ವಾರ ಭವಿಷ್ಯ ಅಕ್ಟೋಬರ್ 1-7): ಈ ವಾರ ನಿಮ್ಮ ರಾಶಿಫಲ ಹೇಗಿದೆ?

ವೈದಿಕ ಶಾಸ್ತ್ರದ ಪ್ರಕಾರ ಅಕ್ಟೋಬರ್ ತಿಂಗಳ ಮೊದಲ ವಾರ ದ್ವಾದಶ ರಾಶಿಗಳಿಗೆ ಹೇಗಿರಲಿದೆ ಎಂದು ನೋಡೋಣ ಬನ್ನಿ:
ಮೇಷ ರಾಶಿ
ನಿಮ್ಮ ವೈಯಕ್ತಿಕ, ವೃತ್ತಿಪರ ಜೀವನದ ನಡುವೆ ನೀವು ಸಮತೋಲನವನ್ನು ಕಾಯ್ದುಕೊಳ್ಳಲು ಸಾಧ್ಯವಾಗುವುದು. ಕೆಲಸದ ಜೊತೆಗೆ ನಿಮ್ಮ ಪ್ರೀತಿಪಾತ್ರರಿಗೆ ಸಾಕಷ್ಟು ಸಮಯವನ್ನು ನೀಡುತ್ತೀರಿ. ತುಂಬಾ ಸಮಯದಿಂದ ಬಾಕಿಯುಳಿದಿರುವ ಕೆಲಸವನ್ನು ಪೂರ್ಣಗೊಳಿಸಲು ಸಾಧ್ಯವಾಗುವುದು. ಈ ವಾರ ಆರ್ಥಿಕ ಸ್ಥಿತಿ ಚೆನ್ನಾಗಿರಲಿದೆ. ನಿಮ್ಮ ನಿರ್ಧಾರಗಳನ್ನು ನೀವು ಬುದ್ಧಿವಂತಿಕೆಯಿಂದ ತೆಗೆದುಕೊಳ್ಳುವುದರಿಂದ ಈ ವಾರ ಅನುಕೂಲಕರವಾಗಿದೆ. ನಿಮ್ಮ ಕಠಿಣ ಪರಿಶ್ರಮಕ್ಕೆ ಉತ್ತಮ ಪ್ರತಿಫಲ ಸಿಗಲಿದೆ. ಆರೋಗ್ಯದ ದೃಷ್ಟಿಯಿಂದ ಈ ವಾರ ನಿಮಗೆ ಉತ್ತಮವಾಗಿರುತ್ತದೆ.
ಅದೃಷ್ಟದ ಬಣ್ಣ: ಮರೂನ್
ಅದೃಷ್ಟದ ಸಂಖ್ಯೆ: 12
ಶುಭ ದಿನ: ಶುಕ್ರವಾರ

weekly horoscope

ವೃಷಭ ರಾಶಿ
ಕೆಲಸದ ದೃಷ್ಟಿಯಿಂದ ಈ ವಾರ ನಿಮಗೆ ಮಿಶ್ರಫಲ. ನಿಮ್ಮ ಎಲ್ಲಾ ಕೆಲಸಗಳು ಯೋಜನೆಯಂತೆಯೇ ಪೂರ್ಣಗೊಳ್ಳಲಿದೆ. ಆದರೆ ನಿಮ್ಮ ವಿರೋಧಿಗಳಿಂದ ಅಡೆತಡೆ ಉಂಟಾಗಬಹುದು, ಆದ್ದರಿಂದ ಜಾಗ್ರತೆವಹಿಸಿ. ನಿಮ್ಮ ಸಂಬಂಧ ಗಟ್ಟಿಯಾಗಲಿದೆ. ನಿಮ್ಮ ಆರ್ಥಿಕ ಸ್ಥಿತಿ ಉತ್ತಮವಾಗಿರುತ್ತದೆ. ನಿಮ್ಮ ಬಜೆಟ್‌ಗೆ ತಕ್ಕಂತೆ ಹಣ ಖರ್ಚು ಮಾಡಿದರೆ ಒಳ್ಳೆಯದು. ಆರೋಗ್ಯ ಸಮಸ್ಯೆ ಹೊಂದಿದ್ದರೆ ತುಂಬಾನೇ ಜಾಗ್ರತೆವಹಿಸಿ.
ಅದೃಷ್ಟದ ಬಣ್ಣ: ಕೆಂಪು
ಅದೃಷ್ಟದ ಸಂಖ್ಯೆ: 1
ಶುಭ ದಿನ: ಭಾನುವಾರ

ಮಿಥುನ ರಾಶಿ
ಕೆಲಸದ ದೃಷ್ಟಿಯಿಂದ ನೋಡುವುದಾದರೆ ಈ ವಾರ ತುಂಬಾನೇ ಕಾರ್ಯನಿರತವಾಗಿರಲಿದೆ.ಈ ಸಮಯದಲ್ಲಿ ನೀವು ಕೆಲಸದ ಜೊತೆಗೆ ನಿಮ್ಮ ನಡವಳಿಕೆ ಕಡೆಗೆ ಗಮನಹರಿಸಿ. ನಿಮ್ಮ ಸಂಬಂಧ ತುಂಬಾ ಚೆನ್ನಾಗಿರಲಿದೆ. ವಾರದ ಕೊನೆಯಲ್ಲಿ ನೀವು ಆರ್ಥಿಕ ಲಾಭವನ್ನು ಪಡೆಯಬಹುದು. ಈ ಅವಧಿಯಲ್ಲಿ, ನಿಮ್ಮ ಆರ್ಥಿಕ ಪರಿಸ್ಥಿತಿಯಲ್ಲಿ ಸುಧಾರಣೆಯ ಸಾಧ್ಯತೆಯಿದೆ. ಆರೋಗ್ಯದ ವಿಷಯದಲ್ಲಿ ಈ ವಾರ ಸರಾಸರಿ ಇರಲಿದೆ.
ಅದೃಷ್ಟದ ಬಣ್ಣ: ಕೆನೆ
ಅದೃಷ್ಟದ ಸಂಖ್ಯೆ: 42
ಶುಭ ದಿನ: ಬುಧವಾರ

ಕರ್ಕ ರಾಶಿ
ಈ ವಾರ ಉದ್ಯೋಗದಲ್ಲಿ, ವ್ಯವಹಾರದಲ್ಲಿ ತುಂಬಾನೇ ಚೆನ್ನಾಗಿರಲಿದೆ. ನೀವು ಕಚೇರಿಯಲ್ಲಿ ಕೆಲವು ಪ್ರಮುಖ ಯೋಜನೆಯ ಜವಾಬ್ದಾರಿಯನ್ನು ಪಡೆಯಬಹುದು. ಅಂತಹ ಪರಿಸ್ಥಿತಿಯಲ್ಲಿ, ನಿಮ್ಮ ಆತ್ಮವಿಶ್ವಾಸವು ಹೆಚ್ಚಾಗುತ್ತದೆ. ಕೆಲಸದಲ್ಲಿ ಮೇಲಾಧಿಕಾರಿಗಳ ಬೆಂಬಲ ಸಿಗಲಿದೆ. ಆನ್‌ಲೈನ್ ವ್ಯಾಪಾರ ಮಾಡುವವರಿಗೆ ಈ ವಾರ ತುಂಬಾ ಪ್ರಯೋಜನಕಾರಿಯಾಗಲಿದೆ. ಕುಟುಂಬ ಸದಸ್ಯರೊಂದಿಗೆ ಸಂಬಂಧದಲ್ಲಿ ಸಾಮರಸ್ಯ ಇರಲಿದೆ. ನಿಮ್ಮ ಆರ್ರತಿಕ ಸ್ಥಿತಿ ಚೆನ್ನಾಗಿರಲಿದೆ. ನಿಮ್ಮ ಆಹಾರಕ್ರಮದ ಕಡೆಗೆ ಗಮನಹರಿಸಿ.
ಅದೃಷ್ಟದ ಬಣ್ಣ: ಗುಲಾಬಿ
ಅದೃಷ್ಟದ ಸಂಖ್ಯೆ: 7
ಶುಭ ದಿನ: ಮಂಗಳವಾರ

ಸಿಂಹ ರಾಶಿ
ಮನೆಯ ವಾತಾವರಣ ಖುಷಿಯಿಂದ ಕೂಡಿರಲಿದೆ. ನಿಮ್ಮ ಸಂಗಾತಿಯೊಂದಿಗಿನ ನಿಮ್ಮ ಸಂಬಂಧವು ಬಲಗೊಳ್ಳುತ್ತದೆ. ಹಣಕ್ಕೆ ಸಂಬಂಧಿಸಿದ ಸಮಸ್ಯೆಗಳು ಬಗೆಹರಿಯಲಿದೆ, ಆದರೆ ಹಣಕಾಸಿನ ನಿರ್ಧಾರಗಳನ್ನು ತುಂಬಾ ಎಚ್ಚರಿಕೆಯಿಂದ ತೆಗೆದುಕೊಳ್ಳಿ. ವಾರದ ಮಧ್ಯದಲ್ಲಿ ನೀವು ಕೆಲಸಕ್ಕಾಗಿ ಪ್ರಯಾಣಿಸಬೇಕಾಗಬಹುದು. ನಿಮ್ಮ ಈ ಪಯಣ ಬಹುಮುಖ್ಯವಾಗಲಿದೆ. ನಿರುದ್ಯೋಗಿಗಳಿಗೆ ಉತ್ತಮ ಕೆಲಸದ ಆಫರ್ ಸಿಗಲಿದೆ. ಆರೋಗ್ಯದ ದೃಷ್ಟಿಯಿಂದ ನೋಡುವುದಾದರೆ ಈ ಸಮಯ ಉತ್ತಮವಾಗಿರಲಿದೆ.
ಅದೃಷ್ಟದ ಬಣ್ಣ: ನೀಲಿ
ಅದೃಷ್ಟದ ಸಂಖ್ಯೆ: 19
ಶುಭ ದಿನ: ಶನಿವಾರ

ಕನ್ಯಾ ರಾಶಿ
ಈ ಸಮಯದಲ್ಲಿ ನೀವು ತುಂಬಾ ಜಾಗ್ರತೆಯಿಂದಿರಬೇಕು, ಏಕೆಂದರೆ ಕೆಲವರು ತಪ್ಪು ಮಾಹಿತಿ ನೀಡಿ ನಿಮ್ಮನ್ನು ದಾರಿ ತಪ್ಪಿಸಲು ಪ್ರಯತ್ನಿಸಬಹುದು . ನೀವು ಕೆಲಸದ ಕಡೆಗೆ ಹೆಚ್ಚಿನ ಗಮನಹರಿಸಬೇಕು. ಹಣದ ವಿಷಯದಲ್ಲಿ ಈ ವಾರ ದುಬಾರಿಯಾಗಲಿದೆ. ನಿಮ್ಮ ಖರ್ಚು ಹೆಚ್ಚಾಗಬಹುದು. ಕುಟುಂಬ ಜೀವನದಲ್ಲಿ ಪರಿಸ್ಥಿತಿಗಳು ಖುಷಿಯಿಂದ ಕೂಡಿರಲಿದೆ. ತಂದೆಯ ಆರೋಗ್ಯದಲ್ಲಿ ಉತ್ತಮ ಸುಧಾರಣೆ ಕಂಡುಬರಲಿದೆ.
ಅದೃಷ್ಟದ ಬಣ್ಣ: ಹಸಿರು
ಅದೃಷ್ಟದ ಸಂಖ್ಯೆ: 20
ಶುಭ ದಿನ: ಸೋಮವಾರ

ತುಲಾ ರಾಶಿ
ಆರೋಗ್ಯದ ದೃಷ್ಟಿಯಿಂದ ಈ ವಾರ ಉತ್ತಮವಾಗಿರುತ್ತದೆ. ಉದ್ಯೋಗಿಗಳಿಗೆ ಈ ವಾರ ಬಹಳ ಮುಖ್ಯವಾಗಿರುತ್ತದೆ. ನೀವು ಯಾವುದೇ ಹೊಸ ಕೆಲಸವನ್ನು ಪ್ರಾರಂಭಿಸಲಿದ್ದರೆ, ಹೆಚ್ಚು ಆತುರಪಡಬೇ. ಸಂಗಾತಿಯೊಂದಿಗಿನ ಸಂಬಂಧದಲ್ಲಿ ಸಾಮರಸ್ಯ ಇರಲಿದೆ. ಹಣದ ಬಗ್ಗೆ ಹೆಚ್ಚು ಚಿಂತೆ ಮಾಡಬೇಡಿ. ಸೂಕ್ತ ಸಮಯ ಬಂದಾಗ ನಿಮ್ಮ ಸಮಸ್ಯೆ ಖಂಡಿತ ಪರಿಹಾರವಾಗುತ್ತದೆ.
ಅದೃಷ್ಟದ ಬಣ್ಣ: ಬಿಳಿ
ಅದೃಷ್ಟದ ಸಂಖ್ಯೆ: 4
ಶುಭ ದಿನ: ಭಾನುವಾರ

ವೃಶ್ಷಿಕ ರಾಶಿ
ಮನೆಯಲ್ಲಿ ಒತ್ತಡದ ವಾತಾವರಣ ಇರಲಿದೆ, ಈ ಸಮಯದಲ್ಲಿನೀವು ತಾಳ್ಮೆಯಿಂದ ಪರಿಸ್ಥಿತಿ ನಿಭಾಯಿಸಲು ಪ್ರಯತ್ನಿಸಿ. ಈ ವಾರ ಹಣದ ವಿಷಯದಲ್ಲಿ ತುಂಬಾ ಚೆನ್ನಾಗಿರಲಿದೆ. ಹಿಂದೆ ಮಾಡಿದ ಯಾವುದೇ ಹೂಡಿಕೆಯಿಂದ ನೀವು ಉತ್ತಮ ಲಾಭವನ್ನು ಪಡೆಯಬಹುದು. ಇದಲ್ಲದೇ ಆಸ್ತಿಗೆ ಸಂಬಂಧಿಸಿದ ಲಾಭದ ಸಾಧ್ಯತೆಯೂ ಇದೆ. ವ್ಯಾಪಾರಸ್ಥರು ಈ ವಾರ ಸಾಕಷ್ಟು ಓಡಾಡಬೇಕಾಗಬಹುದು. ಉದ್ಯೋಗಿಗಳ ಮೇಲೆ ಕೆಲಸದ ಒತ್ತಡ ಅಧಿಕವಿರಲಿದೆ. ನಿಮ್ಮ ಯೋಜನೆಗಳ ಪ್ರಕಾರ ನಿಮ್ಮ ಎಲ್ಲಾ ಕೆಲಸಗಳನ್ನು ಪೂರ್ಣಗೊಳಿಸಲು ಪ್ರಯತ್ನಿಸಿದರೆ ಅದು ಉತ್ತಮವಾಗಿರುತ್ತದೆ.
ಅದೃಷ್ಟದ ಬಣ್ಣ: ಗಾಢ ಹಳದಿ
ಅದೃಷ್ಟದ ಸಂಖ್ಯೆ: 16
ಶುಭ ದಿನ: ಗುರುವಾರ

ಧನು ರಾಶಿ
ವಿದ್ಯಾರ್ಥಿಗಳಿಗೆ ಈ ಅವಧಿ ಅನುಕೂಲಕರವಾಗಿದೆ. ಉದ್ಯೋಗಸ್ಥರು ಕಚೇರಿಯಲ್ಲಿ ಉನ್ನತ ಅಧಿಕಾರಿಗಳೊಂದಿಗೆ ಉತ್ತಮ ಬಾಂಧವ್ಯವನ್ನು ಕಾಪಾಡಿಕೊಳ್ಳಲು ಪ್ರಯತ್ನಿಸಬೇಕು. ವ್ಯಾಪಾರಸ್ಥರು ನಿರೀಕ್ಷಿತ ಫಲಿತಾಂಶವನ್ನು ಪಡೆಯಬಹುದು. ಸಾಲದ ವಹಿವಾಟು ಮಾಡಬೇಡಿ. ವೈವಾಹಿಕ ಜೀವನದಲ್ಲಿ ಭಿನ್ನಾಭಿಪ್ರಾಯಗಳಿರಬಹುದು. ಆರೋಗ್ಯ ದುರ್ಬಲವಾಗಿರುತ್ತದೆ, ಜಾಗ್ರತೆವಹಿಸಿ.
ಅದೃಷ್ಟದ ಬಣ್ಣ: ನೇರಳೆ
ಅದೃಷ್ಟದ ಸಂಖ್ಯೆ: 37
ಶುಭ ದಿನ: ಮಂಗಳವಾರ

ಮಕರ ರಾಶಿ
ಕೆಲಸದ ಸ್ಥಳದಲ್ಲಿ ನೀವು ಸಕಾರಾತ್ಮಕ ಫಲಿತಾಂಶಗಳನ್ನು ಪಡೆಯಬಹುದು. ವ್ಯಾಪಾರಸ್ಥರಿಗೆ ಈ ವಾರ ತುಂಬಾ ಅನುಕೂಲಕರವಾಗಿರಲಿದೆ. ನಿಮ್ಮ ಮನೆಯ ವಾತಾವರಣ ಖುಷಿಯಿಂದ ಕುಡಿರಲಿದೆ. ಚಿಕ್ಕ ವಿಷಯಗಳಿಗೆ ಕೋಪಗೊಳ್ಳಬೇಡಿ. ಆಸ್ತಿ ಮಾರಾಟ ಮಾಡಲು ಯೋಚಿಸುತ್ತಿದ್ದರೆ ಈ ವಾರದಲ್ಲಿ ನೀವು ಉತ್ತಮ ಅವಕಾಶವನ್ನು ಪಡೆಯಬಹುದು. ಈ ವಾರ ಆರೋಗ್ಯದ ವಿಷಯದಲ್ಲಿ ನಿಮಗೆ ಏರಿಳಿತಗಳಿಂದ ಕೂಡಿರಲಿದೆ.
ಅದೃಷ್ಟದ ಬಣ್ಣ: ಕಂದು
ಅದೃಷ್ಟದ ಸಂಖ್ಯೆ: 5
ಶುಭ ದಿನ: ಶುಕ್ರವಾರ

ಕುಂಭ ರಾಶಿ
ಆರ್ಥಿಕ ದೃಷ್ಟಿಯಿಂದ ಈ ವಾರ ಅನುಕೂಲಕರವಲ್ಲ. ನಿಮ್ಮ ದುಂದುವೆಚ್ಚದ ಸ್ವಭಾವದಿಂದಾಗಿ, ನೀವು ಅನೇಕ ಸಮಸ್ಯೆಗಳನ್ನು ಎದುರಿಸಬೇಕಾಗಬಹುದು. ಈ ಅವಧಿಯಲ್ಲಿ ನೀವು ಹಣದ ಮಹತ್ವವನ್ನು ಚೆನ್ನಾಗಿ ಅರ್ಥಮಾಡಿಕೊಳ್ಳುವಿರಿ. ಪ್ರತಿಕೂಲ ಸಂದರ್ಭಗಳಲ್ಲಿ ನಿಮ್ಮ ಸಂಗಾತಿಯ ಬೆಂಬಲ ಸಿಗಲಿದೆ. ಚಿಲ್ಲರೆ ವ್ಯಾಪಾರಿಗಳಿಗೆ ಈ ವಾರ ಲಾಭದಾಯಕವಾಗಿರುತ್ತದೆ. ನೀವು ದುಪ್ಪಟ್ಟು ಲಾಭವನ್ನು ಪಡೆಯುವ ಸಾಧ್ಯತೆಯಿದೆ. ನಿಮ್ಮ ಸಂಗಾತಿಯೊಂದಿಗಿನ ನಿಮ್ಮ ಸಂಬಂಧವು ಇನ್ನಷ್ಟು ಬಲಗೊಳ್ಳುತ್ತದೆ. ಆರೋಗ್ಯವನ್ನು ನಿರ್ಲಕ್ಷಿಸುವ ತಪ್ಪನ್ನು ಮಾಡಬೇಡಿ.
ಅದೃಷ್ಟದ ಬಣ್ಣ: ಪೀಚ್
ಅದೃಷ್ಟದ ಸಂಖ್ಯೆ: 8
ಶುಭ ದಿನ: ಗುರುವಾರ

ಮೀನ ರಾಶಿ
ವಾರದ ಆರಂಭವು ನಿಮಗೆ ತುಂಬಾ ಚೆನ್ನಾಗಿರಲಿದೆ. ವ್ಯಾಪಾರಸ್ಥರಿಗೆ ಈ ವಾರ ವಿಶೇಷವಾಗಿರಲ್ಲ, ನೀವು ದೊಡ್ಡ ಲಾಭವನ್ನು ನಿರೀಕ್ಷಿಸುತ್ತಿದ್ದರೆ ನೀವು ನಿರಾಶೆಗೊಳ್ಳುವಿರಿ. ಹಣದ ವಿಚಾರದಲ್ಲಿ ನೀವು ಜಾಗರೂಕರಾಗಿರಬೇಕು, ಇಲ್ಲದಿದ್ದರೆ ನೀವು ಮೋಸ ಹೋಗಬಹುದು. ಆರೋಗ್ಯಕ್ಕೆ ಸಂಬಂಧಿಸಿದಂತೆ ಹೇಳುವುದಾದರೆ ನಿಮ್ಮ ಆರೋಗ್ಯವು ಉತ್ತಮವಾಗಿರುತ್ತದೆ.
ಅದೃಷ್ಟದ ಬಣ್ಣ: ಕೆಂಪು
ಅದೃಷ್ಟದ ಸಂಖ್ಯೆ: 24
ಶುಭ ದಿನ: ಬುಧವಾರ

English summary

Weekly Rashi Bhavishya for October 1 To 7

Weekly Horoscope in Kannada - Read horoscope for October 1 To 7 predictions for all 12 zodiac signs and know about love, finance, health, and career
X
Desktop Bottom Promotion