Latest Updates
-
ಹುಷಾರ್.. ಈ ರಾಶಿಗಳಿಗೆ ಶನಿಯಿಂದ ಸಂಕಷ್ಟ ಶುರು! ಶನಿಯ ಕೆಂಗಣ್ಣಿನಿಂದ ತಪ್ಪಿಸಿಕೊಳ್ಳೋದು ಹೇಗೆ? -
ಕಡಲ ತೀರದಲ್ಲಿ ಮತ್ತೆ ಕಾಣಿಸಿಕೊಂಡ ಡೂಮ್ಸ್ಡೇ ಫಿಶ್: ಮತ್ತೇನು ದುರಂತ ಕಾದಿದೆ? -
ಮಾರ್ಚ್ 13ರಿಂದ ಶನಿ ಅಸ್ತಮ: 40 ದಿನಗಳ ಕಾಲ ಈ ರಾಶಿಯವರಿಗೆ ಶನಿ ಪ್ರಭಾವ ಇಳಿಕೆ! ಅದೃಷ್ಟದ ದಿನ! -
ದಪ್ಪ ಆಗಿದ್ದೀರಾ? ತೂಕ ಇಳಿಸಬೇಕಾ? ಈ ಗಂಜಿ 1 ಕಪ್ ಕುಡಿಯಿರಿ.. ಡಬಲ್ ಸ್ಪೀಡ್ನಲ್ಲಿ ಸಣ್ಣ ಆಗ್ತೀರಾ!! -
ಬೇಸಿಗೆಯಲ್ಲಿ ದೇಹ ತಂಪಾಗಿಟ್ಟು ದಣಿವು ನೀಗಿಸುವ ನವಣೆ ಮೊಸರನ್ನ: ಸುಲಭವಾಗಿ ಮಾಡುವ ವಿಧಾನವಿದು! -
ಫ್ರಿಜ್ನಲ್ಲಿ ಇಟ್ಟ ಆಹಾರ ಬೇಗ ಕೆಡುತ್ತಿದ್ಯಾ? ಈ 5 ಮ್ಯಾಜಿಕ್ ಟ್ರಿಕ್ಸ್ ಬಳಸಿ.. ಫ್ರೆಶ್ ಆಗಿಡಿ! -
ಸೋಲೋ ಡೇಟ್ ಟ್ರೆಂಡ್: ಒಂಟಿಯಾಗಿ ಸಮಯ ಕಳೆಯೋದು ಎಷ್ಟು ಉತ್ತಮ ಗೊತ್ತಾ? -
ಜಸ್ಟ್ ನೀರು ಸೇರಿಸಿ.. ಈ ಅದ್ಭುತ ರುಚಿಯ ಚಟ್ನಿ ರೆಡಿ! ಮಿಕ್ಸಿ ಬಳಸದೆ ಮಾಡೋದು ಹೇಗೆ? -
ಮಾರ್ಚ್ನಲ್ಲಿ ಬುಧ ಉದಯ: 4 ರಾಶಿಯವರಿಗೆ ಅಡ್ಡಿಗಳಿಂದ ವಿಮುಕ್ತಿ, ಅದೃಷ್ಟದ ಸಮಯ! -
ಶುಕ್ರ, ಶನಿ & ಸೂರ್ಯ ಸಂಗಮ: ಮೀನ ರಾಶಿಯಲ್ಲಿ ತ್ರಿಗ್ರಹ ಯೋಗ.. ಈ 5 ರಾಶಿಗಳಿಗೆ ಬಂಪರ್ ಲಾಟರಿ! ಯಾರಿಗೆ ಲಾಭ, ನಷ್ಟ?
ವಾರ ಭವಿಷ್ಯ (ಆಗಸ್ಟ್ 19-26): ಈ ವಾರ ನಿಮ್ಮ ರಾಶಿಫಲ ಹೇಗಿದೆ?
ಗ್ರಹಗತಿಗಳ ಆಧಾರದ ಮೇಲೆ ವಾರ ಭವಿಷ್ಯ ನೀಡಲಾಗಿದೆ. ಆಗಸ್ಟ್ 17ಕ್ಕೆ ಸೂರ್ಯ ತಾನು ಅಧಿಪತಿಯಾಗಿರುವ ಸಿಂಹ ರಾಶಿಗೆ ಪ್ರವೇಶ ಮಾಡಿದೆ, ಮಂಗಳ ಆಗಸ್ಟ್ 18ಕ್ಕೆ ಕನ್ಯಾ ರಾಶಿ ಪ್ರವೇಶ ಮಾಡಿದೆ. ಬುಧ ಕೂಡ ಸಿಂಹ ರಾಶಿಯಲ್ಲಿದೆ, ಈ ಎಲ್ಲಾ ಗ್ರಹಗತಿಗಳ ದೆಸೆಯಿಂದಾಗಿ ಈ ವಾರ 12 ರಾಶಿಗಳಿಗೆ ಹೇಗಿರಲಿದೆ ಎಂದು ನೋಡೋಣ ಬನ್ನಿ:

ಮೇಷ ರಾಶಿ
ಕೆಲಸದ ಸ್ಥಳದಲ್ಲಿ ನೀವು ಪ್ರತಿಕೂಲ ಪರಿಸ್ಥಿತಿಗಳನ್ನು ಎದುರಿಸಬೇಕಾಗಬಹುದು. ಅಂತಹ ಪರಿಸ್ಥಿತಿಯಲ್ಲಿ, ಅನಗತ್ಯ ವಿಷಯಗಳನ್ನು ನಿರ್ಲಕ್ಷ್ಯ ಮಾಡಲು ಸಲಹೆ ನೀಡಲಾಗಿದೆ. ಈ ವಾರ ಹಣದ ವಿಷಯದಲ್ಲಿ ದುಬಾರಿಯಾಗಲಿದೆ, ಆದರೆ ದೊಡ್ಡ ಸಮಸ್ಯೆಯೇನೂ ಉಂಟಾಗುವುದಿಲ್ಲ. ವಾರದ ಮಧ್ಯದಲ್ಲಿ ನೀವು ಕೆಲಸದ ನಿಮಿತ್ತ ಪ್ರಯಾಣಿಸಬೇಕಾಗಬಹುದು. ನಿಮ್ಮ ಈ ಪಯಣ ಬಹುಮುಖ್ಯವಾಗಲಿದೆ. ಕೌಟುಂಬಿಕ ಜೀವನದಲ್ಲಿ ಸಂತೋಷ ಮತ್ತು ಶಾಂತಿ ಇರಲಿದೆ. ಆರೋಗ್ಯದಲ್ಲಿ ಈ ವಾರ ನಿಮಗೆ ಮಿಶ್ರಫಲ.
ಅದೃಷ್ಟದ ಬಣ್ಣ: ಮರೂನ್
ಅದೃಷ್ಟದ ಸಂಖ್ಯೆ: 15
ಅದೃಷ್ಟದ ದಿನ: ಭಾನುವಾರ
ವೃಷಭ ರಾಶಿ
ಈ ಅವಧಿಯಲ್ಲಿ, ನಿಮ್ಮ ಮಾತಿನ ಬಗ್ಗೆ ಹೆಚ್ಚು ಜಾಗ್ರತೆವಹಿಸಬೇಕಾಗಿದೆ. ಇಲ್ಲದಿದ್ದರೆ ನಿಮ್ಮ ಮಾತುಗಳೇ ನಿಮ್ಮನ್ನು ಸಮಸ್ಯೆಗೆ ಸಿಕ್ಕಿಸಿಕೊಳ್ಳಬಹುದು. ನಿಮ್ಮ ಆರ್ಥಿಕ ಸ್ಥಿತಿಯು ಬಲವಾಗಿರುತ್ತದೆ. ಆರ್ಥಿಕ ಸ್ಥಿತಿ ಚೆನ್ನಾಗಿರಲಿದೆ. ಹೊಸ ಆದಾಯದ ಮೂಲವನ್ನು ಪಡೆಯುವ ಬಲವಾದ ಸಾಧ್ಯತೆಯಿದೆ. ಉದ್ಯೋಗ ಅಥವಾ ವ್ಯವಹಾರವಾಗಿರಲಿ, ಈ ವಾರ ನಿಮಗೆ ತುಂಬಾ ಒಳ್ಳೆಯದಿದೆ. ಬಾಕಿ ಉಳಿದಿರುವ ಕಾರ್ಯಗಳನ್ನು ಪೂರ್ಣಗೊಳಿಸಲು ನೀವು ತುಂಬಾ ಪ್ರಯತ್ನಪಡಬೇಕಾಗುತ್ತದೆ. ಆರೋಗ್ಯದ ಬಗ್ಗೆ ಹೇಳುವುದಾದರೆ ಕೆಲಸದ ಜೊತೆಗೆ ವಿಶ್ರಾಂತಿ ಕಡೆಯೂ ಗಮನ ನೀಡಿ.
ಅದೃಷ್ಟದ ಬಣ್ಣ: ಬಿಳಿ
ಅದೃಷ್ಟದ ಸಂಖ್ಯೆ: 10
ಅದೃಷ್ಟದ ದಿನ: ಶುಕ್ರವಾರ
ಮಿಥುನ ರಾಶಿ
ವಾರದ ಆರಂಭವು ನಿಮಗೆ ಉತ್ತಮವಾಗಿರುತ್ತದೆ. ಕೆಲಸದಲ್ಲಿ ಜವಾನ್ದಾರಿ ಹೆಚ್ಚಾಗುವುದರಿಮದ ಸ್ವಲ್ಪ ಹೊರೆಯಾಗಬಹುದು. ಈ ವಾರ ವ್ಯಾಪಾರಸ್ಥರು ಯಾವುದೇ ಪ್ರಮುಖ ನಿರ್ಧಾರವನ್ನು ತರಾತುರಿಯಲ್ಲಿ ತೆಗೆದುಕೊಳ್ಳದಂತೆ ಸಲಹೆ ನೀಡಲಾಗುತ್ತದೆ, ಇಲ್ಲದಿದ್ದರೆ ನಷ್ಟ ಉಂಟಾಗಬಹುದು. ನೀವು ಪಾಲುದಾರಿಕೆಯಲ್ಲಿ ವ್ಯಾಪಾರ ಮಾಡಲು ಯೋಜಿಸುತ್ತಿದ್ದರೆ, ನಿಮ್ಮ ನಿರ್ಧಾರವನ್ನು ಬಹಳ ಎಚ್ಚರಿಕೆಯಿಂದ ತೆಗೆದುಕೊಳ್ಳಿ. ವೈವಾಹಿಕ ಜೀವನದಲ್ಲಿ ಪರಿಸ್ಥಿತಿ ಅಷ್ಟು ಚೆನ್ನಾಗಿರಲ್ಲ. ಸಂಗಾತಿಯ ನಡವಳಿಕೆಯಲ್ಲಿ ಬದಲಾವಣೆ ಕಂಡು ಬರಲಿದೆ. ಅವರು ನಿಮ್ಮನ್ನು ನಿರ್ಲಕ್ಷಿಸುತ್ತಿದ್ದಾರೆ ಎಂದನಿಸಿದರೆ ಅವರ ಜೊತೆ ಮಾತನಾಡುವ ಮೂಲಕ ಪರಿಸ್ಥಿತಿ ತಿಳಿಗೊಳಿಸಿ. ನಿಮ್ಮ ಆರ್ಥಿಕ ಸ್ಥಿತಿ ಸಾಮಾನ್ಯಕ್ಕಿಂತ ಉತ್ತಮವಾಗಿರುತ್ತದೆ. ನಿಮ್ಮ ಖರ್ಚುಗಳನ್ನು ನೀವು ನಿಯಂತ್ರಿಸಬೇಕು. ಆರೋಗ್ಯ ಸಂಬಂಧಿ ಸಮಸ್ಯೆಗಳಿರಬಹುದು.
ಅದೃಷ್ಟದ ಬಣ್ಣ: ಹಸಿರು
ಅದೃಷ್ಟದ ಸಂಖ್ಯೆ: 16
ಅದೃಷ್ಟದ ದಿನ: ಸೋಮವಾರ
ಕರ್ಕ ರಾಶಿ
ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ವಿದ್ಯಾರ್ಥಿಗಳಿಗೆ ಈ ವಾರ ಉತ್ತಮವಾಗಿರುತ್ತದೆ. ನಿಮ್ಮ ಕಠಿಣ ಪರಿಶ್ರಮ ಮತ್ತು ಆತ್ಮವಿಶ್ವಾಸದ ಬಲದಿಂದ ನೀವು ಉತ್ತಮ ಯಶಸ್ಸನ್ನು ಸಾಧಿಸಬಹುದು. ನೀವು ಉನ್ನತ ಶಿಕ್ಷಣಕ್ಕಾಗಿ ವಿದೇಶಕ್ಕೆ ಹೋಗಲು ಈ ವಾರದಲ್ಲಿ ಉತ್ತಮ ಅವಕಾಶಗಳು ಸಿಗಲಿದೆ. ಹಣದ ವಿಷಯದಲ್ಲೂ ಈ ವಾರ ನಿಮಗೆ ಮಂಗಳಕರವಾಗಿರುತ್ತದೆ. ಆಸ್ತಿ ವ್ಯವಹಾರ ಮಾಡಿದವರು ಲಾಭ ಕಾಣುವಿರಿ. ಕುಟುಂಬದಲ್ಲಿರುವ ಭಿನ್ನಾಭಿಪ್ರಾಯ ಕೊನೆಗೊಳ್ಳುತ್ತದೆ. ಈ ಸಮಯದಲ್ಲಿ, ನೀವು ಕುಟುಂಬದೊಂದಿಗೆ ಉತ್ತಮ ಸಮಯವನ್ನು ಕಳೆಯುತ್ತೀರಿ. ಉದ್ಯೋಗ ಹುಡುಕುತ್ತಿರುವವರಿಗೆ ಉತ್ತಮ ಅವಕಾಶ ದೊರೆಯಲಿದೆ. ಆರೋಗ್ಯ ಚೆನ್ನಾಗಿರುತ್ತದೆ.
ಅದೃಷ್ಟದ ಬಣ್ಣ: ನೇರಳೆ
ಅದೃಷ್ಟದ ಸಂಖ್ಯೆ: 2
ಅದೃಷ್ಟದ ದಿನ: ಶನಿವಾರ
ಸಿಂಹ ರಾಶಿ
ವ್ಯಾಪಾರದಲ್ಲಿ ಏರಿಳಿತದ ಪರಿಸ್ಥಿತಿ ಇರಬಹುದು, ಈ ಅವಧಿಯಲ್ಲಿ ನೀವು ಯಾವುದೇ ಹೊಸ ಕೆಲಸಕ್ಕೆ ಕೈ ಹಾಕಬೇಡಿ. ಎಲ್ಲವೂ ನೀವು ಬಯಸಿದಂತೆ ಆಗುವವರೆಗೆ ತಾಳ್ಮೆಯಿಂದಿರಿ. ಉದ್ಯೋಗಸ್ಥರು ಕಚೇರಿಯಲ್ಲಿ ತುಂಬಾ ಕಷ್ಟಪಡಬೇಕಾಗುತ್ತದೆ. ನಿಮ್ಮ ಆರ್ಥಿಕ ಸ್ಥಿತಿ ಉತ್ತಮವಾಗಿರುತ್ತದೆ. ನೀವು ಬುದ್ಧಿವಂತಿಕೆಯಿಂದ ಖರ್ಚು ಮಾಡಿದರೆ ಯಾವುದೇ ದೊಡ್ಡ ಸಮಸ್ಯೆ ಇರುವುದಿಲ್ಲ. ಈ ಸಮಯದಲ್ಲಿ ಯಾವುದೇ ಹಣಕಾಸಿನ ವಹಿವಾಟು ಮಾಡಲು ಹೋಗಬೇಡಿ. ವೈವಾಹಿಕ ಜೀವನ ಚೆನ್ನಾಗಿರುತ್ತದೆ. ನಿಮ್ಮ ತಂದೆಯೊಂದಿಗಿನ ನಿಮ್ಮ ಸಂಬಂಧವು ಇನ್ನಷ್ಟು ಬಲವಾಗಿರುತ್ತದೆ. ವಾರದ ಕೊನೆಯಲ್ಲಿ ನೀವು ಕುಟುಂಬದೊಂದಿಗೆ ಪ್ರಯಾಣ ಮಾಡಬಹುದು.
ಅದೃಷ್ಟದ ಬಣ್ಣ: ಕೆಂಪು
ಅದೃಷ್ಟದ ಸಂಖ್ಯೆ: 5
ಅದೃಷ್ಟದ ದಿನ: ಮಂಗಳವಾರ
ಕನ್ಯಾ ರಾಶಿ
ಪೂರ್ವಿಕರ ಆಸ್ತಿಗೆ ಸಂಬಂಧಿಸಿದ ವಿವಾದ ಬಗೆಹರಿಯುವ ಸಾಧ್ಯತೆ ಇದೆ. ಈ ಸಮಯದಲ್ಲಿ ನಿಮ್ಮ ದೊಡ್ಡ ಚಿಂತೆ ದೂರಾಗಲಿದೆ. ಈ ಅವಧಿಯಲ್ಲಿ ಉದ್ಯೋಗಿಗಳು ತಮ್ಮ ಕೆಲಸದ ಮೇಲೆ ಸಂಪೂರ್ಣ ಗಮನ ಹರಿಸಲು ಸಲಹೆ ನೀಡಲಾಗಿದೆ. ಕೆಲಸದ ಹೊರೆ ಹೆಚ್ಚಾಗಬಹುದು. ಉದ್ಯಮಿಗಳು ಬಯಸಿದ ಲಾಭವನ್ನು ಪಡೆಯಬಹುದು. ನಿಮ್ಮ ಆರ್ಥಿಕ ಸ್ಥಿತಿ ಚೆನ್ನಾಗಿರುತ್ತದೆ. ಕೌಟುಂಬಿಕ ಜೀವನ ಸುಖಮಯವಾಗಿರುತ್ತದೆ. ನೀವು ಒಡಹುಟ್ಟಿದವರ ಸಂಪೂರ್ಣ ಬೆಂಬಲವನ್ನು ಪಡೆಯುತ್ತೀರಿ. ಈ ಸಮಯ ಸಂಗಾತಿಯೊಂದಿಗೆ ತುಂಬಾ ಚೆನ್ನಾಗಿರಲಿದೆ. ಈ ಸಮಯದಲ್ಲಿ, ನಿಮ್ಮ ಪರಸ್ಪರ ತಿಳುವಳಿಕೆ ಇನ್ನೂ ಉತ್ತಮವಾಗಿರುತ್ತದೆ. ವಾರದ ಕೊನೆಯಲ್ಲಿ ನೀವು ಆರ್ಥಿಕ ಲಾಭವನ್ನು ಪಡೆಯುವ ಸಾಧ್ಯತೆಯಿದೆ. ಹಣಕ್ಕೆ ಸಂಬಂಧಿಸಿದ ಯಾವುದೇ ಸಮಸ್ಯೆ ಇರಲ್ಲ.
ಅದೃಷ್ಟದ ಬಣ್ಣ: ಕಿತ್ತಳೆ
ಅದೃಷ್ಟದ ಸಂಖ್ಯೆ: 22
ಅದೃಷ್ಟದ ದಿನ: ಗುರುವಾರ
ತುಲಾ ರಾಶಿ
ನೀವು ಕೆಲಸವನ್ನು ಬದಲಾಯಿಸಲು ಯೋಚಿಸುತ್ತಿದ್ದರೆ, ಈ ವಾರ ನೀವು ಒಳ್ಳೆಯ ಅವಕಾಶ ಪಡೆಯಬಹುದು. ಆರ್ಥಿಕ ಸ್ಥಿತಿ ಚೆನ್ನಾಗಿ ಇರುವುದರಿಂದ ಹಳೆಯ ಸಾಲವನ್ನು ತೀರಿಸುವಲ್ಲಿ ನೀವು ಯಶಸ್ವಿಯಾಗುತ್ತೀರಿ. ಈ ಅವಧಿಯಲ್ಲಿ, ನಿಮ್ಮ ಸರಿಯಾದ ನಿರ್ಧಾರಗಳ ಉತ್ತಮ ಫಲಿತಾಂಶಗಳನ್ನು ಪಡೆಯುವ ಸಾಧ್ಯತೆಯಿದೆ. ಈ ಸಮಯದಲ್ಲಿ ಮನೆಯ ವಾತಾವರಣವು ಉತ್ತಮವಾಗಿರುತ್ತದೆ. ನೀವು ತುಂಬಾ ಸಮತೋಲಿತವಾಗಿ ವರ್ತಿಸಲು ಸಲಹೆ ನೀಡಲಾಗಿದೆ. ಚಿಕ್ಕ ಪುಟ್ಟ ವಿಷಯಗಳನ್ನು ನಿರ್ಲಕ್ಷ್ಯ ಮಾಡುವುದು ಒಳ್ಳೆಯದು. ನೀವು ಪರಸ್ಪರ ಹೆಚ್ಚು ಹೆಚ್ಚು ಸಮಯವನ್ನು ಕಳೆಯಬೇಕಾಗಿದೆ. ಹಣದ ವಿಷಯದಲ್ಲಿ ಈ ವಾರ ನಿಮಗೆ ಉತ್ತಮವಾಗಿರುತ್ತದೆ. ಆರೋಗ್ಯ ದುರ್ಬಲವಾಗಿರಬಹುದು.
ಅದೃಷ್ಟದ ಬಣ್ಣ: ಕೆನೆ
ಅದೃಷ್ಟದ ಸಂಖ್ಯೆ: 7
ಅದೃಷ್ಟದ ದಿನ: ಬುಧವಾರ
ವೃಶ್ಚಿಕ ರಾಶಿ
ಪ್ರೇಮಿಗಳಿಗೆ ಈ ವಾರ ನಿಮಗೆ ಮಿಶ್ರ ಫಲಿತಾಂಶಗಳನ್ನು ನೀಡುತ್ತದೆ. ಹಣಕಾಸಿನ ಸ್ಥಿತಿ ಅಷ್ಟು ಚೆನ್ನಾಗಿ ಇರಲ್ಲ. ವೆಚ್ಚಗಳು ಆದಾಯವನ್ನು ಮೀರಬಹುದು. ವಾರದ ಮಧ್ಯದಲ್ಲಿ, ಸಾಲ ಕೂಡ ಪಡೆಯಬೇಕಾಗಬಹುದು. ಕಚೇರಿಯಲ್ಲಿ ಬಾಸ್ ನೀಡಿದ ಜವಾಬ್ದಾರಿಗಳನ್ನು ಸಮಯಕ್ಕೆ ಸರಿಯಾಗಿ ಪೂರ್ಣಗೊಳಿಸಲು ಪ್ರಯತ್ನಿಸಿ. ನಿಮ್ಮ ವಿಳಂಬವು ಕೆಟ್ಟ ಪ್ರಭಾವ ಬೀರಲಿದೆ. ದೊಡ್ಡ ಲಾಭದ ಅನ್ವೇಷಣೆಯಲ್ಲಿ ಉದ್ಯಮಿಗಳು ಸಣ್ಣ ಪ್ರಯೋಜನಗಳನ್ನು ನಿರ್ಲಕ್ಷ್ಯ ಮಾಡುವ ತಪ್ಪು ಮಾಡದಿರಿ. ಆರೋಗ್ಯಕ್ಕೆ ಸಂಬಂಧಿಸಿದಂತೆ, ಈ ಸಮಯದಲ್ಲಿ ನೀವು ಸ್ನಾಯುಗಳಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಹೊಂದಿರಬಹುದು. ಭಾರವಾದ ವಸ್ತುಗಳನ್ನು ಎತ್ತಬೇಡಿ.
ಅದೃಷ್ಟದ ಬಣ್ಣ: ಗುಲಾಬಿ
ಅದೃಷ್ಟದ ಸಂಖ್ಯೆ: 19
ಅದೃಷ್ಟದ ದಿನ: ಶುಕ್ರವಾರ
ಧನು ರಾಶಿ
ಈ ಅವಧಿಯಲ್ಲಿ ನೀವು ತುಂಬಾ ಧನಾತ್ಮಕವಾಗಿರುತ್ತೀರಿ. ಅದರ ಪರಿಣಾಮ ನಿಮ್ಮ ಕೆಲಸದ ಮೇಲೂ ಕಂಡು ಬರಲಿದೆ. ಉದ್ಯೋಗ ಅಥವಾ ವ್ಯವಹಾರವಾಗಿರಲಿ, ಈ ಸಮಯವು ನಿಮಗೆ ತುಂಬಾ ಅದೃಷ್ಟದಿಂದ ಕೂಡಿರುತ್ತದೆ. ನಿಮ್ಮ ಪ್ರಚಾರಕ್ಕಾಗಿ ನೀವು ಬಹಳ ಸಮಯದಿಂದ ಕಾಯುತ್ತಿದ್ದರೆ, ಈ ವಾರ ನೀವು ಒಳ್ಳೆಯ ಸುದ್ದಿ ಪಡೆಯಬಹುದು. ಮತ್ತೊಂದೆಡೆ, ಉದ್ಯಮಿಗಳು ಹೊಸ ವ್ಯವಹಾರ ಪ್ರಸ್ತಾಪವನ್ನು ಪಡೆಯುವ ಬಲವಾದ ಸಾಧ್ಯತೆಯಿದೆ. ವಾರದ ಕೊನೆಯಲ್ಲಿ ನೀವು ಆರ್ಥಿಕ ಲಾಭವನ್ನು ಸಹ ಪಡೆಯುತ್ತೀರಿ. ಸಂಗಾತಿಯೊಂದಿಗಿನ ಸಂಬಂಧದಲ್ಲಿ ಉತ್ತಮ ಹೊಂದಾಣಿಕೆ ಇರಲಿದೆ. ಆರೋಗ್ಯ ಸಮಸ್ಯೆಗಳಿದ್ದರೆ ನಿರ್ಲಕ್ಷ್ಯ ಮಾಡಬೇಡಿ.
ಅದೃಷ್ಟದ ಬಣ್ಣ: ಕಂದು
ಅದೃಷ್ಟದ ಸಂಖ್ಯೆ: 9
ಅದೃಷ್ಟದ ದಿನ: ಶನಿವಾರ
ಮಕರ ರಾಶಿ
ನೀವು ಉದ್ಯೋಗವನ್ನು ಹುಡುಕುತ್ತಿದ್ದರೆ, ಇನ್ನೂ ಸ್ವಲ್ಪ ಸಮಯ ಕಾಯಬೇಕಾಗಬಹುದು. ಆದರೆ ಶೀಘ್ರದಲ್ಲೇ ಉದ್ಯೋಗ ದೊರೆಯಲಿದೆ. ಮತ್ತೊಂದೆಡೆ, ನೀವು ಸರ್ಕಾರಿ ಕೆಲಸ ಮಾಡುತ್ತಿದ್ದರೆ, ಈ ಅವಧಿಯಲ್ಲಿ ನೀವು ನಿಮ್ಮ ಸಣ್ಣ ಕೆಲಸವನ್ನು ಬಹಳ ಎಚ್ಚರಿಕೆಯಿಂದ ಮಾಡಬೇಕಾಗುತ್ತದೆ. ನಿಮ್ಮ ಅಜಾಗರೂಕತೆಯಿಂದ, ಭಾರೀ ನಷ್ಟಗಳು ಸಂಭವಿಸಬಹುದು. ಕೌಟುಂಬಿಕ ಜೀವನ ಸುಖಮಯವಾಗಿರುತ್ತದೆ. ಕುಟುಂಬದಲ್ಲಿ ಪ್ರೀತಿಯ ವಾತಾವರಣ ಇರುತ್ತದೆ. ಆರ್ಥಿಕ ಪರಿಸ್ಥಿತಿಯಲ್ಲಿ ಸುಧಾರಣೆಯ ಲಕ್ಷಣಗಳಿವೆ. ನಿಮ್ಮ ಖರ್ಚುಗಳನ್ನು ನೀವು ಸರಿಯಾಗಿ ಟ್ರ್ಯಾಕ್ ಮಾಡಬೇಕಾಗುತ್ತದೆ. ಆರೋಗ್ಯಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ತೊಡೆದುಹಾಕಲು, ನೀವು ವೈದ್ಯರ ಸಲಹೆಯನ್ನು ಅನುಸರಿಸಬೇಕು.
ಅದೃಷ್ಟದ ಬಣ್ಣ: ಕೆಂಪು
ಅದೃಷ್ಟದ ಸಂಖ್ಯೆ: 25
ಅದೃಷ್ಟದ ದಿನ: ಸೋಮವಾರ
ಕುಂಭ ರಾಶಿ
ನೀವು ಕೆಲಸದ ಸ್ಥಳದಲ್ಲಿ ನಿಮ್ಮ ಕೆಲಸದ ಮೇಲೆ ಹೆಚ್ಚು ಗಮನಹರಿಸಿದರೆ, ಅದು ನಿಮಗೆ ಉತ್ತಮವಾಗಿರುತ್ತದೆ. ಉನ್ನತ ಅಧಿಕಾರಿಗಳು ಮತ್ತು ಸಹೋದ್ಯೋಗಿಗಳೊಂದಿಗೆ ಅನಗತ್ಯ ಘರ್ಷಣೆಯನ್ನು ತಪ್ಪಿಸಿ. ವ್ಯಾಪಾರಸ್ಥರಿಗೆ ಈ ವಾರ ತುಂಬಾ ಲಾಭದಾಯಕವಾಗಿರುತ್ತದೆ. ನೀವು ಅವಿಭಕ್ತ ಕುಟುಂಬದಲ್ಲಿ ವಾಸಿಸುತ್ತಿದ್ದರೆ, ನಿಮ್ಮ ಮನೆಯ ಐಕ್ಯತೆಯನ್ನು ಕಾಪಾಡಿಕೊಳ್ಳಲು ನೀವು ತುಂಬಾ ಬುದ್ಧಿವಂತಿಕೆಯಿಂದ ಕೆಲಸ ಮಾಡಬೇಕಾಗುತ್ತದೆ. ತರಾತುರಿಯಲ್ಲಿ ಯಾವುದೇ ನಿರ್ಧಾರ ತೆಗೆದುಕೊಳ್ಳಬೇಡಿ. ಸಂಗಾತಿಯೊಂದಿಗೆ ಭಿನ್ನಾಭಿಪ್ರಾಯವಿದ್ದರೆ ಪರಿಹರಿಸಲು ಪ್ರಯತ್ನಿಸಿ. ನಿಮ್ಮ ಆರ್ಥಿಕ ಸ್ಥಿತಿ ಸಾಮಾನ್ಯವಾಗಿರುತ್ತದೆ. ನೀವು ದೊಡ್ಡ ಖರ್ಚು ಮಾಡುವ ಮನಸ್ಥಿತಿಯಲ್ಲಿದ್ದರೆ, ಈ ಸಮಯವು ಸೂಕ್ತವಲ್ಲ. ಆರೋಗ್ಯಕ್ಕೆ ಸಂಬಂಧಿಸಿದಂತೆ ಹೇಳುವುದಾದರೆ ಈ ಸಮಯದಲ್ಲಿ ಯಾವುದೇ ದೀರ್ಘಕಾಲದ ಕಾಯಿಲೆಯು ನಿಮ್ಮನ್ನು ತೊಂದರೆಗೊಳಿಸಬಹುದು.
ಅದೃಷ್ಟದ ಬಣ್ಣ: ಕಿತ್ತಳೆ
ಅದೃಷ್ಟದ ಸಂಖ್ಯೆ: 8
ಅದೃಷ್ಟದ ದಿನ: ಮಂಗಳವಾರ
ಮೀನ ರಾಶಿ
ಹಣದ ವಿಷಯದಲ್ಲಿ ಈ ವಾರ ನಿಮಗೆ ಉತ್ತಮವಾಗಿರುತ್ತದೆ. ಯಾವುದೇ ವಹಿವಾಟು ಮಾಡುವಾಗ ಜಾಗರೂಕರಾಗಿರಲು ಸಲಹೆ ನೀಡಲಾಗಿದೆ. ವಾರದ ಆರಂಭದಲ್ಲಿ, ನೀವು ಕೆಲಸಕ್ಕೆ ಸಂಬಂಧಿಸಿದಂತೆ ದೀರ್ಘಕಾಲ ಪ್ರಯಾಣಿಸಬೇಕಾಗಬಹುದು. ನಿಮ್ಮ ಈ ಪ್ರಯಾಣವು ತುಂಬಾ ಆಯಾಸದಾಯಕವಾಗಿರುತ್ತದೆ. ಉದ್ಯೋಗಿಗಳ ಮೇಲೆ ಕೆಲಸದ ಹೊರೆ ಇದ್ದಕ್ಕಿದ್ದಂತೆ ಹೆಚ್ಚಾಗಬಹುದು. ಆದರೆ, ನಿಮ್ಮ ಎಲ್ಲಾ ಕೆಲಸಗಳನ್ನು ಸಮಯಕ್ಕೆ ಸರಿಯಾಗಿ ಪೂರ್ಣಗೊಳಿಸಲು ನಿಮಗೆ ಸಾಧ್ಯವಾಗುತ್ತದೆ. ಮತ್ತೊಂದೆಡೆ, ಈ ವಾರ ಉದ್ಯಮಿಗಳಿಗೆ ತುಂಬಾ ಒತ್ತಡದಿಂದ ಕೂಡಿರುತ್ತದೆ. ಬಿಡುವಿಲ್ಲದ ದಿನಚರಿಯಿಂದಾಗಿ ನಿಮ್ಮ ಆರೋಗ್ಯವು ಹದಗೆಡಬಹುದು.
ಅದೃಷ್ಟದ ಬಣ್ಣ: ನೇರಳೆ
ಅದೃಷ್ಟದ ಸಂಖ್ಯೆ: 11
ಅದೃಷ್ಟದ ದಿನ: ಬುಧವಾರ



Click it and Unblock the Notifications











