Latest Updates
-
ಗಾಂಧಿ ಜಯಂತಿ ವಿಶೇಷ: ಫಿಟ್ನೆಸ್ ಮತ್ತು ಸಮಾಜ ಸೇವೆ ಬೆಸೆಯುವ 'ಪ್ಲಾಗಿಂಗ್'ಗೆ ಸಿದ್ಧರಾಗಿ! -
ಡೇಟಿಂಗ್ ಆ್ಯಪ್ ಹನಿಟ್ರ್ಯಾಪ್: ಪಬ್ಗಳಲ್ಲಿ ನಡೆಯುವ ಈ ದಂಧೆಯಿಂದ ಪಾರಾಗುವುದು ಹೇಗೆ? -
IMD ಮಳೆ ಅಲರ್ಟ್: ಬೆಂಗಳೂರು, ಚೆನ್ನೈ, ಕೇರಳದಲ್ಲಿ ಭಾರೀ ಮಳೆ; ಮನೆಯನ್ನು ಸುರಕ್ಷಿತವಾಗಿರಿಸಲು ಈ ಟಿಪ್ಸ್ ಪಾಲಿಸಿ! -
ಇಂದಿನಿಂದ ಎನರ್ಜಿ ಡ್ರಿಂಕ್ಸ್ ನಿಯಮ ಬದಲಾವಣೆ: ಕ್ಯಾನ್ ಖರೀದಿಸುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ಅಪಾರ್ಟ್ಮೆಂಟ್ ಗೇಟ್ನಲ್ಲಿ ಟ್ರಾಫಿಕ್ ಜಾಮ್? ಈ ಸರಳ ಟಿಪ್ಸ್ ಪಾಲಿಸಿದರೆ 5 ನಿಮಿಷದಲ್ಲಿ ಹೊರಬರಬಹುದು! -
ಬೆಳಗಿನ ವಾಕಿಂಗ್ ಹೋಗ್ತಿದ್ದೀರಾ? ಡೆಂಗ್ಯೂ ಸೊಳ್ಳೆಗಳಿಂದ ಪಾರಾಗಲು ಈ ಸರಳ ಟಿಪ್ಸ್ ಮಿಸ್ ಮಾಡ್ಬೇಡಿ! -
ಸೆಪ್ಟೆಂಬರ್ 28ರ ಪ್ರೇಮ ರಾಶಿಫಲ: ನಿಮ್ಮ ಸಂಬಂಧದಲ್ಲಿ ಹೊಸ ಉತ್ಸಾಹ ತುಂಬಲು ಇಂದಿನ ರಾಶಿವಾರು ಸಲಹೆಗಳು ಮತ್ತು ಶುಭ ಸಮಯ -
ಅಕ್ಟೋಬರ್ 1 ರಿಂದ ಎಸಿ, ಟಿವಿ ಬೆಲೆ ಏರಿಕೆ: ಹಬ್ಬದ ಆಫರ್ ಬಳಸಿಕೊಂಡು ಹಣ ಉಳಿಸುವುದು ಹೇಗೆ? -
ವಿಶ್ವ ಹೃದಯ ದಿನ: ನಿಮ್ಮ ಊಟದ ತಟ್ಟೆಯಲ್ಲಿ ಈ ಸಣ್ಣ ಬದಲಾವಣೆ ಮಾಡಿದರೆ ಹೃದಯ ಸದಾ ಆರೋಗ್ಯ! -
ಬ್ಯಾಂಕ್ ಮುಷ್ಕರ ವಾಪಸ್: ಇಂದಿನಿಂದ ಬ್ಯಾಂಕ್ಗಳು ಎಂದಿನಂತೆ ಓಪನ್, ಗ್ರಾಹಕರಿಗೆ ಸಿಹಿ ಸುದ್ದಿ; 5 ದಿನಗಳ ಕೆಲಸದ ಬಗ್ಗೆ ಅಪ್ಡೇಟ್
ಚಿನ್ನದ ಹುಡುಗ ನೀರಜ್ ಚೋಪ್ರಾ ಕೈ ಹಿಡಿದ ಈ ಸುಂದರಿ ಯಾರು? ಇಲ್ಲಿದೆ ಮಾಹಿತಿ!
ಭಾರತದ ಚಿನ್ನದ ಹುಡುಗ ಎಂದೇ ಖ್ಯಾತಿ ಗಳಿಸಿದ್ದ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ವಿವಾಹವಾಗಿದ್ದಾರೆ. ಈ ಕುರಿತು ಅವರು ತಮ್ಮ ಸಾಮಾಜಿಕ ಜಾಲತಾಣ ಖಾತೆಯಲ್ಲಿ ಹೇಳಿದ್ದಾರೆ. ಒಲಿಂಪಿಕ್‌ನಲ್ಲಿ ಪದಕ ತಂದು ಕೊಟ್ಟಿದ್ದ ಅವರು ಭಾರತದ ಚಿನ್ನದ ಹುಡುಗ ಎನಿಸಿಕೊಂಡಿದ್ದರು ಕಳೆದ ಬಾರಿ ಬೆಳ್ಳಿ ಪದಕ ಗೆದ್ದು ಹೊಸ ಇತಿಹಾಸ ಬರೆದಿದ್ದರು.
ಮದುವೆ ಕುರಿತು ಎಕ್ಸ್ (ಟ್ವಿಟರ್) ಖಾತೆಯಲ್ಲಿ ಬರೆದುಕೊಂಡಿರುವ ಅವರು, ಜೀವನದಲ್ಲಿ ಹೊಸ ಅಧ್ಯಾಯ ಶುರು ಮಾಡುತ್ತಿದ್ದೇನೆ ಎಂದಿದ್ದಾರೆ. ಹಾಗೆ ಇಬ್ಬರ ಮುದ್ದಾದ ಫೋಟೋವನ್ನು ಅವರು ಹಂಚಿಕೊಂಡಿದ್ದಾರೆ. ಹಾಗಾದ್ರೆ ಈ ಚಿನ್ನದ ಹುಡುಗಿಯ ಕೈ ಹಿಡಿಯುತ್ತಿರುವ ಈ ಸುಂದರಿ ಯಾರು ಅನ್ನೋದು ನಿಮಗೆ ಗೊತ್ತಾ?

ಅವರ ವಿವಾಹವು ಕೆಲವೇ ಮಂದಿಯ ಉಪಸ್ಥಿತಿಯಲ್ಲಿ ನಡೆದಿದೆ. ಹಿಮಾಚಲ ಪ್ರದೇಶದಲ್ಲಿ ಸುಮಾರು 50 ಜನರು ಮಾತ್ರ ಈ ವಿವಾಹದ ಸಾಕ್ಷಿಯಾಗಿದ್ದಾರೆ. ನೀರಜ್ ಚೋಪ್ರಾ ಹಿಮಾನಿ ಮೋರ್ ಎಂಬಾಕೆಯ ಜೊತೆಗೆ ವಿವಾಹವಾಗಿದ್ದಾರೆ. ಹಾಗಾದ್ರೆ ಯಾರು ಹಿಮಾನಿ ಮೋರ್?
ನೀರಜ್ ಕೈಹಿಡಿದ ಈ ಹಿಮಾನಿ ಯಾರು?
25 ವರ್ಷದ ಹಿಮಾನಿ ಟೆನಿಸ್ ಆಟಗಾರ್ತಿಯಾಗಿದ್ದಾರೆ. ಸೋನಿಪತ್‌ನಲ್ಲಿ ವಾಸವಿರುವ ಅವರು ಟೆನಿಸ್ ಆಟಗಾರ್ತಿಯಾಗಿ ಗುರುತಿಸಿಕೊಂಡಿದ್ದಾರೆ. ಹಾಗೆ ಅವರು ಈಗ ಅಮೆರಿಕದಲ್ಲಿ ಉನ್ನತ ವ್ಯಾಸಾಂಗ ಮಾಡುತ್ತಿದ್ದಾರೆ ಎಂದು ತಿಳಿದುಬಂದಿದೆ. ಫ್ರಾಂಕ್ಲಿನ್ ಪಿಯರ್ಸ್ ವಿಶ್ವವಿದ್ಯಾಲಯದಲ್ಲಿ ಕ್ರೀಡಾ ನಿರ್ವಹಣೆ ವಿಷಯದಲ್ಲಿ ಸ್ನಾತಕೋತ್ತರ ಪದವಿ ಓದುತ್ತಿದ್ದಾರೆ. ಹಾಗೆ ಈ ಮೊದಲು ಅವರು ದೆಹಲಿಯ ಮಿರಾಂಡಾ ಹೌಸ್‌ನಲ್ಲಿ ರಾಜಕೀಯ ವಿಜ್ಞಾನ ಮತ್ತು ದೈಹಿಕ ಶಿಕ್ಷಣದಲ್ಲಿ ಪದವಿ ಮುಗಿಸಿದ್ದಾರೆ ಎಂದು ತಿಳಿದುಬಂದಿದೆ.
ದೆಹಲಿ ವಿಶ್ವವಿದ್ಯಾಲಯಕ್ಕಾಗಿ ರಾಷ್ಟ್ರೀಯ ಮಟ್ಟದ ಟೆನಿಸ್ ಆಡಿರುವ ಅವರು ತೈಪೆಯಲ್ಲಿ 2017ರಲ್ಲಿ ನಡೆದ ವಿದ್ಯಾಲಯ ಮಟ್ಟದ ಕ್ರೀಡಾಕೂಟದಲ್ಲಿಯೂ ಭಾಗಿಯಾಗಿದ್ದಾರೆ. 2016ರಲ್ಲಿ ಮಲೇಷ್ಯಾದಲ್ಲಿ ನಡೆದ ವಿಶ್ವ ಜೂನಿಯರ್ ಟೆನಿಸ್ ಚಾಂಪಿಯನ್‌ಶಿಪ್‌ನಲ್ಲಿ ಸಹ ಅವರು ಭಾಗಿಯಾಗಿ ಅಲ್ಲಿ ಚಿನ್ನದ ಪದಕ ಗೆದ್ದ ಸಾಧನೆ ಮಾಡಿದ್ದಾರೆ.
ಹಾಗೆ ಅಖಿಲ ಭಾರತ ಟೆನಿಸ್ ಅಸೋಸಿಯೇಷನ್ ಪ್ರಕಾರ ಹಿಮಾನಿ ಅವರು 2018ರಲ್ಲಿ ಸಿಂಗಲ್ ವಿಭಾಗದಲ್ಲಿ 42ನೇ ಶ್ರೇಯಾಂಕ ಹಾಗೂ ಡಬಲ್ಸ್ ವಿಭಾಗದಲ್ಲಿ 27ನೇ ಶ್ರೇಯಾಂಕ ಪಡೆದಿದ್ದಾರೆ. ಹಾಗೆ ಹಿಮಾನಿ ಅವರ ಸಹೋದರ ಕೂಡ ಟೆನಿಸ್ ಆಟಗಾರನಾಗಿ ಗುರುತಿಸಿಕೊಂಡಿದ್ದಾರಂತೆ.
ನೀರಜ್ ಚಿನ್ನದ ಹುಡುಗ ಆಗಿದ್ದು ಹೇಗೆ?
ಹರಿಯಾಣದ ಪಾಣಿಪತ್ ಜಿಲ್ಲೆಯ ಖಂದ್ರಾ ಹಳ್ಳಿಯ 27 ವರ್ಷದ ಅಥ್ಲೀಟ್ ಭಾರತೀಯ ಸೇನೆಯಲ್ಲಿ ಜೂ. ಕಮಿಷನ್ಡ್ ಆಫೀಸರ್ ಆಗಿ ಸೇವೆ ಸಲ್ಲಿಸಿದ್ದಾರೆ. ನೀರಜ್ ಚೋಪ್ರಾ 2011ರಲ್ಲಿ ಜಾವೆಲಿನ್ ತರಬೇತಿ ಆರಂಭಿಸಿದರು. ಟೋಕಿಯೋ ಸಮ್ಮರ್ ಒಲಿಂಪಿಕ್ಸ್‌ನಲ್ಲಿ ಚಿನ್ನ ಗೆದ್ದ ಮೊದಲ ಭಾರತೀಯ ಕ್ರೀಡಾಪಟು ಆಗಿರುವ ಸಾಧನೆ ಮಾಡಿದ್ದಾರೆ. 2018ರಲ್ಲಿ ಗೋಲ್ಡ್ ಕೋಸ್ಟ್ ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಅವರು ಚಿನ್ನ ಗೆದ್ದ ಬಳಿಕ ಅವರಿಗೆ ಕೇಂದ್ರ ಸರ್ಕಾರ ಅರ್ಜುನ ಪ್ರಶಸ್ತಿ ನೀಡಿ ಗೌರವಿಸಿತ್ತು.



Click it and Unblock the Notifications
