Latest Updates
-
ಮದುವೆಯಾದ ತಕ್ಷಣ ಸ್ವಾತಂತ್ರ್ಯ ಕೊನೆಗೊಳ್ಳುವುದಿಲ್ಲ: ದಾಂಪತ್ಯದಲ್ಲಿ 'ಸಮ್ಮತಿ'ಯ ಮಹತ್ವವೇನು? -
ಕೇರಳದಲ್ಲಿ ಭಾರೀ ಮಳೆ: ಯೆಲ್ಲೋ ಅಲರ್ಟ್ ಘೋಷಣೆ; ನಿಮ್ಮ ಮನೆ ಮತ್ತು ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳು ಅತ್ಯಗತ್ಯ -
ಗಣೇಶ ಹಬ್ಬದ ಪ್ರಸಾದ ತಯಾರಿಸುತ್ತಿದ್ದೀರಾ? ಕಲಬೆರಕೆ ತಡೆಯಲು ಮತ್ತು ಸುರಕ್ಷಿತ ಪ್ರಸಾದಕ್ಕೆ ಇಲ್ಲಿದೆ ಮಹತ್ವದ ಟಿಪ್ಸ್ -
ಐಫೋನ್ 18 ಪ್ರೋ ಮತ್ತು ಡ್ಯುವೋ ಭಾರತದಲ್ಲಿ ಲಾಂಚ್: ಬೆಲೆ, ಆಫರ್ ಮತ್ತು ಪ್ರಿ-ಆರ್ಡರ್ ಮಾಹಿತಿ ಇಲ್ಲಿದೆ! -
ವಿಶ್ವ ಆತ್ಮಹತ್ಯೆ ತಡೆ ದಿನ: ಮಾನಸಿಕ ಆರೋಗ್ಯ ಸುಧಾರಿಸಲು 10 ನಿಮಿಷದ ಸಿಂಪಲ್ ಮಾರ್ನಿಂಗ್ ರೂಟೀನ್ ಮತ್ತು ಹೆಲ್ಪ್ಲೈನ್ ವಿವರಗಳು -
ವಿಚ್ಛೇದನದ ನಂತರವೂ ಜೀವನಾಂಶ ಪಡೆಯಬಹುದೇ? ಮಧ್ಯಪ್ರದೇಶ ಹೈಕೋರ್ಟ್ನಿಂದ ಮಹತ್ವದ ತೀರ್ಪು! -
ದೆಹಲಿ ವಾಯು ಮಾಲಿನ್ಯ: ಮನೆಯಲ್ಲಿ ಶುದ್ಧ ಗಾಳಿ ಪಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ಪ್ಯಾಕ್ ಮಾಡಿದ ಆಹಾರದ ಮೇಲೆ 'ರೆಡ್ ಹೆಕ್ಸಗನ್' ಎಚ್ಚರಿಕೆ: ಇನ್ಮುಂದೆ ತಿನ್ನುವ ಮುನ್ನ ಈ ವಿಷಯ ಗಮನಿಸಿ! -
ಆಪಲ್ 'ಸರ್ಪ್ರೈಸ್ ಆಂಡ್ ಶೈನ್' ಈವೆಂಟ್: ಐಫೋನ್ 18 ಪ್ರೋ ಮತ್ತು ಫೋಲ್ಡಬಲ್ ಆಲ್ಟ್ರಾ ಲಾಂಚ್, ಭಾರತದಲ್ಲಿ ಬೆಲೆ ಎಷ್ಟು? -
ಟಾಟಾ ಮುಂಬೈ ಮ್ಯಾರಥಾನ್ ಡ್ರೀಮ್ ರನ್: ಇಂದೇ ನೋಂದಣಿ ಮುಕ್ತಾಯ, ಓಟಕ್ಕೆ ಸಜ್ಜಾಗಲು 20 ನಿಮಿಷದ ಪ್ಲಾನ್ ಇಲ್ಲಿದೆ!
ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳ ಬಗ್ಗೆ ಬಿಗ್ ಅಪ್ಡೇಟ್ಸ್ ಕೊಟ್ಟ ಸಿಎಂ ಸಿದ್ದರಾಮಯ್ಯ!
GruhaLakshmi Yojana: ಕರ್ನಾಟಕ ಸರ್ಕಾರದ ಐದು ಪ್ರಮುಖ ಗ್ಯಾರಂಟಿ ಯೋಜನೆಗಳಲ್ಲಿ ಒಂದಾಗಿರುವ ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಹತ್ವದ ಅಪ್ಡೇಟ್ಸ್ ಕೊಟ್ಟಿದ್ದಾರೆ. ರಾಜ್ಯದಲ್ಲಿ ಗೃಹಲಕ್ಷ್ಮಿ ಯೋಜನೆಯ ಹಣವನ್ನು ಫಲಾನುಭವಿಗಳಿಗೆ ಸಕಾಲದಲ್ಲಿ ಕೊಡುತ್ತಿಲ್ಲ ಅಥವಾ ಅವರ ಖಾತೆಗೆ ಸಕಾಲದಲ್ಲಿ ಜಮೆ ಆಗುತ್ತಿಲ್ಲ ಎನ್ನುವ ಆರೋಪಗಳ ನಡುವೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಟ್ವೀಟ್‌ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.
ನಮ್ಮ ಸರ್ಕಾರವು ಒಂದೇ ಗುರಿಯೊಂದಿಗೆ ಗೃಹಲಕ್ಷ್ಮಿ ಯೋಜನೆಯನ್ನು ಪ್ರಾರಂಭಿಸಿದೆ. ಅದು ಪ್ರತಿಯೊಬ್ಬ ಮಹಿಳೆಯನ್ನು ಆರ್ಥಿಕವಾಗಿ ಸ್ವತಂತ್ರ ಮತ್ತು ಆತ್ಮವಿಶ್ವಾಸದಿಂದ ಕೂಡಿರುವಂತೆ ಮಾಡುವುದು. ಇಂದು (ನವೆಂಬರ್ 06) 99% ಫಲಾನುಭವಿಗಳು ಪ್ರತಿ ತಿಂಗಳು ಪಡೆಯುವ ₹2,000 ಮೇಲೆ ಸಂಪೂರ್ಣ ನಿಯಂತ್ರಣ ಹೊಂದಿದ್ದಾರೆ. ಇದು ಅವರ ಮನೆಯ ಆದಾಯದ ಸುಮಾರು 13% ರಷ್ಟಿದೆ.

ಈ ಬೆಂಬಲವು ಮಹಿಳೆಯರು ಆಹಾರ, ಆರೋಗ್ಯ ಮತ್ತು ಮಕ್ಕಳ ಶಿಕ್ಷಣದಂತಹ ದೈನಂದಿನ ಅಗತ್ಯಗಳನ್ನು ಪೂರೈಸಲು ಸಹಾಯ ಮಾಡುತ್ತಿದೆ. ಜೊತೆಗೆ ಅವರು ತೆಗೆದುಕೊಳ್ಳುವ ಪ್ರತಿಯೊಂದು ನಿರ್ಧಾರದಲ್ಲೂ ಅವರಿಗೆ ಘನತೆ ಮತ್ತು ವಿಶ್ವಾಸವನ್ನು ನೀಡುತ್ತದೆ. ಇದು ಸಬಲೀಕರಣದ ನಿಜವಾದ ಚೈತನ್ಯ - ಮಹಿಳೆಯ ಕೈಯಲ್ಲಿರುವ ಪ್ರತಿ ರೂಪಾಯಿ ಇಡೀ ಮನೆಯ ಅಭಿವೃದ್ಧಿಗೆ ನೆರವಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಷಿಯಲ್ ಮೀಡಿಯಾಗಳಲ್ಲಿ ಹಂಚಿಕೊಂಡಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರ ಈ ಟ್ವೀಟ್‌ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ.
5 ತಿಂಗಳಿನಿಂದಲೂ ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲ: ಇನ್ನು ಇದಕ್ಕೆ ಹಲವರು ಗೃಹಲಕ್ಷ್ಮಿ ಯೋಜನೆಯ ಹಣ ಬಂದಿಲ್ಲ ಎಂದೇ ರಿಯಾಕ್ಟ್ ಮಾಡಿದ್ದಾರೆ. ಇನ್ನೂ ಕೆಲವರು ಗೃಹಲಕ್ಷ್ಮಿ ಯೋಜನೆ ಹಣ ಪಡೆದರೂ ಕೆಲವರು ಕೊಂಕು ನುಡಿಯುತ್ತಿದ್ದಾರೆ ಎಂದು ರಾಜ್ಯ ಕಾಂಗ್ರೆಸ್ ಸರ್ಕಾರ ಹಾಗೂ ಸಿಎಂ ಸಿದ್ದರಾಮಯ್ಯ ಅವರ ಪರವಾಗಿ ಬ್ಯಾಟ್ ಬೀಸಿದ್ದಾರೆ. ಹಲವರು ಕಳೆದ ಐದು ತಿಂಗಳಾದರೂ ನಮಗೆ ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲ ಎಂದು ದೂರಿದ್ದಾರೆ.
ಈ ಪೋಸ್ಟ್ ಗೆ ಸರ್ಕಾರದಿಂದ ಫಲಾನುಭವಿ ಮಹಿಳೆಯರು ರಿಪ್ಲೈ ಮಾಡಿದರೆ ಕನಿಷ್ಠ ಸುಮಾರು ಎರಡು ಕೋಟಿ ಆದರೂ ಲೈಕ್ ಆರ್ ಕಾಮೆಂಟ್ ಬರಬೇಕು ಆದರೆ ಕೇವಲ ಕೃತಜ್ಞತೆ ಇರೋರು ಮಾತ್ರ ರಿಪ್ಲೈ ಮಾಡ್ತಾರೆ, ಮಿಕ್ಕವರು ಅಷ್ಟೇ ಎಂದು ನೆಟ್ಟಿಗರೊಬ್ಬರು ಹೇಳಿದ್ದಾರೆ.
Credit: Oneindia



Click it and Unblock the Notifications
