Latest Updates
-
ಮದುವೆಯಾದ ತಕ್ಷಣ ಸ್ವಾತಂತ್ರ್ಯ ಕೊನೆಗೊಳ್ಳುವುದಿಲ್ಲ: ದಾಂಪತ್ಯದಲ್ಲಿ 'ಸಮ್ಮತಿ'ಯ ಮಹತ್ವವೇನು? -
ಕೇರಳದಲ್ಲಿ ಭಾರೀ ಮಳೆ: ಯೆಲ್ಲೋ ಅಲರ್ಟ್ ಘೋಷಣೆ; ನಿಮ್ಮ ಮನೆ ಮತ್ತು ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳು ಅತ್ಯಗತ್ಯ -
ಗಣೇಶ ಹಬ್ಬದ ಪ್ರಸಾದ ತಯಾರಿಸುತ್ತಿದ್ದೀರಾ? ಕಲಬೆರಕೆ ತಡೆಯಲು ಮತ್ತು ಸುರಕ್ಷಿತ ಪ್ರಸಾದಕ್ಕೆ ಇಲ್ಲಿದೆ ಮಹತ್ವದ ಟಿಪ್ಸ್ -
ಐಫೋನ್ 18 ಪ್ರೋ ಮತ್ತು ಡ್ಯುವೋ ಭಾರತದಲ್ಲಿ ಲಾಂಚ್: ಬೆಲೆ, ಆಫರ್ ಮತ್ತು ಪ್ರಿ-ಆರ್ಡರ್ ಮಾಹಿತಿ ಇಲ್ಲಿದೆ! -
ವಿಶ್ವ ಆತ್ಮಹತ್ಯೆ ತಡೆ ದಿನ: ಮಾನಸಿಕ ಆರೋಗ್ಯ ಸುಧಾರಿಸಲು 10 ನಿಮಿಷದ ಸಿಂಪಲ್ ಮಾರ್ನಿಂಗ್ ರೂಟೀನ್ ಮತ್ತು ಹೆಲ್ಪ್ಲೈನ್ ವಿವರಗಳು -
ವಿಚ್ಛೇದನದ ನಂತರವೂ ಜೀವನಾಂಶ ಪಡೆಯಬಹುದೇ? ಮಧ್ಯಪ್ರದೇಶ ಹೈಕೋರ್ಟ್ನಿಂದ ಮಹತ್ವದ ತೀರ್ಪು! -
ದೆಹಲಿ ವಾಯು ಮಾಲಿನ್ಯ: ಮನೆಯಲ್ಲಿ ಶುದ್ಧ ಗಾಳಿ ಪಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ಪ್ಯಾಕ್ ಮಾಡಿದ ಆಹಾರದ ಮೇಲೆ 'ರೆಡ್ ಹೆಕ್ಸಗನ್' ಎಚ್ಚರಿಕೆ: ಇನ್ಮುಂದೆ ತಿನ್ನುವ ಮುನ್ನ ಈ ವಿಷಯ ಗಮನಿಸಿ! -
ಆಪಲ್ 'ಸರ್ಪ್ರೈಸ್ ಆಂಡ್ ಶೈನ್' ಈವೆಂಟ್: ಐಫೋನ್ 18 ಪ್ರೋ ಮತ್ತು ಫೋಲ್ಡಬಲ್ ಆಲ್ಟ್ರಾ ಲಾಂಚ್, ಭಾರತದಲ್ಲಿ ಬೆಲೆ ಎಷ್ಟು? -
ಟಾಟಾ ಮುಂಬೈ ಮ್ಯಾರಥಾನ್ ಡ್ರೀಮ್ ರನ್: ಇಂದೇ ನೋಂದಣಿ ಮುಕ್ತಾಯ, ಓಟಕ್ಕೆ ಸಜ್ಜಾಗಲು 20 ನಿಮಿಷದ ಪ್ಲಾನ್ ಇಲ್ಲಿದೆ!
ಅಮೆರಿಕ ಅಧ್ಯಕ್ಷರಾಗ್ತಾರಾ ಕಮಲಾ ಹ್ಯಾರಿಸ್..!? ತಮಿಳುನಾಡಿನ ಈ ದೇವಾಲಯದಲ್ಲಿ ಸಂಭ್ರಮ..!
ಅಮೆರಿಕ ಅಧ್ಯಕ್ಷೀಯ ಚುನಾವಣೆ ಈಗ ಸಿಕ್ಕಾಪಟ್ಟೆ ಸುದ್ದಿಯಾಗುತ್ತಿದೆ. ಹಾಲಿ ಅಧ್ಯಕ್ಷ ಜೋ ಬೈಡನ್ ಅಧ್ಯಕ್ಷ ಸ್ಥಾನದ ಅಭ್ಯರ್ಥಿಯಾಗುವುದಿಲ್ಲ ಎಂದು ತಿಳಿಸಿದ್ದಾರೆ. ಹೀಗಾಗಿ ಕಮಲಾ ಹ್ಯಾರಿಸ್ ಅಧ್ಯಕ್ಷೀಯ ಸ್ಥಾನದ ಅಭ್ಯರ್ಥಿಯಾಗಿದ್ದಾರೆ. ಇನ್ನೊಂದೆಡೆ ಡೊನಾಲ್ಡ್ ಟ್ರಂಪ್ ಈ ಚುನಾವಣೆಗಾಗಿ ಭರ್ಜರಿ ತಯಾರಿ ನಡೆಸಿದ್ದಾರೆ.
ಇನ್ನು ಭಾರತದ ಮೂಲದವರಾಗಿರುವ ಕಮಲಾ ಹ್ಯಾರಿಸ್ ಕಳೆದ ಬಾರಿ ಚುನಾವಣೆಯಲ್ಲಿ ಸ್ಪರ್ಧಿಸಿ ಗೆಲುವು ಪಡೆದಿದ್ದರು. ಹೀಗಾಗಿ ಈ ಭಾರಿ ಚುನಾವಣೆಯಲ್ಲಿ ಗೆಲುವು ಪಡೆದರೆ ಅಮೆರಿಕ ಅಧ್ಯಕ್ಷರಾಗಿ ಆಯ್ಕೆಯಾಗುವುದು ಖಚಿತವಾಗಿದೆ. ಹೀಗಾಗಿ ಕಮಲಾ ಹ್ಯಾರಿಸ್ ಅವರ ಪೂರ್ವಜರ ಊರಿನಲ್ಲಿ ಈಗಾಗಲೇ ಸಂಭ್ರಮ ಮನೆ ಮಾಡಿದೆ.

ಟ್ರಂಪ್ ವಿರುದ್ಧ ಜೋ ಬೈಡನ್ ಗೆಲ್ಲುವುದು ಸಾಧ್ಯ ಇಲ್ಲವೇ ಇಲ್ಲ ಎಂಬುದು ಗೊತ್ತಾಯಿತೋ, ಆಗಲೇ ಒಬಾಮಾ ಸಹಿತ ಡೆಮಾಕ್ರಟಿಕ್ ಪಕ್ಷದ ನಾಯಕರೆಲ್ಲಾ ಸೇರಿ ಬೈಡನ್ ಮನವೊಲಿಸಿ ಕಮಲಾ ಅವರನ್ನು ಅಧ್ಯಕ್ಷೀಯ ಅಭ್ಯರ್ಥಿ ಮಾಡಿದ್ದಾರೆ. ಹೀಗಾಗಿ ಕಳೆದ ಬಾರಿ ಉಪಾಧ್ಯಕ್ಷೆಯಾಗಿದ್ದರು ಆದರೆ ಈ ಬಾರಿ ಅಮೆರಿಕ ಅಧ್ಯಕ್ಷರಾಗಿ ಆಯ್ಕೆಯಾಗಿತ್ತಾರೆ ಎಂದು ಗ್ರಾಮದಲ್ಲಿ ಸಂಭ್ರಮ ಮನೆ ಮಾಡಿದೆ.
ತಮಿಳುನಾಡಿನ ತಿರುವರೂರು ಜಿಲ್ಲೆಯ ತುಳಸೇಂದ್ರಪುರಂನಲ್ಲಿರುವ ಕಮಲಾ ಹ್ಯಾರಿಸ್ ಅವರ ಪೂರ್ವಜರ ಗ್ರಾಮದಲ್ಲಿರುವ ಕುಟುಂಬ ದೇವಸ್ಥಾನದಲ್ಲಿ ವಿಶೇಷ ಪೂಜೆಯನ್ನು ಸಲ್ಲಿಸಿದ್ದಾರೆ, ಮುಂಬರುವ ಅಧ್ಯಕ್ಷೀಯ ಚುನಾವಣೆಯಲ್ಲಿ ಕೆಲವು ಪಡೆಯಲಿ ಎಂದು ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಅಮೆರಿಕ ಚುನಾವಣೆಗೆ ಕಮಲಾ ಹ್ಯಾರಿಸ್ ಅವರ ಹೆಸರನ್ನು ಅಧ್ಯಕ್ಷೀಯ ಅಭ್ಯರ್ಥಿಯಾಗಿ ಘೋಷಿಸಿದ ನಂತರ ತುಳಸೇಂದ್ರಪುರಂನಲ್ಲಿ ಸಂಭ್ರಮ ಮನೆ ಮಾಡಿದೆ. ಗ್ರಾಮದ ಶ್ರೀ ಧರ್ಮಶಾಸ್ತಾ ದೇವಸ್ಥಾನವು ವಿಶಿಷ್ಟ ಸಂಪ್ರದಾಯ ಹೊಂದಿದೆ. ಈ ದೇವಾಲಯಕ್ಕೆ ಕಮಲಾ ಹ್ಯಾರಿಸ್ ದೇಣಿಗೆ ನೀಡಿರುವ ಕುರಿತು ದೇವಾಯದಲ್ಲೇ ಉಲ್ಲೇಖವಿದೆ.
ದೇವಾಲಯದ ಗೋಡೆಯ ಮೇಲೆ ಕಮಲಾ ಹ್ಯಾರಿಸ್ ನೀಡಿರುವ ದೇಣಿಗೆ ಕುರಿತು ಬರೆಯಲಾಗಿದೆ. ತುಳಸೇಂದ್ರಪುರಂನ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಲು ಬಂದ ಮಹಿಳೆಯೊಬ್ಬರು ಕಮಲಾ ಹ್ಯಾರಿಸ್ ಈ ಚುನಾವಣೆಯಲ್ಲಿ ಜಯಗಳಿಸಲಿ ಎಂದು ಪ್ರಾರ್ಥನೆ ಮಾಡಲು ದೇವಾಲಯಕ್ಕೆ ಬಂದಿರುವುದಾಗಿ ಹೇಳಿದ್ದಾರೆ.
ಮಲಾ ಹ್ಯಾರಿಸ್ ಅವರ ತಾಯಿ ತಂದೆ ಆಕೆ ಐದು ವರ್ಷದವಳಿದ್ದಾಗ ಈ ಗ್ರಾಮವಾದ ತುಳಸೇಂದ್ರಪುರಕ್ಕೆ ಹೋಗಿದ್ದರು. ತಮ್ಮ ಅಜ್ಜನೊಂದಿಗೆ ಹಳ್ಳಿಯಿಂದ ಕೇವಲ 320 ಕಿಮೀ ದೂರದಲ್ಲಿರುವ ಚೆನ್ನೈನ ಕಡಲತೀರದ ಉದ್ದಕ್ಕೂ ನಡೆಯುತ್ತಿದ್ದರಂತೆ. 2021 ರಲ್ಲಿ, ಕಮಲಾ ಹ್ಯಾರಿಸ್ ಉಪಾಧ್ಯಕ್ಷರಾದಾಗ, ಗ್ರಾಮದಲ್ಲಿ ಪಟಾಕಿ ಸಿಡಿಸಿ, ಪೋಸ್ಟರ್ ಮತ್ತು ಕ್ಯಾಲೆಂಡರ್‌ಗಳೊಂದಿಗೆ ಅವರ ಚಿತ್ರಗಳನ್ನು ಹಂಚಲಾಗಿತ್ತು. ಗ್ರಾಮದಲ್ಲಿ ಸಿಹಿ ತಿಂಡಿಗಳ ಹಂಚಿ ಹಬ್ಬದ ವಾತಾವರಣ ಸೃಷ್ಟಿಯಾಗಿತ್ತು.
ಈ ಚುನಾವಣೆಯ ಬಳಿಕ ಅವರು ತಮಿಳುನಾಡಿಗೆ ಆಗಮಿಸಲಿದ್ದಾರೆ ಎಂದು ವರದಿಯಾಗಿತ್ತು. ಆದರೆ ಅವರು ಪ್ರವಾಸ ಕೈಗೊಂಡಿರಲಿಲ್ಲ. ಕಮಲಾ ಹ್ಯಾರಿಸ್ ಕುಟುಂಬವು 1930 ರ ದಶಕದಲ್ಲಿ ತುಳಸೇಂದ್ರಪುರವನ್ನು ತೊರೆದಿದೆ ಎಂದು ತಿಳಿದುಬಂದಿದೆ.
ಅವರು ನಾಮನಿರ್ದೇಶನಗೊಂಡಿರುವುದಕ್ಕೆ ನಮಗೆ ತುಂಬಾ ಸಂತೋಷವಾಗಿದೆ ಮತ್ತು ನಾವು ಜೋ ಬಿಡನ್ ಮತ್ತು ಕಮಲಾ ಹ್ಯಾರಿಸ್ ಅವರನ್ನು ಬೆಂಬಲಿಸುತ್ತೇವೆ. ನಾವು ಅವರಿಗೆ ಶುಭ ಹಾರೈಸುತ್ತೇವೆ ಮತ್ತು ಶುಭ ಹಾರೈಸುತ್ತೇವೆ. ಅವರು ಗೆದ್ದು ಬರಲಿದ್ದಾರೆ ಎಂದು ಗ್ರಾಮಸ್ಥರೊಬ್ಬರು ಹೇಳಿದ್ದಾರೆ.
ಕಳೆದ ಭಾನುವಾರ ಕಮಲಾ ಹ್ಯಾರಿಸ್, ಕ್ಯಾಪಿಟಲ್ ಹಿಲ್‌ನಲ್ಲಿ ಪ್ರಮುಖ ವ್ಯಕ್ತಿಗಳೊಂದಿಗೆ ಸಭೆ ನಡೆಸಿ ಅಧ್ಯಕ್ಷ ಸ್ಥಾನದ ಅಭ್ಯರ್ಥಿ ಆಯ್ಕೆ ಕುರಿತು ಚರ್ಚಿಸಿದ್ದಾರೆ. ಸದ್ಯ ನವೆಂಬರ್‌ನಲ್ಲಿ ಅಮೆರಿಕ ಅಧ್ಯಕ್ಷೀಯ ಸ್ಥಾನಕ್ಕೆ ಚುನಾವಣೆ ನಡೆಯಲಿದೆ. ಹೀಗಾಗಿ ಈ ಬಾರಿ ಕುತೂಹಲಕ್ಕೆ ಕಾರಣವಾಗಿದೆ.



Click it and Unblock the Notifications
