Latest Updates
-
ವಿಶ್ವ ಆಸ್ಟಿಯೋ ಪೋರೋಸಿಸ್ ದಿನ: ಮೂಳೆಗಳನ್ನು ಗಟ್ಟಿಗೊಳಿಸಲು ಮನೆಯಲ್ಲೇ ಮಾಡಿ ಈ 12 ನಿಮಿಷಗಳ ಸರಳ ವ್ಯಾಯಾಮ! -
ಗರ್ಬಾ ರಾತ್ರಿಯಲ್ಲಿ ಸುರಕ್ಷಿತವಾಗಿರಲು ಹೀಗೆ ಮಾಡಿ: ಮಿಶ್ರ ಧರ್ಮದ ಜೋಡಿಗಳಿಗೆ ಅಗತ್ಯವಿರುವ ಐಡಿ ಪರಿಶೀಲನೆ ಮತ್ತು ಹೆಲ್ಪ್ಲೈನ್ -
ಆಯುಧ ಪೂಜೆ: ಕೇವಲ ₹399ರಲ್ಲಿ ಮನೆ ಮತ್ತು ಬಾಲ್ಕನಿ ಅಲಂಕಾರಕ್ಕೆ ಇಲ್ಲಿದೆ ಬೆಸ್ಟ್ ಟಿಪ್ಸ್! -
ಮಳೆಗಾಲದ ನವರಾತ್ರಿ ಪ್ರಯಾಣ: ಉಪವಾಸದ ಆಹಾರ ಹಾಳಾಗದಂತೆ ತಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ದುರ್ಗಾ ಪೂಜಾ ಸಂಭ್ರಮ: ಇಂದಿನಿಂದ ಕೋಲ್ಕತ್ತಾದಲ್ಲಿ ಬೆಳಗಿನ ಜಾವ 4 ಗಂಟೆಯವರೆಗೆ ಮೆಟ್ರೋ ಸೇವೆ, ಪಂಡಾಲ್ ದರ್ಶನಕ್ಕೆ ಇನ್ನು ಸುಲಭ! -
ನವರಾತ್ರಿ ಗರ್ಬಾ ಆಡುವ ಮುನ್ನ ಈ 9 ನಿಮಿಷದ ವಾರ್ಮ್-ಅಪ್ ಮಿಸ್ ಮಾಡ್ಬೇಡಿ! -
ನವರಾತ್ರಿ ಡೇ 6: ಗರ್ಬಾ ಅಖಾಡದಲ್ಲಿ ಕಪಲ್ಸ್ಗೆ ಇಲ್ಲಿದೆ ಸುವರ್ಣ ನಿಯಮಗಳು! -
ಈಶಾನ್ಯ ಮಾನ್ಸೂನ್ ಆರಂಭ: ಮಳೆಗಾಲದ ತೇವಾಂಶದಿಂದ ಮನೆಯನ್ನು ರಕ್ಷಿಸಲು 30 ನಿಮಿಷಗಳ ಸಿಂಪಲ್ ಪ್ಲಾನ್ -
ದೆಹಲಿ ಮಾಲಿನ್ಯದ ನಡುವೆ ಆರೋಗ್ಯ ರಕ್ಷಣೆ: ರೋಗನಿರೋಧಕ ಶಕ್ತಿ ಹೆಚ್ಚಿಸುವ ಸರಳ ಬಿಸಿ ಆಹಾರಗಳಿವು! -
ವಿಶ್ವ ಆಹಾರ ದಿನ: ಕೇವಲ 15 ನಿಮಿಷದಲ್ಲಿ ಸಿದ್ಧವಾಗುವ ₹120 ಒಳಗಿನ ಬೆಸ್ಟ್ ವೆಜ್ ಪ್ರೋಟೀನ್ ಡಯಟ್ ಪ್ಲಾನ್!
ಇದೆ ಮೊದಲು: ಮಿಲಿಟರಿ ಕಾರ್ಯಾಚರಣೆ ಕುರಿತು ಮಹಿಳಾ ಅಧಿಕಾರಿ ಮಾಹಿತಿ..! ಈ ಇಬ್ಬರು ಯಾರು ಗೊತ್ತಾ?
ಭಾರತ ಹಾಗೂ ಪಾಕ್ ನಡುವಿನ ಯುದ್ಧ ಭೀತಿ ಹೆಚ್ಚಾಗುತ್ತಿರುವ ನಡುವೆ ಭಾರತ ಪಾಕ್ ನೆಲದಲ್ಲಿ ಉಗ್ರರ ಶಿಬಿರಗಳ ಮೇಲೆ ದಾಳಿ ನಡೆಸಿರುವುದಾಗಿ ಅಧಿಕೃತ ಹೇಳಿಕೆ ನೀಡಿದೆ. ಪಹಲ್ಗಾಮ್‌ನಲ್ಲಿ ನಡೆದ ಪ್ರವಾಸಿಗರ ಮೇಲಿನ ದಾಳಿ ಸಂಬಂಧ ಈಗ ಪ್ರತಿಕಾರವಾಗಿ ಪಾಕ್ ವಿರುದ್ಧ ಕ್ಷಿಪಣಿ ದಾಳಿ ನಡೆದಿದೆ. ಆಪರೇಷನ್ ಸಿಂಧೂರ್ ಯಶಸ್ವಿಯಾಗಿದೆ ಎಂದು ಭಾರತ ಹೇಳಿಕೊಂಡಿದೆ.
ಇನ್ನು ಈ ಸಂಬಂಧವಾಗಿ ಮಾಧ್ಯಮ ಹೇಳಿಕೆ ನೀಡುವಾಗ ಇಬ್ಬರು ಮಹಿಳಾ ಅಧಿಕಾರಿಗಳು ವೇದಿಕೆ ಮೇಲೆ ಹಾಜರಿದ್ದರು. ಭಾರತೀಯ ಸೇನೆಯಲ್ಲಿ ಮಹಿಳಾ ಕಮಾಂಡರ್‌ಗಳ ಸಂಖ್ಯೆ ಕಡಿಮೆ ಇದ್ದರೂ ಇದೇ ಮೊದಲ ಬಾರಿಗೆ ಮಹಿಳಾ ಅಧಿಕಾರಿಗಳು ಅಧಿಕೃತ ಸುದ್ದಿಗೋಷ್ಠಿಯಲ್ಲಿ ಭಾಗಿಯಾಗಿದ್ದು ಎಲ್ಲರ ಗಮನ ಸೆಳೆದಿದೆ.

ಸಶಸ್ತ್ರ ಪಡೆಗಳು ಮಾಧ್ಯಮಗಳನ್ನು ಉದ್ದೇಶಿಸಿ ಇಬ್ಬರು ಮಹಿಳಾ ಅಧಿಕಾರಿಗಳೊಂದಿಗೆ ಆಪರೇಷನ್ ಸಿಂಧೂರ್ ಅನ್ನು ಹೇಗೆ ಯೋಜಿಸಲಾಗಿದೆ ಮತ್ತು ಗುರಿಗಳೇನು ಎಂಬುದನ್ನು ವಿವರಿಸಿದರು. ವಿಂಗ್ ಕಮಾಂಡರ್ ವ್ಯೋಮಿಕಾ ಸಿಂಗ್ ಮತ್ತು ಕರ್ನಲ್ ಸೋಫಿಯಾ ಖುರೇಷಿ ಈ ಜವಾಬ್ದಾರಿ ಹೊತ್ತಿದ್ದರು. ಇದೇ ಮೊದಲ ಬಾರಿಗೆ ಮಹಿಳಾ ಅಧಿಕಾರಿಗಳು ಈ ಜವಾಬ್ದಾರಿಯುವ ಕಾರ್ಯಕ್ಕೆ ನಿಯೋಜನೆಗೊಂಡಿದ್ದರು. ಇದು ಎಲ್ಲರ ಅಚ್ಚರಿಗೂ ಕಾರಣವಾಗಿತ್ತು.
ಹಾಗಾದ್ರೆ ಯಾರು ಈ ವಿಂಗ್ ಕಮಾಂಡರ್ ವ್ಯೋಮಿಕಾ ಸಿಂಗ್ ಮತ್ತು ಕರ್ನಲ್ ಸೋಫಿಯಾ ಖುರೇಷಿ ಅವರ ಪಾತ್ರವೇನು? ಎಂಬುದನ್ನು ತಿಳಿಯುವುದು ಮುಖ್ಯವಾಗಿದೆ.
ವಿಂಗ್ ಕಮಾಂಡರ್ ವ್ಯೋಮಿಕಾ ಸಿಂಗ್ ಯಾರು?
ವಿಂಗ್ ಕಮಾಂಡರ್ ವ್ಯೋಮಿಕಾ ಸಿಂಗ್ ರಾಷ್ಟ್ರೀಯ ಕೆಡೆಟ್ ಕಾರ್ಪ್ಸ್ (ಎನ್‌ಸಿಸಿ) ಗೆ ಸೇರಿದರು ಮತ್ತು ನಂತರ ತಮ್ಮ ಎಂಜಿನಿಯರಿಂಗ್ ಪೂರ್ಣಗೊಳಿಸಿದರು. ಅವರ ಕುಟುಂಬದಲ್ಲಿ ಸಶಸ್ತ್ರ ಪಡೆಗೆ ಸೇರಿದ ಮೊದಲ ವ್ಯಕ್ತಿ ಎಂಬ ಹೆಗ್ಗಳಿಕೆ ಅವರದ್ದು, ವ್ಯೋಮಿಕಾ ಸಿಂಗ್ ಐಎಎಫ್‌ನಲ್ಲಿ ಹೆಲಿಕಾಪ್ಟರ್ ಪೈಲಟ್ ಆಗಿ ನೇಮಕಗೊಂಡರು. ಅವರಿಗೆ 2,500 ಕ್ಕೂ ಹೆಚ್ಚು ಗಂಟೆಗಳ ಕಾಳ ಯುದ್ಧ ವಿಮಾನದಗಳ ಹಾರಾಟದ ಅನುಭವವಿದೆ. ಈಗ ಆಪರೇಷನ್ ಸಿಂಧೂರ್ ಕಾರ್ಯಾಚರಣೆಯಲ್ಲಿ ಮುಖ್ಯ ಪಾತ್ರ ವಹಿಸಿದ್ದ ಅವರು ರೂಪು ರೇಷೆಗಳು, ಸೇರಿದಂತೆ ಕಾರ್ಯಾಚರಣೆಯ ಕುರಿತಾಗಿ ವಿವರಣೆ ನೀಡಿದರು.
ಲೆಫ್ಟಿನೆಂಟ್ ಕರ್ನಲ್ ಸೋಫಿಯಾ ಖುರೇಷಿ ಯಾರು?
ಭಾರತೀಯ ಸೇನೆಯ ಮಾಧ್ಯಮಗೋಷ್ಠಿಯಲ್ಲಿ ಗಮನ ಸೆಳೆದ ಮತ್ತೋರ್ವ ಮಹಿಳಾ ಅಧಿಕಾರಿ ಈ ಲೆಫ್ಟಿನೆಂಟ್ ಕರ್ನಲ್ ಸೋಫಿಯಾ ಖುರೇಷಿ. ಕರ್ನಲ್ ಸೋಫಿಯಾ ಖುರೇಷಿ ಗುಜರಾತ್‌ಗೆ ಸೇರಿದವರು. ಅವರು ಜೀವರಸಾಯನಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಖುರೇಷಿ ಅವರ ಅಜ್ಜ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿದ್ದಾರೆ. ಹಾಗೆ ಖುರೇಷಿ ಯಾಂತ್ರಿಕೃತ ಪದಾತಿ ದಳ ಅಧಿಕಾರಿಯನ್ನು ವಿವಾಹ ಕೂಡ ಆಗಿದ್ದಾರೆ. ಹೀಗಾಗಿ ಇವರ ಕುಟುಂಬದಲ್ಲಿ ಸೇನೆಗೆ ಸಂಬಂಧಿದಂತೆ ಮೊದಲೇ ಕರ್ತವ್ಯ ನಿರ್ವಹಿಸಿದ್ದಾರೆ.
ಕರ್ನಲ್ ಸೋಫಿಯಾ ಖುರೇಷಿ ಭಾರತೀಯ ಸೇನೆಯ ಸಿಗ್ನಲ್ಸ್ ಕಾರ್ಪ್ಸ್‌ನ ಅಧಿಕಾರಿಯಾಗಿದ್ದಾರೆ. 2016 ರಲ್ಲಿ ಕರ್ನಲ್ ಸೋಫಿಯಾ ಖುರೇಷಿ ಅವರು ಆಸಿಯಾನ್ ಪ್ಲಸ್ ಬಹುರಾಷ್ಟ್ರೀಯ ಕ್ಷೇತ್ರ ತರಬೇತಿ ವ್ಯಾಯಾಮ, ಫೋರ್ಸ್ 18 ನಲ್ಲಿ ಭಾರತೀಯ ಸೇನಾ ತರಬೇತಿ ತುಕಡಿಯನ್ನು ಮುನ್ನಡೆಸಿದ ಮೊದಲ ಮಹಿಳಾ ಅಧಿಕಾರಿ ಎಂಬ ಹೆಗ್ಗಳಿಕೆ ಕೂಡ ಪಡೆದಿದ್ದಾರೆ.
ಸೇನೆಯ ಇಬ್ಬರು ಹಿರಿಯ ಮಹಿಳಾ ಅಧಿಕಾರಿಗಳು ಜಂಟಿಯಾಗಿ ಮಾಧ್ಯಮಗಳಿಗೆ ಆಪರೇಷನ್ ಸಿಂಧೂರ್ ಕುರಿತಾದ ಮಾಹಿತಿ ನೀಡಿದರು. ಪಹಲ್ಗಾಮ್ ಭಯೋತ್ಪಾದಕ ದಾಳಿಯ ಬಲಿಪಶುಗಳಿಗೆ ನ್ಯಾಯ ಒದಗಿಸಲು ಆಪರೇಷನ್ ಸಿಂಧೂರ್ ಅನ್ನು ಪ್ರಾರಂಭಿಸಲಾಗಿದೆ ಎಂದು ಹೇಳಿದರು. ಬುಧವಾರ ಬೆಳಗಿನ ಜಾವ 1:05 ರಿಂದ 1:30 ರ ನಡುವೆ ಕಾರ್ಯಾಚರಣೆ ನಡೆಸಲಾಗಿದೆ ಎಂದು ಮಾಹಿತಿ ಹಂಚಿಕೊಂಡಿದ್ದಾರೆ.



Click it and Unblock the Notifications
