Latest Updates
-
ಮನೆಯವರ ವಿರೋಧದ ನಡುವೆ ಮದುವೆ: ಅಲಹಾಬಾದ್ ಹೈಕೋರ್ಟ್ನಿಂದ ಜೋಡಿಗಳಿಗೆ ಸಿಕ್ಕಿತು ಭರ್ಜರಿ ರಕ್ಷಣೆ! -
ಮಳೆ ನಂತರ ದೆಹಲಿ-ಎನ್ಸಿಆರ್ನಲ್ಲಿ ಶುದ್ಧ ಗಾಳಿ: ನಿಮ್ಮ ಮನೆಯನ್ನು ಫ್ರೆಶ್ ಆಗಿಡಲು ಈ ಸರಳ ಟಿಪ್ಸ್ ಪಾಲಿಸಿ! -
ಯೋಗಿನಿ ಏಕಾದಶಿ: ಮಧುಮೇಹಿಗಳು ಉಪವಾಸ ಮಾಡುವಾಗ ಈ ಆರೋಗ್ಯ ಟಿಪ್ಸ್ ಮರೆಯದಿರಿ! -
ವಿಶ್ವ ಜನಸಂಖ್ಯಾ ದಿನ: ಉಚಿತ ಗರ್ಭನಿರೋಧಕಗಳು ಮತ್ತು ನಿಮ್ಮ ಗೌಪ್ಯತೆ ಬಗ್ಗೆ ತಿಳಿಯಲೇಬೇಕಾದ ಸತ್ಯಗಳು -
ಭಾರತ-ಇಂಗ್ಲೆಂಡ್ ಟಿ20 ಪಂದ್ಯದ ರೋಚಕತೆ ನಡುವೆ ಫಿಟ್ ಆಗಿರಲು ಈ 7 ನಿಮಿಷದ ಟಿಪ್ಸ್ ಮಿಸ್ ಮಾಡ್ಬೇಡಿ! -
ಮಳೆಗಾಲದ ಡೇಟಿಂಗ್: ಬಜೆಟ್ ಸ್ನೇಹಿ ಐಡಿಯಾಗಳು ಮತ್ತು ಸುರಕ್ಷಿತವಾಗಿರಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ಕೋಲ್ಕತ್ತಾದಲ್ಲಿ ಭಾರಿ ಮಳೆ: ನಿಮ್ಮ ಬಾಲ್ಕನಿ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ ಟಿಪ್ಸ್ ಮಿಸ್ ಮಾಡಬೇಡಿ! -
ಮಳೆಗಾಲದಲ್ಲಿ ಹೊಟ್ಟೆಯ ಸಮಸ್ಯೆ ಕಾಡ್ತಿದೆಯಾ? ಆರೋಗ್ಯವಾಗಿರಲು ಈ ಆಹಾರ ಪದ್ಧತಿ ಪಾಲಿಸಿ -
ಧಮಾಲ್ 4 ರಿಲೀಸ್: ಅಜಯ್ ದೇವಗನ್ ಕಾಮಿಡಿ ಹಬ್ಬಕ್ಕೆ ಫ್ಯಾಮಿಲಿ ಜೊತೆ ರೆಡಿಯಾಗಿ! -
ಸಮಲಿಂಗಿ ಜೋಡಿಗಳೇ ಎಚ್ಚರ: ಗಿಫ್ಟ್ ಟ್ಯಾಕ್ಸ್ನಿಂದ ಪಾರಾಗಲು ಈ ದಾಖಲೆಗಳು ಕಡ್ಡಾಯ!
ಸಿಎಂ ಪಟ್ಟದ ಮೇಲೆ ಹೆಚ್ಡಿಕೆ ಕಣ್ಣು; ಸಾವಿನ ಹತ್ತಿರಕ್ಕೆ ಹೋಗಿ ಬಂದಿದ್ದೇನೆ, 5 ವರ್ಷ ಅಧಿಕಾರ ಕೊಡಿ: ಹೆಚ್ ಡಿ ಕುಮಾರಸ್ವಾಮಿ
ತುಮಕೂರು: ನಾನು ಐದು ಬಾರಿ ಸಾವಿನ ಹತ್ತಿರಕ್ಕೆ ಹೋಗಿ ಬಂದಿದ್ದೇನೆ. ದೇವರ ಆಶೀರ್ವಾದದಿಂದಲೇ ನಾನು ಇನ್ನೂ ಬದುಕಿದ್ದೇನೆ ಎಂದು ಭಾವಿಸಿದ್ದೇನೆ. ನಮಗೆ ಒಂದು ಅವಕಾಶ ಕೊಡಿ. ಐದು ವರ್ಷಗಳ ಉತ್ತಮ ಸರ್ಕಾರ ನೋಡುತ್ತೇವೆ. ಇದು ಜೆಡಿಎಸ್ ಬಿಜೆಪಿ ಸರ್ಕಾರ ಅಲ್ಲ, ಆರೂವರೆ ಕೋಟಿ ಕನ್ನಡಿಗರ ಸರ್ಕಾರ ತರುತ್ತೇವೆ. ಅದಕ್ಕೆ ಅವಕಾಶ ಕೊಡಿ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ರಾಜ್ಯದ ಜನತೆಗೆ ಮನವಿ ಮಾಡಿಕೊಂಡರು.
ತುಮಕೂರು ಗ್ರಾಮಾಂತರ ವಿಧಾನಸಭೆ ಕ್ಷೇತ್ರದ ರಾಗಿಮುದ್ದೆನಹಳ್ಳಿ ಗ್ರಾಮದಲ್ಲಿ ನೂತನವಾಗಿ ನಿರ್ಮಾಣ ಮಾಡಲಾಗಿರುವ ಆದಿಶಕ್ತಿ ಶ್ರೀ ಮಾರಮ್ಮ ಅಮ್ಮನವರ ದೇವಾಲಯ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಹೆಚ್ ಡಿ ಕುಮಾರಸ್ವಾಮಿ ಅವರು, ಇಡೀ ರಾಜ್ಯದಲ್ಲಿ ಈ ಸರಕಾರ ಸರ್ಕಾರ ಮದ್ಯದ ಹೊಳೆ ಹರಿಸುತ್ತಿದೆ. ಹಳ್ಳಿ ಹಳ್ಳಿಯಲ್ಲಿ ಕಿರಾಣಿ ಅಂಗಡಿಗಳಲ್ಲಿ ಕೂಡ ಮದ್ಯ ದೊರೆಯುತ್ತಿದೆ. ಸಿ.ಎಲ್. 7 ಮದ್ಯ ಪರವಾನಗಿಯನ್ನು ದೊಡ್ಡ ಪ್ರಮಾಣದಲ್ಲಿ ನೀಡುತ್ತಿದ್ದಾರೆ. ಇಂಥ ಒಂದು ಲೈಸನ್ಸ್ ಕೊಡುವುದಕ್ಕೆ ಇತ್ತೀಚೆಗೆ ಅಬಕಾರಿ ಅಧಿಕಾರಿಗಳು ₹2.50 ಕೋಟಿ ಲಂಚ ಪಡೆಯುವಾಗ ಸಿಕ್ಕಿಬಿದ್ದಿದ್ದಾರೆ.

ನಿಮ್ಮ ಗಂಡಂದಿರಿಗೆ ಚೆನ್ನಾಗಿ ಕುಡಿಸಿ ಅವರನ್ನು ಹಾಳು ಮಾಡಿ ನಿಮಗೆ 2000 ಗೃಹಲಕ್ಷ್ಮೀ ಹಣ ಕೊಟ್ಟರೆ ಉಪಯೋಗ ಏನು? ನಿಮ್ಮ ಹಣ ಕಿತ್ತುಕೊಂಡು ನಿಮಗೆ ಅದರಲ್ಲಿ ಅಲ್ಪ ಮೊತ್ತ ನೀಡುತ್ತಿದ್ದಾರೆ. ದಯವಿಟ್ಟು ಎರಡು ಸಾವಿರಕ್ಕೆ ಮರುಳಾಗಬೇಡಿ. ಐದು ವರ್ಷ ಒಂದು ಅವಕಾಶ ಕೊಡಿ ಎಂದು ಕುಮಾರಸ್ವಾಮಿ ಅವರು ಮನವಿ ಮಾಡಿದರು. ಎರಡು ಸಾವಿರಕ್ಕೆ ಮರುಳಾಗಬೇಡಿ. ಐದು ವರ್ಷ ಒಂದು ಅವಕಾಶ ಕೊಡಿ, ಈ ಗ್ಯಾರಂಟಿಗಳು ನಿಮ್ಮ ಬದುಕಿಗೆ ಶಾಶ್ವತ ಪರಿಹಾರ ಅಲ್ಲಾ. ಕಾಂಗ್ರೆಸ್ ಸರಕಾರದ ಮೋಸಕ್ಕೆ ಬಲಿಯಾಗಬೇಡಿ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಮಹಿಳೆಯರಲ್ಲಿ ಮನವಿ ಮಾಡಿದರು.
ನಿಮಗೆ ತಾತ್ಕಾಲಿಕ ಉಪಶಮನ ಅಷ್ಟೇ ಈ ಐದು ಗ್ಯಾರಂಟಿಗಳು. ಇವುಗಳಿಂದ ಏನು ಉಪಯೋಗ ಇಲ್ಲ. ಇದಕ್ಕಾಗಿ ವರ್ಷಕ್ಕೆ ₹50,000 ಕೋಟಿ ಹಣವನ್ನು ಸರ್ಕಾರ ಖರ್ಚು ಮಾಡುತ್ತಿದೆ. ನೀವು ಕಟ್ಟುವ ತೆರಿಗೆ ಹಣವನ್ನೇ ನಿಮಗೆ ನೀಡುತ್ತಿದೆ. ಇದಕ್ಕೆ ಪ್ರತಿಯಾಗಿ ವಾರ್ಷಿಕ ₹1ರಿಂದ ₹1.25 ಲಕ್ಷ ಕೋಟಿ ಸಾಲ ಮಾಡುತ್ತಿದೆ. ಈ ಸಾಲವನ್ನು ಗ್ಯಾರೆಂಟಿ ಕೊಟ್ಟವರು ತೀರಿಸಲ್ಲ. ನೀವೇ ತೀರಿಸಬೇಕು ಎಂದು ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರು ಹೇಳಿದರು.
ಎರಡು ಬಾರಿ ನಾನು ಮುಖ್ಯಮಂತ್ರಿ ಆಗಿದ್ದೆ. ನಾನು ಜನತೆಗೆ ದ್ರೋಹ ಬಗೆಯದೇ ಕೆಲಸ ಮಾಡಿದ್ದೇನೆ. ನನ್ನ ಆತ್ಮಕ್ಕೆ ತೃಪ್ತಿಯಾಗುವ ರೀತಿಯಲ್ಲಿ ನಾನು ಜನರ ಸೇವೆ ಮಾಡಿದ್ದೇನೆ. ಬೇರೆಯವರ ಕುತಂತ್ರದಿಂದ ಬಿಜೆಪಿಗೆ ಅಧಿಕಾರ ಹಸ್ತಾಂತರ ಮಾಡಲು ಆಗಲಿಲ್ಲ. ನನ್ನ ತಪ್ಪಿನಿಂದ ಆಗಿದ್ದಲ್ಲ. ಅವಕಾಶ ಸಿಕ್ಕಿದಾಗ ಸಾಕಷ್ಟು ಕೆಲಸ ಮಾಡಿದ್ದೇನೆ. ಸಾಲ ಮನ್ನಾ ಎರಡು ಅವಧಿಗಳಲ್ಲಿಯೂ ಮಾಡಿದ್ದೇನೆ. ಕೇಂದ್ರ ಸಹಕಾರ ಕೊಡುವುದಿಲ್ಲ ಎನ್ನುವುದು ತಪ್ಪು, ನಮ್ಮ ನಡವಳಿಕೆ ಮೇಲೆ ಎಲ್ಲವೂ ನಿಂತಿರುತ್ತದೆ. ನಾನು ಎರಡು ಬಾರಿ ಸಾಲ ಮನ್ನಾ ಮಾಡಿದಾಗ ನಾನು ಕೇಂದ್ರದ ಕಡೆ ನೋಡಲಿಲ್ಲ. ರಾಜ್ಯದ ಖಜಾನೆಯಿಂದ ಹಣ ನೀಡಿ ಸಾಲ ಮನ್ನಾ ಮಾಡಿದೆ. ಇವರು ಪ್ರತಿಯೊಂದಕ್ಕೂ ಕೇಂದ್ರ ಸರ್ಕಾರದ ಕಡೆ ಬೊಟ್ಟು ಮಾಡಿ ತೋರಿಸುತ್ತಾರೆ. ಇದು ಸರಿಯಲ್ಲ ಎಂದರು.
Credit: Oneindia



Click it and Unblock the Notifications