26)
ಈ ಸಂಖ್ಯೆಯವರು ಪ್ರತಿಕೂಲ ಪರಿಸ್ಥಿತಿಗಳನ್ನು ಎದುರಿಸಬೇಕಾಗಬಹುದು. ನಿಮ್ಮ ಕೆಲವು ಕೆಲಸಗಳಲ್ಲಿ ಅಡೆತಡೆಗಳು ಉಂಟಾಗಬಹುದು, ಈ ಸಂದರ್ಭದಲ್ಲಿ ನೀವು ಆತುರದ ನಿರ್ಧಾರಗಳಿಂದ ದೂರವಿರುವಂತೆ ಸಲಹೆ ನೀಡಲಾಗಿದೆ. ವ್ಯಾಪಾರಸ್ಥರಿಗೆ ಆರ್ಥಿಕ ನಷ್ಟ ಉಂಟಾಗಬಹುದು. ವ್ಯಾಪಾರಸ್ಥರು ಈ ದಿನ ಜಾಗ್ರತೆವಹಿಸಬೇಕು. ಈ ಅವಧಿಯಲ್ಲಿ ಒಂದು ದೊಡ್ಡ ವ್ಯವಹಾರವು ನಿಮ್ಮ ಕೈಯಿಂದ ಜಾರಿಹೋಗುವ ಸಾಧ್ಯತೆ ಇರುವುದರಿಂದ ಜಾಗ್ರತೆವಹಿಸಿ. ಉದ್ಯೋಗಸ್ಥರಿಗೆ ಕೆಲಸದಲ್ಲಿ ಅಭದ್ರತೆ ಉಂಟಾಗಬಹುದು, ಅದರಲ್ಲೂ ನಿಮ್ಮ ಕೆಲಸ ತಾತ್ಕಾಲಿಕವಾಗಿದ್ದರೆ ಈ ಅಭದ್ರತೆ ಕಾಡುವುದು. ಹಣದ ವಿಷಯದಲ್ಲಿ ಈ ಸಮಯವು ಸಾಮಾನ್ಯವಾಗಿರುತ್ತದೆ. ಈ ಸಮಯದಲ್ಲಿ ಕುಟುಂಬದೊಂದಿಗೆ ಹೆಚ್ಚು ಸಮಯ ಕಳೆಯಲು ಸಾಧ್ಯವಾಗುವುದಿಲ್ಲ.

ಸಂಖ್ಯೆ 9 (ಜನ್ಮ ದಿನಾಂಕ 9,18,27)
ಕೆಲಸದ ವಿಷಯದಲ್ಲಿ ಈ ವಾರ ನಿಮಗೆ ತುಂಬಾ ಒಳ್ಳೆಯದು. ಉದ್ಯಮಿಗಳು ಕೆಲವು ಹೊಸ ಯೋಜನೆಗಳನ್ನು ಪಡೆಯಬಹುದು. ಮತ್ತೊಂದೆಡೆ, ಉದ್ಯೋಗಿಗಳಿಗೆ ತಮ್ಮ ಪ್ರತಿಭೆಯನ್ನು ತೋರಿಸಲು ಸುವರ್ಣಾವಕಾಶ ಸಿಗುತ್ತದೆ. ಈ ಅವಧಿಯಲ್ಲಿ, ನಿಮ್ಮ ಕಠಿಣ ಪರಿಶ್ರಮಕ್ಕೆ ಅನುಗುಣವಾಗಿ ನೀವು ಫಲಿತಾಂಶಗಳನ್ನು ಪಡೆಯಬಹುದು. ಆರ್ಥಿಕ ಪರಿಸ್ಥಿತಿಯಲ್ಲಿ ದೊಡ್ಡ ಜಿಗಿತದ ಸಾಧ್ಯತೆಯಿದೆ. ನಿಮ್ಮ ಆದಾಯ ಹೆಚ್ಚಾಗಬಹುದು. ವಾರದ ಮಧ್ಯದಲ್ಲಿ, ಪೂರ್ವಜರ ಆಸ್ತಿಗೆ ಸಂಬಂಧಿಸಿದ ಯಾವುದೇ ಲಾಭದ ಸೂಚನೆಗಳಿವೆ. ವಾರದ ಮಧ್ಯದಲ್ಲಿ, ಪೂರ್ವಜರ ಆಸ್ತಿಗೆ ಸಂಬಂಧಿಸಿದ ಯಾವುದೇ ಲಾಭದ ಸೂಚನೆಗಳಿವೆ. ಸಂಗಾತಿಯೊಂದಿಗೆ ಈ ಸಮಯವು ತುಂಬಾ ಉತ್ತಮವಾಗಿರುತ್ತದೆ. ಪರಸ್ಪರ ಅರ್ಥಮಾಡಿಕೊಳ್ಳುವಿರಿ.

English summary

Weekly Numerology Prediction From May 21 To May 27 In Kannada

Here are weekly numerology prediction from may 21 to may 27, read on.
Story first published: Friday, May 19, 2023, 10:16 [IST]
X
Desktop Bottom Promotion