Latest Updates
-
ಹಾಲುಣಿಸುವ ತಾಯಂದಿರೇ ಗಮನಿಸಿ: ಬೆನ್ನು ಮತ್ತು ಕುತ್ತಿಗೆ ನೋವು ಮರೆಯಾಗಲು ಈ 8 ನಿಮಿಷದ ವ್ಯಾಯಾಮ ಸಾಕು! -
ಐಟಿಆರ್ ಗಡುವು ಮಿಸ್ ಆಯ್ತಾ? ದಂಡ ತಪ್ಪಿಸಲು ಈಗಲೇ ಈ ಕೆಲಸ ಮಾಡಿ, ಆರ್ಥಿಕ ನಷ್ಟದಿಂದ ಪಾರಾಗಿ! -
ಕರ್ನಾಟಕದಲ್ಲಿ ಭಾರಿ ಮಳೆ: ನಿಮ್ಮ ಮನೆ ಮತ್ತು ಕುಟುಂಬವನ್ನು ಸುರಕ್ಷಿತವಾಗಿಡಲು ಇಂದೇ ಈ ಕೆಲಸ ಮಾಡಿ! -
ಪೀನಟ್ ಬಟರ್ನಲ್ಲಿ ವಿಷಕಾರಿ ಶಿಲೀಂಧ್ರ? ನಿಮ್ಮ ಆರೋಗ್ಯ ಕಾಪಾಡಲು ಈ ವಿಷಯಗಳನ್ನು ಮರೆಯದಿರಿ -
ಫ್ರೆಂಡ್ಶಿಪ್ ಡೇ: ಕೊನೆಯ ನಿಮಿಷದಲ್ಲಿ ಸ್ನೇಹಿತರಿಗೆ ನೀಡಲು 499 ರೂ. ಒಳಗಿನ ಬೆಸ್ಟ್ ಗಿಫ್ಟ್ ಐಡಿಯಾಗಳು! -
CWG 2026: ಗಂಟೆಗಟ್ಟಲೆ ಟಿವಿ ಮುಂದೆ ಕುಳಿತು ಪಂದ್ಯ ನೋಡುವಿರಾ? ಈ 8 ನಿಮಿಷದ ವರ್ಕೌಟ್ ಮಿಸ್ ಮಾಡ್ಬೇಡಿ! -
ಶ್ರಾವಣ ಮಾಸದ ಉಪವಾಸ: ದಂಪತಿಗಳೇ, ಹಬ್ಬದ ಆಚರಣೆಯಲ್ಲಿ ಗೊಂದಲ ಬೇಡ, ಈ ಟಿಪ್ಸ್ ಫಾಲೋ ಮಾಡಿ! -
ಬೆಂಗಳೂರಿನಲ್ಲಿ ಹೊಸ ನಿಯಮ: ಆಗಸ್ಟ್ 15ರೊಳಗೆ ನಿಮ್ಮ ಮನೆ ಸ್ವಚ್ಛಗೊಳಿಸದಿದ್ದರೆ ಬೀಳಲಿದೆ ಭಾರಿ ದಂಡ! -
ಎನರ್ಜಿ ಡ್ರಿಂಕ್ಸ್ ಪ್ರಿಯರೇ ಎಚ್ಚರ! FSSAI ಹೊಸ ನಿಯಮದ ಹಿಂದಿನ ಅಸಲಿ ಸತ್ಯವೇನು? -
ಭಾರತದ ಆಕಾಶದಲ್ಲಿ ಬೆಂಕಿಯ ಉಂಡೆಗಳ ಸಂಭ್ರಮ: ಈ ಅದ್ಭುತ ಉಲ್ಕಾಪಾತವನ್ನು ಮಿಸ್ ಮಾಡ್ಬೇಡಿ!
Year Ender 2024: ಚಿತ್ರರಂಗದಲ್ಲಿ ನಡೆದ ಬಹುದೊಡ್ಡ ವಿವಾದಗಳಿವು..!!
2024 ಮುಗಿಯುವ ಹಂತ ತಲುಪಿದೆ. ಹೀಗಾಗಿ 2025ರ ಸ್ವಾಗತಕ್ಕೆ ಸಿದ್ಧತೆಯೂ ನಡೆದಿದೆ. ಆದ್ರೆ 2024ರಲ್ಲಿ ಬಹಳಷ್ಟು ಘಟನೆಗಳು ಸಂಭವಿಸಿದೆ. ಕೆಲವೊಂದು ವಿಚಾರಗಳು ಅಚ್ಚರಿಗೂ ಕಾರಣವಾಗಿವೆ. ನಾವು ಸಿನಿಮಾ ರಂಗದ ವಿಚಾರದಲ್ಲಿ ಹಲವು ರೀತಿಯ ಘಟನೆಗಳು ನಡೆದಿವೆ. ಅದರಲ್ಲೂ ಕೆಲವೊಂದು ವಿವಾದಗಳು ಈ ವರ್ಷ ಎಲ್ಲರ ಹುಬ್ಬೇರುವಂತೆ ಮಾಡಿದೆ. ಸ್ಯಾಂಡಲ್‌ವುಡ್‌ನಲ್ಲೂ ಕೂಡ ಕೆಲವೊಂದು ವಿವಾದಗಳು ಇಡೀ ದೇಶದಲ್ಲೇ ಸುದ್ದಿಯಾಗಿದೆ.
ಹಾಗಾದ್ರೆ 2024ರಲ್ಲಿ ದಕ್ಷಿಣ ಭಾರತೀಯ ಸಿನಿರಂಗದಲ್ಲಿ ಉಂಟಾಗಿರುವ ಕೆಲವೊಂದು ವಿವಾದಗಳನ್ನು ನಾವಿಂದು ತಿಳಿದುಕೊಳ್ಳೋಣ.

ನಟ ದರ್ಶನ್ ಬಂಧನ
ಸ್ಯಾಂಡಲ್‌ವುಡ್ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಬಂಧನವಾಗಿದ್ದು ಈ ವರ್ಷದ ಅತ್ಯಂತ ಆಘಾತಕಾರಿ ವಿಚಾರಗಳಲ್ಲಿ ಒಂದಾಗಿದೆ. ಸ್ನೇಹಿತೆ ಪವಿತ್ರಾ ಗೌಡ ಅವರಿಗೆ ಅಶ್ಲೀಲ ಸಂದೇಶ ಕಳುಹಿಸಿದ್ದ ಎಂಬ ಆರೋಪದಲ್ಲಿ ರೇಣುಕಾಸ್ವಾಮಿಯ ಬೆಂಗಳೂರಿಗೆ ಕರೆಸಿ ಕೊಲೆ ಮಾಡಿರುವ ಆರೋಪ ಮೇಲಿದೆ.
ಜೂನ್ 11 ರಂದು ನಟ ದರ್ಶನ್ ಅವರನ್ನು ಪೊಲೀಸರು ಬಂಧಿಸಿದ್ದರು. ಹಲವು ತಿಂಗಳ ಬಳಿಕ ಅವರು ಪರಪ್ಪನ ಅಗ್ರಹಾರ ಹಾಗೂ ಬಳ್ಳಾರಿ ಜೈಲಿನಲ್ಲಿದ್ದರು. ಬಳಿಕ ಅನಾರೋಗ್ಯ ಕಾರಣದಿಂದಾಗಿ ಜಾಮೀನು ಪಡೆದು ಇಗ ಹೊರಬಂದಿದ್ದಾರೆ, ಹಾಗೆ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿ ಇತ್ತೀಚಿಗೆ ಡಿಸ್ಚಾರ್ಜ್ ಆಗಿದ್ದಾರೆ. ಆದರೆ ಕೊಲೆ ಕೇಸ್ ಇನ್ನು ಪ್ರಗತಿಯಲ್ಲಿದೆ, ಹಾಗೆ ಅವರ ನಟನೆಯ ಡೆವಿಲ್ ಸಿನಿಮಾ ಇನ್ನೂ ಬಿಡುಗಡೆ ಭಾಗ್ಯ ಕಂಡಿಲ್ಲ.
ಯುವ ವಿಚ್ಛೇದನ
ಈ ವರ್ಷ ಕನ್ನಡ ಚಿತ್ರರಂಗದಲ್ಲಿ ಡಿವೋರ್ಸ್ ಪ್ರಕರಣಗಳು ಸದ್ದು ಮಾಡಿದ್ದವು. ಅದರಲ್ಲಿ ಚಂದನ್ ಶೆಟ್ಟಿ ಹಾಗೂ ನಿವೇದಿತಾ ಗೌಡ ವಿಚ್ಚೇದನದ ಬಳಿಕ ಯುವ ನಟ ಯುವ ರಾಜ್‌ಕುಮಾರ್ ಕೋರ್ಟ್ ಮೆಟ್ಟಿಲೇರಿದರು. ಈ ವಿಚಾರ ಚಿತ್ರರಂಗಕ್ಕೆ ದೊಡ್ಡ ಆಘಾತ ತಂದೊಡ್ಡಿತ್ತು. ಜುಲೈ 4ರಂದು ಪತ್ನಿ ಶ್ರೀದೇವಿ ನಡುವಿನ ವಿಚ್ಛೇದನ ಸಂಬಂಧ ವಿಚಾರಣೆ ಕೂಡ ನಡೆದಿತ್ತು.
ನಯನತಾರಾ-ಧನುಷ್ ಜಗಳ
ಲೇಡಿ ಸೂಪರ್‌ಸ್ಟಾರ್ ನಯನತಾರಾ ಹಾಗೂ ನಟ ಧನುಷ್ ನಡುವಿನ ದೊಡ್ಡ ವಿವಾದವೇ ಸೃಷ್ಟಿಯಾಗಿತ್ತು. ನಯನತಾರಾ: ಬಿಯಾಂಡ್ ದ ಫೇರಿ ಟೇಲ್ ಎಂಬ ಸಾಕ್ಷ್ಯಚಿತ್ರದಲ್ಲಿ 2015 ರ ನಾನುಮ್ ರೌಡಿ ಧಾನ್ ಚಿತ್ರದ 3 ಸೆಕೆಂಡುಗಳ ವಿಡಿಯೋ ಬಳಸಿಕೊಂಡಿದ್ದಕ್ಕೆ ನಟ ಧನುಷ್ ಕೋರ್ಟ್ ಮೆಟ್ಟಿಲೇರಿದ್ದರು. ಹಾಗೆ 10 ಕೋಟಿ ರೂಪಾಯಿ ರಾಯಲ್ಟಿಯಾಗಿ ಧನುಷ್ ಬೇಡಿಕೆ ಇಟ್ಟಿದ್ದರು, ಇವರಿಬ್ಬರು ಜಗಳ ಬಹಿರಂಗೊಂಡು ಎಲ್ಲರ ಹುಬ್ಬೇರಿಸುವಂತೆ ಮಾಡಿತ್ತು.
ಪುಷ್ಪ 2 ಕಾಲ್ತುಳಿತ ಪ್ರಕರಣಕ್ಕೆ ಅಲ್ಲು ಅರ್ಜುನ್ ಬಂಧನ
ಪುಷ್ಪಾ 2 ಸಿನಿಮಾ ಬಿಡುಗಡೆಯಾದಾಗ ನಟ ಅಲ್ಲು ಅರ್ಜುನ್ ಚಿತ್ರಮಂದಿರಕ್ಕೆ ಭೇಟಿ ನೀಡಿದ್ದರು. ಈ ವೇಳೆ ಕಾಲ್ತುಳಿತ ಉಂಟಾಗಿ ಮಹಿಳೆಯೊಬ್ಬರು ಮೃತಪಟ್ಟಿದ್ದರು. ಈ ಘಟನೆ ಸಂಬಂಧ ಪೊಲೀಸರು ಅಲ್ಲು ಅರ್ಜುನ್ ಮನೆಗೆ ಬಂದು ಅವರನ್ನು ಬಂಧಿಸಿದ್ದರು. ಇದು ಇಡೀ ದೇಶದಲ್ಲಿ ಸುದ್ದಿಯಾಗಿತ್ತು. ಹಾಗೆ ಒಂದೇ ದಿನ ಅವರಿಗೆ ಜಾಮೀನು ಕೂಡ ಸಿಕ್ಕಿತ್ತು.
ಮಾಲಿವುಡ್ #MeToo ಪ್ರಕರಣ
ನ್ಯಾಯಮೂರ್ತಿ ಕೆ ಹೇಮಾ ಅವರ ವರದಿಯು ಮಲಯಾಳಂ ಚಲನಚಿತ್ರೋದ್ಯಮದಲ್ಲಿ ಕೋಲಾಹಲಕ್ಕೆ ಕಾರಣವಾಗಿತ್ತು. ಚಿತ್ರರಂಗದಲ್ಲಿ ಯುವ ನಟಿಯರಿಗೆ ಲೈಂಗಿಕ ಕಿರುಕುಳ ನೀಡಲಾಗಿತ್ತು ಎಂಬುದನ್ನು ವರದಿಯಲ್ಲಿ ಹೇಳಲಾಗಿತ್ತು. ನಿರ್ದೇಶಕ ರಂಜಿತ್‌ನಿಂದ ಹಿಡಿದು ಹಲವು ನಟರ ಹೆಸರು ಕೂಡ ಈ ಪ್ರಕರಣದಲ್ಲಿ ಕೇಳಿಬಂದಿತ್ತು.
ಜಯಂ ರವಿ ಮತ್ತು ಎಆರ್ ರೆಹಮಾನ್ ವಿಚ್ಛೇದನ ಘೋಷಣೆ
ಜಯಂ ರವಿ ಮತ್ತು ಪತ್ನಿ ಆರತಿ ತಮ್ಮ ವಿಚ್ಛೇದನವನ್ನು ಘೋಷಿಸಿದಾಗ ಅಭಿಮಾನಿಗಳಿಗೆ ಇದು ಭಾರೀ ಆಘಾತವನ್ನುಂಟು ಮಾಡಿತು. ಇದೇ ಸಮಯಲ್ಲಿ ಖ್ಯಾತ ಸಂಗೀತ ನಿರ್ದೇಶಕ ಎ ಆರ್ ರೆಹಮಾನ್ ಕೂಡ ಪತ್ನಿ ಸಾಯಿರಾ ಬಾನು ಜೊತೆಗಿನ ದಾಂಪತ್ಯ ಜೀವನ ಅಂತ್ಯಗೊಳಿಸಿದ್ದರು.



Click it and Unblock the Notifications