Latest Updates
-
ಮಂಗಳ ಗೌರಿ ವ್ರತದ ದಿನ ದಂಪತಿಗಳ ನಡುವೆ ಕಿರಿಕಿರಿ ಬೇಡ: ಪ್ರೀತಿ ಹೆಚ್ಚಿಸಲು ಇಲ್ಲಿದೆ ಬೆಸ್ಟ್ ಟಿಪ್ಸ್ -
ನ್ಯಾಷನಲ್ ಕಪಲ್ಸ್ ಡೇ: ಪ್ರೀತಿಯ ಸಂಭ್ರಮದ ಜೊತೆಗೆ ಡಿಜಿಟಲ್ ಪ್ರೈವೆಸಿ ಮತ್ತು ರೊಮ್ಯಾಂಟಿಕ್ ಡೇಟ್ ಐಡಿಯಾಗಳು -
ವರಮಹಾಲಕ್ಷ್ಮಿ ಹಬ್ಬದ ಸೌಂದರ್ಯಕ್ಕೆ ಸಾಂಪ್ರದಾಯಿಕ ಆಭರಣಗಳ ಮೆರುಗು: ಈ ಬಾರಿಯ ಫ್ಯಾಷನ್ ಟ್ರೆಂಡ್ಸ್ -
ಅಪಾರ್ಟ್ಮೆಂಟ್ನಲ್ಲಿ ಓಣಂ ಸಂಭ್ರಮ: ಮಳೆಗೆ ಹಾಳಾಗದ, ಬಜೆಟ್ ಸ್ನೇಹಿ ಪೂಕಳಂಗೆ ಇಲ್ಲಿದೆ ಸೂಪರ್ ಟಿಪ್ಸ್! -
ವಿಶ್ವ ಛಾಯಾಗ್ರಹಣ ದಿನ: ಮನೆಯಲ್ಲೇ ಫೋಟೋ ಸ್ಟುಡಿಯೋ ಮಾಡಿ, ನಿಮ್ಮ ಗಿಡಗಳ ಫೋಟೋ ವೈರಲ್ ಆಗುವಂತೆ ಕ್ಲಿಕ್ ಮಾಡಿ! -
98% ಅಂಕ ಪಡೆದರೂ ಅಂಗಡಿ ಬಂದ್: FDAಗೆ ಹೈಕೋರ್ಟ್ ತರಾಟೆ, ಕಲಬೆರಕೆ ಸಿಹಿ ಪತ್ತೆಹಚ್ಚುವುದು ಹೇಗೆ? -
BWF ವಿಶ್ವ ಚಾಂಪಿಯನ್ಷಿಪ್ 2026: ಲಕ್ಷ್ಯ ಸೇನ್ ಅಬ್ಬರಕ್ಕೆ ದೆಹಲಿ ಸಜ್ಜು, ಲೈವ್ ಮಿಸ್ ಮಾಡ್ಬೇಡಿ! -
ವಿಶ್ವ ಹಿರಿಯ ನಾಗರಿಕರ ದಿನ: ಪೋಷಕರ ಆರೋಗ್ಯ ಮತ್ತು ಸಮತೋಲನ ಹೆಚ್ಚಿಸುವ ಸರಳ ಬೆಳಗಿನ ವ್ಯಾಯಾಮಗಳು -
ಸಿಂಹ ಸಂಕ್ರಾಂತಿ ಹಬ್ಬದ ಸಂಭ್ರಮ: ದಂಪತಿಗಳ ನಡುವಿನ ಜಗಳ ತಪ್ಪಿಸಲು ಇಲ್ಲಿದೆ 12 ನಿಮಿಷದ ಸೂತ್ರ! -
ಸಿಂಹ ಸಂಕ್ರಾಂತಿ ಹಬ್ಬದ ಸಂಭ್ರಮ: ದಂಪತಿಗಳ ನಡುವಿನ ಜಗಳ ತಡೆಯಲು ಈ 'ಕಪಲ್ ಸ್ಕ್ರಿಪ್ಟ್ಸ್' ಬಳಸಿ!
Gold Rate India: ಬಜೆಟ್ ಮರುದಿನವೇ ಚಿನ್ನದ ಬೆಲೆ ಭಾರೀ ಇಳಿಕೆ! ಬರೋಬ್ಬರಿ 7,240 ರೂ. ಕುಸಿತ
ಕೇಂದ್ರ ಬಜೆಟ್ ಮಂಡನೆಯಾದ (Union Budget 2026) ಮರುದಿನವೇ ಭಾರತದಲ್ಲಿ ಚಿನ್ನದ ಬೆಲೆ ಭಾರೀ ಕುಸಿತ ಕಂಡಿದೆ. ಚಿನ್ನದ ಬೆಲೆ ಬಗ್ಗೆ ಭಾರೀ ನಿರೀಕ್ಷೆಯಲ್ಲಿದ್ದವರಿಗೆ, ಕೊನೆಗೂ ಭರ್ಜರಿ ಸುದ್ದಿ ಸಿಕ್ಕಿದೆ. ಹೌದು, ಚಿನ್ನದ ಬೆಲೆ ಇಂದು ಭಾರೀ ಇಳಿಕೆ ಕಂಡಿದ್ದು (Gold Rate Down), ಎಷ್ಟಿದೆ ಅನ್ನೋದರ ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ.

ಭಾರತದಲ್ಲಿ 24K ಚಿನ್ನದ ಬೆಲೆ:
ಭಾರತದಲ್ಲಿ 24K ಚಿನ್ನದ 1 ಗ್ರಾಂ ಬೆಲೆ ₹15,153 ರೂ. ಆಗಿದ್ದು, ನಿನ್ನೆ ₹16,058 ರೂ. ಇತ್ತು. ಒಂದೇ ದಿನದಲ್ಲಿ ಬರೋಬ್ಬರಿ ₹905 ರೂ. ಇಳಿಕೆಯಾಗಿದೆ. ಇನ್ನು 8 ಗ್ರಾಂ ಚಿನ್ನದ ಬೆಲೆ ಇಂದು ₹1,21,224 ರೂ. ಆಗಿದ್ದು, ನಿನ್ನೆ ₹1,28,464 ರೂ. ಇತ್ತು. ನಿನ್ನೆಗೆ ಹೋಲಿಕೆ ಮಾಡಿದ್ರೆ ಇಂದು ₹7,240 ರೂ. ಇಳಿಕೆಯಾಗಿದೆ. 10 ಗ್ರಾಂ ಚಿನ್ನದ ದರ ಇಂದು ₹1,51,530 ರೂ. ಆಗಿದ್ದು, ನಿನ್ನೆ ₹1,60,580 ರೂ. ಇತ್ತು. ನಿನ್ನೆಗಿಂತ ಇಂದು 10 ಗ್ರಾಂ ಚಿನ್ನದಲ್ಲಿ ದಿಢೀರ್ 9,050 ರೂ. ಇಳಿಕೆಯಾಗಿದೆ. ಇನ್ನು 100 ಗ್ರಾಂ ಚಿನ್ನದ ದರ 15,15,300 ರೂ. ಆಗಿದ್ದು, ನಿನ್ನೆ 16,05,800 ರೂ. ಇತ್ತು. ಒಟ್ಟು 90,500 ರೂ. ಇಳಿಕೆಯಾಗಿದೆ.
ಭಾರತದಲ್ಲಿ 22K ಚಿನ್ನದ ಬೆಲೆ:
22K ಚಿನ್ನದ 1 ಗ್ರಾಂ ಬೆಲೆ ₹13,890 ರೂ. ಆಗಿದ್ದು, ನಿನ್ನೆ ₹14,720 ರೂ. ಇತ್ತು. ನಿನ್ನೆಗೆ ಹೋಲಿಸಿದ್ರೆ ಇಂದು ₹830 ರೂ. ಕುಸಿತವಾಗಿದೆ. ಇನ್ನು 8 ಗ್ರಾಂ ಚಿನ್ನದ ದರ ಇಂದು 1,11,120 ರೂ. ಆಗಿದ್ದು, ನಿನ್ನೆ 1,17,760 ರೂ. ಇತ್ತು. ನಿನ್ನೆಗೆ ಹೋಲಿಸಿದ್ರೆ ಇಂದು ₹6,640 ರೂ. ಇಳಿಕೆ ಕಂಡಿದೆ. 10 ಗ್ರಾಂ ಚಿನ್ನದ ದರ ಇಂದು ₹1,38,900 ರೂ. ಆಗಿದ್ದು, ನಿನ್ನೆ ₹1,47,200 ರೂ. ಇತ್ತು. ಒಂದೇ ದಿನದಲ್ಲಿ ಬರೋಬ್ಬರಿ 8,300 ರೂ. ಇಳಿಕೆ ಕಂಡಿದೆ. 100 ಗ್ರಾಂ ಚಿನ್ನದ ದರ ಇಂದು ₹13,89,000 ರೂ. ಆಗಿದ್ದು, ನಿನ್ನೆ ₹14,72,000 ರೂ. ಇತ್ತು.
ಭಾರತದಲ್ಲಿ 18K ಚಿನ್ನದ ಬೆಲೆ:
18K ಚಿನ್ನದ 1 ಗ್ರಾಂ ಚಿನ್ನದ ಬೆಲೆ ₹11,365 ರೂ. ಆಗಿದ್ದು, ನಿನ್ನೆ ₹12,044 ರೂ. ಇತ್ತು. ನಿನ್ನೆಗಿಂತ ಇಂದು 679 ರೂ. ಇಳಿಕೆ ಕಂಡಿದೆ. ಹಾಗೆಯೇ 8 ಗ್ರಾಂ ಚಿನ್ನದ ದರ ಇಂದು ₹90,920 ರೂ. ಆಗಿದ್ದು, ನಿನ್ನೆ 96,352 ರೂ. ಇತ್ತು. ನಿನ್ನೆಗಿಂತ ಇಂದು 5,432 ರೂ. ಇಳಿಕೆ ಕಂಡಿದೆ. 10 ಗ್ರಾಂ ಚಿನ್ನದ ದರ 1,13,650 ರೂ. ಆಗಿದ್ದು, ನಿನ್ನೆ 1,20,440 ರೂ. ಇತ್ತು. ಒಟ್ಟು 6,790 ರೂ. ಕುಸಿತ ಕಂಡಿದೆ. ಇನ್ನು 100 ಗ್ರಾಂ ಚಿನ್ನದ ಬೆಲೆ ಇಂದು 11,36,500 ರೂ. ಆಗಿದ್ದು, ನಿನ್ನೆ 12,04,400 ರೂ. ಇತ್ತು. ನಿನ್ನೆಗೆ ಹೋಲಿಸಿದ್ರೆ ಇಂದು 67,900 ರೂ. ಕಡಿಮೆಯಾಗಿದೆ.
ಭಾರತದ ವಿವಿಧ ನಗರಗಳಲ್ಲಿ ಚಿನ್ನದ ಬೆಲೆ:
ಚೆನ್ನೈ: 24K ರೂ. 15,218, 22K ರೂ. 13,950, 18K ರೂ. 12,000
ಮುಂಬೈ: 24K ರೂ. 15,153, 22K ರೂ. 13,890, 18K ರೂ. 11,365
ದೆಹಲಿ: 24K ರೂ. 15,168, 22K ರೂ. 13,905, 18K ರೂ. 11,380
ಕೋಲ್ಕತ್ತಾ: 24K ರೂ. 15,153, 22K ರೂ. 13,890, 18K ರೂ. 11,365
ಬೆಂಗಳೂರು: 24K ರೂ. 15,153, 22K ರೂ. 13,890, 18K ರೂ. 11,365
ಹೈದರಾಬಾದ್: 24K ರೂ. 15,153, 22K ರೂ. 13,890, 18K ರೂ. 11,365
ಕೇರಳ: 24K ರೂ. 15,153, 22K ರೂ. 13,890, 18K ರೂ. 11,365
ಪುಣೆ: 24K ರೂ. 15,153, 22K ರೂ. 13,890, 18K ರೂ. 11,365
ವಡೋದರಾ: 24K ರೂ. 15,158, 22K ರೂ. 13,895, 18K ರೂ. 11,370
ಅಹಮದಾಬಾದ್: 24K ರೂ. 15,158, 22K ರೂ. 13,895, 18K ರೂ. 11,370
ಭಾರತದಲ್ಲಿ ಬೆಳ್ಳಿ ದರ ಎಷ್ಟಿದೆ?
ಭಾರತದಲ್ಲಿ ಚಿನ್ನದಂತೆ ಇಂದು ಬೆಳ್ಳಿ ದರ ಕೂಡಾ ಭಾರೀ ಇಳಿಕೆಯಾಗಿದೆ. ಇಂದು ಒಂದು ಗ್ರಾಂ ಬೆಳ್ಳಿ ದರ ₹300 ರೂ. ಆಗಿದ್ದು, ನಿನ್ನೆ ₹350 ರೂ. ಇತ್ತು. ನಿನ್ನೆಗೆ ಹೋಲಿಸಿದ್ರೆ ಇಂದು ಬರೋಬ್ಬರಿ ₹50 ರೂ. ಇಳಿಕೆಯಾಗಿದೆ. ಅದೇ ರೀತಿ 8 ಗ್ರಾಂ ಬೆಳ್ಳಿ ದರ ಇಂದು ₹2,400 ರೂ. ಆಗಿದ್ದು, ನಿನ್ನೆ ₹2,800 ರೂ. ಇತ್ತು. ನಿನ್ನೆಗೆ ಹೋಲಿಕೆ ಮಾಡಿದ್ರೆ ಇಂದು ಬರೋಬ್ಬರಿ ₹400 ರೂ. ಇಳಿಕೆ ಕಂಡಿದೆ. ಇನ್ನು 10 ಗ್ರಾಂ ಬೆಳ್ಳಿ ದರ ₹3,000 ರೂ., 100 ಗ್ರಾಂ ಬೆಳ್ಳಿ ಬೆಲೆ 30,000 ರೂ., 1000 ಗ್ರಾಂ ಬೆಳ್ಳಿ ದರ 3,00,000 ರೂ. ಆಗಿದೆ.
ಸ್ಪಾಟ್ ಗೋಲ್ಡ್ ವಿವರ:
ಫೆಬ್ರವರಿ 2, 2026 ರ ರಾಯಿಟರ್ಸ್ ವರದಿ ಪ್ರಕಾರ, ಸೋಮವಾರವೂ ಚಿನ್ನ ತನ್ನ ಕುಸಿತದ ಹಾದಿಯಲ್ಲಿದೆ. 0259 GMT ವೇಳೆಗೆ ಸ್ಪಾಟ್ ಚಿನ್ನದ ದರವು ಪ್ರತೀ ಔನ್ಸ್ಗೆ 3.3% ರಷ್ಟು ಕುಸಿತ ಕಂಡು, $4,703.27 ಕ್ಕೆ ತಲುಪಿದೆ.
Credit: Goodreturns



Click it and Unblock the Notifications