Latest Updates
-
ಬೇಸಿಗೆಯಲ್ಲಿ ದೇಹ ತಂಪಾಗಿಟ್ಟು ದಣಿವು ನೀಗಿಸುವ ನವಣೆ ಮೊಸರನ್ನ: ಸುಲಭವಾಗಿ ಮಾಡುವ ವಿಧಾನವಿದು! -
ಫ್ರಿಜ್ನಲ್ಲಿ ಇಟ್ಟ ಆಹಾರ ಬೇಗ ಕೆಡುತ್ತಿದ್ಯಾ? ಈ 5 ಮ್ಯಾಜಿಕ್ ಟ್ರಿಕ್ಸ್ ಬಳಸಿ.. ಫ್ರೆಶ್ ಆಗಿಡಿ! -
ಸೋಲೋ ಡೇಟ್ ಟ್ರೆಂಡ್: ಒಂಟಿಯಾಗಿ ಸಮಯ ಕಳೆಯೋದು ಎಷ್ಟು ಉತ್ತಮ ಗೊತ್ತಾ? -
ಜಸ್ಟ್ ನೀರು ಸೇರಿಸಿ.. ಈ ಅದ್ಭುತ ರುಚಿಯ ಚಟ್ನಿ ರೆಡಿ! ಮಿಕ್ಸಿ ಬಳಸದೆ ಮಾಡೋದು ಹೇಗೆ? -
ಮಾರ್ಚ್ನಲ್ಲಿ ಬುಧ ಉದಯ: 4 ರಾಶಿಯವರಿಗೆ ಅಡ್ಡಿಗಳಿಂದ ವಿಮುಕ್ತಿ, ಅದೃಷ್ಟದ ಸಮಯ! -
ಶುಕ್ರ, ಶನಿ & ಸೂರ್ಯ ಸಂಗಮ: ಮೀನ ರಾಶಿಯಲ್ಲಿ ತ್ರಿಗ್ರಹ ಯೋಗ.. ಈ 5 ರಾಶಿಗಳಿಗೆ ಬಂಪರ್ ಲಾಟರಿ! ಯಾರಿಗೆ ಲಾಭ, ನಷ್ಟ? -
ಬೇಕರಿಯಲ್ಲಿ ಸಿಗುವ ಕೊಬ್ಬರಿ ತುರಿ ಬರ್ಫಿ ನಿಮಿಷದಲ್ಲಿ ಮಾಡಿ! ಇಲ್ಲಿದೆ ಸುಲಭದ ಸ್ವೀಟ್ ವಿಧಾನ -
ಮಧುರೈಗೆ ಹೋಗ್ತಿದ್ದೀರಾ? ಈ ಪವಿತ್ರ ದೇಗುಲಗಳಿಗೂ ಭೇಟಿ ನೀಡೋದನ್ನ ಮರೀಬೇಡಿ.. ಪಟ್ಟಿ ಇಲ್ಲಿದೆ -
ಈ 3 ರಾಶಿಗಳಿಗೆ ಜೀವನದಲ್ಲಿ ಏರಿಳಿತಗಳು! ಹಳೆಯ ನೆನಪುಗಳು ಕಾಡುತ್ತೆ -
March 09 Horoscope: ಶುಭ ಕಾರ್ಯದಲ್ಲಿ ಭಾಗಿಯಾಗುವ ಸಾಧ್ಯತೆ ಹೆಚ್ಚು!
ವಾರ ಭವಿಷ್ಯ (ಜೂ. 25-ಜು.1): ಈ ವಾರ ನಿಮ್ಮ ರಾಶಿಫಲ ಹೇಗಿದೆ?
ಗ್ರಹಗತಿಗಳ ಆಧಾರದ ಮೇಲೆ ಜೂನ್ 25ರಿಂದ ಜುಲೈ 1ರವರೆಗಿನ ವಾರ ಭವಿಷ್ಯ ನೋಡುವುದಾದರೆ ಈ ವಾರ ಕೆಲವೊಂದು ರಾಶಿಯವರಿಗೆ ಸೂಪರ್ ಆಗಿದೆ, ಇನ್ನು ಕೆಲವು ರಾಶಿಯವರು ಸ್ವಲ್ಪ ಮುನ್ನೆಚ್ಚರಿಕೆವಹಿಸಿ. ಈ ವಾರ ನಿಮ್ಮ ರಾಶಿಗೆ ಹೇಗಿರಲಿದೆ ಎಂದು ನೋಡೋಣ:

ಮೇಷ ರಾಶಿ
ವ್ಯಾಪಾರಸ್ಥರಿಗೆ ಈ ವಾರ ತುಂಬಾ ಲಾಭದಾಯಕವಾಗಿರಲಿದೆ. ವ್ಯಾಪಾರ ವಿಸ್ತರಣೆ ಯೋಜನೆಗಳಿದ್ದರೆ ಅದು ಮುಂದೆಕ್ಕೆ ಹೋಗಲಿದ . ಉದ್ಯೋಗಸ್ಥರಿಗೆ ಈ ವಾರ ಕೆಲಸದ ಹಿರೆ ಅಧಿಕವಿರುವುದರಿಂದ ಒತ್ತಡ ಅಧಿಕವಿರಲಿದೆ. ಹಣದ ವಿಷಯದಲ್ಲಿ, ನೀವು ಯಾವುದೇ ರೀತಿಯ ಆತುರದಿಂದ ದೂರವಿರಬೇಕು. ನೀವು ಬುದ್ಧಿವಂತಿಕೆಯಿಂದ ಖರ್ಚು ಮಾಡುತ್ತೀರಿ. ನಿಮ್ಮ ಕಾರ್ಯಗಳಿಗೆ ಸಂಗಾತಿಯ ಬೆಂಬಲ ಸಿಗಲಿದೆ. ಈ ಅವಧಿಯಲ್ಲಿ ನಿಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ.
ಅದೃಷ್ಟದ ಬಣ್ಣ: ಹಳದಿ
ಅದೃಷ್ಟದ ಸಂಖ್ಯೆ: 12
ಅದೃಷ್ಟದ ದಿನ: ಗುರುವಾರ
ವೃಷಭ ರಾಶಿ
ಈ ವಾರ ನೀವು ಖುಷಿಯಿಂದ ಕಳೆಯುತ್ತೀರಿ. ಬಹಳ ಸಮಯದ ನಂತರ ನಿಮಗಾಗಿ ಸಮಯ ಸಿಗಲಿದೆ. ವಿದೇಶಿ ಕಂಪನಿಗಳಿಗೆ ಸಂಬಂಧಿಸಿದ ವ್ಯಾಪಾರ ಮಾಡುವವರಿಗೆ ಈ ವಾರ ತುಂಬಾ ಶುಭವಾಗಿರಲಿದೆ. ಈ ಅವಧಿಯಲ್ಲಿ ನೀವು ಉನ್ನತ ಸ್ಥಾನವನ್ನು ಪಡೆಯುವ ಬಲವಾದ ಸಾಧ್ಯತೆಯಿದೆ. ಹಣಕಾಸಿನ ಸ್ಥಿತಿಯು ಬಲವಾಗಿ ಉಳಿಯುತ್ತದೆ. ನಾವು ಆರೋಗ್ಯದ ಬಗ್ಗೆ ಹೇಳುವುದಾದರೆ ಏನಾದರೂ ಆರೋಗ್ಯ ಸಮಸ್ಯೆಯಿದ್ದರೆ ಈ ವಾರ ಸುಧಾರಣೆ ಕಂಡು ಬರಲಿದೆ.
ಅದೃಷ್ಟದ ಬಣ್ಣ: ಮರೂನ್
ಅದೃಷ್ಟದ ಸಂಖ್ಯೆ: 9
ಅದೃಷ್ಟದ ದಿನ: ಬುಧವಾರ
ಮಿಥುನ ರಾಶಿ
ವಾರದ ಆರಂಭವು ನಿಮಗೆ ತುಂಬಾ ಅದ್ಭುತವಾಗಿರಲಿದೆ. ಈ ಸಮಯದಲ್ಲಿ ನೀವು ಕೆಲವು ಒಳ್ಳೆಯ ಸುದ್ದಿಗಳನ್ನು ಪಡೆಯುತ್ತೀರಿ. ನೀವು ವಿದೇಶಕ್ಕೆ ಹೋಗಿ ಉದ್ಯೋಗ ಮಾಡಲು ಬಯಸಿದರೆ, ನಿಮ್ಮ ದಾರಿಯಲ್ಲಿ ಬರುವ ಎಲ್ಲಾ ಅಡೆತಡೆಗಳು ನಿವಾರಣೆಯಾಗಲಿದೆ. ವ್ಯಾಪಾರಸ್ಥರಿಗೆ ಮಿಶ್ರ ಲಾಭ ದೊರೆಯಲಿದೆ. ಆದರೆ, ತರಾತುರಿಯಲ್ಲಿ ಯಾವುದೇ ನಿರ್ಧಾರ ತೆಗೆದುಕೊಳ್ಳಬೇಡಿ. ಮನೆಯ ವಾತಾವರಣ ಚೆನ್ನಾಗಿರುತ್ತದೆ. ಈ ವಾರ ಆರೋಗ್ಯವನ್ನು ನಿರ್ಲಕ್ಷ್ಯ ಮಾಡುವ ತಪ್ಪು ಮಾಡಬೇಡಿ.
ಅದೃಷ್ಟದ ಬಣ್ಣ: ಪೀಚ್
ಅದೃಷ್ಟದ ಸಂಖ್ಯೆ: 5
ಅದೃಷ್ಟದ ದಿನ: ಶನಿವಾರ
ಕರ್ಕ ರಾಶಿ
ಈ ವಾರ ನಿಮಗೆ ಏರಿಳಿತಗಳಿಂದ ಕೂಡಿರಲಿದೆ. ಮೊದಮೊದಲು ನಿಮ್ಮ ಕೆಲಸದ ಬಗ್ಗೆ ಹೇಳುವುದಾದರೆ ಹಲವು ಪ್ರಯತ್ನ ಮಾಡಿದರೂ ಯಶಸ್ಸು ಸಿಗದಿದ್ದರೆ ತಾಳ್ಮೆಯಿಂದಿರಿ ನಿಧಾನವಾದರೂ ನಿಮ್ಮ ಪ್ರಯತ್ನಕ್ಕೆ ಉತ್ತಮ ಫಲ ಸಿಗಲಿದೆ. ಹಣದ ಪರಿಸ್ಥಿತಿ ಉತ್ತಮವಾಗಿರಲಿದೆ. ಆದರೆ ಮಿತಿ ಮೀರಿ ಖರ್ಚು ಮಾಡಲು ಹೋಗಬೇಡಿ. ಯಾರ ಬಳಿ ಸಾಲ ತೆಗೆದುಕೊಳ್ಳಬೇಡಿ. ಸಂಗಾತಿಯ ವರ್ತನೆ ನಿಮ್ಮ ಮನಸ್ಸಿಗೆ ನೋವುಂಟು ಮಾಡಬಹುದು. ನೀವು ಬುದ್ಧಿವಂತಿಕೆಯಿಂದ ವರ್ತಿಸಬೇಕು. ನಿಮ್ಮ ಆರೋಗ್ಯ ದುರ್ಬಲವಾಗಿರಲಿದೆ.
ಅದೃಷ್ಟದ ಬಣ್ಣ: ಗುಲಾಬಿ
ಅದೃಷ್ಟದ ಸಂಖ್ಯೆ: 11
ಅದೃಷ್ಟದ ದಿನ: ಸೋಮವಾರ
ಸಿಂಹ ರಾಶಿ
ವಾರದ ಆರಂಭವು ನಿಮಗೆ ಸ್ವಲ್ಪ ನಿಧಾನವಾಗಲಿದೆ. ನಂತರದ ಸಮಯವು ನಿಮಗೆ ಉತ್ತಮವಾಗಿರುತ್ತದೆ. ಕೆಲಸದ ವಿಷಯದಲ್ಲಿ ಈ ವಾರ ನಿಮಗೆ ಕಾರ್ಯನಿರತವಾಗಿರಲಿದೆ. ಅಂತಹ ಪರಿಸ್ಥಿತಿಯಲ್ಲಿ, ನಿಮ್ಮ ಕೆಲಸಕ್ಕೆ ಸಂಬಂಧಿಸಿದ ಎಲ್ಲಾ ಯೋಜನೆಗಳನ್ನು ನೀವು ಮುಂಚಿತವಾಗಿ ಮಾಡಿದರೆ ಇನ್ನೂ ಉತ್ತಮವಾಗಿರುತ್ತದೆ. ಕುಟುಂಬ ಜೀವನದಲ್ಲಿ ಪರಿಸ್ಥಿತಿಗಳು ಒತ್ತಡದಿಂದ ಕೂಡಿರಲಿದೆ. ನಿಮ್ಮ ಆರ್ಥಿಕ ಸ್ಥಿತಿ ಸಾಮಾನ್ಯವಾಗಿರಲಿದೆ, ಆರೋಗ್ಯದ ಕಡೆಗೆ ಗಮನಹರಿಸಿ.
ಅದೃಷ್ಟದ ಬಣ್ಣ: ನೀಲಿ
ಅದೃಷ್ಟದ ಸಂಖ್ಯೆ: 10
ಅದೃಷ್ಟದ ದಿನ: ಶುಕ್ರವಾರ
ಕನ್ಯಾ ರಾಶಿ
ಪ್ರೀತಿಯ ವಿಷಯದಲ್ಲಿ ಈ ವಾರ ತುಂಬಾ ವಿಶೇಷವಾಗಿರಲಿದೆ. ನಿಮ್ಮ ಸಂಗಾತಿಯೊಂದಿಗಿನ ನಿಮ್ಮ ಸಮನ್ವಯವು ಇನ್ನೂ ಉತ್ತಮವಾಗಿರಲಿದೆ. ನೀವು ವಿವಾಹಿತರಾಗಿದ್ದರೆ, ಈ ಅವಧಿಯಲ್ಲಿ ಸಂಗಾತಿ ಜೊತೆ ಭಿನ್ನಾಭಿಪ್ರಾಯ ಉಂಟಾಗಬಹುದು. ಹಣಕಾಸಿನ ಸ್ಥಿತಿ ಉತ್ತಮವಾಗಿರಲಿದೆ. ನೀವು ಉಳಿತಾಯದ ಮೇಲೆ ಹೆಚ್ಚು ಗಮನ ಹರಿಸಲು ಸಾಧ್ಯವಾಗುವುದು. ಕೆಲಸದ ದೃಷ್ಟಿಯಿಂದ ಈ ಸಮಯವು ನಿಮಗೆ ಉತ್ತಮವಾಗಿರುತ್ತದೆ. ಕೆಲಸದ ಜೊತೆಗೆ ನಿಮ್ಮ ಆರೋಗ್ಯದ ಬಗ್ಗೆಯೂ ಕಾಳಜಿ ವಹಿಸಿ.
ಅದೃಷ್ಟದ ಬಣ್ಣ: ಹಸಿರು
ಅದೃಷ್ಟದ ಸಂಖ್ಯೆ: 14
ಅದೃಷ್ಟದ ದಿನ: ಬುಧವಾರ
ತುಲಾ ರಾಶಿ
ತುಲಾ ರಾಶಿಯವರಿಗೆ ಈ ವಾರ ಮಿಶ್ರ ಫಲಿತಾಂಶಗಳನ್ನು ನೀಡಲಿದೆ. ಈ ಅವಧಿಯಲ್ಲಿ ನೀವು ಅನಗತ್ಯ ವಿಷಯಗಳ ಬಗ್ಗೆ ಚಿಂತೆ ಮಾಡಬೇಡಿ. ನಿಮ್ಮ ಕೆಲಸದ ಮೇಲೆ ಕೇಂದ್ರೀಕರಿಸುವಲ್ಲಿ ನೀವು ಬಹಳಷ್ಟು ತೊಂದರೆಗಳನ್ನು ಎದುರಿಸಬೇಕಾಗುವುದು. ನೀವು ಉದ್ಯೋಗದಲ್ಲಿದ್ದರೆ ಮತ್ತು ಯಾವುದೇ ಕೆಲಸಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ಎದುರಿಸುತ್ತಿದ್ದರೆ, ನೀವು ನಿಮ್ಮ ಆಪ್ತರಿಂದ ಸಲಹೆ ಪಡೆಯಬೇಕು. ವ್ಯಾಪಾರಸ್ಥರು ಉತ್ತಮ ಆರ್ಥಿಕ ಲಾಭವನ್ನು ಪಡೆಯಬಹುದು. ಆದರೆ, ಯಾವುದೇ ಹೊಸ ಕೆಲಸವನ್ನು ಪ್ರಾರಂಭಿಸುವ ಮೊದಲು, ನೀವು ಎಚ್ಚರಿಕೆಯಿಂದ ಯೋಚಿಸಬೇಕು.
ಅದೃಷ್ಟದ ಬಣ್ಣ: ಕೆಂಪು
ಅದೃಷ್ಟದ ಸಂಖ್ಯೆ: 7
ಅದೃಷ್ಟದ ದಿನ: ಭಾನುವಾರ
ವೃಶ್ಚಿಕ ರಾಶಿ
ಕೌಟುಂಬಿಕ ಜೀವನ ಸುಖಮಯವಾಗಿರಲಿದೆ. ಹಣಕಾಸಿನ ಪರಿಸ್ಥಿತಿಯಲ್ಲಿ ಸುಧಾರಣೆಯ ಬಲವಾದ ಸಾಧ್ಯತೆಯಿದೆ. ನಿಮ್ಮ ಆರ್ಥಿಕ ಪ್ರಯತ್ನ ಯಶಸ್ವಿಯಾಗಲಿದೆ. ಸರ್ಕಾರಿ ಕೆಲಸ ಮಾಡುವವರಿಗೆ ಈ ದಿನ ತುಂಬಾ ಒಳ್ಳೆಯದಿದೆ. ನಿಮ್ಮ ಆದಾಯವೂ ಹೆಚ್ಚಾಗಲಿದೆ. ಚಿಲ್ಲರೆ ವ್ಯಾಪಾರಸ್ಥರಿಗೆ ಈ ವಾರ ತುಂಬಾ ಅನುಕೂಲಕರವಾಗಿರುತ್ತದೆ. ನೀವು ಹೊಸ ಆರ್ಡರ್ ಕೂಡ ಪಡೆಯಬಹುದು. ನಾವು ಆರೋಗ್ಯದ ಬಗ್ಗೆ ಹೇಳುವುದಾದರೆ ನೀವು ಹಲ್ಲುಗಳಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಹೊಂದಿರಬಹುದು.
ಅದೃಷ್ಟದ ಬಣ್ಣ: ಕೆನೆ
ಅದೃಷ್ಟದ ಸಂಖ್ಯೆ: 16
ಅದೃಷ್ಟದ ದಿನ: ಭಾನುವಾರ
ಧನು ರಾಶಿ
ಕೆಲಸದ ವಿಷಯದಲ್ಲಿ ಈ ವಾರ ನಿಮಗೆ ಬಹಳ ಮುಖ್ಯವಾಗಿರುತ್ತದೆ. ನಿಮ್ಮ ಕೆಲಸದ ಮೇಲೆ ಸಂಪೂರ್ಣವಾಗಿ ಗಮನಹರಿಸಲು ಸಲಹೆ ನೀಡಲಾಗಿದೆ. ನೀವು ಹೆಚ್ಚು ಕಷ್ಟಪಟ್ಟು ಕೆಲಸ ಮಾಡಿದರೆ, ನೀವು ಉತ್ತಮ ಫಲಿತಾಂಶವನ್ನು ಪಡೆಯಬಹುದು. ಹಣದ ವಿಷಯದಲ್ಲಿ ನೋಡುವುದಾದರೆ ಈ ವಾರ ಏರಿಳಿತಗಳಿಂದ ತುಂಬಿರಲಿದೆ. ಹೆಚ್ಚುತ್ತಿರುವ ವೆಚ್ಚಗಳು ನಿಮ್ಮ ತಲೆನೋವನ್ನು ಹೆಚ್ಚಿಸಬಹುದು. ಈ ಅವಧಿಯಲ್ಲಿ ನಿಮ್ಮ ಆರೋಗ್ಯ ಸ್ವಲ್ಪ ದುರ್ಬಲವಾಗಬಹುದು.
ಅದೃಷ್ಟದ ಬಣ್ಣ: ಗುಲಾಬಿ
ಅದೃಷ್ಟದ ಸಂಖ್ಯೆ: 5
ಅದೃಷ್ಟದ ದಿನ: ಮಂಗಳವಾರ
ಮಕರ ರಾಶಿ
ಉದ್ಯೋಗಿಗಳಿಗೆ ಈ ವಾರ ಉತ್ತಮವಾಗಿರಲಿದೆ. ಕೆಲಸದ ನಿಮಿತ್ತ ವಿದೇಶ ಪ್ರಯಾಣ ಮಾಡುವ ಅವಕಾಶ ಸಿಗಲಿದೆ. ಮತ್ತೊಂದೆಡೆ, ಪಾಲುದಾರಿಕೆಯಲ್ಲಿ ವ್ಯಾಪಾರ ಮಾಡುವವರಿಗೆ ಈ ಸಮಯವು ಕಷ್ಟಕರವಾಗಿರುತ್ತದೆ. ಸಂಗಾತಿಯೊಂದಿಗೆ ವಿವಾದ ಉಂಟಾಗಬಹುದು. ಹಣದ ವಿಚಾರದಲ್ಲಿ ಜಾಗರೂಕರಾಗಿರಬೇಕು. ನಿಮ್ಮ ಬಜೆಟ್ ಮೀರಿ ಹೋಗಬೇಡಿ. ಸಂಗಾತಿಗೆ ಆರೋಗ್ಯ ಸಂಬಂಧಿ ಸಮಸ್ಯೆಗಳಿರಬಹುದು. ಈ ಅವಧಿಯಲ್ಲಿ, ನೀವು ಕಾಯಿಲೆಯಿಂದಾಗಿ ಆಸ್ಪತ್ರೆಗೆ ಹೆಚ್ಚು ಖರ್ಚಾಗುವುದು.
ಅದೃಷ್ಟದ ಬಣ್ಣ: ನೇರಳೆ
ಅದೃಷ್ಟದ ಸಂಖ್ಯೆ: 25
ಅದೃಷ್ಟದ ದಿನ: ಶನಿವಾರ
ಕುಂಭ ರಾಶಿ
ಕೆಲಸದ ಬಗ್ಗೆ ಹೇಳುವುದಾದರೆ ಉದ್ಯಮಿಗಳು ನಿರೀಕ್ಷಿತ ಫಲಿತಾಂಶಗಳನ್ನು ಪಡೆಯುತ್ತಾರೆ. ವ್ಯಾಪಾರವು ವಿಸ್ತರಿಸುತ್ತದೆ ಮತ್ತು ಮಾರುಕಟ್ಟೆಯಲ್ಲಿ ನಿಮ್ಮ ಸ್ಥಾನವು ಬಲಗೊಳ್ಳುವುದು. ಉದ್ಯೋಗಿಗಳಿಗೆ ಬದಲಾವಣೆಯ ಸಮಯ ನಡೆಯುತ್ತಿದೆ. ನೀವು ದೊಡ್ಡ ಕಂಪನಿಯಿಂದ ಉದ್ಯೋಗದ ಪ್ರಸ್ತಾಪವನ್ನು ಪಡೆಯಬಹುದು. ನಿಮ್ಮ ಆರ್ಥಿಕ ಸ್ಥಿತಿ ಸಾಮಾನ್ಯಕ್ಕಿಂತ ಉತ್ತಮವಾಗಿರುತ್ತದೆ. ಮನೆಯ ವೆಚ್ಚಗಳು ಸುಲಭವಾಗಿ ಪೂರೈಸಲ್ಪಡುತ್ತವೆ, ಆದರೆ ಉಳಿತಾಯದ ಬಗ್ಗೆಯೂ ಗಮನ ಹರಿಸಲು ಸಲಹೆ ನೀಡಲಾಗಿದೆ. ನಾವು ಆರೋಗ್ಯದ ಬಗ್ಗೆ ಹೇಳುವುದಾದರೆ ಹವಾಮಾನ ಬದಲಾವಣೆಯಿಂದ ಕೆಲವು ಸಮಸ್ಯೆಗಳಿರಬಹುದು.
ಅದೃಷ್ಟದ ಬಣ್ಣ: ಕಿತ್ತಳೆ
ಅದೃಷ್ಟದ ಸಂಖ್ಯೆ: 10
ಅದೃಷ್ಟದ ದಿನ: ಗುರುವಾರ
ಮೀನ ರಾಶಿ
ಕೌಟುಂಬಿಕ ಜೀವನದಲ್ಲಿ ಉದ್ವಿಗ್ನತೆ ಇರಬಹುದು. ಸಣ್ಣ ವಿಷಯಗಳನ್ನು ದೊಡ್ಡದು ಮಾಡಲು ಹೋಗಬೇಡಿ. ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ. ನೀವು ಕೆಲಸಕ್ಕೆ ಸಂಪೂರ್ಣವಾಗಿ ಸಮರ್ಪಿತರಾಗುತ್ತೀರಿ. ಅದು ಉದ್ಯೋಗವಾಗಲಿ ಅಥವಾ ವ್ಯವಹಾರವಾಗಲಿ ಪೂರ್ಣ ಮನಸಿಟ್ಟು ಮಾಡುತ್ತೀರಿ. ವಾರದ ಕೊನೆಯಲ್ಲಿ ಆರೋಗ್ಯದಲ್ಲಿ ಹಠಾತ್ ಕುಸಿತವು ನಿಮ್ಮ ಯೋಜನೆಗಳಿಗೆ ಅಡ್ಡಿಯಾಗಬಹುದು. ನಿಮ್ಮ ಆರೋಗ್ಯದ ಬಗ್ಗೆಯೂ ಕಾಳಜಿ ವಹಿಸಿ.
ಅದೃಷ್ಟದ ಬಣ್ಣ: ಹಸಿರು
ಅದೃಷ್ಟದ ಸಂಖ್ಯೆ: 35
ಅದೃಷ್ಟದ ದಿನ: ಸೋಮವಾರ



Click it and Unblock the Notifications











