ವಾರ ಭವಿಷ್ಯ (ಮಾ.25-ಏ.1): ಈ ವಾರ ಯಾವ ರಾಶಿಯವರಿಗೆ ಅದೃಷ್ಟ, ಯಾರು ಸ್ವಲ್ಪ ಜಾಗ್ರತೆವಹಿಸಬೇಕು ನೋಡಿ

ಈ ವಾರದಲ್ಲಿ ನಿಮಗೆ ಅತ್ಯುತ್ತಮವಾಗಿರಲಿ ಎಂದು ಹೇಳುತ್ತಾ ಜ್ಯೋತಿಷ್ಯದ ಪ್ರಕಾರ ಮಾರ್ಚ್‌ 25ರಿಂದ ಏಪ್ರಿಲ್1ರವರೆಗೆ ಪ್ರತಿಯೊಂದು ರಾಶಿಗಳ ರಾಶಿ ಭವಿಷ್ಯ ಹೇಗಿದೆ ಎಂದು ನೋಡೋಣ ಬನ್ನಿ:

Weekly Rashi Bhavishya for March 25 to April 1, 2023

ಮೇಷ ರಾಶಿ

ಕೆಲಸದ ವಿಷಯದಲ್ಲಿ ನೋಡುವುದಾದರೆ ಈ ವಾರವು ನಿಮಗೆ ತುಂಬಾ ಕಾರ್ಯನಿರತವಾಗಿರುತ್ತದೆ. ಕೆಲಸದ ಒತ್ತಡದ ಕಾರಣ ವೈಯಕ್ತಿಕ ಜೀವನದ ಕಡೆ ಗಮನ ನೀಡದೆ ಇರಬೇಡಿ. ಕುಟುಂಬಕ್ಕೂ ನಿಮ್ಮ ಸಮಯದ ಅವಶ್ಯಕತೆ ಇರುತ್ತದೆ, ವೃತ್ತಿ ಹಾಗೂ ವೈಯಕ್ತಿಕ ಜೀವನದಲ್ಲಿ ಸಮತೋಲನ ಕಾಪಾಡಿ. ಉದ್ಯೋಗದಲ್ಲಿ ಪರಿಸ್ಥಿತಿಗಳು ಅನುಕೂಲಕರವಾಗಿರುತ್ತದೆ.

ವ್ಯಾಪಾರಸ್ಥರಿಗೆ ಈ ವಾರ ಅನುಕೂಲಕರವಾಗಿರುತ್ತದೆ. ವಾರದ ಕೊನೆಯಲ್ಲಿ, ನೀವು ಪ್ರಮುಖ ವ್ಯವಹಾರ ನಿರ್ಧಾರವನ್ನು ಸಹ ತೆಗೆದುಕೊಳ್ಳುತ್ತೀರಿ. ಹಣದ ವಿಷಯದಲ್ಲಿ ಈ ವಾರ ಮಿಶ್ರಫಲ. ಆರೋಗ್ಯ ಚೆನ್ನಾಗಿರಲಿದೆ. ಬಜೆಟ್‌ ಮೀರಿ ಖರ್ಚು ಮಾಡಲು ಹೋಗಬೇಡಿ.

ಅದೃಷ್ಟದ ಬಣ್ಣ: ಆಕಾಶ ನೀಲಿ
ಅದೃಷ್ಟದ ಸಂಖ್ಯೆ: 11
ಅದೃಷ್ಟದ ದಿನ: ಬುಧವಾರ

ವೃಷಭ ರಾಶಿ

ವೈವಾಹಿಕ ಜೀವನದಲ್ಲಿ ಖುಷಿ ಇರಲಿದೆ. ನಿಮ್ಮಿಬ್ಬರ ಸಂಬಂಧ ಮತ್ತಷ್ಟು ಮತ್ತಷ್ಟು ಗಟ್ಟಿಯಾಗಲಾಗಿದೆ. ನಿಮ್ಮ ಆರ್ಥಿಕ ಸ್ಥಿತಿಯನ್ನು ಸುಧಾರಿಸಲು ಈ ಅವಧಿಯಲ್ಲಿ ನೀವು ಕೆಲವು ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಬಹುದು. ಈ ಸಮಯದಲ್ಲಿ ಸಾಲ ತೆಗೆದುಕೊಳ್ಳಬೇಡಿ. ಉದ್ಯಮಿಗಳು ಹೂಡಿಕೆ ಮಾಡಲು ಉತ್ತಮ ಅವಕಾಶವನ್ನು ಪಡೆಯಬಹುದು. ವಾರದ ಕೊನೆಯಲ್ಲಿ ದೀರ್ಘ ಪ್ರಯಾಣ ಮಾಡಬಹುದು. ಉದ್ಯೋಗಸ್ಥರು ತಮ್ಮ ಬಡ್ತಿಗಾಗಿ ಬಹಳ ದಿನಗಳಿಂದ ಕಾಯುತ್ತಿದ್ದರೆ ಇನ್ನು ಸ್ವಲ್ಪ ಕೂಡ ಕಾಯಬೇಕಾಗುತ್ತದೆ. ಆರೋಗ್ಯದ ದೃಷ್ಟಿಯಿಂದ ಈ ವಾರ ನಿಮಗೆ ಉತ್ತಮವಾಗಿರಲಿದೆ.

ಅದೃಷ್ಟದ ದಿನ: ನೀಲಿ
ಅದೃಷ್ಟದ ಸಂಖ್ಯೆ: 5
ಅದೃಷ್ಟದ ದಿನ: ಶುಕ್ರವಾರ

ಮಿಥುನ ರಾಶಿ

ಈ ವಾರದ ಆರಂಭದಲ್ಲಿ ನಿಮ್ಮ ಕೆಲಸಗಳು ನಿಧಾನವಾಗಬಹುದು. ಈ ಸಮಯದಲ್ಲಿ ಆರೋಗ್ಯದಲ್ಲಿ ಕೆಲ ಸಮಸ್ಯೆಗಳು ಕಂಡು ಬರಬಹುದು. ಕಳಪೆ ಆರೋಗ್ಯವು ನಿಮ್ಮ ಕೆಲಸದ ಮೇಲೆ ಪರಿಣಾಮ ಬೀರಲಿದೆ. ನಿಮ್ಮ ಕೆಲವೊಂದು ಕೆಲಸಗಳು ಅಪೂರ್ಣವಾಗಿರಬಹುದು. ಆದರೆ ನೀವು ಚಿಂತಿಸಬೇಕಾಗಿಲ್ಲ. ಆರ್ಥಿಕ ಸ್ಥಿತಿಯಲ್ಲಿ ಸುಧಾರಣೆಯಾಗುವ ಸಾಧ್ಯತೆ ಇದೆ.

ನೀವು ಹೊಸ ಆದಾಯದ ಮೂಲವನ್ನು ಪಡೆಯುವಿರಿ. ವೈವಾಹಿಕ ಜೀವನದಲ್ಲಿ ಚಿಕ್ಕ ವಿಷಯಕ್ಕೆ ಕೋಪಗೊಳ್ಳುವುದನ್ನು ತಪ್ಪಿಸಿ. ವಾರದ ಕೊನೆಯಲ್ಲಿ, ನೀವು ಕೆಲವು ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಅವಕಾಶವನ್ನು ಪಡೆಯುತ್ತೀರಿ. ಮಾನಸಿಕವಾಗಿ, ಈ ಸಮಯದಲ್ಲಿ ನೀವು ಉತ್ತಮವಾಗುತ್ತೀರಿ.

ಅದೃಷ್ಟದ ಬಣ್ಣ: ಕೆಂಪು
ಅದೃಷ್ಟದ ಸಂಖ್ಯೆ: 2
ಅದೃಷ್ಟದ ದಿನ: ಸೋಮವಾರ

ಕರ್ಕ ರಾಶಿ

ಈ ವಾರ ಕರ್ಕ ರಾಶಿಯ ವಿದ್ಯಾರ್ಥಿಗಳಿಗೆ ಸ್ವಲ್ಪ ಸವಾಲುಗಳಿರಬಹುದು. ಅಧ್ಯಯನದ ಕಡೆಗೆ ಗಮನಹರಿಸಿ. ಈ ಸಮಯವು ನಿಮಗೆ ಬಹಳ ಅಮೂಲ್ಯವಾಗಿದೆ. ಹಣದ ವಿಷಯದಲ್ಲಿ ಯಾವುದೇ ರೀತಿಯ ಆತುರಪಡಬೇಡಿ. ಹಣವನ್ನು ನೋಡಿಕೊಮಡು ಖರ್ಚು ಮಾಡಿ. ಉದ್ಯೋಗಿಗಳಿಗೆ ಈ ವಾರ ಉತ್ತಮವಾಗಿರುತ್ತದೆ. ಈ ಸಮಯದಲ್ಲಿ ನಿಮ್ಮ ಬಾಕಿಯಿರುವ ಕೆಲಸಗಳು ಪೂರ್ಣಗೊಳ್ಳುತ್ತವೆ .

ಈ ಸಮಯದಲ್ಲಿ ವೈವಾಹಿಕ ಜೀವನದಲ್ಲಿ ಖುಷಿ ಇರಲಿದೆ. ಆರೋಗ್ಯದ ದೃಷ್ಟಿಯಿಂದ ಈ ದಿನ ಒಳ್ಳೆಯದು.

ಅದೃಷ್ಟದ ಬಣ್ಣ: ಕಂದು
ಅದೃಷ್ಟದ ಸಂಖ್ಯೆ: 10
ಅದೃಷ್ಟದ ದಿನ: ಮಂಗಳವಾರ

ಸಿಂಹ ರಾಶಿ

ವಿವಾಹಿತರಿಗೆ ಈ ವಾರ ಒಳ್ಳೆಯದು. ಈ ಸಮಯವು ತುಂಬಾ ಆಹ್ಲಾದಕರವಾಗಿರುತ್ತದೆ, ಆರ್ಥಿಕ ಪರಿಸ್ಥಿತಿಯಲ್ಲಿ ಸುಧಾರಣೆಯ ಸಾಧ್ಯತೆ ಇದೆ. ನೀವು ತುಂಬಾ ಸಮಯದಿಂದ ನಿಮ್ಮ ಆದಾಯ ಹೆಚ್ಚಿಸಲು ಪ್ರಯತ್ನಿಸುತ್ತಿದ್ದರೆ ಈ ವಾರ ನೀವು ನಿಮ್ಮ ಪ್ರಯತ್ನಗಳಲ್ಲಿ ಯಶಸ್ಸನ್ನು ಪಡೆಯಬಹುದು. ಉದ್ಯೋಗಿಗಳ ಜವಾಬ್ದಾರಿ ಹೆಚ್ಚಾಗಲಿದೆ. ವ್ಯಾಪಾರಿಗಳು ಆರ್ಥಿಕ ಲಾಭ ಪಡೆಯುವಿರಿ. ನಿಮ್ಮ ಆರೋಗ್ಯಕ್ಕೆ ಸಂಬಂಧಿಸಿದಂತೆ, ಅನಗತ್ಯ ಚಿಂತೆಗಳಿಂದ ದೂರವಿರಲು ಸಲಹೆ ನೀಡಲಾಗಿದೆ.

ಅದೃಷ್ಟದ ಬಣ್ಣ: ಗುಲಾಬಿ
ಅದೃಷ್ಟದ ಸಂಖ್ಯೆ: 27
ಅದೃಷ್ಟದ ದಿನ: ಬುಧವಾರ

ಕನ್ಯಾ ರಾಶಿ

ಉದ್ಯೋಗಸ್ಥರಿಗೆ ಈ ವಾರ ಏರಿಳಿತದಿಂದ ಕೂಡಿರುತ್ತದೆ. ಈ ಸಮಯ ನಕಾರಾತ್ಮಕ ಚಿಂತೆಯಿಂದ ದೂರವಿರಿ. ಆತುರದಿಂದ ನಿರ್ಧಾರ ತೆಗೆದುಕೊಳ್ಳಬೇಡಿ. ಷೇರು ಮಾರುಕಟ್ಟೆಯಲ್ಲಿ ಕೆಲಸ ಮಾಡುವವರಿಗೆ ಈ ವಾರ ತುಂಬಾ ಲಾಭದಾಯಕವಾಗಿರುತ್ತದೆ. ನಿಮ್ಮ ಎಲ್ಲಾ ನಿರ್ಧಾರಗಳ ಉತ್ತಮ ಫಲಿತಾಂಶಗಳನ್ನು ಪಡೆಯುವ ಸಾಧ್ಯತೆಯಿದೆ. ಈ ವಾರ ಹಣದ ವಿಷಯದಲ್ಲಿ ತುಂಬಾ ದುಬಾರಿಯಾಗಲಿದೆ. ಆರೋಗ್ಯದ ಬಗ್ಗೆ ಜಾಗ್ರತೆವಹಿಸಿ.

ಅದೃಷ್ಟದ ಬಣ್ಣ: ಕೆನೆ
ಅದೃಷ್ಟದ ಸಂಖ್ಯೆ: 2
ಅದೃಷ್ಟದ ದಿನ: ಸೋಮವಾರ

ತುಲಾ ರಾಶಿ

ತುಲಾ ರಾಶಿಯವರಿಗೆ ವಾರದ ಆರಂಭ ಉತ್ತಮವಾಗಿರುತ್ತದೆ. ನೀವು ಹಣಕಾಸಿನ ಲಾಭವನ್ನು ಪಡೆಯುತ್ತೀರಿ. ಈ ಅವಧಿಯಲ್ಲಿ, ನೀವು ಹಣಕ್ಕೆ ಸಂಬಂಧಿಸಿದ ಚಿಂತೆಗಳಿಂದ ಮುಕ್ತರಾಗಬಹುದು. ಉದ್ಯೋಗಿಗಳು ಈ ಅವಧಿಯಲ್ಲಿ ಮಾಡುವ ಪ್ರಯಾಣ ಲಾಭದಾಯಕವಾಗಿರುತ್ತದೆ. ನೀವು ಉದ್ಯಮಿಯಾಗಿದ್ದರೆ ಮತ್ತು ನಿಮ್ಮ ವ್ಯವಹಾರವನ್ನು ಮುಂದಕ್ಕೆ ಕೊಂಡೊಯ್ಯಲು ಯೋಜಿಸುತ್ತಿದ್ದರೆ, ನಿಮ್ಮ ಯೋಜನೆಗಳಲ್ಲಿ ಕೆಲವು ಅಡೆತಡೆಗಳು ಇರಬಹುದು, ಈ ಅವಧಿಯಲ್ಲಿ ತಾಳ್ಮೆಯಿಂದ ವರ್ತಿಸಿ. ಕೌಟುಂಬಿಕ ಜೀವನದಲ್ಲಿ ಸಂತೋಷ ಮತ್ತು ಶಾಂತಿ ಇರುತ್ತದೆ. ಆರೋಗ್ಯದ ಕಡೆ ಗಮನಹರಿಸಿ.

ಅದೃಷ್ಟದ ಬಣ್ಣ: ಕಿತ್ತಳೆ
ಅದೃಷ್ಟದ ಸಂಖ್ಯೆ: 25
ಅದೃಷ್ಟದ ದಿನ: ಗುರುವಾರ

ವೃಶ್ಚಿಕ ರಾಶಿ

ಪ್ರೇಮಿಗಳಿಗೆ ಈ ಸಮಯ ಅನುಕೂಲಕರವಲ್ಲ. ಈ ವಾರ ನೀವು ಹಣಕಾಸಿನ ವಿಷಯಗಳಲ್ಲಿ ಉತ್ತಮ ಫಲಿತಾಂಶಗಳನ್ನು ಪಡೆಯಬಹುದು. ಈ ಸಮಯದಲ್ಲಿ ಹಣದ ಸ್ಥಿತಿ ಚೆನ್ನಾಗಿರಲಿದೆ. ಉದ್ಯೋಗಿಗಳಿಗೆ ತುಂಬಾ ಕಾರ್ಯನಿರತವಾಗಿರುತ್ತದೆ. ಆದರೆ ಅದರ ನಂತರ ಸಮಯವು ಉತ್ತಮವಾಗಿರುತ್ತದೆ. ನೀವು ಉದ್ಯಮಿಯಾಗಿದ್ದರೆ, ನೀವು ಕೆಲವು ಅಪಾಯಕಾರಿ ನಿರ್ಧಾರಗಳನ್ನು ತೆಗೆಯದಿರುವುದು ಒಳ್ಳೆಯದು. ಆರೋಗ್ಯ ಸಮಸ್ಯೆ ಹೊಂದಿದ್ದರೆ ನಿರ್ಲಕ್ಷ್ಯ ಮಾಡಬೇಡಿ.

ಅದೃಷ್ಟದ ಬಣ್ಣ: ಹಳದಿ
ಅದೃಷ್ಟದ ಸಂಖ್ಯೆ: 16
ಅದೃಷ್ಟದ ದಿನ: ಮಂಗಳವಾರ

ಧನು ರಾಶಿ

ಈ ವಾರ ಅಧಿಕ ಒತ್ತಡ ಇರಲಿದೆ. ಕೆಲಸದ ಚಿಂತೆ ಹೆಚ್ಚಬಹುದು. ನೀವು ವಿದೇಶಕ್ಕೆ ಹೋಗಿ ಉದ್ಯೋಗ ಮಾಡಲು ಬಯಸಿದರೆ ಮತ್ತು ನಿಮ್ಮ ವೀಸಾ ಇತ್ಯಾದಿಗಳಲ್ಲಿ ಸಮಸ್ಯೆ ಇದ್ದರೆ, ನಿಮ್ಮ ಸಮಸ್ಯೆಯನ್ನು ಶೀಘ್ರದಲ್ಲೇ ಪರಿಹರಿಸಬಹುದು. ಹಣದ ವಿಷಯದಲ್ಲಿ ಈ ವಾರ ನಿಮಗೆ ಉತ್ತಮವಾಗಿರುವುದಿಲ್ಲ. ತುಂಬಾ ಖರ್ಚುಗಳಿರಬಹುದು. ಕುಟುಂಬ ಜೀವನದಲ್ಲಿ ಪರಿಸ್ಥಿತಿಗಳು ಪ್ರತಿಕೂಲವಾಗಿ ಕಾಣುತ್ತಿವೆ. ನಿಮ್ಮ ಕುಟುಂಬದ ಸದಸ್ಯರೊಂದಿಗೆ ನೀವು ಸೈದ್ಧಾಂತಿಕ ಭಿನ್ನಾಭಿಪ್ರಾಯಗಳನ್ನು ಹೊಂದಿರಬಹುದು. ಈ ಸಮಯದಲ್ಲಿ, ನಿಮ್ಮ ಸಂಗಾತಿಯ ನಡವಳಿಕೆ ಬೇಸರವನ್ನುಂಟು ಮಾಡಬಹುದು. ಹೆಚ್ಚುತ್ತಿರುವ ಕೆಲಸದ ಹೊರೆ ಮತ್ತು ಆತಂಕದಿಂದಾಗಿ, ಈ ಅವಧಿಯಲ್ಲಿ ನಿಮ್ಮ ಆರೋಗ್ಯದ ಮೇಲೆ ಪರಿಣಾಮ ಬೀರಬಹುದು.

ಅದೃಷ್ಟದ ಬಣ್ಣ: ನೀಲಿ
ಅದೃಷ್ಟದ ಸಂಖ್ಯೆ: 14
ಅದೃಷ್ಟದ ದಿನ: ಶುಕ್ರವಾರ

ಮಕರ ರಾಶಿ

ಉದ್ಯೋಗಸ್ಥರಿಗೆ ಈ ವಾರ ತುಂಬಾ ಶುಭಕರ. ಈ ವಾರ ಕೆಲಸದಲ್ಲಿ ಪರಿಸ್ಥಿತಿಗಳು ಅನುಕೂಲಕರವಾಗಿರುತ್ತದೆ. ನಿಮ್ಮ ಕಠಿಣ ಶ್ರಮಕ್ಕೆ ತಕ್ಕ ಫಲ ಸಿಗಲಿದೆ. ಲಾಭ ಗಳಿಸಲು ತಪ್ಪು ಮಾರ್ಗಗಳನ್ನು ಅನುಸರಿಸುವುದನ್ನು ತಪ್ಪಿಸಲು ಉದ್ಯಮಿಗಳಿಗೆ ಸಲಹೆ ನೀಡಲಾಗಿದೆ, ಇಲ್ಲದಿದ್ದರೆ ನೀವು ದೊಡ್ಡ ತೊಂದರೆಗೆ ಒಳಗಾಗಬಹುದು. ನಿಮ್ಮ ಆರ್ಥಿಕ ಸ್ಥಿತಿ ಸಾಮಾನ್ಯಕ್ಕಿಂತ ಉತ್ತಮವಾಗಿರುತ್ತದೆ. ನೀವು ಉಳಿತಾಯದ ಬಗ್ಗೆ ಹೆಚ್ಚು ಗಮನ ಹರಿಸಿದರೆ, ಶೀಘ್ರದಲ್ಲೇ ಹಣದ ಸಮಸ್ಯೆಯಿಂದ ಹೊರಬರಬಹುದು. ಸಂಗಾತಿಯ ನಡವಳಿಕೆಯಲ್ಲಿ ಸ್ವಲ್ಪ ಬದಲಾವಣೆ ಕಂಡುಬರುವುದು. ನಿಮಗೆ ಅಧಿಕ ರಕ್ತದೊತ್ತಡ ಅಥವಾ ಮಧುಮೇಹ ಇದ್ದರೆ, ನಿಮ್ಮ ಆರೋಗ್ಯದ ಕಡೆ ಗಮನಹರಿಸಿ.

ಅದೃಷ್ಟದ ಬಣ್ಣ: ನೇರಳೆ
ಅದೃಷ್ಟದ ಸಂಖ್ಯೆ: 36
ಅದೃಷ್ಟದ ದಿನ: ಶನಿವಾರ

ಕುಂಭ ರಾಶಿ

ಕುಟುಂಬ ಜೀವನದಲ್ಲಿ ಪರಿಸ್ಥಿತಿಗಳು ಅನುಕೂಲಕರವಾಗಿರುತ್ತದೆ. ಮನೆಯಲ್ಲಿನ ಶೀಘ್ರದಲ್ಲಿ ಶುಭಫಲ ದೊರೆಯಲಿದೆ. ಕೆಲಸ-ಸಂಬಂಧಿತ ಪ್ರಯತ್ನಗಳಲ್ಲಿ ಯಶಸ್ಸು ಇರುತ್ತದೆ. ನೀವು ಉದ್ಯೋಗದೊಂದಿಗೆ ನಿಮ್ಮ ಸ್ವಂತ ವ್ಯವಹಾರವನ್ನು ಮಾಡಲು ಬಯಸಿದರೆ, ನೀವು ಶೀಘ್ರದಲ್ಲೇ ಯಶಸ್ಸನ್ನು ಪಡೆಯುವ ಸಾಧ್ಯತೆಯಿದೆ. ಹಣದ ವಿಷಯದಲ್ಲಿ, ಈ ಏಳು ದಿನಗಳು ನಿಮಗೆ ಬಹಳ ಮುಖ್ಯವಾಗಿರುತ್ತದೆ. ನಿಮ್ಮ ಆದಾಯ ಹೆಚ್ಚಾಗಬಹುದು. ಆರೋಗ್ಯ ಉತ್ತಮವಾಗಿರುತ್ತದೆ.

ಅದೃಷ್ಟದ ಬಣ್ಣ: ಪೀಚ್
ಅದೃಷ್ಟದ ಸಂಖ್ಯೆ: 4
ಅದೃಷ್ಟದ ದಿನ: ಗುರುವಾರ

ಮೀನ ರಾಶಿ

ಈ ವಾರ ನಿಮಗೆ ತುಂಬಾ ಕಾರ್ಯನಿರತವಾಗಿರುತ್ತದೆ. ಈ ಸಮಯದಲ್ಲಿ ನೀವು ಕೆಲಸಕ್ಕೆ ಸಂಬಂಧಿಸಿದ ಅನೇಕ ಸಣ್ಣ ಪ್ರಯಾಣಗಳನ್ನು ಮಾಡಬೇಕಾಗಬಹುದು. ನೀವು ಆಮದು-ರಫ್ತು ವ್ಯವಹಾರವನ್ನು ಮಾಡುತ್ತಿದ್ದರೆ, ಈ ವಾರ ನಿಮ್ಮ ಕೆಲಸದಲ್ಲಿ ಧನಾತ್ಮಕ ಬದಲಾವಣೆಗಳನ್ನು ಕಾಣುತ್ತೀರಿ. ಉದ್ಯೋಗಿಗಳ ಕಠಿಣ ಪರಿಶ್ರಮ ಯಶಸ್ವಿಯಾಗುತ್ತದೆ, ನೀವು ಬಡ್ತಿ ಪಡೆಯಬಹುದು. ಸರ್ಕಾರಿ ಉದ್ಯೋಗಗಳಿಗೆ ತಯಾರಿ ನಡೆಸುತ್ತಿರುವವರು ಹೆಚ್ಚು ಶ್ರಮವಹಿಸುವಂತೆ ಸಲಹೆ ನೀಡಲಾಗಿದೆ. ಈ ವಾರ ಹಣದ ವಿಷಯದಲ್ಲಿ ಏರಿಳಿತದಿಂದ ಕೂಡಿರುತ್ತದೆ. ಹಣದ ಖರ್ಚು ಹೆಚ್ಚಾಗಬಹುದು. ಮನೆಯಲ್ಲಿ ಪರಿಸ್ಥಿತಿಯನ್ನು ತಾಳ್ಮೆಯಿಂದ ನಿಭಾಯಿಸಿ. ಈ ಅವಧಿಯಲ್ಲಿ ಆರೋಗ್ಯದ ಕಡೆ ಗಮನಹರಿಸಿ.

ಅದೃಷ್ಟದ ಬಣ್ಣ: ಹಸಿರು
ಅದೃಷ್ಟದ ಸಂಖ್ಯೆ: 19
ಅದೃಷ್ಟದ ದಿನ: ಶನಿವಾರ

English summary

Weekly Rashi Bhavishya for March 25 to April 1, 2023

Weekly Horoscope in Kannada - Read horoscope for March 25 to April 1 predictions for all 12 zodiac signs and know about love, finance, health, and career.
Story first published: Sunday, March 26, 2023, 9:30 [IST]
X
Desktop Bottom Promotion