Latest Updates
-
March 08 Horoscope: ಯಾರ ಬಳಿಯಾದರು ಸಾಲ ಪಡೆಯುವ ಆಲೋಚನೆ ಮುಂದೂಡಿ! -
ನೀನೇ ನನ್ನ ಶಕ್ತಿ.. ನಿಮ್ಮ ಪ್ರಿಯತಮೆಗೆ ಕಳಿಸಿ ಈ ರೊಮ್ಯಾಂಟಿಕ್ ಶುಭಾಶಯಗಳು! ಆಕೆಯ ಮುಖದಲ್ಲಿ ನಗು ತರಿಸಿ -
ಕೊನೆಗೂ ಬಂತು ರಾಜಯೋಗ: ಈ ರಾಶಿಗಳಿಗೆ ನಸೀಬಲ್ಲೇ ಇಲ್ಲದ ಸುಖ-ಸಂಪತ್ತು ಪ್ರಾಪ್ತಿ! ಪ್ರೀತಿಯಲ್ಲಿ ದೊಡ್ಡ ಯಶಸ್ಸು -
ಎಂದಾದರೂ ಮೊಸರು ಪರೋಟ ತಿಂದಿದ್ದೀರಾ? ಒಮ್ಮೆ ಇದರ ರುಚಿ ನೋಡಿ.. ಹಿಟ್ಟು ಕಲಸುವಾಗ ಈ ಟ್ರಿಕ್ ಬಳಸಿ -
ಹುಷಾರ್.. ಗಂಡನಿಗೆ ಈ 4 ಮಾತು ಹೇಳ್ತೀರಾ? ಮನೇಲಿ ಬೆಂಕಿ ಉರಿಯುತ್ತೆ.. ಹೀಗೆ ಮಾಡಿದ್ರೆ ಸಂಸಾರದಲ್ಲಿ ಸುಖ ಇರುತ್ತೆ -
ಸಿಸ್ಟರ್.. 30+ ಬಳಿಕ ಈ ಸೂತ್ರಗಳನ್ನು ಬೆಳೆಸಿಕೊಳ್ಳಿ! ಆರೋಗ್ಯ ಸದಾ ಚೆನ್ನಾಗಿ ಇರುತ್ತೆ -
10 ನಿಮಿಷದ ಹಾಟ್ ಹಾಟ್ ಪರೋಟ! ಈ ರೀತಿ ಮಾಡಿದ್ರೆ ಮೃದು & ಕ್ರಿಸ್ಪಿಯಾಗಿ ಬರುತ್ತೆ.. ಹೋಟೆಲ್ ಸ್ಟೈಲ್ ಸೀಕ್ರೆಟ್ ಇಲ್ಲಿದೆ -
ಹೋಟೆಲ್ ಸ್ಟೈಲ್ ರಾಯಲ್ ಚಟ್ನಿ! ಈ ಒಂದು ವಸ್ತು ಸೇರಿಸಿ ನೋಡಿ.. ರುಚಿ ಡಬಲ್, 2 ಇಡ್ಲಿ ಜಾಸ್ತಿ ತಿಂತೀರಾ -
ಈ ದಿನ ಆರ್ಥಿಕ ಲಾಭದ ಸಾಧ್ಯತೆಗಳೂ ಇವೆ! ನಿಮ್ಮ ಕ್ರಶ್ ಭೇಟಿಯಾಗುವ ಯೋಗ -
March 07 Horoscope: ಪ್ರಯಾಣ ಮಾಡುವಾಗ ಎಚ್ಚರವಿಡಿ!
ವಾರ ಭವಿಷ್ಯ (ಸೆ.9-ಸೆ.16): ಈ ವಾರ 5 ರಾಶಿಯವರಿಗೆ ಅದೃಷ್ಟಕರ, 7 ರಾಶಿಯವರು ಜಾಗ್ರತೆ
ಗ್ರಹಗತಿಗಳ ಸ್ಥಾನದ ಆಧಾರದ ಮೇಲೆ ಭವಿಷ್ಯವನ್ನು ಹೇಳಲಾಗುವುದು. ಅದರಂತೆ ಸೆಪ್ಟೆಂಬರ್9-16ರವರೆಗಿನ ಭವಿಷ್ಯ ನೀಡಲಾಗಿದೆ. ಈ ವಾರ 5 ರಾಶಿಯವರಿಗೆ ಶುಭವಾಗಿದೆ, ಉಳಿದ ರಾಶಿಗಳು ಸ್ವಲ್ಪ ಜಾಗ್ರತೆವಹಿಸಬೇಕು. ಈ ವಾರ ನಿಮ್ಮ ರಾಶಿಗೆ ಶುಭವೇ ಎಂದು ನೋಡೋಣ ಬನ್ನಿ:
ಮೇಷ ರಾಶಿ
ಈ ಸಮಯವು ಕುಟುಂಬದೊಂದಿಗೆ ಸಂತೋಷದಿಂದ ಕಳೆಯುವಿರಿ. ನಿಮ್ಮ ಪ್ರೀತಿಪಾತ್ರರಿಗೆ ಹೆಚ್ಚಿನ ಸಮಯವನ್ನು ಕಳೆಯಲು ಸಾಧ್ಯವಾಗುವುದು. ಈ ಅವಧಿಯಲ್ಲಿ ನಿಮ್ಮ ಮನೆಯಲ್ಲಿ ಪೂಜೆ, ಹವನ ಇತ್ಯಾದಿಗಳನ್ನು ಆಯೋಜಿಸಬಹುದು. ಹಣಕಾಸಿನ ದೃಷ್ಟಿಯಿಂದ ಈ ವಾರ ನಿಮಗೆ ಮಿಶ್ರಫಲ. ನಿಮ್ಮ ಆದಾಯವನ್ನು ಗಮನದಲ್ಲಿಟ್ಟುಕೊಂಡು ಖರ್ಚು ಮಾಡಿ. ವಾರದ ಮಧ್ಯದಲ್ಲಿ ನೀವು ಇದ್ದಕ್ಕಿದ್ದಂತೆ ಕೆಲಸಕ್ಕಾಗಿ ಪ್ರಯಾಣ ಮಾಡಬೇಕಾಗುವುದು. ನಿಮ್ಮ ಈ ಪ್ರಯಾಣವು ನಿಮಗೆ ತುಂಬಾ ಪ್ರಯೋಜನಕಾರಿಯಾಗಲಿದೆ. ವ್ಯಾಪಾರಸ್ಥರು ಕಾನೂನು ವಿಷಯಗಳಲ್ಲಿ ಹೆಚ್ಚು ಜಾಗರೂಕರಾಗಿರಬೇಕು. ವಕೀಲರನ್ನು ಸಂಪರ್ಕಿಸಲು ಇದು ಸರಿಯಾದ ಸಮಯ. ನಿಮ್ಮ ಆರೋಗ್ಯ ಚೆನ್ನಾಗಿರಲಿದೆ.
ಅದೃಷ್ಟದ ಬಣ್ಣ: ಪೀಚ್
ಅದೃಷ್ಟದ ಸಂಖ್ಯೆ: 12
ಅದೃಷ್ಟದ ದಿನ: ಭಾನುವಾರ

ವೃಷಭ ರಾಶಿ
ವೃಷಭ ರಾಶಿಯವರಿಗೆ ಈ ವಾರ ತುಂಬಾನೇ ಮುಖ್ಯವಾಗಿದೆ. ಕೆಲಸದ ಹೊರೆ ಅಧಿಕವಾಗಿರಲಿದೆ, ಆದರೆ ನಿಮ್ಮ ಎಲ್ಲಾ ಕೆಲಸಗಳನ್ನು ಸಮಯಕ್ಕೆ ಸರಿಯಾಗಿ ಪೂರ್ಣಗೊಳಿಸಲು ನಿಮಗೆ ಸಾಧ್ಯವಾಗುವುದು. ಸಂಗಾತಿಯೊಂದಿಗಿನ ಸಂಬಂಧದಲ್ಲಿ ಸಾಮರಸ್ಯ ಇರಲಿದೆ. ನೀವು ಉದ್ಯೋಗವನ್ನು ಹುಡುಕುತ್ತಿದ್ದರೆ, ಈ ಸಮಯವು ನಿಮಗೆ ಉತ್ತಮವಾಗಿದೆ. ನೀವು ಉತ್ತಮ ಅವಕಾಶಗಳನ್ನು ಪಡೆಯಬಹುದು. ಆರ್ಥಿಕ ಸ್ಥಿತಿ ಚೆನ್ನಾಗಿರಲಿದೆ. ಈ ಅವಧಿಯಲ್ಲಿ ನೀವು ಹೂಡಿಕೆ ಮಾಡಬಹುದು. ಆರೋಗ್ಯದ ದೃಷ್ಟಿಯಿಂದ ಈ ಸಮಯವು ಅನುಕೂಲಕರವಾಗಿರುತ್ತದೆ. ನಿಮ್ಮ ಆಹಾರ ಪದ್ಧತಿಯಲ್ಲಿ ಯಾವುದೇ ಅಡಚಣೆಯನ್ನು ಮಾಡದಂತೆ ನಿಮಗೆ ಸಲಹೆ ನೀಡಲಾಗಿದೆ.
ಅದೃಷ್ಟದ ಬಣ್ಣ: ಗುಲಾಬಿ
ಅದೃಷ್ಟದ ಸಂಖ್ಯೆ: 18
ಅದೃಷ್ಟದ ದಿನ: ಬುಧವಾರ
ಮಿಥುನ ರಾಶಿ
ಈ ವಾರ ನಿಮಗೆ ಸ್ವಲ್ಪ ಸವಾಲಿನಿಂದ ಕೂಡಿರಲಿದೆ. ಈ ಅವಧಿಯಲ್ಲಿ ಮಾನಸಿಕ ಒತ್ತಡ ಇರಲಿದೆ. ಆರ್ಥಿಕವಾಗಿ ಕೂಡ ಈ ವಾರ ಅಷ್ಟು ಅನುಕೂಲಕರವಲ್ಲ, ಹಣ ಸಂಪಾದಿಸುವ ಉತ್ತಮ ಅವಕಾಶ ಕೂಡ ನಿಮ್ಮ ಕೈಯಿಂದ ತಪ್ಪಿ ಹೋಗಲಿದೆ. ಕುಟುಂಬದಲ್ಲಿ ಸಾಮರಸ್ಯ ಇರಲಿದೆ. ಪ್ರತಿಕೂಲ ಸಂದರ್ಭಗಳಲ್ಲಿ ನೀವು ಅವರ ಬೆಂಬಲವನ್ನು ಪಡೆಯುತ್ತೀರಿ. ವಾರದ ಕೊನೆಯಲ್ಲಿ ನೀವು ಕೆಲವು ಒಳ್ಳೆಯ ಸುದ್ದಿಗಳನ್ನು ಪಡೆಯಬಹುದು.
ಅದೃಷ್ಟದ ಬಣ್ಣ: ನೀಲಿ
ಅದೃಷ್ಟದ ಸಂಖ್ಯೆ: 32
ಅದೃಷ್ಟದ ದಿನ: ಶುಕ್ರವಾರ
ಕರ್ಕ ರಾಶಿ
ವಾರದ ಆರಂಭವು ನಿಮಗೆ ಉತ್ತಮವಾಗಿರುವುದಿಲ್ಲ. ಕೌಟುಂಬಿಕ ಸಮ್ಯೆ ಇರುವುದರಿಂದ ಅದರ ಬಗ್ಗೆ ಚಿಂತೆ ಹೆಚ್ಚು ಕಾಡಲಿದೆ. ಈ ಅವಧಿಯಲ್ಲಿ ಆರ್ಥಿಕ ಸ್ಥಿತಿ ಅಷ್ಟು ಚೆನ್ನಾಗಿರಲ್ಲ. ಈ ಅವಧಿಯಲ್ಲಿ ಖರ್ಚು ಅಧಿಕವಿರಲಿದೆ. ನಿಮ್ಮ ಆದಾಯವನ್ನು ಹೆಚ್ಚಿಸಲು ನೀವು ಪ್ರಯತ್ನಿಸುತ್ತಿದ್ದರೆ ನೀವು ನಿಮ್ಮ ಪ್ರಯತ್ನಗಳನ್ನು ನೀವು ವೇಗಗೊಳಿಸಬೇಕು. ಉದ್ಯೋಗಸ್ಥರಿಗೆ ಈ ಅವಧಿಯಲ್ಲಿ ಉನ್ನತ ಅಧಿಕಾರಿಗಳಿಂದ ಸಂಪೂರ್ಣ ಬೆಂಬಲ ದೊರೆಯುತ್ತದೆ. ನಿಮ್ಮ ಎಲ್ಲಾ ಕೆಲಸಗಳು ಸುಗಮವಾಗಿ ನಡೆಯಲಿದೆ. ಆರೋಗ್ಯದ ದೃಷ್ಟಿಯಿಂದ ಈ ವಾರ ನಿಮಗೆ ಮಿಶ್ರಫಲ.
ಅದೃಷ್ಟದ ಬಣ್ಣ: ಕಂದು
ಅದೃಷ್ಟದ ಸಂಖ್ಯೆ: 2
ಅದೃಷ್ಟದ ದಿನ: ಗುರುವಾರ
ಸಿಂಹ ರಾಶಿ
ನಿಮ್ಮ ದೊಡ್ಡ ಚಿಂತೆಯೊಂದು ಬಗೆಹರಿಯಲಿದೆ. ಈ ಸಮಯವು ನಿಮಗೆ ಉತ್ತಮವಾಗಿರಲಿದೆ. ಆರ್ಥಿಕ ಸ್ಥಿತಿ ಸಾಮಾನ್ಯಕ್ಕಿಂತ ಉತ್ತಮವಾಗಿರುತ್ತದೆ. ಈ ಅವಧಿಯಲ್ಲಿ ಆರ್ಥಿಕ ಸ್ಥಿತಿ ಚೆನ್ನಾಗಿರಲಿದೆ. ಉದ್ಯೋಗಸ್ಥರಿಗೆ ಈ ವಾರ ಬಹಳ ಶುಭವಾಗಿರಲಿದೆ. ವ್ಯವಹಾರಸ್ಥರಿಗೆ ಈ ಅವಧಿ ಅನುಕೂಲಕರವಾಗಿರಲಿದೆ. ವಾರದ ಕೊನೆಯಲ್ಲಿ ನೀವು ಆರ್ಥಿಕ ಲಾಭವನ್ನು ಪಡೆಯುವ ಸಾಧ್ಯತೆಯಿದೆ. ಆರೋಗ್ಯದಲ್ಲಿ ದೊಡ್ಡ ಸುಧಾರಣೆ ಕಂಡುಬರಲಿದೆ.
ಅದೃಷ್ಟದ ಬಣ್ಣ: ಬಿಳಿ
ಅದೃಷ್ಟದ ಸಂಖ್ಯೆ: 5
ಅದೃಷ್ಟದ ದಿನ: ಶುಕ್ರವಾರ
ಕನ್ಯಾ ರಾಶಿ
ಉದ್ಯಮಿಗಳು ಈ ಅವಧಿಯಲ್ಲಿ ಹಣಕ್ಕೆ ಸಂಬಂಧಿಸಿದ ಕೆಲಸವನ್ನುಈ ಅವಧಿಯಲ್ಲಿ ಎಚ್ಚರಿಕೆಯಿಂದ ಮಾಡಬೇಕಾಗಿದೆ. ಈ ಏಳು ದಿನಗಳು ಉದ್ಯೋಗಿಗಳಿಗೆ ತುಂಬಾ ಕಾರ್ಯನಿರತವಾಗಿರುತ್ತದೆ. ಇದ್ದಕ್ಕಿದ್ದಂತೆ ನಿಮ್ಮ ಮೇಲೆ ಕೆಲಸದ ಹೊರೆ ಹೆಚ್ಚಾಗಲಿದೆ. ಹಣದ ವಿಷಯದಲ್ಲಿ ಈ ವಾರ ನಿಮಗೆ ಉತ್ತಮವಾಗಿರಲಿದೆ. ಈ ಅವಧಿಯಲ್ಲಿ ಅಧಿಕ ಖರ್ಚು ಮಾಡಲು ಹೋಗಬೇಡಿ. ದಾಂಪತ್ಯ ಜೀವನ ಚೆನ್ನಾಗಿರಲಿದೆ. ಆರೋಗ್ಯ ಸಂಬಂಧಿತ ಸಮಸ್ಯೆಗಳಿಂದ ನಿಮಗೆ ಪರಿಹಾರ ಸಿಗಲಿದೆ.
ಅದೃಷ್ಟದ ಬಣ್ಣ: ಹಸಿರು
ಅದೃಷ್ಟದ ಸಂಖ್ಯೆ: 10
ಅದೃಷ್ಟದ ದಿನ: ಸೋಮವಾರ
ತುಲಾ ರಾಶಿ
ಆರೋಗ್ಯದ ವಿಷಯದಲ್ಲಿ ಈ ವಾರ ಅಷ್ಟು ಚೆನ್ನಾಗಿರಲ್ಲ. ಏನಾದರೂ ಆರೋಗ್ಯ ಸಮಸ್ಯೆಯಿದ್ದರೆ ನೀವು ನಿರ್ಲಕ್ಷ್ಯ ಮಾಡಬೇಡಿ. ಕುಟುಂಬ ಜೀವನದಲ್ಲಿ ಪರಿಸ್ಥಿತಿಗಳು ಸಾಮಾನ್ಯವಾಗಿರಲಿದೆ. ಆದರೆ ನೀವು ಸಂಬಂಧಗಳಿಗೆ ಹೆಚ್ಚು ಪ್ರಾಮುಖ್ಯತೆ ನೀಡುವುದು ಒಳ್ಳೆಯದು, ಅವರ ಭಾವನೆಗಳನ್ನು ಗೌರವಿಸಿ. ತಂದೆಯ ಸಲಹೆಗಳನ್ನು ಗೌರವಿಸಿ. ನಿಮ್ಮ ಪೂರ್ವಜರ ವ್ಯವಹಾರದೊಂದಿಗೆ ನೀವು ಸಂಬಂಧ ಹೊಂದಿದ್ದರೆ ನೀವು ಉತ್ತಮ ಪ್ರಯೋಜನಗಳನ್ನು ಸಹ ಪಡೆಯುತ್ತೀರಿ. ನಿಮ್ಮ ಆರ್ಥಿಕ ಸ್ಥಿತಿ ಉತ್ತಮವಾಗಿರುತ್ತದೆ. ಈ ಅವಧಿಯಲ್ಲಿ ಸಾಲವನ್ನು ತೆಗೆದುಕೊಳ್ಳಬೇಡಿ.
ಅದೃಷ್ಟದ ಬಣ್ಣ: ಕೆಂಪು
ಅದೃಷ್ಟದ ಸಂಖ್ಯೆ: 22
ಅದೃಷ್ಟದ ದಿನ: ಮಂಗಳವಾರ
ವೃಶ್ಚಿಕ ರಾಶಿ
ವಿದ್ಯಾರ್ಥಿಗಳಿಗೆ ಈ ವಾರ ತುಂಬಾ ಒಳ್ಳೆಯದಿದೆ. ನೀವು ಉನ್ನತ ಶಿಕ್ಷಣಕ್ಕಾಗಿ ವಿದೇಶಕ್ಕೆ ಹೋಗಲು ಬಯಸಿದ್ದು ವೀಸಾ ಇತ್ಯಾದಿಗಳಲ್ಲಿ ಯಾವುದೇ ಸಮಸ್ಯೆ ಇದ್ದರೆ ನಿಮ್ಮ ಸಮಸ್ಯೆಯು ಪರಿಹಾರವಾಗಲಿದೆ, ಹಣದ ವಿಷಯದಲ್ಲಿ ಈ ವಾರ ಉತ್ತಮವಾಗಲಿದೆ. ನಿಮಗೆ ಹಣ ಬರುವ ಸಾಧ್ಯತೆ ಇದೆ. ನೀವು ಯಾವುದೇ ಹಳೆಯ ಆಸ್ತಿಯನ್ನು ಮಾರಾಟ ಮಾಡಲು ಬಯಸಿದರೆ, ನಿಮಗೆ ಉತ್ತಮ ಅವಕಾಶ ಸಿಗಲಿದೆ. ಉದ್ಯೋಗಸ್ಥರಿಗೆ ಈ ವಾರ ಸವಾಲಿನಿಂದ ಕೂಡಿರಲಿದೆ. ಉನ್ನತ ಅಧಿಕಾರಿಗಳ ವರ್ತನೆ ನಿಮ್ಮ ಮನಸ್ಸಿಗೆ ಕಸಿವಿಸಿ ಮಾಡಬಹುದು. ಅಂತಹ ಪರಿಸ್ಥಿತಿಯಲ್ಲಿ, ನೀವು ತುಂಬಾ ಬುದ್ಧಿವಂತಿಕೆಯಿಂದ ವರ್ತಿಸಲು ಸಲಹೆ ನೀಡಲಾಗಿದೆ. ಆರೋಗ್ಯದ ದೃಷ್ಟಿಯಿಂದ ಈ ವಾರ ಸರಾಸರಿಯಾಗಿರಲಿದೆ.
ಅದೃಷ್ಟದ ಬಣ್ಣ: ಹಳದಿ
ಅದೃಷ್ಟದ ಸಂಖ್ಯೆ: 4
ಅದೃಷ್ಟದ ದಿನ: ಗುರುವಾರ
ಧನು ರಾಶಿ
ಕೌಟುಂಬಿಕ ಜೀವನ ಚೆನ್ನಾಗಿರಲಿದೆ. ಈ ಸಮಯದಲ್ಲಿ, ಮನೆಯ ಸದಸ್ಯರಿಂದ ಒಳ್ಳೆಯ ಸುದ್ದಿ ಸಿಗಲಿದೆ. ಹಣದ ವಿಷಯದಲ್ಲಿ, ಈ ವಾರ ನಿಮಗೆ ಉತ್ತಮವಾಗಿದೆ , ಈ ಅವಧಿಯಲ್ಲಿ ಖರ್ಚು ಕಡಿಮೆ ಇರಲಿದೆ. ಹಣದ ಪರಿಸ್ಥಿತಿ ಚೆನ್ನಾಗಿರಲಿದೆ. ಈ ಅವಧಿಯಲ್ಲಿ ವ್ಯಾಪಾರಕ್ಕೆ ಸಂಬಂಧಿಸಿದಂತೆ ಜಾಗರೂಕರಾಗಿರಲು ಸಲಹೆ ನೀಡಲಾಗಿದೆ. ನೀವು ಹೊಸ ವ್ಯವಹಾರ ಪ್ರಸ್ತಾಪವನ್ನು ಪಡೆದರೆ, ತುಂಬಾ ಆತುರಪಡಬೇಡಿ, ಸರಿಯಾಗಿ ವಿಚಾರಿಸಿ ನಂತರವಷ್ಟೇ ಆ ಪ್ರಸ್ತಾಪ ಒಪ್ಪಿಕೊಳ್ಳಿ. ಉನ್ನತ ಅಧಿಕಾರಿಗಳ ಮಾತನ್ನು ನಿರ್ಲಕ್ಷಿಸದಂತೆ ಉದ್ಯೋಗಸ್ಥರಿಗೆ ಸೂಚಿಸಲಾಗಿದೆ. ಆರೋಗ್ಯಕ್ಕಾಗಿ ವಿಶ್ರಾಂತಿ ಕಡೆ ಗಮನ ನೀಡಿ.
ಅದೃಷ್ಟದ ಬಣ್ಣ: ನೀಲಿ
ಅದೃಷ್ಟದ ಸಂಖ್ಯೆ: 9
ಅದೃಷ್ಟದ ದಿನ: ಶನಿವಾರ
ಮಕರ ರಾಶಿ
ಮಕರ ರಾಶಿಯವರಿಗೆ ಈ ವಾರ ಅನುಕೂಲಕರವಾಗಿದೆ. ಯಾವುದೇ ಪ್ರಮುಖ ವೃತ್ತಿ ಸಂಬಂಧಿತ ಸಮಸ್ಯೆ ಬಗೆಹರಿಯಲಿದೆ. ನಿಮ್ಮ ಪ್ರಸ್ತುತ ಕೆಲಸದಿಂದ ನೀವು ತೃಪ್ತರಾಗದಿದ್ದರೆ ನಿಮ್ಮ ಕೆಲಸವನ್ನು ಬದಲಾಯಿಸಲು ಇದು ಸರಿಯಾದ ಸಮಯ. ವ್ಯಾಪಾರಸ್ಥರಿಗೆ ಈ ಸಮಯ ಚೆನ್ನಾಗಿರಲಿದೆ. ಈ ಸಮಯದಲ್ಲಿ ನಿಮ್ಮ ಎಲ್ಲಾ ನಿರ್ಧಾರಗಳ ಉತ್ತಮ ಫಲಿತಾಂಶಗಳನ್ನು ನೀವು ಪಡೆಯುತ್ತೀರಿ. ಆರ್ಥಿಕ ದೃಷ್ಟಿಯಿಂದ ಈ ವಾರ ನಿಮಗೆ ಉತ್ತಮವಾಗಿರುತ್ತದೆ. ಆದರೆ, ನೀವು ಬುದ್ಧಿವಂತಿಕೆಯಿಂದ ಖರ್ಚು ಮಾಡಲು ಸಲಹೆ ನೀಡಲಾಗಿದೆ. ವಾರದ ಕೊನೆಯಲ್ಲಿ ಬರಬೇಕಾಗಿರುವ ಹಣ ನಿಮ್ಮ ಕೈ ಸೇರಲಿದೆ. ಸಂಗಾತಿಯೊಂದಿಗಿನ ಸಂಬಂಧ ಸುಧಾರಿಸಲಿದೆ. ನಿಮ್ಮ ಆಹಾರಕ್ರಮದ ಕಡೆ ಗಮನನೀಡಿ.
ಅದೃಷ್ಟದ ಬಣ್ಣ: ಬೂದು
ಅದೃಷ್ಟದ ಸಂಖ್ಯೆ: 16
ಅದೃಷ್ಟದ ದಿನ: ಭಾನುವಾರ
ಕುಂಭ ರಾಶಿ
ನಿಮ್ಮ ಮನೆಯ ಶಾಂತಿಯನ್ನು ಕಾಪಾಡಿಕೊಳ್ಳಲು, ನೀವು ಚಿಕ್ಕ-ಪುಟ್ಟ ವಿಷಯಗಳನ್ನು ನಿರ್ಲಕ್ಷಿಸಲು ಕಲಿಯಬೇಕು. ಹಣದ ವಿಷಯದಲ್ಲಿ ಈ ವಾರ ನಿಮಗೆ ಉತ್ತಮವಾಗಿರುವುದಿಲ್ಲ. ದೈನಂದಿನ ಖರ್ಚುಗಳನ್ನು ಪೂರೈಸಲು ನೀವು ಅನೇಕ ತೊಂದರೆಗಳನ್ನು ಎದುರಿಸಬಹುದು. ಅತಿಯಾದ ಓಡಾಟ ಮತ್ತು ಒತ್ತಡದಿಂದಾಗಿ ನಿಮ್ಮ ಆರೋಗ್ಯವೂ ಹದಗೆಡಬಹುದು. ವಾರದ ಕೊನೆಯಲ್ಲಿ ನೀವು ಪ್ರಯಾಣ ಮಾಡಬೇಕಾಗುವುದು, ನಿಮ್ಮ ಈ ಪಯಣ ಬಹುಮುಖ್ಯವಾಗಲಿದೆ.
ಅದೃಷ್ಟದ ಬಣ್ಣ: ಕಿತ್ತಳೆ
ಅದೃಷ್ಟದ ಸಂಖ್ಯೆ: 11
ಅದೃಷ್ಟದ ದಿನ: ಬುಧವಾರ
ಮೀನ ರಾಶಿ
ಆರೋಗ್ಯ ಸಂಬಂಧಿತ ಸಮಸ್ಯೆಗಳು ದೂರವಾಗಲಿದೆ. ಈ ವಾರದಲ್ಲಿ ಉದ್ಯೋಗವಾಗಲಿ ಅಥವಾ ವ್ಯವಹಾರವಾಗಲಿ, ನಿಮ್ಮ ಕಠಿಣ ಪರಿಶ್ರಮಕ್ಕೆ ಸೂಕ್ತವಾದ ಫಲಿತಾಂಶವನ್ನು ನೀವು ಖಂಡಿತವಾಗಿ ಪಡೆಯುತ್ತೀರಿ. ಹಣಕಾಸಿನ ದೃಷ್ಟಿಯಿಂದ ಈ ವಾರ ನಿಮಗೆ ಉತ್ತಮವಾಗಿರಲಿದೆ, ಈ ಅವಧಿಯಲ್ಲಿ ನಿಮ್ಮ ಆದಾಯ ಹೆಚ್ಚಾಗಬಹುದು. ವಾರದ ಕೊನೆಯಲ್ಲಿ, ನೀವು ಯಾವುದೇ ಹಳೆಯ ಸಾಲವನ್ನು ಮರುಪಾವತಿ ಮಾಡುವಲ್ಲಿ ಯಶಸ್ವಿಯಾಗುತ್ತೀರಿ. ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ಮಾಡಬೇಡಿ.
ಅದೃಷ್ಟದ ಬಣ್ಣ: ನೇರಳೆ
ಅದೃಷ್ಟದ ಸಂಖ್ಯೆ: 4
ಅದೃಷ್ಟದ ದಿನ: ಶುಕ್ರವಾರ



Click it and Unblock the Notifications











