Latest Updates
-
ಬೆಂಗಳೂರಿಗರೇ ಗಮನಿಸಿ: ಇಂದು 6 ಗಂಟೆ ಪವರ್ ಕಟ್, ಈ ಮುನ್ನೆಚ್ಚರಿಕೆ ಮರೆಯದಿರಿ! -
ಶ್ರಾವಣ ಉಪವಾಸದಲ್ಲಿ ದಿನವಿಡೀ ಎನರ್ಜಿಯಿಂದ ಇರಬೇಕೆ? ಈ ಹೈ-ಪ್ರೋಟೀನ್ ಸಾತ್ವಿಕ ಆಹಾರ ಪದ್ಧತಿ ಫಾಲೋ ಮಾಡಿ! -
ಗುರು ಪೂರ್ಣಿಮೆ 2026: ಸರಳ ಪೂಜಾ ವಿಧಿ ಮತ್ತು ಕಡಿಮೆ ಬಜೆಟ್ನಲ್ಲಿ ಗುರುಗಳಿಗೆ ನೀಡಬಹುದಾದ ಬೆಸ್ಟ್ ಗಿಫ್ಟ್ ಐಡಿಯಾಗಳು! -
10 ನಿಮಿಷದ 'ಟೈಗರ್ ಫ್ಲೋ': ಬೆನ್ನುನೋವಿಗೆ ಮುಕ್ತಿ ನೀಡುವ ಅದ್ಭುತ ವ್ಯಾಯಾಮ ಇಲ್ಲಿದೆ! -
ಪ್ರತಿಭಟನೆಯಲ್ಲಿ ಪ್ರೀತಿ: 'ಪ್ರೊಟೆಸ್ಟ್ ನೇ ಬನಾ ದಿ ಜೋಡಿ' ಟ್ರೆಂಡ್ ಹಿಂದೆ ಅಡಗಿದೆ ದೊಡ್ಡ ಅಪಾಯ! -
ಮಳೆಗಾಲದಲ್ಲಿ ಮನೆಯಲ್ಲಿ ಬೂಷ್ಟು ಹರಡುತ್ತಿದೆಯೇ? ಈ 20 ನಿಮಿಷದ ಟಿಪ್ಸ್ ಪಾಲಿಸಿ, ಮನೆ ಫ್ರೆಶ್ ಆಗಿಡಿ! -
ಕೇವಲ 200 ರೂಪಾಯಿಯಲ್ಲಿ ಪರಿಸರ ಸ್ನೇಹಿ ಊಟ: ವಿಶ್ವ ಪ್ರಕೃತಿ ಸಂರಕ್ಷಣಾ ದಿನಕ್ಕೆ ನಿಮ್ಮ ಅಡುಗೆಮನೆಯೇ ಮೊದಲ ಹೆಜ್ಜೆ! -
CWG 2026: 6ನೇ ದಿನ ಭಾರತದ ಪದಕದ ಬೇಟೆ; ಮನೆಯಲ್ಲೇ ಕಮ್ಮಿ ಬಜೆಟ್ನಲ್ಲಿ ಅದ್ಭುತ ವಾಚ್ ಪಾರ್ಟಿ ಪ್ಲಾನ್! -
ವಿಶ್ವ ಹೆಪಟೈಟಿಸ್ ದಿನ: ಲಿವರ್ ಆರೋಗ್ಯ ಹೆಚ್ಚಿಸಲು ಈ 10 ನಿಮಿಷದ ಬೆಳಗಿನ ದಿನಚರಿ ಪಾಲಿಸಿ! -
ಮಳೆಗಾಲದ ರಜೆ: ವರ್ಕ್ ಫ್ರಮ್ ಹೋಮ್ ಪೋಷಕರಿಗೆ ಮಕ್ಕಳನ್ನು ನಿಭಾಯಿಸುವುದು ಹೇಗೆ? ಇಲ್ಲಿದೆ ಸರಳ ಟಿಪ್ಸ್
Gold Price Jan 13: ಚಿನ್ನದ ಬೆಲೆ 3,800 ರೂ. & ಬೆಳ್ಳಿ ಬೆಲೆ ಬರೋಬ್ಬರಿ 5,000 ರೂ. ಹೆಚ್ಚಳ
ಚಿನ್ನದ ಬೆಲೆಯು ನಿರಂತರವಾಗಿ ಹೆಚ್ಚಳವಾಗುತ್ತಿದ್ದು, ಚಿನ್ನದ ಬೆಲೆಯು ಮಂಗಳವಾರ ಜನವರಿ 13ರಂದು ಮತ್ತೆ ಹೆಚ್ಚಳ ಕಂಡಿದೆ. ಕಳೆದ ಕೆಲವು ದಿನಗಳಿಂದ ಚಿನ್ನದ ಬೆಲೆಯು ನಿರಂತರವಾಗಿ ಹೆಚ್ಚಳವಾಗುತ್ತಿದೆ. ಇದೀಗ ಭಾರತದ ಮೇಲೆ ಅಮೆರಿಕಾ ಬೇಕಾಬಿಟ್ಟಿ ಸುಂಕ ವಿಧಿಸುತ್ತಿದೆ. ಈ ಎಲ್ಲಾ ಕಾರಣಗಳಿಂದ ಚಿನ್ನದ ಬೆಲೆಯು ನಿರಂತರವಾಗಿ ಹೆಚ್ಚಳವಾಗುತ್ತಿದೆ. ಜನವರಿ 13ರ ಚಿನ್ನ ಮತ್ತು ಬೆಳ್ಳಿಯ ಬೆಲೆ ಎಷ್ಟಿದೆ ಎನ್ನುವ ವಿವರ ನೋಡೋಣ.
24 ಕ್ಯಾರೆಟ್ ಚಿನ್ನದ ಬೆಲೆ: 24 ಕ್ಯಾರೆಟ್ನ ಚಿನ್ನದ ಬೆಲೆಯು ಜನವರಿ 13ರಂದು ಭರ್ಜರಿ ಹೆಚ್ಚಳ ಕಂಡಿದೆ. 24 ಕ್ಯಾರೆಟ್ನ ಒಂದು ಗ್ರಾಂ ಚಿನ್ನದ ಬೆಲೆಯು 14,253 ರೂಪಾಯಿ ಆಗಿದೆ. ಇನ್ನು 24 ಕ್ಯಾರೆಟ್ನ 10 ಗ್ರಾಂನ ಚಿನ್ನದ ಬೆಲೆಯು 1,42,530 ರೂಪಾಯಿ ಆಗಿದೆ. ಸೋಮವಾರಕ್ಕೆ ಹೋಲಿಕೆ ಮಾಡಿದರೆ ಒಂದು ಗ್ರಾಂನ ಚಿನ್ನದ ಬೆಲೆಯು 38 ರೂಪಾಯಿ ಹಾಗೂ 10 ಗ್ರಾಂನ ಚಿನ್ನದ ಬೆಲೆಯ ಮೇಲೆ 380 ರೂಪಾಯಿ ಹೆಚ್ಚಳವಾಗಿದೆ. 100 ಗ್ರಾಂನ ಚಿನ್ನದ ಬೆಲೆಯು ಬರೋಬ್ಬರಿ 14,25,300 ರೂಪಾಯಿ ಆಗಿದೆ. ನೆನ್ನೆಗೆ ಹೋಲಿಕೆ ಮಾಡಿದರೆ 3,800 ರೂಪಾಯಿ ಹೆಚ್ಚಳವಾಗಿದೆ.

22 ಕ್ಯಾರೆಟ್ ಚಿನ್ನದ ಬೆಲೆ: ಇನ್ನು 22 ಕ್ಯಾರೆಟ್ನ 1 ಗ್ರಾಂ ಚಿನ್ನದ ಬೆಲೆಯು 13,065 ರೂಪಾಯಿ ಹಾಗೂ 10 ಗ್ರಾಂನ ಚಿನ್ನದ ಬೆಲೆಯು 1,30,650 ರೂಪಾಯಿ ಆಗಿದೆ. ಸೋಮವಾರಕ್ಕೆ ಹೋಲಿಕೆ ಮಾಡಿದರೆ ಒಂದು ಗ್ರಾಂ ಚಿನ್ನದ ಬೆಲೆಯ ಮೇಲೆ 35 ರೂಪಾಯಿ ಹಾಗೂ 10 ಗ್ರಾಂನ ಚಿನ್ನದ ಮೇಲೆ ಬರೋಬ್ಬರಿ 350 ರೂಪಾಯಿ ಹೆಚ್ಚಳವಾಗಿದೆ.
18 ಕ್ಯಾರೆಟ್ ಚಿನ್ನದ ಬೆಲೆ: 18 ಕ್ಯಾರೆಟ್ ಚಿನ್ನದ ಬೆಲೆಯಲ್ಲೂ ಹೆಚ್ಚಳವಾಗಿದೆ. 18 ಕ್ಯಾರೆಟ್ನ ಒಂದು ಗ್ರಾಂ ಚಿನ್ನದ ಬೆಲೆಯು 10,690 ರೂಪಾಯಿ ಆಗಿದೆ. 10 ಗ್ರಾಂನ ಚಿನ್ನದ ಬೆಲೆಯು 1,06,900 ರೂಪಾಯಿ ಆಗಿದೆ. ಸೋಮವಾರಕ್ಕೆ ಹೋಲಿಕೆ ಮಾಡಿದರೆ ಒಂದು ಗ್ರಾಂ ಚಿನ್ನದ ಬೆಲೆಯು 29 ರೂಪಾಯಿ ಹಾಗೂ 10 ಗ್ರಾಂನ ಚಿನ್ನದ ಬೆಲೆಯು 290 ರೂಪಾಯಿ ಹೆಚ್ಚಳವಾಗಿದೆ.
ಬೆಳ್ಳಿ ಬೆಲೆ ಎಷ್ಟಿದೆ ?
ಇನ್ನು ಬೆಳ್ಳಿಯ ಬೆಲೆಯಲ್ಲೂ ಭರ್ಜರಿ ಹೆಚ್ಚಳವಾಗಿದೆ. ಬೆಳ್ಳಿ ಬೆಲೆಯು ಮಂಗಳವಾರ - ಜನವರಿ 13ರಂದು ಪ್ರತಿ ಗ್ರಾಂಗೆ 275 ರೂಪಾಯಿ ಆಗಿದೆ. ಪ್ರತಿ ಗ್ರಾಂಗೆ ಬೆಳ್ಳಿ ಬೆಲೆಯು ನೆನ್ನೆಗೆ ಹೋಲಿಕೆ ಮಾಡಿದರೆ 5 ರೂಪಾಯಿ ಹೆಚ್ಚಳವಾಗಿದೆ. ಒಂದು ಕೆ.ಜಿ ಬೆಳ್ಳಿ ಬೆಲೆಯು 2,75,000 ರೂಪಾಯಿ ಆಗಿದೆ. ನೆನ್ನೆಗೆ ಹೋಲಿಕೆ ಮಾಡಿದರೆ ಬರೋಬ್ಬರಿ ಒಂದು ಕೆ.ಜಿ ಬೆಳ್ಳಿ ಬೆಲೆಯು 5,000 ಸಾವಿರ ರೂಪಾಯಿ ಹೆಚ್ಚಳವಾಗಿದೆ.
ಚಿನ್ನದ ಬೆಲೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ
ಚಿನ್ನದ ಬೆಲೆಯು ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ದಟ್ಟವಾಗಿದೆ. ಮಧ್ಯಪ್ರಾಚ್ಯದಲ್ಲಿ ಮತ್ತೊಂದು ಹೊಸ ತಲ್ಲಣ ಶುರುವಾಗಿದೆ. ಮಧ್ಯಪ್ರಾಚ್ಯದ ಇರಾನ್ನಲ್ಲಿ ಅಲ್ಲಿನ ಪ್ರಾದಿಗಳ ಆಡಳಿತವನ್ನು ವಿರೋಧಿಸಿ ಜನ ಬೀದಿಗೆ ಇಳಿದಿದ್ದಾರೆ. ಮತ್ತೊಂದು ಕಡೆ ಇರಾನ್ನ ಮೇಲೆ ಅಮೆರಿಕಾ ಹಾಗೂ ಇಸ್ರೇಲ್ ಯಾವುದೇ ಕ್ಷಣದಲ್ಲಾದರೂ ದಾಳಿ ಮಾಡುವ ಆತಂಕ ಇದೆ. ಇದರೊಂದಿಗೆ ಅಮೆರಿಕಾ ಮಿತಿ ಮೀರಿ ಭಾರತದ ಮೇಲೆ ಸುಂಕ ವಿಧಿಸುತ್ತಿದೆ. ಈ ಎಲ್ಲಾ ಕಾರಣಗಳಿಗೆ ಚಿನ್ನದ ಬೆಲೆಯು ಈ ವಾರದಲ್ಲಿ ಇನ್ನಷ್ಟು ಹೆಚ್ಚಳವಾಗುವ ಆತಂಕ ಇದೆ.
Credit: Oneindia



Click it and Unblock the Notifications