Latest Updates
-
ಮಳೆಗಾಲದಲ್ಲಿ ಫಿಟ್ ಆಗಿರಬೇಕೆ? ಬೆಂಗಳೂರು, ಚೆನ್ನೈ, ಕೊಚ್ಚಿ ಜನರಿಗಾಗಿ ಇಲ್ಲಿದೆ 20 ನಿಮಿಷದ ಸಿಂಪಲ್ ವರ್ಕೌಟ್! -
2026ರ ನವರಾತ್ರಿ ಗರ್ಬಾ: ಪಾಸ್ ವಂಚನೆಗೆ ಬಲಿಯಾಗದಿರಿ, ಸುರಕ್ಷಿತವಾಗಿ ಆನಂದಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ದೆಹಲಿಯಲ್ಲಿ ಕಠಿಣ GRAP ನಿಯಮ ಜಾರಿ: ಮನೆಯ ಗಾಳಿ ಶುದ್ಧವಾಗಿಡಲು ಮತ್ತು ಮಾಲಿನ್ಯ ತಡೆಯಲು ಇಲ್ಲಿವೆ ಸರಳ ಟಿಪ್ಸ್ -
ಹಬ್ಬದ ಸಿಹಿ ಕೊಳ್ಳುವ ಮುನ್ನ ಎಚ್ಚರ: FSSAI ಕಟ್ಟುನಿಟ್ಟಿನ ಕಾರ್ಯಾಚರಣೆ ಮತ್ತು ಹೊಸ ನಿಯಮಗಳೇನು? -
ಮೈಸೂರು ದಸರಾ 2026: ಟಿಕೆಟ್ ಬುಕ್ಕಿಂಗ್ ಆರಂಭ, ಕಂಬಳ ನೋಂದಣಿಗೆ ಇಂದೇ ಕೊನೆಯ ದಿನ! -
ಗಾಂಧಿ ಜಯಂತಿ ವಿಶೇಷ: ಫಿಟ್ನೆಸ್ ಮತ್ತು ಸಮಾಜ ಸೇವೆ ಬೆಸೆಯುವ 'ಪ್ಲಾಗಿಂಗ್'ಗೆ ಸಿದ್ಧರಾಗಿ! -
ಡೇಟಿಂಗ್ ಆ್ಯಪ್ ಹನಿಟ್ರ್ಯಾಪ್: ಪಬ್ಗಳಲ್ಲಿ ನಡೆಯುವ ಈ ದಂಧೆಯಿಂದ ಪಾರಾಗುವುದು ಹೇಗೆ? -
IMD ಮಳೆ ಅಲರ್ಟ್: ಬೆಂಗಳೂರು, ಚೆನ್ನೈ, ಕೇರಳದಲ್ಲಿ ಭಾರೀ ಮಳೆ; ಮನೆಯನ್ನು ಸುರಕ್ಷಿತವಾಗಿರಿಸಲು ಈ ಟಿಪ್ಸ್ ಪಾಲಿಸಿ! -
ಇಂದಿನಿಂದ ಎನರ್ಜಿ ಡ್ರಿಂಕ್ಸ್ ನಿಯಮ ಬದಲಾವಣೆ: ಕ್ಯಾನ್ ಖರೀದಿಸುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ಅಪಾರ್ಟ್ಮೆಂಟ್ ಗೇಟ್ನಲ್ಲಿ ಟ್ರಾಫಿಕ್ ಜಾಮ್? ಈ ಸರಳ ಟಿಪ್ಸ್ ಪಾಲಿಸಿದರೆ 5 ನಿಮಿಷದಲ್ಲಿ ಹೊರಬರಬಹುದು!
B Khata: ಬಿ - ಖಾತಾದಿಂದ ಎ - ಖಾತಾ: ಸರ್ಕಾರದಿಂದ ಮತ್ತೊಂದು ಗುಡ್‌ನ್ಯೂಸ್ ನಿರೀಕ್ಷೆ
ಬೆಂಗಳೂರು: ಬೆಂಗಳೂರಿನಲ್ಲಿ ಆಸ್ತಿಗಳಿಗೆ ಸಂಬಂಧಿಸಿದಂತೆ ಬಿ - ಖಾತಾದಿಂದ ಎ - ಖಾತಾ ಮಾಡುವುದಕ್ಕೆ ಅವಕಾಶ ಕಲ್ಪಿಸಲಾಗಿದೆ. ಆದರೆ, ಬಿ - ಖಾತಾದಿಂದ ಎ ಖಾತಾ ಮಾಡುವ ಲೆಕ್ಕಾಚಾರಗಳು ತಲೆಕೆಳಗಾಗಿವೆ. ಬೆಂಗಳೂರಿನಲ್ಲಿ 20ಕ್ಕೂ ಹೆಚ್ಚು ವರ್ಷಗಳಿಂದ ಬಿ - ಖಾತಾದಿಂದ ಎ - ಖಾತಾ ಮಾಡಿಸಿಕೊಳ್ಳಬೇಕು ಎಂದು ಆಸ್ತಿದಾರರು ಕಾಯುತ್ತಿದ್ದರು. ಈ ವರ್ಷ ಸರ್ಕಾರವೇ ಅಧಿಕೃತವಾಗಿ ಬಿ ಖಾತಾದಿಂದ ಎ ಖಾತಾ ಮಾಡಿಸಿಕೊಳ್ಳುವುದಕ್ಕೆ ಅವಕಾಶ ನೀಡಿದೆಯಾದರೂ, ಆಸ್ತಿದಾರರು ಬಿ ಖಾತಾದಿಂದ ಎ ಖಾತಾ ಮಾಡಿಸಿಕೊಳ್ಳಲು ಮುಂದೆ ಬರುತ್ತಿಲ್ಲ.
ಗ್ರೇಟರ್ ಬೆಂಗಳೂರು ಪ್ರಾಧಿಕಾರವು ಬಿ ಖಾತಾದಿಂದ ಎ ಖಾತಾ ಪರಿವರ್ತನೆಗೆ ಸಂಬಂಧಿಸಿದಂತೆ ಅರ್ಜಿಗಳನ್ನು ಆಹ್ವಾನಿಸಿದೆ. ಆದರೆ ಲಕ್ಷಾಂತರ ಅರ್ಜಿ ಸಲ್ಲಿಕೆ ಆಗಲಿದೆ ಎಂದು ನಿರೀಕ್ಷೆ ಮಾಡಲಾಗಿತ್ತು. ಆದರೆ ಆ ಲೆಕ್ಕಾಚಾರಗಳು ಇದೀಗ ತಲೆಕೆಳಗಾಗಿವೆ.

ಬಿ ಖಾತಾ ಪರಿವರ್ತನೆ ಮಾಡುವುದಕ್ಕೆ ವಿಧಿಸಲಾಗಿರುವ ದುಬಾರಿ ಶುಲ್ಕವೇ ಇದಕ್ಕೆ ಕಾರಣ ಎಂದು ಹೇಳಲಾಗಿದೆ. ಅಲ್ಲದೇ ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಅವರು ದುಬಾರಿ ಹಣ ನೀಡಿ ಬಿ ಖಾತಾ ಪಡೆದುಕೊಳ್ಳುವ ಅವಶ್ಯಕತೆ ಇಲ್ಲ. ಮುಂದಿನ ದಿನಗಳಲ್ಲಿ ಉಚಿತವಾಗಿ ಬಿ ಖಾತಾ ಸೇವೆ ಇರಲಿದೆ.
ನಾವು ಅಧಿಕಾರಕ್ಕೆ ಬಂದರೆ ಲಕ್ಷ ಲಕ್ಷ ರೂಪಾಯಿ ಪಡೆದುಕೊಳ್ಳದೆ ಉಚಿತವಾಗಿ ಬಿ ಖಾತಾ ಮಾಡಿಕೊಡಲಿದ್ದೇವೆ ಎಂದು ಭರವಸೆ ನೀಡಿದ್ದರು. ಈ ಅಂಶವೂ ಸಹ ಬಿ ಖಾತಾ ದಿಂದ ಎ ಖಾತಾ ಪರಿವರ್ತನೆಯಲ್ಲಿ ಭಾರೀ ಹಿನ್ನಡೆ ಉಂಟಾಗಿದೆ ಎಂದು ಹೇಳಲಾಗಿದೆ. ಎ ಖಾತಾ ವಿತರಣೆ ಮಾಡುವುದಕ್ಕೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಮುಂದಾಗಿದೆ.
ಎ ಖಾತಾ ಪರಿವರ್ತನೆಗೆ ಅರ್ಜಿ ಸಲ್ಲಿಸುವುದಕ್ಕೆ ಗ್ರೇಟರ್ ಬೆಂಗಳುರು ಪ್ರಾಧಿಕಾರದಿಂದ 100 ದಿನಗಳ ಕಾಲಾವಕಾಶ ಇರಲಿದೆ ಎಂದು ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ ಶಿವಕುಮಾರ್ ಅವರು ಹೇಳಿದ್ದರು. ಇದಕ್ಕೆ ಇನ್ನು ಕೆಲವೇ ದಿನಗಳು ಬಾಕಿ ಉಳಿದಿವೆ. 1, 2025 ರಿಂದ 100 ದಿನಗಳ ಅಭಿಯಾನ ಪ್ರಾರಂಭಿಸಲಾಗಿದೆ. ಆದರೆ ಒಂದು ತಿಂಗಳು ಪೂರ್ಣಗೊಳ್ಳುವ ಸಮಯ ಬಂದರೂ, ಬಿ ಖಾತಾದಿಂದ ಎ ಖಾತಾ ಪರಿವರ್ತನೆಗೆ ಬೆಂಗಳೂರಿನಲ್ಲಿ ಕೇವಲ 3 ಸಾವಿರ ಅರ್ಜಿ ಸಲ್ಲಿಕೆಯಾಗಿದೆ. ಈ ಅರ್ಜಿಗಳಲ್ಲಿ 35 ಅರ್ಜಿಗಳನ್ನು ಪರಿಶೀಲನೆ ಮಾಡಿ ವಿತರಣೆ ಮಾಡಲಾಗಿದೆ.
7.5 ಲಕ್ಷ ಬಿ ಖಾತಾ ಆಸ್ತಿ
ಬೆಂಗಳೂರಿನಲ್ಲಿ ಅಂದಾಜು 25 ಲಕ್ಷಕ್ಕೂ ಹೆಚ್ಚು ಆಸ್ತಿಗಳಿವೆ. ಅದರಲ್ಲಿ ಅಂದಾಜು ಏಳೂವರೆ ಲಕ್ಷ ಬಿ ಖಾತಾಗಳಿವೆ. ಅದರಲ್ಲಿ ಇಲ್ಲಿಯ ವರೆಗೆ ಕೇವಲ 3 ಸಾವಿರ ಬಿ ಖಾತಾದಾರರು ಮಾತ್ರ ಎ ಖಾತಾಗೆ ಅರ್ಜಿ ಸಲ್ಲಿಸಿದ್ದಾರೆ. ಬಿ ಖಾತಾದಾರರು ಎ ಖಾತಾ ಮಾಡಿಸಿಕೊಳ್ಳುವುದಕ್ಕೆ ಮುಂದೆ ಬರುತ್ತಿಲ್ಲ. ಹೀಗಾಗಿ, ಬಿ ಖಾತಾಗೆ ಸಲ್ಲಿಕೆಯಾಗಿರುವ ಅರ್ಜಿಗಳನ್ನು ಬೇಗ ವಿಲೇವಾರಿ ಮಾಡಲಾಗುತ್ತಿದೆ ಎಂದು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಗೈಡ್ ಲೈನ್ಸ್ ವ್ಯಾಲ್ಯೂ ಕಾರಣ
ಬಿ ಖಾತಾದಿಂದ ಎ ಖಾತಾ ಪರಿವರ್ತನೆಗೆ ರಾಜ್ಯ ಸರ್ಕಾರವು ಗೈಡ್ ಲೈನ್ಸ್ ವ್ಯಾಲ್ಯೂ 5% ನಿಗದಿ ಮಾಡಿರುವುದು ಭಾರೀ ಹಿನ್ನಡೆಗೆ ಕಾರಣವಾಗಿದೆ ಎಂದು ಹೇಳಲಾಗಿದೆ. ಇದೀಗ ಗೈಡ್ ಲೈನ್ಸ್ ವ್ಯಾಲ್ಯೂ 5% ಹಿಂಪಡೆಯುವುದಕ್ಕೆ ರಾಜ್ಯ ಚಿಂತನೆ ನಡೆಸಿದೆ ಎಂದು ಹೇಳಲಾಗಿದೆ. ಇದು ಆದರೆ ನಿಜಕ್ಕೂ ಬಿ ಖಾತಾ ಆಸ್ತಿದಾರರಿಗೆ ಗುಡ್‌ನ್ಯೂಸ್ ಸಿಕ್ಕಂತೆ ಆಗಲಿದೆ.
Credit: Oneindia



Click it and Unblock the Notifications
