Latest Updates
-
ಅಕ್ಷಯ ತೃತೀಯ ಮದುವೆ: ಬಾಲ್ಯ ವಿವಾಹ ತಡೆಯಲು ನೀವೇನು ಮಾಡಬೇಕು? -
ಬಾಲ್ಕನಿ ಗಿಡಗಳು ಒಣಗುತ್ತಿವೆಯೇ? ಈ ಟಿಪ್ಸ್ ಪಾಲಿಸಿ! -
ಬಿಸಿಲಿನ ಬೇಗೆಯಿಂದ ಪಾರಾಗಲು ಈ ಆಹಾರಗಳೇ ನಿಮ್ಮ ರಕ್ಷಕ -
ಅಕ್ಷಯ ತೃತೀಯ 2026: ಈ ಹೊಸ ಟ್ರೆಂಡ್ಸ್ ಮಿಸ್ ಮಾಡ್ಬೇಡಿ! -
ಲಿವರ್ ಆರೋಗ್ಯಕ್ಕೆ ಈ ಸರಳ ಅಭ್ಯಾಸಗಳು ನಿಮ್ಮನ್ನು ಕಾಪಾಡುತ್ತವೆ -
ಅಕ್ಷಯ ತೃತೀಯ: ಚಿನ್ನದ ಖರೀದಿ ಮತ್ತು ನಿಶ್ಚಿತಾರ್ಥಕ್ಕೆ ಹೀಗೆ ಪ್ಲಾನ್ ಮಾಡಿ -
ದೆಹಲಿ ಧೂಳು ತಡೆಯಲು ನಿಮ್ಮ ಮನೆಯನ್ನು ಹೀಗೆ ರಕ್ಷಿಸಿಕೊಳ್ಳಿ -
FSSAI ದಾಳಿ: ವಿಷಕಾರಿ ಹಣ್ಣುಗಳನ್ನು ಗುರುತಿಸುವುದು ಹೇಗೆ ಗೊತ್ತಾ? -
ಅಕ್ಷಯ ತೃತೀಯ ಸಂಭ್ರಮ: ಈ ಟ್ರೆಂಡಿ ಆಭರಣಗಳೇ ಈಗ ಹವಾ -
ಹೀಟ್ವೇವ್ ಎಚ್ಚರಿಕೆ: ಬಿಸಿಲಿನ ತಾಪದಿಂದ ಪಾರಾಗಲು ಈ ಟಿಪ್ಸ್ ಫಾಲೋ ಮಾಡಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಅಶ್ಲೀಲ ಕಾಮೆಂಟ್ಸ್, "ಕ್ಲಾಸ್ ಫ್ಯಾನ್ಸ್" ವಿರುದ್ಧ ಸೈಬರ್ ಕ್ರೈಂಗೆ ದೂರು
ಸ್ಯಾಂಡಲ್‌ವುಡ್‌ನಲ್ಲಿ ಭುಗಿಲೆದ್ದಿರುವ ದರ್ಶನ್-ಸುದೀಪ್ ಫ್ಯಾನ್ ವಾರ್ ನಡುವೆ ಮಹತ್ವದ ಬೆಳವಣಿಗೆಯೊಂದು ನಡೆದಿದೆ. ದರ್ಶನ್ ಪತ್ನಿ ವಿಜಯಲಕ್ಷ್ಮಿ ಅವರು ಸೈಬರ್ ಕ್ರೈಂ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಇತ್ತೀಚೆಗೆ ಡೆವಿಲ್ ಸಿನಿಮಾದ ಸಂಭ್ರಮಾಚರಣೆ ವೇದಿಕೆಯಲ್ಲಿ ವಿಜಯಲಕ್ಷ್ಮಿ ಮಾತನಾಡುತ್ತಾ, ದರ್ಶನ್ ಇಲ್ಲದೇ ಇದ್ದಾಗ ಮಾತನಾಡ್ತಾರೆ, ಇದ್ದಾಗ ಗೊತ್ತೇ ಆಗದಂತೆ ಇರ್ತಾರೆ ಎಂದಿದ್ದರು. ಇದಾದ ಬಳಿಕ ವಿಜಯಲಕ್ಷ್ಮಿಅವರಿಗೆ ಸಾಮಾಜಿಕ ಮಾಧ್ಯಮಗಳಲ್ಲಿ ಕೆಟ್ಟ ಕಾಮೆಂಟ್ ಮಾಡಲಾಗಿದೆ. ಇದರ ವಿರುದ್ಧ ಸಿಡಿದೆದ್ದಿರುವ ಅವರು ಪೊಲೀಸರಿಗೆ ದೂರು ನೀಡಿ ಬಿಸಿಮುಟ್ಟಿಸುವ ಕೆಲಸ ಶುರು ಮಾಡಿದ್ದಾರೆ.
ಇಂದು ಬೆಂಗಳೂರು ಪೊಲೀಸ್ ಕಮೀಷನರ್ ಕಚೇರಿಯಲ್ಲಿ ವಿಜಯಲಕ್ಷ್ಮಿ ದರ್ಶನ್ ದೂರು ದಾಖಲಿಸಿದ್ದಾರೆ. ತಮ್ಮ ಕುರಿತು ಹಾಕಿರುವ ಮಾಡಿರುವ ಕೆಟ್ಟ ಕಾಮೆಂಟ್‌ಗಳ ಸ್ಕ್ರೀನ್ಶಾಟ್‌ಗಳು ಹಾಗೂ ಆ ಖಾತೆಗಳ ಮಾಹಿತಿಯನ್ನು ಸೈಬರ್ ಕ್ರೈಂ ಪೊಲೀಸರಿಗೆ ಸಲ್ಲಿಸಿ, ಕ್ರಮಕ್ಕೆ ಒತ್ತಾಯಿಸಿದ್ದಾರೆ. ದೂರು ಸ್ವೀಕರಿಸಿರುವ ಪೊಲೀಸರು ವಿಜಯಲಕ್ಷ್ಮಿ ಅವರಿಗೆ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ.

ಸುಮಾರು 15 ಸೋಷಿಯಲ್ ಮೀಡಿಯಾ ಖಾತೆಗಳು ಹಾಗೂ 150 ಪೋಸ್ಟ್‌ಗಳನ್ನು ಉಲ್ಲೇಖಿಸಿ, ವಿಜಯಲಕ್ಷ್ಮಿ ದೂರು ನೀಡಿದ್ದಾರೆ ಎಂದು ತಿಳಿದುಬಂದಿದೆ. ಖುದ್ದಾಗಿ ಬೆಂಗಳೂರು ಪೊಲೀಸ್ ಕಮೀಷನರ್ ಕಚೇರಿಗೆ ಬಂದ ವಿಜಯಲಕ್ಷ್ಮಿ ಅವರು ದೂರು ನೀಡಿ ವಾಪಸ್ ಆಗಿದ್ದಾರೆ. ಈ ವೇಳೆ ಮಾಧ್ಯಮಗಳ ಯಾವುದೇ ಪ್ರಶ್ನೆಗೆ ಅವರು ಉತ್ತರ ನೀಡಲಿಲ್ಲ.
ಸ್ಕ್ರೀನ್‌ಶಾಟ್ ಶೇರ್ ಮಾಡಿದ ವಿಜಯಲಕ್ಷ್ಮಿ
ಇನ್‌ಸ್ಟಾಗ್ರಾಂನಲ್ಲಿ ಸ್ಟೋರಿಯಲ್ಲಿ ವಿಜಯಲಕ್ಷ್ಮಿಅವರು ತಮ್ಮ ಕುರಿತು ಮಾಡಿರುವ ಕೆಟ್ಟ ಕಾಮೆಂಟ್‌ಗಳ ಸ್ಕ್ರೀನ್‌ಶಾಟ್‌ಗಳನ್ನು ಹಂಚಿಕೊಂಡಿದ್ದಾರೆ. ಇದರಲ್ಲಿ ಬಹುತೇಕ ಖಾತೆಗಳ ಐಡಿಗಳು ಕಿಚ್ಚ ಸುದೀಪ್ ಅವರ ಹೆಸರನ್ನು ಒಳಗೊಂಡಿವೆ. ಇದು ನಿಜವಾಗಿಯೂ ಸುದೀಪ್ ಅಭಿಮಾನಿಗಳು ಮಾಡಿದ ಕೃತ್ಯವೇ? ಅಥವಾ ಅವರ ಹೆಸರಿನಲ್ಲಿ ಕಿಡಿಗೇಡಿಗಳು ಮಾಡಿರುವ ಕೃತ್ಯವೇ ಎನ್ನುವುದು ಸದ್ಯದಲ್ಲೇ ತಿಳಿಯಲಿದೆ.
ಕಾಡಿನ ರಾಜ ಸಿಂಹನೇ, ಅದು ಯಾರೆಂದು ಎಲ್ಲರಿಗೂ ಗೊತ್ತಿದೆ: ಧನ್ವೀರ್ ಬೆನ್ನಲ್ಲೇ ವಿನಯ್ ಗೌಡ ಪೋಸ್ಟ್ ವೈರಲ್
'ಕಿರುಕುಳ ಇನ್ನು ಮುಂದೆ ಫ್ಯಾನ್ಡಮ್ ಅಲ್ಲ'
ಇದರೊಂದಿಗೆ ಮತ್ತೊಂದು ಪೋಸ್ಟ್‌ನಲ್ಲಿ ಬರೆದುಕೊಂಡಿರುವ ಅವರು, 'ಇಲ್ಲಿರುವ ಎಲ್ಲ "ಕ್ಲಾಸ್ ಫ್ಯಾನ್ಸ್"ಗಳಿಗೆ ನಿಮ್ಮ ಮಟ್ಟವನ್ನು ಸಾರ್ವಜನಿಕವಾಗಿ ತೋರಿಸಿದ್ದಕ್ಕೆ ಧನ್ಯವಾದಗಳು. ಈ ಖಾತೆಗಳ ವಿರುದ್ಧ ಪೊಲೀಸ್ ದೂರು ದಾಖಲಿಸಲಾಗಿದೆ. ಕಿರುಕುಳ ನೀಡುವುದನ್ನು ಇನ್ನು ಮುಂದೆ ಫ್ಯಾನ್ಡಮ್ ಎಂದು ಕರೆಯಲು ಸಾಧ್ಯವಿಲ್ಲ ಇದು ಸ್ಪಷ್ಟ' ಎಂದು ವಿಜಯಲಕ್ಷ್ಮಿ ವಾರ್ನಿಂಗ್ ಕೊಟ್ಟಿದ್ದಾರೆ.
'ಕೀಳು ಭಾಷೆ ಬಳಸುವ "ಕ್ಲಾಸಿ" ಹುಡುಗಿಯರಿಗೆ ವಿಶೇಷ ಚಪ್ಪಾಳೆ, ಹಾಗೇ ತಾಯಂದಿರನ್ನೂ, ಸಂಸ್ಕಾರವನ್ನೂ, ಮೂಲಭೂತ ಗೌರವವನ್ನೂ ಬಿಟ್ಟು ನೇರವಾಗಿ ಆಕಾಶದಿಂದ ಇಳಿದಂತಿರುವ "ಕ್ಲಾಸಿ" ಹುಡುಗರಿಗೆ ಇದಕ್ಕೆ ಇನ್ನಷ್ಟು ವಿವರಣೆ ಬೇಡ. ಇದನ್ನೆಲ್ಲ ಸಾಮಾನ್ಯವೆಂದು ಮೌನವಾಗಿ ಒಪ್ಪಿಕೊಳ್ಳುವವಳಲ್ಲ ನಾನು. ಇದು ನಿಮಗೆ ಸಾಮಾನ್ಯ ದಿನವಾಗಿದ್ದರೆ, ದೇವರು ನಿಮಗೆ ಕೃಪೆ ತೋರಿಸಲಿ. ಇಂದು ಹಾಗೂ ಮುಂದಿನ ದಿನಗಳಲ್ಲೂ ಸಹ ಇದು ನನ್ನ ಬಗ್ಗೆ ಮಾತ್ರವಲ್ಲ. ಪ್ರತಿ ಮಹಿಳೆಯೂ ಗೌರವಕ್ಕೆ ಅರ್ಹಳು ಎಂಬುದನ್ನು ನೆನಪಿಸುವ ಸಂದೇಶ ಇದು' ಎಂದು ಎಚ್ಚರಿಕೆ ನೀಡಿದ್ದಾರೆ.
Credit: Oneindia



Click it and Unblock the Notifications











