Latest Updates
-
ಬಾಲ್ಕನಿ ಗಿಡಗಳು ಒಣಗುತ್ತಿವೆಯೇ? ಈ ಟಿಪ್ಸ್ ಪಾಲಿಸಿ! -
ಬಿಸಿಲಿನ ಬೇಗೆಯಿಂದ ಪಾರಾಗಲು ಈ ಆಹಾರಗಳೇ ನಿಮ್ಮ ರಕ್ಷಕ -
ಅಕ್ಷಯ ತೃತೀಯ 2026: ಈ ಹೊಸ ಟ್ರೆಂಡ್ಸ್ ಮಿಸ್ ಮಾಡ್ಬೇಡಿ! -
ಲಿವರ್ ಆರೋಗ್ಯಕ್ಕೆ ಈ ಸರಳ ಅಭ್ಯಾಸಗಳು ನಿಮ್ಮನ್ನು ಕಾಪಾಡುತ್ತವೆ -
ಅಕ್ಷಯ ತೃತೀಯ: ಚಿನ್ನದ ಖರೀದಿ ಮತ್ತು ನಿಶ್ಚಿತಾರ್ಥಕ್ಕೆ ಹೀಗೆ ಪ್ಲಾನ್ ಮಾಡಿ -
ದೆಹಲಿ ಧೂಳು ತಡೆಯಲು ನಿಮ್ಮ ಮನೆಯನ್ನು ಹೀಗೆ ರಕ್ಷಿಸಿಕೊಳ್ಳಿ -
FSSAI ದಾಳಿ: ವಿಷಕಾರಿ ಹಣ್ಣುಗಳನ್ನು ಗುರುತಿಸುವುದು ಹೇಗೆ ಗೊತ್ತಾ? -
ಅಕ್ಷಯ ತೃತೀಯ ಸಂಭ್ರಮ: ಈ ಟ್ರೆಂಡಿ ಆಭರಣಗಳೇ ಈಗ ಹವಾ -
ಹೀಟ್ವೇವ್ ಎಚ್ಚರಿಕೆ: ಬಿಸಿಲಿನ ತಾಪದಿಂದ ಪಾರಾಗಲು ಈ ಟಿಪ್ಸ್ ಫಾಲೋ ಮಾಡಿ -
ಮದುವೆಗೂ ಮುನ್ನ ಈ 48 ಗಂಟೆಗಳ ಚೆಕ್ಲಿಸ್ಟ್ ಮರೆಯದಿರಿ
Heavy Rain: ಕರ್ನಾಟಕ, ತಮಿಳುನಾಡಿಗೂ ತಟ್ಟಿದ ದಿತ್ವಾ ಚಂಡಮಾರುತ ಎಫೆಕ್ಟ್! ಈ ಜಿಲ್ಲೆಗಳಲ್ಲಿ ರಜೆ
ಬಂಗಾಳಕೊಲ್ಲಿಯಲ್ಲಿ (Bay Of Bengal) ಉಂಟಾದ ವಾಯುಭಾರ ಕುಸಿತ, ಶ್ರೀಲಂಕಾದ ದಿತ್ವಾ ಚಂಡಮಾರುತ (Ditwah Cyclone) ಇದೀಗ ದೇಶದಲ್ಲೂ ಪರಿಣಾಮ ಬೀರಿದೆ. ಕರ್ನಾಟಕ, ತಮಿಳುನಾಡು ಸೇರಿ ಹಲವು ರಾಜ್ಯಗಳಲ್ಲಿ ಈ ವಾರವಿಡೀ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಲ್ಲದೇ ತಮಿಳುನಾಡಿನಲ್ಲಿ ಭಾರೀ ಮಳೆ ಹಿನ್ನೆಲೆ ಶಾಲಾ-ಕಾಲೇಜುಗಳಿಗೆ ರಜೆಯನ್ನೂ (School-College Holiday) ಘೋಷಿಸಲಾಗಿದೆ.

ಹೌದು, ತಮಿಳುನಾಡಿನಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಚೆನ್ನೈ ಸೇರಿದಂತೆ ಒಟ್ಟು 5 ಜಿಲ್ಲೆಗಳಲ್ಲಿ ಶಾಲೆ ಮತ್ತು ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಚೆನ್ನೈ, ಕಾಂಚೀಪುರಂ ಮತ್ತು ತಿರುವಳ್ಳೂರು ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ನೀಡಲಾಗಿದ್ದರೆ, ಚೆಂಗಲ್ಪಟ್ಟು, ವಿಲುಪ್ಪುರಂ ಹಾಗೂ ಕಳ್ಳಕುರಿಚ್ಚಿ ಜಿಲ್ಲೆಗಳಲ್ಲಿ ಶಾಲೆಗಳಿಗೆ ಮಾತ್ರ ರಜೆ ಇರಲಿದೆ ಎಂದು ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ಪುದುಚೇರಿಯಲ್ಲೂ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.
ದಿತ್ವಾ ಚಂಡಮಾರುತಕ್ಕೆ ತಮಿಳುನಾಡು ತತ್ತರ!
ಬಂಗಾಳಕೊಲ್ಲಿಯಲ್ಲಿ ಸೃಷ್ಟಿಯಾದ 'ದಿತ್ವಾ' ಚಂಡಮಾರುತದ ಪ್ರಭಾವದಿಂದ ತಮಿಳುನಾಡಿನಾದ್ಯಂತ ಹಲವಾರು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದೆ. ನಾಗಪಟ್ಟಣಂ, ರಾಮನಾಥಪುರಂ, ಚೆನ್ನೈ, ತಿರುವಳ್ಳೂರು, ಕಾಂಚೀಪುರಂ, ಚೆಂಗಲ್ಪಟ್ಟು, ತೂತುಕುಡಿ ಮತ್ತು ತಿರುನೆಲ್ವೇಲಿ ಸೇರಿದಂತೆ ಅನೇಕ ಪ್ರದೇಶಗಳಲ್ಲಿ ಅತಿಯಾದ ಮಳೆಯಿಂದ ಜಲಾವೃತವಾಗಿದ್ದು, ಜನಜೀವನದ ಮೇಲೂ ಪರಿಣಾಮ ಬೀರಿದೆ.
ಅಷ್ಟೇ ಅಲ್ಲದೇ ಚೆನ್ನೈ, ತಿರುವಳ್ಳೂರು, ಕಾಂಚೀಪುರಂ, ಚೆಂಗಲ್ಪಟ್ಟು ಮತ್ತು ವಿಲುಪ್ಪುರಂ ಜಿಲ್ಲೆಗಳಲ್ಲಿ ಮಳೆ ಮುಂದುವರಿದಿದೆ. ಚೆನ್ನೈನ ಹಲವು ನಗರಗಳಲ್ಲಿ ನೀರು ನಿಂತಿದ್ದು, ಮಹಾನಗರ ಪಾಲಿಕೆ ಸಿಬ್ಬಂದಿ ತೆರವು ಕಾರ್ಯಾಚರಣೆ ನಡೆಸುತ್ತಿದ್ದರೂ, ಮಳೆ ಮಾತ್ರ ನಿಲ್ಲುವಂತೆ ಕಾಣುತ್ತಿಲ್ಲ.
ಮುನ್ನೆಚ್ಚರಿಕಾ ಕ್ರಮವಾಗಿ ಶಾಲಾ-ಕಾಲೇಜಗಳಿಗೆ ರಜೆ ನೀಡಲಾಗಿದ್ದು, ಜೊತೆಗೆ ಚೆನ್ನೈನಲ್ಲಿ ಇಂದು ನಡೆಯಬೇಕಿದ್ದ ಅಣ್ಣಾ ವಿಶ್ವವಿದ್ಯಾಲಯದ ಸೆಮಿಸ್ಟರ್ ಪರೀಕ್ಷೆಗಳನ್ನು ಸಹ ಮುಂದೂಡಲಾಗಿದೆ.
ಕರ್ನಾಟಕದಲ್ಲೂ ಮಳೆಯಬ್ಬರ ಫಿಕ್ಸ್!
ಇನ್ನು ರಾಜ್ಯದಲ್ಲಿ ಚಳಿ ವಿಪರೀತವಾಗಿದೆ. ಈ ಮಧ್ಯೆ ಹವಾಮಾನ ಇಲಾಖೆ ಈ ವಾರವಿಡೀ ಕರ್ನಾಟಕದಲ್ಲಿ ಮಳೆ ಬೀಳಲಿದೆ ಎಂದು ಸೂಚನೆ ನೀಡಿದೆ. ದಕ್ಷಿಣ ಒಳನಾಡು ಮತ್ತು ಕರಾವಳಿ ಭಾಗದ ಕೆಲವೆಡೆ ಇಂದು ಸಾಧಾರಣ ಮಳೆಯಾಗಹುದು ಎಂದು ಹೇಳಲಾಗಿದೆ. ಇನ್ನು ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣ ಇರಲಿದ್ದು, ಅಲ್ಲಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ಸೂಚನೆ ಹೊರಡಿಸಿದೆ.
ಇಲ್ಲೆಲ್ಲಾ ಭಾರೀ ಮಳೆ!
ದಕ್ಷಿಣ ಒಳನಾಡಿನ, ಹಾಸನ, ಮೈಸೂರು, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕೊಡಗು, ಮಂಡ್ಯ, ರಾಮನಗರ, ತುಮಕೂರು, ಕೋಲಾರದ ಸುತ್ತಮುತ್ತ ಮಧ್ಯಮದಿಂದ ಸಾಧಾರಣ ಮಳೆಯಾಗಬಹುದು ಎಂದು ನಿರೀಕ್ಷಿಸಲಾಗಿದೆ.
ಕೇರಳದಲ್ಲೂ ಭಾರೀ ಮಳೆ
ಕರ್ನಾಟಕ, ತಮಿಳುನಾಡು ಮಾತ್ರವಲ್ಲದೇ ಕೇರಳದಲ್ಲೂ ವ್ಯಾಪಕ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಸೂಚನೆ ಹೊರಡಿಸಿದೆ, ಕೇರಳದ 7 ಜಿಲ್ಲೆಗಳಿಗೆ ಮಳೆ ಅಲರ್ಟ್ ನೀಡಲಾಗಿದ್ದು, ತಿರುವನಂತಪುರಂ, ಕೊಲ್ಲಂ. ಪಯತ್ತನಂತಿಟ್ಟ, ಕೊಟ್ಟಾಯಂ, ಇಡುಕ್ಕಿ, ಪಾಲಕ್ಕಾಡ್ ಮತ್ತು ಮಲಪ್ಪುರಂ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಈ ಜಿಲ್ಲೆಗಳಲ್ಲಿ ವ್ಯಾಪ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ಹೊರಡಿಸಿದೆ.
Credit: Goodreturns



Click it and Unblock the Notifications











