Latest Updates
-
ಮದುವೆಯಾದ ತಕ್ಷಣ ಸ್ವಾತಂತ್ರ್ಯ ಕೊನೆಗೊಳ್ಳುವುದಿಲ್ಲ: ದಾಂಪತ್ಯದಲ್ಲಿ 'ಸಮ್ಮತಿ'ಯ ಮಹತ್ವವೇನು? -
ಕೇರಳದಲ್ಲಿ ಭಾರೀ ಮಳೆ: ಯೆಲ್ಲೋ ಅಲರ್ಟ್ ಘೋಷಣೆ; ನಿಮ್ಮ ಮನೆ ಮತ್ತು ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳು ಅತ್ಯಗತ್ಯ -
ಗಣೇಶ ಹಬ್ಬದ ಪ್ರಸಾದ ತಯಾರಿಸುತ್ತಿದ್ದೀರಾ? ಕಲಬೆರಕೆ ತಡೆಯಲು ಮತ್ತು ಸುರಕ್ಷಿತ ಪ್ರಸಾದಕ್ಕೆ ಇಲ್ಲಿದೆ ಮಹತ್ವದ ಟಿಪ್ಸ್ -
ಐಫೋನ್ 18 ಪ್ರೋ ಮತ್ತು ಡ್ಯುವೋ ಭಾರತದಲ್ಲಿ ಲಾಂಚ್: ಬೆಲೆ, ಆಫರ್ ಮತ್ತು ಪ್ರಿ-ಆರ್ಡರ್ ಮಾಹಿತಿ ಇಲ್ಲಿದೆ! -
ವಿಶ್ವ ಆತ್ಮಹತ್ಯೆ ತಡೆ ದಿನ: ಮಾನಸಿಕ ಆರೋಗ್ಯ ಸುಧಾರಿಸಲು 10 ನಿಮಿಷದ ಸಿಂಪಲ್ ಮಾರ್ನಿಂಗ್ ರೂಟೀನ್ ಮತ್ತು ಹೆಲ್ಪ್ಲೈನ್ ವಿವರಗಳು -
ವಿಚ್ಛೇದನದ ನಂತರವೂ ಜೀವನಾಂಶ ಪಡೆಯಬಹುದೇ? ಮಧ್ಯಪ್ರದೇಶ ಹೈಕೋರ್ಟ್ನಿಂದ ಮಹತ್ವದ ತೀರ್ಪು! -
ದೆಹಲಿ ವಾಯು ಮಾಲಿನ್ಯ: ಮನೆಯಲ್ಲಿ ಶುದ್ಧ ಗಾಳಿ ಪಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ಪ್ಯಾಕ್ ಮಾಡಿದ ಆಹಾರದ ಮೇಲೆ 'ರೆಡ್ ಹೆಕ್ಸಗನ್' ಎಚ್ಚರಿಕೆ: ಇನ್ಮುಂದೆ ತಿನ್ನುವ ಮುನ್ನ ಈ ವಿಷಯ ಗಮನಿಸಿ! -
ಆಪಲ್ 'ಸರ್ಪ್ರೈಸ್ ಆಂಡ್ ಶೈನ್' ಈವೆಂಟ್: ಐಫೋನ್ 18 ಪ್ರೋ ಮತ್ತು ಫೋಲ್ಡಬಲ್ ಆಲ್ಟ್ರಾ ಲಾಂಚ್, ಭಾರತದಲ್ಲಿ ಬೆಲೆ ಎಷ್ಟು? -
ಟಾಟಾ ಮುಂಬೈ ಮ್ಯಾರಥಾನ್ ಡ್ರೀಮ್ ರನ್: ಇಂದೇ ನೋಂದಣಿ ಮುಕ್ತಾಯ, ಓಟಕ್ಕೆ ಸಜ್ಜಾಗಲು 20 ನಿಮಿಷದ ಪ್ಲಾನ್ ಇಲ್ಲಿದೆ!
Rain Alert: ಕರ್ನಾಟಕಕ್ಕೂ ತಟ್ಟಿದ ಚಂಡಮಾರುತ ಎಫೆಕ್ಟ್! ಇಲ್ಲೆಲ್ಲಾ ಭಾರೀ ಮಳೆ
ರಾಜ್ಯದಲ್ಲಿ ದಿನೇ ದಿನೇ ವಿಪರೀತ ಚಳಿಯಾಗುತ್ತಿದೆ. ಅಲ್ಲದೇ ಈ ಮಧ್ಯೆ ಮಳೆಯಾಗುವ ಸೂಚನೆಯನ್ನು ನೀಡಲಾಗಿದೆ. ಇದೀಗ ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದಾಗಿ ಚಂಡಮಾರುತ (Cyclone) ಸೃಷ್ಟಿಯಾಗಿದೆ. ದಿತ್ವಾ ಚಂಡಮಾರುತದ ಪರಿಣಾಮ ಇದೀಗ ಗಾಳಿಯ ವೇಗ ಕೂಡಾ ಹೆಚ್ಚಾಗಿದ್ದು, ಈ ಪರಿಣಾಮ ಕರ್ನಾಟಕಕ್ಕೂ (Karnataka) ತಟ್ಟುವ ನಿರೀಕ್ಷೆಯಿದೆ. ಈ ಹಿನ್ನೆಲೆ ತೆಲಂಗಾಣ, ಆಂಧ್ರಪ್ರದೇಶ, ತಮಿಳುನಾಡು ರಾಜ್ಯದಲ್ಲೂ ಭಾರೀ ಮಳೆಯಾಗಬಹುದು (Heavy Rain) ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.

ಹವಾಮಾನ ಇಲಾಖೆಯ ಸೂಚನೆ ಪ್ರಕಾರ, ನವೆಂಬರ್ 29 ರಿಂದ ಡಿಸೆಂಬರ್ 2 ರವರೆಗೂ ಚಳಿ, ಮಳೆ ವಾತಾವರಣ ಇರಲಿದೆ ಎಂದು ಸೂಚನೆ ನೀಡಲಾಗಿದೆ.
ಹೌದು, ರಾಜ್ಯದಲ್ಲಿ ಈಗಾಗಲೇ ಚಳಿ ಜೋರಾಗಿದೆ. ಈ ಮಧ್ಯೆ ಇಂದಿನಿಂದ ಮಳೆಯಾಗಬಹುದು ಎಂದು ಸೂಚನೆ ನೀಡಲಾಗಿದೆ. ಮಧ್ಯ ಕರ್ನಾಟಕ, ಉತ್ತರ ಮತ್ತು ಕಲ್ಯಾಣ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಗಾಳಿ ಮಳೆಯಾಗಬಹುದು ಎಂದು ಎಚ್ಚರಿಕೆ ನೀಡಲಾಗಿದೆ.
ಎಲ್ಲೆಲ್ಲಿ ಮಳೆ?
ಚಿತ್ರದುರ್ಗ, ಚಿಕ್ಕಬಳ್ಳಾಪುರ, ಯಾದಗಿರಿ, ಕೊಪ್ಪಳ, ಹಾವೇರಿ, ಬಳ್ಳಾರಿ, ತುಮಕೂರು, ಕಲಬುರಗಿ, ಕೊಪ್ಪಳ, ಗದಗ ಜಿಲ್ಲೆಯಲ್ಲಿ ಇಂದು (ನ.29) ಗುಡುಗು ಸಹಿತ ಭಾರೀ ಮಳೆಯಾಗಬಹುದು ಎಂದು ಹೇಳಲಾಗಿದೆ. ಈಗಾಗಲೇ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಚಳಿ ವಾತಾವರಣ ಹೆಚ್ಚಾಗಿದ್ದು, ಮೋಡಕವಿದ ವಾತಾವರಣದ ಜೊತೆಗೆ ಅಲ್ಲಲ್ಲಿ ಮಳೆಯಾಗಬಹುದು ಎಂದು ಎಚ್ಚರಿಕೆ ನೀಡಲಾಗಿದೆ.
ಎಲ್ಲೆಲ್ಲಿ ಒಣ ಹವೆ?
ಚಿಕ್ಕಮಗಳೂರು, ಹಾಸನ, ಕೋಲಾರ, ಮೈಸೂರು, ಶಿವಮೊಗ್ಗ, ಬಾಗಲಕೋಟೆ, ಬೀದರ್, ವಿಜಯಪುರ, ಚಾಮರಾಜನಗರ, ದಾವಣಗೆರೆ, ಕೊಡಗು, ಮಂಡ್ಯ, ರಾಮನಗರ, ವಿಜಯನಗರ, ಬೆಳಗಾವಿ, ಧಾರವಾಡ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರೆಯಲಿದೆ ಎಂದು ವರದಿಯಾಗಿದೆ.
ಬೆಂಗಳೂರಿನ ಹವಾಮಾನ:
ಇನ್ನು ಬೆಂಗಳೂರಿನಲ್ಲಿ ಚಳಿ ಜೊತೆಗೆ ಮೋಡ ಕವಿದ ವಾತಾವರಣ ಇರಲಿದೆ ಎಂದು ವರದಿಯಾಗಿದೆ. ಅಲ್ಲದೇ ತಾಪಮಾನ ಗರಿಷ್ಠ 27 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ 17 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ಹೇಳಲಾಗಿದೆ.
ತಮಿಳುನಾಡಿನಲ್ಲೂ ಭಾರೀ ಮಳೆ!
ಇನ್ನು ಬಂಗಾಳಕೊಲ್ಲಿಯಲ್ಲಿ 'ದಿತ್ವಾ' ಚಂಡಮಾರುತವು ಶ್ರೀಲಂಕಾದ ಕರಾವಳಿ ಮತ್ತು ನೈರುತ್ಯ ಭಾಗದತ್ತ ಚಲಿಸುತ್ತಿರುವುದರಿಂದ ತಮಿಳುನಾಡಿನ ವಿವಿಧ ಜಿಲ್ಲೆಗಳಿಗೆ ನವೆಂಬರ್ 29, 2025 ರ ಶನಿವಾರದಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಪ್ರಾದೇಶಿಕ ಹವಾಮಾನ ಇಲಾಖೆ (RMC) ರೆಡ್ ಅಲರ್ಟ್ ನೀಡಿದೆ.
ಚಂಡಮಾರುತವು ಶನಿವಾರ 7 ಕಿ.ಮೀ ವೇಗದಲ್ಲಿ ಚಲಿಸುತ್ತಿದ್ದು, ಪುದುಚೇರಿಯಿಂದ 380 ಕಿ.ಮೀ ದಕ್ಷಿಣ-ಆಗ್ನೇಯಕ್ಕೆ ಹಾಗೂ ಚೆನ್ನೈನಿಂದ 490 ಕಿ.ಮೀ ದಕ್ಷಿಣಕ್ಕೆ ಶ್ರೀಲಂಕಾದ ಕರಾವಳಿ ಮತ್ತು ನೈರುತ್ಯ ಬಂಗಾಳಕೊಲ್ಲಿಯಲ್ಲಿತ್ತು. ಇದೀಗ ಈ ಚಂಡಮಾರುತ ಶ್ರೀಲಂಕಾದ ಕರಾವಳಿ ಮತ್ತು ನೈರುತ್ಯ ಬಂಗಾಳಕೊಲ್ಲಿಯ ಮೂಲಕ ಸಾಗಿ, ಭಾನುವಾರ ಬೆಳಿಗ್ಗೆ ಉತ್ತರ ತಮಿಳುನಾಡು, ಪುದುಚೇರಿ ಮತ್ತು ದಕ್ಷಿಣ ಆಂಧ್ರಪ್ರದೇಶದ ಕರಾವಳಿಯನ್ನು ತಲುಪುವ ನಿರೀಕ್ಷೆಯಿದೆ.
ಹವಾಮಾನ ಇಲಾಖೆಯ ಸೂಚನೆ ಪ್ರಕಾರ, ತಮಿಳುನಾಡಿನಲ್ಲಿ ಇಂದು ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ. ಕಡಲೂರು, ಮೈಲಾಡುತುರೈ, ವಿಲ್ಲುಪುರಂ ಮತ್ತು ಚೆಂಗಲ್ಪಟ್ಟು ಜಿಲ್ಲೆಗಳ ಜೊತೆಗೆ ಪುದುಚೇರಿಗೆ ರೆಡ್ ಅಲರ್ಟ್ ನೀಡಲಾಗಿದೆ.
ಅಲ್ಲದೇ ಚೆನ್ನೈ, ಸೇಲಂ, ತಂಜಾವೂರು ಮತ್ತು ರಾಣಿಪೇಟ್ ಸೇರಿದಂತೆ 14 ಡೆಲ್ಟಾ ಮತ್ತು ಉತ್ತರ ಜಿಲ್ಲೆಗಳಲ್ಲಿ ಭಾರೀ ಮಳೆ ಬೀಳಬಹುದು ಎನ್ನಲಾಗಿದೆ. ವೆಲ್ಲೂರು ಸೇರಿದಂತೆ ಆರು ಇತರ ಜಿಲ್ಲೆಗಳಲ್ಲಿ ಶನಿವಾರದಂದು ಭಾರೀ ಮಳೆಯಾಗುವ ನಿರೀಕ್ಷೆಯಿದೆ.
Credit: Goodreturns



Click it and Unblock the Notifications
