Latest Updates
-
ವಿಶ್ವ ಆಸ್ಟಿಯೋ ಪೋರೋಸಿಸ್ ದಿನ: ಮೂಳೆಗಳನ್ನು ಗಟ್ಟಿಗೊಳಿಸಲು ಮನೆಯಲ್ಲೇ ಮಾಡಿ ಈ 12 ನಿಮಿಷಗಳ ಸರಳ ವ್ಯಾಯಾಮ! -
ಗರ್ಬಾ ರಾತ್ರಿಯಲ್ಲಿ ಸುರಕ್ಷಿತವಾಗಿರಲು ಹೀಗೆ ಮಾಡಿ: ಮಿಶ್ರ ಧರ್ಮದ ಜೋಡಿಗಳಿಗೆ ಅಗತ್ಯವಿರುವ ಐಡಿ ಪರಿಶೀಲನೆ ಮತ್ತು ಹೆಲ್ಪ್ಲೈನ್ -
ಆಯುಧ ಪೂಜೆ: ಕೇವಲ ₹399ರಲ್ಲಿ ಮನೆ ಮತ್ತು ಬಾಲ್ಕನಿ ಅಲಂಕಾರಕ್ಕೆ ಇಲ್ಲಿದೆ ಬೆಸ್ಟ್ ಟಿಪ್ಸ್! -
ಮಳೆಗಾಲದ ನವರಾತ್ರಿ ಪ್ರಯಾಣ: ಉಪವಾಸದ ಆಹಾರ ಹಾಳಾಗದಂತೆ ತಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ದುರ್ಗಾ ಪೂಜಾ ಸಂಭ್ರಮ: ಇಂದಿನಿಂದ ಕೋಲ್ಕತ್ತಾದಲ್ಲಿ ಬೆಳಗಿನ ಜಾವ 4 ಗಂಟೆಯವರೆಗೆ ಮೆಟ್ರೋ ಸೇವೆ, ಪಂಡಾಲ್ ದರ್ಶನಕ್ಕೆ ಇನ್ನು ಸುಲಭ! -
ನವರಾತ್ರಿ ಗರ್ಬಾ ಆಡುವ ಮುನ್ನ ಈ 9 ನಿಮಿಷದ ವಾರ್ಮ್-ಅಪ್ ಮಿಸ್ ಮಾಡ್ಬೇಡಿ! -
ನವರಾತ್ರಿ ಡೇ 6: ಗರ್ಬಾ ಅಖಾಡದಲ್ಲಿ ಕಪಲ್ಸ್ಗೆ ಇಲ್ಲಿದೆ ಸುವರ್ಣ ನಿಯಮಗಳು! -
ಈಶಾನ್ಯ ಮಾನ್ಸೂನ್ ಆರಂಭ: ಮಳೆಗಾಲದ ತೇವಾಂಶದಿಂದ ಮನೆಯನ್ನು ರಕ್ಷಿಸಲು 30 ನಿಮಿಷಗಳ ಸಿಂಪಲ್ ಪ್ಲಾನ್ -
ದೆಹಲಿ ಮಾಲಿನ್ಯದ ನಡುವೆ ಆರೋಗ್ಯ ರಕ್ಷಣೆ: ರೋಗನಿರೋಧಕ ಶಕ್ತಿ ಹೆಚ್ಚಿಸುವ ಸರಳ ಬಿಸಿ ಆಹಾರಗಳಿವು! -
ವಿಶ್ವ ಆಹಾರ ದಿನ: ಕೇವಲ 15 ನಿಮಿಷದಲ್ಲಿ ಸಿದ್ಧವಾಗುವ ₹120 ಒಳಗಿನ ಬೆಸ್ಟ್ ವೆಜ್ ಪ್ರೋಟೀನ್ ಡಯಟ್ ಪ್ಲಾನ್!
ಲೋಕಸಭೆ ಅಖಾಡದಲ್ಲಿ ಅತ್ಯಂತ ಕಿರಿಯ ಅಭ್ಯರ್ಥಿ..! ಈಕೆ ವಯಸ್ಸು ಎಷ್ಟು ಗೊತ್ತಾ?
ದೇಶದಲ್ಲಿ ಲೋಕಸಭೆ ಚುನಾವಣೆಗೆ ಭರದ ಸಿದ್ಧತೆ ನಡೆಯುತ್ತಿದೆ. ಎಲ್ಲಾ ಪಕ್ಷಗಳು ತಮ್ಮ ಅಭ್ಯರ್ಥಿಗಳ ಗೆಲುವಿಗಾಗಿ ಶ್ರಮಿಸುತ್ತಿವೆ. ಈ ಬಾರಿಯ ಚುನಾವಣೆಯಲ್ಲಿ ಹತ್ತು ಹಲವು ಅಚ್ಚರಿಗಳು ನಡೆಯುತ್ತಿವೆ. ಭಾರತದಲ್ಲಿ ಚುನಾವಣೆ ಎಂದರೆ ಅದೊಂದು ಪ್ರಜಾಪ್ರಭುತ್ವದ ಹಬ್ಬದಂತಾಗುತ್ತದೆ. ಇನ್ನು ಸಾವಿರಾರು ಅಭ್ಯರ್ಥಿಗಳು ತಮ್ಮ ಅದೃಷ್ಟ ಪರೀಕ್ಷಗೆ ಇಳಿಯುತ್ತಾರೆ.
ಈ ಬಾರಿಯ ಚುನಾವಣೆಯಲ್ಲಿ ಅತ್ಯಂತ ಕಿರಿಯ ಅಭ್ಯರ್ಥಿಯಾಗಿ 25 ವರ್ಷದ ಶಾಂಭವಿ ಚೌಧರಿ ಕಣಕ್ಕಿಳಿದಿದ್ದಾರೆ. ಬಿಹಾರದ ಸಮಸ್ತಿಪುರ್ ಲೋಕಸಭಾ ಕ್ಷೇತ್ರದಿಂದ ಶಾಂಭವಿ ಕಣಕ್ಕಿಳಿದಿದ್ದು, ಇವರು ಈ ಬಾರಿಯ ಚುನಾವಣೆಯ ಅತ್ಯಂತ ಕಿರಿಯ ಅಭ್ಯರ್ಥಿ ಎಂಬ ಕೀರ್ತಿಗೆ ಭಾಜನರಾಗಿದ್ದಾರೆ.

ಇವರು ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟದ (NDA) ಭಾಗವಾಗಿರುವ ಚಿರಾಗ್ ಪಾಸ್ವಾನ್ ಅವರ ಲೋಕ ಜನಶಕ್ತಿ ಪಕ್ಷದ ಮೂಲಕ ಮೊದಲ ಬಾರಿಗೆ ಅದೃಷ್ಟ ಪರೀಕ್ಷೆಗಿಳಿದಿದ್ದಾರೆ. ಕೇವಲ 25 ವರ್ಷ ವಯಸ್ಸಿನ ಅವರು ದೇಶದ ಅತ್ಯಂತ ಕಿರಿಯ ಅಭ್ಯರ್ಥಿಯಾಗಿದ್ದಾರೆ.
ಈ ಶಾಂಭವಿ ಚೌಧರಿ ಯಾರು?
ಬಿಹಾರ ಮೂಲದ ಶಾಂಭವಿ, ಜನತಾ ದಳ ಯುನೈಟೆಡ್ (ಜೆಡಿಯು) ಪಕ್ಷದ ಪ್ರಮುಖ ಸದಸ್ಯ ಅಶೋಕ್ ಚೌಧರಿ ಅವರ ಪುತ್ರಿಯಾಗಿದ್ದಾರೆ. ಅಶೋಕ್ ಚೌಧರಿ ಅವರು ಬಿಹಾರ ಕ್ಯಾಬಿನೆಟ್‌ನಲ್ಲಿ ವಿವಿಧ ಮಹತ್ವದ ಹುದ್ದೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ. ಹೆಚ್ಚುವರಿಯಾಗಿ, ಶಾಂಭವಿ, ಸಾಯನ್ ಕುನಾಲ್ ಅವರನ್ನು ವಿವಾಹವಾಗಿದ್ದಾರೆ.
ಶಾಂಭವಿ ಚೌಧರಿ ಅವರ ಶೈಕ್ಷಣಿಕ ಹಿನ್ನೆಲೆ ಏನು?
ಶಾಂಭವಿ ಚೌಧರಿ ಅವರು ಪಾಟ್ನಾದ ನೊಟ್ರೆ ಡೇಮ್ ಅಕಾಡೆಮಿಯಲ್ಲಿ ತಮ್ಮ ಶಾಲಾ ಶಿಕ್ಷಣವನ್ನು ಪೂರ್ಣಗೊಳಿಸಿದರು. ದೆಹಲಿ ವಿಶ್ವವಿದ್ಯಾಲಯದ ಲೇಡಿ ಶ್ರೀರಾಮ್ ಕಾಲೇಜಿನಲ್ಲಿ ಪದವಿಪೂರ್ವ ಶಿಕ್ಷಣವನ್ನು ಪಡೆದರು. ಅವರು ದೆಹಲಿ ಸ್ಕೂಲ್ ಆಫ್ ಎಕನಾಮಿಕ್ಸ್‌ನಿಂದ ಸ್ನಾತಕೋತ್ತರ ಪದವಿಯನ್ನು ಪಡೆಯುವ ಮೂಲಕ ತಮ್ಮ ಶಿಕ್ಷಣವನ್ನು ಮುಂದುವರೆಸಿದರು. ಪ್ರಸ್ತುತ, ಅವರು ಬಿಹಾರದ ಮಗಧ್ ವಿಶ್ವವಿದ್ಯಾನಿಲಯದಿಂದ ಪಿಎಚ್‌ಡಿ ವ್ಯಾಸಂಗ ಮಾಡುತ್ತಿದ್ದಾರೆ.
ಪರಿಶಿಷ್ಟ ಜಾತಿ (ಎಸ್‌ಸಿ) ಮೀಸಲು ಕ್ಷೇತ್ರವಾದ ಸಮಸ್ತಿಪುರವನ್ನು ಈ ಹಿಂದೆ 2019 ರಲ್ಲಿ ಮಾಜಿ ಕೇಂದ್ರ ಸಚಿವ ಪಶುಪತಿ ಪಾರಸ್ ಅವರ ಪುತ್ರ ಪ್ರಿನ್ಸ್ ಗೆದ್ದಿದ್ದರು. ಈ ಕ್ಷೇತ್ರದಲ್ಲಿ ಯುವ ಅಭ್ಯರ್ಥಿಗಳು ಚುನಾವಣೆ ಸ್ಪರ್ಧಿಸಿ ಗೆಲುವು ಪಡೆದಿದ್ದಾರೆ. ಹಾಗಾಗಿ ಈ ಕ್ಷೇತ್ರದಲ್ಲಿ ಮೊದಲ ಬಾರಿಗೆ ಚುನಾವಣೆ ಎದುರಿಸುವವರಿಗೆ ಗೆಲುವು ಸಿಗಲಿದೆ ಎನ್ನಲಾಗುತ್ತದೆ. ಹೀಗಾಗಿ ಮೊದಲ ಚುನಾವಣೆಯಲ್ಲಿ ಗೆಲುವು ಪಡೆಯಬೇಕು ಎಂಬ ಅಭಿಪಾಷೆ ಹೊಂದಿರುವವರು ಈ ಕ್ಷೇತ್ರ ಆಯ್ಕೆ ಮಾಡಿಕೊಳ್ಳುತ್ತಾರೆ
ಅತೀ ಹೆಚ್ಚು ಬಾರಿ ಚುನಾವಣೆ ಸೋತ ವ್ಯಕ್ತಿ
ಇನ್ನು ಅತೀ ಹೆಚ್ಚು ಬಾರಿ ಚುನಾವಣೆಯಲ್ಲಿ ಸೋಲು ಕಂಡ ವ್ಯಕ್ತಿಗಳಲ್ಲಿ ಪದ್ಮರಾಜನ್ ಮೊದಲ ಸ್ಥಾನದಲ್ಲಿ ನಿಲ್ಲುತ್ತಾರೆ ಏಕೆಂದರೆ ಅವರು ಬರೋಬ್ಬರಿ 238 ಬಾರಿ ಸೋಲು ಅನುಭವಿಸಿದ್ದಾರೆ. ತಮಿಳುನಾಡು ಮೂಲದವರಾದ ಅವರು, ಪ್ರಧಾನಿ ಮೋದಿ, ರಾಹುಲ್ ವಿರುದ್ಧವೂ ಸ್ಪರ್ಧಿಸಿದ್ದಾರೆ.
ತಮಿಳುನಾಡಿನ ಮೆಟ್ಟೂರು ಮೂಲದ ಕೆ.ಪದ್ಮರಾಜನ್ ಬರೋಬ್ಬರಿ 238 ಬಾರಿ ಸೋಲು ಅನುಭವಿಸಿರುವ ವ್ಯಕ್ತಿಯಾಗಿದ್ದಾರೆ. ಸುಮಾರು 65 ವರ್ಷದ ಅವರು ಈ ಬಾರಿಯ ಲೋಕಸಭೆ ಚುನಾವಣೆಗೂ ಸ್ಪರ್ಧಿಸಲು ಮುಂದಾಗಿದ್ದಾರೆ. ಆದರೆ ಈ ಹಿಂದೆ ಸ್ಪರ್ಧಿಸಿರುವ ಎಲ್ಲಾ ಚುನಾವಣೆಯಲ್ಲಿಯೂ ಅವರು ಸೋಲು ಅನುಭವಿಸಿದ್ದಾರೆ.
ಮೊದಲ ಚುನಾವಣೆಹಯಿಂದಲೂ ಸೋಲು
ಪದ್ಮರಾಜನ್ 1988ರಲ್ಲಿ ತಮ್ಮ ಹಟ್ಟೂರಿನಲ್ಲಿ ಮೊಟ್ಟ ಮೊದಲ ಬಾರಿಗೆ ಚುನಾವಣೆ ಎದುರಿಸಿದ್ದರು. ಟೈರ್ ಅಂಗಡಿ ಮಾಲೀಕರಾಗಿದ್ದ ಅವರು, ಚುನಾವಣೆ ಎದುರಿಸಿ ಹೀನಾಯ ಸೋಲು ಕಂಡಿದ್ದರು. ಇದೀಗ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ತಮಿಳುನಾಡಿನ ಧರ್ಮಪುರಿ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ.
ಒಂದೊಂದು ಬಾರಿ ಒಂದೊಂದು ಚಿಹ್ನೆಯಡಿ ಚುನಾವಣೆ
ಅವರು 238 ಬಾರಿ ಚುನಾವಣೆ ಎದುರಿಸಿದ್ದು ಎಲ್ಲಾ ಬಾರಿಯೂ ಚಿತ್ರ ವಿಚಿತ್ರವಾದ ಗುರುತಿನಡಿ ಚುನಾವಣೆ ಎದುರಿಸಿದ್ದಾರೆ. ಒಮ್ಮೆ ಎತ್ತಿನಗಾಡಿ, ಟೈರ್, ಮೀನು, ಉಂಗುರ, ಟೋಪಿ, ದೂರವಾಣಿ, ಕಹಳೆ, ಚಪ್ಪಲಿ, ತೆಂಗಿನಕಾಯಿ, ಕಾರು, ಆಟೋ ಹೀಗೆ ಹೇಳುತ್ತಾ ಹೋದರೆ ಈ ಪಟ್ಟಿ ಮುಗಿಯುವುದಿಲ್ಲ.



Click it and Unblock the Notifications
