Latest Updates
-
ಯುಗಾದಿ ಮಂತ್ರಗಳು: ಹಬ್ಬದಲ್ಲಿ ಈ ಮಂತ್ರ ಪಠಿಸಿದ್ರೆ ಕಷ್ಟಗಳು ದೂರಾಗುತ್ತೆ, ಅದೃಷ್ಟ ನಿಮ್ಮದಾಗುತ್ತೆ! -
ಯುಗಾದಿ ಹಬ್ಬದಲ್ಲಿ ಸಿಹಿಯೊಂದಿಗೆ ಬೇಬಿ ಕಾರ್ನ್ 65 ಸಹ ಮಾಡಿ! ಅದ್ಭುತ ರುಚಿಯ ತಿಂಡಿ ಇದು! -
Ugadi 2026: ಬೇವಿನ ಕಹಿ ಇರಲಿ, ಬೆಲ್ಲದ ಸಿಹಿ ಇರಲಿ! ನಿಮ್ಮ ಆತ್ಮೀಯರಿಗೆ ಈ ರೀತಿ ವಿಶೇಷ ಶುಭಾಶಯ ಕಳಿಸಿ -
ರವೆ ಮತ್ತು ತುಪ್ಪ ಬಳಸಿ ಸ್ಪಂಜಿನಂಥ ಕೇಕ್ ಮಾಡಿ! ಬಾಯಲ್ಲಿ ಇಟ್ಟರೆ ಕರಗುವ ರುಚಿ.. ಓವನ್ ಇಲ್ಲದೆ ಮಾಡಬಹುದು -
ಯುಗಾದಿ ಭವಿಷ್ಯ: ಹಬ್ಬದ ಬಳಿಕ ಈ ರಾಶಿಯವರಿಗೆ ಲಕ್ಷ್ಮಿ ಆಶೀರ್ವಾದ, ಆರ್ಥಿಕ ಲಾಭ! -
ಮುದ್ದೆ, ಗಂಜಿ ಬಿಡಿ.. ರಾಗಿ ಬಳಸಿ ಈ ರೆಸಿಪಿಗಳನ್ನು ಮಾಡಿ! ಆರೋಗ್ಯಕ್ಕೆ ಸೂಪರ್, ರುಚಿಯೂ ಮಿಸ್ ಆಗಲ್ಲ -
ಯುಗಾದಿ ಸ್ಪೆಷಲ್: ವಿಭಿನ್ನ ರುಚಿ ನೀಡುವ ತೊಗರಿ ಬೇಳೆ ಹೋಳಿಗೆ! -
ಗುರು ಮನೆಯಲ್ಲಿ ಸೂರ್ಯನ ಅಬ್ಬರ! ವೃಷಭ ಸೇರಿ ಈ ರಾಶಿಗಳಿಗೆ ಶುಭ ಫಲ.. ಯಾರಿಗೆ ಲಾಭ? ಯಾರಿಗೆ ನಷ್ಟ? -
ಯುಗಾದಿ ಯಾವಾಗ ಆಚರಿಸುತ್ತಾರೆ? ಇಲ್ಲಿದೆ ದಿನಾಂಕ, ಶುಭ ಮುಹೂರ್ತ, ಸಮಯದ ಕುರಿತ ಸಂಪೂರ್ಣ ಮಾಹಿತಿ -
10 ರೂಪಾಯಿಯಲ್ಲಿ ಬಾಯಿ ಚಪ್ಪರಿಸಿ ಸವಿಯು ಚಟ್ನಿ ಮಾಡಿ! ಇಲ್ಲಿದೆ ಹೊಸ ಬಗೆಯ ರೆಸಿಪಿ!
Bheemanna Khandre Passes Away: ಮಾಜಿ ಸಚಿವ ಡಾ.ಭೀಮಣ್ಣ ಖಂಡ್ರೆ ನಿಧನ
Bheemanna Khandre Passes Away: ಮಾಜಿ ಸಚಿವ, ವೀರಶೈವ ಮಹಾಸಭಾ ಗೌರವ ಅಧ್ಯಕ್ಷರಾಗಿದ್ದ ಶತಾಯುಷಿ ಡಾ.ಭೀಮಣ್ಣ ಖಂಡ್ರೆ (102) ನಿಧನರಾಗಿದ್ದಾರೆ. ಆರು ದಶಕಗಳಿಗೂ ಹೆಚ್ಚು ಕಾಲ ಸಾರ್ವಜನಿಕ ಜೀವನದಲ್ಲಿ ಜನಪರ ಕಾರ್ಯಕ್ರಮಗಳ ಮೂಲಕ ಜನಪ್ರಿಯರಾಗಿದ್ದ ಭಾಲ್ಕಿ ಕ್ಷೇತ್ರದ ಹಿರಿಯರಾದ ಅವರು ವಯೋಸಹಜ ಅನಾರೋಗ್ಯದ ಕಾರಣ ಹಲವು ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
ವಯೋಸಹಜ ಅನಾರೋಗ್ಯ ಕಾರಣ ಅವರು ಬೀದರ್‌ನಲ್ಲಿ ಶುಕ್ರವಾರ ರಾತ್ರಿ ನಿಧನರಾಗಿದ್ದಾರೆ. ಅವರು ಪುತ್ರ, ಸಚಿವ ಈಶ್ವರ್ ಖಂಡ್ರೆ ಸೇರಿ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಉಸಿರಾಟದ ತೊಂದರೆ ಹಾಗೂ ರಕ್ತದೊತ್ತಡ ಕಾರಣದಿಂದ ಬೀದರ್ ಖಾಸಗಿ ಆಸ್ಪತ್ರೆಯಲ್ಲಿ ಸೂಕ್ತ ಚಿಕಿತ್ಸೆ ಪಡೆಯುತ್ತಿದ್ದ ಅವರನ್ನು ಕೆಲ ದಿನಗಳ ಹಿಂದೆ ಮನೆಗೆ ಕರೆದುಕೊಂಡು ಹೋಗಲಾಗಿತ್ತು. ಇನ್ನೂ ಅಂತ್ಯಕ್ರಿಯೆ ಇಂದೇ ಭಾಲ್ಕಿಯಲ್ಲಿ ನಡೆಯಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಇವರ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸೇರಿದಂತೆ ಹಲವು ರಾಜಕೀಯ ಗಣ್ಯರು ಸಂತಾಪ ಸೂಚಿಸಿದ್ದಾರೆ.

ಭೀಮಣ್ಣ ಕುಟುಂಬದ ರಾಜಕೀಯ ಹಿನ್ನೆಲೆ: ಡಾ.ಭೀಮಣ್ಣ ಖಂಡ್ರೆ ಅವರ ಪುತ್ರ ಈಶ್ವರ್ ಖಂಡ್ರೆ ಅವರು ಪ್ರಸ್ತುತ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಹಾಗೂ ಬೀದರ್ ಜಿಲ್ಲಾ ಉಸ್ತುವಾರಿ ಸಚಿವರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಅವರ ಮೊಮ್ಮಗ ಸಾಗರ್ ಖಂಡ್ರೆ ಅವರು ಬೀದರ್ ಜಿಲ್ಲೆಯ ಸಂಸದರಾಗಿದ್ದಾರೆ.
ಭೀಮಣ್ಣ ಅವರ ರಾಜಕೀಯ ಹಿನ್ನೆಲೆ: 1953ರಲ್ಲಿ ಭಾಲ್ಕಿ ಪುರಸಭೆಯ ಪ್ರಥಮ ಚುನಾಯಿತ ಅಧ್ಯಕ್ಷರಾಗುವ ಮೂಲಕ ರಾಜಕೀಯ ಜೀವನಕ್ಕೆ ಪ್ರವೇಶಿಸಿದ್ದ ಭೀಮಣ್ಣ ಖಂಡ್ರೆ ಅವರು 1962ರಲ್ಲಿ ಮೊದಲ ಬಾರಿಗೆ ವಿಧಾನಸಭೆ ಪ್ರವೇಶ ಮಾಡಿದರು. 4 ಬಾರಿ ಶಾಸಕರಾಗಿ, 2 ಬಾರಿ ವಿಧಾನ ಪರಿಷತ್ ಸದಸ್ಯರಾಗಿ, ಎಂ.ವೀರಪ್ಪ ಮೊಯ್ಲಿ ಅವರ ಸಚಿವ ಸಂಪುಟದಲ್ಲಿ ಸಾರಿಗೆ ಸಚಿವರಾಗಿ ಸೇವೆ ಸಲ್ಲಿಸಿದ್ದರು.
ಭೀಮಣ್ಣ ಅವರ ಸಾಧನೆ: ಸಹಕಾರಿ ಧುರೀಣರಾಗಿ ಮತ್ತು ರೈತರ ಕಲ್ಯಾಣದ ಬಗ್ಗೆ ಕಳಕಳಿ ಹೊಂದಿದ್ದ ಭೀಮಣ್ಣ ಖಂಡ್ರೆ ಅವರು ಹಳ್ಳಿಖೇಡ್‌ನಲ್ಲಿ ಇರುವ ಬೀದರ್ ಸಹಕಾರಿ ಸಕ್ಕರೆ ಕಾರ್ಖಾನೆ ಮತ್ತು ಹುಣಜಿಯಲ್ಲಿರುವ ಮಹಾತ್ಮಾ ಗಾಂಧೀ ಸಕ್ಕರೆ ಕಾರ್ಖಾನೆಯ ಸ್ಥಾಪಕ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. ನಾರಂಜಾ ಮತ್ತು ಕಾರಂಜಾ ನೀರಾವರಿ ಯೋಜನೆಗಳ ಅನುಷ್ಠಾನದಲ್ಲೂ ಭೀಮಣ್ಣ ಖಂಡ್ರೆ ಅವರು, ಪ್ರಮುಖ ಪಾತ್ರ ವಹಿಸಿದ್ದರು.
ಸ್ವಾತಂತ್ರ್ಯ ಸೇನಾನಿಯಾಗಿ, ಹೈದ್ರಾಬಾದ್ ವಿಮೋಚನೆಯ ಹೋರಾಟಗಾರರಾಗಿ ರಜಾಕಾರರ ದೌರ್ಜನ್ಯ ಪ್ರತಿಭಟಿಸಿದ್ದ ಅವರು, ಏಕೀಕರಣದ ಸಂದರ್ಭದಲ್ಲಿ ಬೀದರ್ ಜಿಲ್ಲೆಯನ್ನು ಕರ್ನಾಟಕದಲ್ಲಿಯೇ ಉಳಿಸಲು ಶ್ರಮಿಸಿದ್ದರು. ಅವರ ತಮ್ಮ ಈ ಕೊಡುಗೆಗಾಗಿ ಸುವರ್ಣ ಏಕೀಕರಣ ರಾಜ್ಯ ಪ್ರಶಸ್ತಿಗೂ ಅವರು ಭಾಜನರಾಗಿದ್ದರು.
ಶಾಂತಿವರ್ಧಕ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾಗಿ ಜಿಲ್ಲೆಯ ಹೆಣ್ಣುಮಕ್ಕಳಿಗೆ ಉನ್ನತ ಶಿಕ್ಷಣ ದೊರಕಿಸಲು ಬೀದರ್‌ನಲ್ಲಿ ಅಕ್ಕಮಹಾದೇವಿ ಕಾಲೇಜು, ಭಾಲ್ಕಿಯಲ್ಲಿ ಎಂಜಿನಿಯರಿಂಗ್ ಕಾಲೇಜು ಸ್ಥಾಪಿಸಿದರು. ಈ ಮೂಲಕ ಹಲವಾರು ಯುವಜರ ಭವಿಷ್ಯಕ್ಕೆ ದಾರಿದೀಪವಾದರು. ತಮ್ಮ ಸ್ವಕ್ಷೇತ್ರ ಭಾಲ್ಕಿಯಲ್ಲಿ ಎಂಜಿನಿಯರಿಂಗ್ ಕಾಲೇಜು ಸ್ಥಾಪಿಸುವ ಸಲುವಾಗಿ ಸಚಿವ ಸ್ಥಾನವನ್ನೇ ತ್ಯಾಗ ಮಾಡಿದ್ದರು.
ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರಾಗಿ ಸಮುದಾಯವನ್ನು ಒಗ್ಗೂಡಿಸುವಲ್ಲಿ ಶ್ರಮಿಸಿದ ಅವರು ಕೆಲವೇ ಸಾವಿರ ಇದ್ದ ಸಭಾದ ಸದಸ್ಯತ್ವವನ್ನು ಲಕ್ಷಕ್ಕೆ ತೆಗೆದುಕೊಂಡು ಹೋಗುವ ಮೂಲಕ ತಮ್ಮ ಸಂಘಟನಾ ಸಾಮರ್ಥ್ಯ ಪ್ರದರ್ಶಿಸಿದವರಾಗಿದ್ದಾರೆ.
Credit: Oneindia



Click it and Unblock the Notifications











