Latest Updates
-
NEET ಮರುಪರೀಕ್ಷೆ ಮುಗಿದಿದೆ: ಮಕ್ಕಳ ಆತಂಕ ದೂರ ಮಾಡಲು ಪೋಷಕರು ಮಾಡಬೇಕಾದ ಅತ್ಯಗತ್ಯ ಕೆಲಸಗಳಿವು! -
ಪುಣೆ-ಮುಂಬೈ ಮಳೆಗಾಲ: ನಿಮ್ಮ ಮನೆಯನ್ನು ಸುರಕ್ಷಿತವಾಗಿಡಲು ಇಂದೇ ರಾತ್ರಿ ಈ 45 ನಿಮಿಷಗಳ ಕೆಲಸ ಮಾಡಿ! -
ಮಳೆಗಾಲದಲ್ಲಿ ಆರೋಗ್ಯದ ಬಗ್ಗೆ ಎಚ್ಚರ: ಅತಿಸಾರ ತಡೆಯಲು ಮತ್ತು ಸುರಕ್ಷಿತ ಆಹಾರಕ್ಕಾಗಿ ಈ ಸರಳ ಟಿಪ್ಸ್ ಪಾಲಿಸಿ -
ಫಾದರ್ಸ್ ಡೇ 2026: ಅಪ್ಪನ ಮುಖದಲ್ಲಿ ನಗು ಮೂಡಿಸಲು ಇಲ್ಲಿದೆ ಸಿಂಪಲ್ ಮತ್ತು ಬೆಸ್ಟ್ ಐಡಿಯಾಗಳು! -
10ನೇ ಅಂತರಾಷ್ಟ್ರೀಯ ಯೋಗ ದಿನ: ಮಳೆಯನ್ನೂ ಮೀರಿ ಕೋಲ್ಕತ್ತಾದಲ್ಲಿ ಯೋಗ ಸಂಭ್ರಮ, ಮನೆಯಲ್ಲೇ ಅಭ್ಯಾಸ ಮಾಡಲು ಇಲ್ಲಿದೆ ಸರಳ ಟಿಪ್ಸ್! -
ಭಾರತ vs ಅಫ್ಘಾನಿಸ್ತಾನ ಪಂದ್ಯ: ಮ್ಯಾಚ್ ನೋಡುವಾಗ ಮನೆಯಲ್ಲಿ ಶಾಂತಿ ಕಾಪಾಡಲು ಈ ಟಿಪ್ಸ್ ಫಾಲೋ ಮಾಡಿ! -
ನಾಳೆ ನೀಟ್ ಮರುಪರೀಕ್ಷೆ: ಮಳೆಗಾಲದ ನಡುವೆ ಪರೀಕ್ಷೆಗೆ ಸಜ್ಜಾಗುವುದು ಹೇಗೆ? ಇಲ್ಲಿದೆ ಫೈನಲ್ ಚೆಕ್ಲಿಸ್ಟ್ -
ಪಿಎಂ-ಕಿಸಾನ್ ಹಣ ಜಮೆ: ರೈತರೇ, ಈ 2,000 ರೂಪಾಯಿಯಲ್ಲಿ ಆರೋಗ್ಯಕರ ಆಹಾರ ಖರೀದಿಸಿ, ಮಧುಮೇಹ ನಿಯಂತ್ರಿಸಿ! -
ಭಾರಿ ಗಾಳಿ-ಮಳೆಯ ಎಚ್ಚರಿಕೆ: ಜೂನ್ 20ರಂದು ನಿಮ್ಮ ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳನ್ನು ಮರೆಯದಿರಿ! -
ಮಳೆಗಾಲದಲ್ಲಿ ಅಂತರಾಷ್ಟ್ರೀಯ ಯೋಗ ದಿನ: ಹಿರಿಯರು ಸುರಕ್ಷಿತವಾಗಿ ಯೋಗ ಮಾಡುವುದು ಹೇಗೆ?
Rain Alert: ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನ ಭಾರೀ ಮಳೆ! ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ
ದೇಶದೆಲ್ಲೆಡೆ ಚಳಿಯ ವಾತಾವರಣ (Winter Season) ಶುರುವಾಗಿದೆ. ಅದರಲ್ಲೂ ಬೆಂಗಳೂರಿನಲ್ಲಿ ಚಳಿ ನಿರೀಕ್ಷೆಗೂ ಮೀರಿದೆ. ಆದ್ರೆ ಇದೀಗ ಚಳಿಗಾಲ ಆರಂಭವಾದರೂ ಮಳೆರಾಯನ ಆಗಮನದ ಸುದ್ದಿ ಹವಾಮಾನ ಇಲಾಖೆ ನೀಡಿದೆ. ಅಂದರೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ (Rain) ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.

ಕರ್ನಾಟಕದ ಹಲವಾರು ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳವರೆಗೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಸೂಚನೆ ನೀಡಿದೆ. ಇನ್ನು ಈ ಹವಾಮಾನ ಬದಲಾವಣೆಯಿಂದ ಕೆಲವು ನಗರಗಳಲ್ಲಿ ತಾಪಮಾನ ಎರಡರಿಂದ ಮೂರು ಡಿಗ್ರಿ ಸೆಲ್ಸಿಯಸ್ ಕಡಿಮೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.
ಈ ಭಾಗದಲ್ಲಿ ಮಳೆ ಅಲರ್ಟ್!
ಉಡುಪಿ, ಕೊಡಗು, ಚಾಮರಾಜನಗರ, ದಕ್ಷಿಣ ಕನ್ನಡ, ಮಂಡ್ಯ, ಮೈಸೂರು ಸೇರಿದಂತೆ ಹಲವಾರು ಜಿಲ್ಲೆಗಳಲ್ಲಿ ಮುಂದಿನ ಎರಡರಿಂದ ಮೂರು ದಿನಗಳವರೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.
ಕರಾವಳಿ ಮತ್ತು ಮಲೆನಾಡು ಪ್ರದೇಶಗಳಲ್ಲಿ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಆದ್ದರಿಂದ ಜಿಲ್ಲಾಡಳಿತಗಳು ಎಚ್ಚರಿಕೆ ವಹಿಸುವಂತೆ ಸೂಚನೆ ನೀಡಿದೆ. ಅಲ್ಲದೇ ಸಮಸ್ಯೆಗಳನ್ನು ತಪ್ಪಿಸಲು ಹವಾಮಾನ ಇಲಾಖೆಯ ಮುನ್ಸೂಚನೆಯನ್ನು ಪಾಲಿಸುವಂತೆ ಸೂಚನೆ ನೀಡಲಾಗಿದೆ.
ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ?
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮುಂದಿನ ಕೆಲವು ದಿನಗಳವರೆಗೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಸೂಚನೆ ನೀಡಿದೆ. ಆದ್ದರಿಂದ ಬೆಂಗಳೂರಿನಲ್ಲಿ ಮುಂದಿನ ಕೆಲವು ದಿನಗಳವರೆಗೆ ಮೋಡ ಕವಿದ ವಾತಾವರಣ ಮತ್ತು ತಂಪಾದ ಗಾಳಿ ಬೀಸುವ ನಿರೀಕ್ಷೆಯಿದೆ.
ಚಿಕ್ಕಬಳ್ಳಾಪುರ, ಚಿತ್ರದುರ್ಗ, ಹಾಸನ, ಕೋಲಾರ, ರಾಮನಗರ, ತುಮಕೂರು, ವಿಜಯನಗರ, ಚಿಕ್ಕಮಗಳೂರು, ದಾವಣಗೆರೆ, ಕೊಡಗು, ತುಮಕೂರು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹೇಳಲಾಗಿದೆ. ಅಲ್ಲದೇ ಕಲಬುರಗಿ, ಬೀದರ್, ವಿಜಯಪುರ, ಬೆಳಗಾವಿಯಲ್ಲಿ ಒಣಹವೆ ಇರಲಿದೆ.ತಮಿಳುನಾಡಿನಲ್ಲೂ ಭಾರೀ ಮಳೆ!
ತಮಿಳುನಾಡಿನಲ್ಲೂ ಕಳೆದ ಕೆಲವು ದಿನಗಳಿಂದ ಭಾರೀ ಮಳೆಯಾಗುತ್ತಿದೆ. ಇದೀಗ ಇಂದೂ ಕೂಡಾ ತಮಿಳುನಾಡಿನ 10 ಜಿಲ್ಲೆಗಳಲ್ಲ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಚೆನ್ನೈ ಹವಾಮಾನ ಇಲಾಖೆ ಸೂಚನೆ ನೀಡಿದೆ.
ಆಗ್ನೇಯ ಅರಬ್ಬೀ ಸಮುದ್ರದಲ್ಲಾಗುವ ಒತ್ತಡದಿಂದ, ವಾಯುಭಾರ ಕುಸಿತವಾಗುವ ನಿರೀಕ್ಷೆಯಿದೆ. ಈ ಪರಿಣಾಮ ತೆಂಕಸಿ, ವಿರುಧುನಗರ, ತಿರುನಲ್ವೇಲಿ, ಕನ್ಯಾಕುಮಾರಿ ಮತ್ತು ತೂತುಕುಡಿ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.
ಅಲ್ಲದೇ ರಾಮನಾಥಪುರಂ, ಕಡಲೂರು, ಮೈಲಾಡುತುರೈ, ನಾಗಪಟ್ಟಣಂ, ತಿರುವರೂರು ಜಿಲ್ಲೆಗಳಲ್ಲೂ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕೇರಳದಲ್ಲೂ ಭಾರೀ ಮಳೆ!
ರಾಜ್ಯದಲ್ಲಿ ಮತ್ತೆ ಮಳೆಯಾಗಲಿದೆ ಎಂದು ಕೇಂದ್ರ ಹವಾಮಾನ ಇಲಾಖೆ ಸೂಚನೆ ಹೊರಡಿಸಿದೆ. ಹವಾಮಾನ ಇಲಾಖೆಯ ಎಚ್ಚರಿಕೆ ಪ್ರಕಾರ, ತಿರುವನಂತಪುರಂ, ಕೊಲ್ಲಂ, ಪತ್ತನಂತಿಟ್ಟ, ಅಲಪ್ಪುಳ, ಕೊಟ್ಟಾಯಂ, ಇಡುಕ್ಕಿ, ಎರ್ನಾಕುಲಂ ಜಿಲ್ಲೆಗಳಿಗೆ ಇಂದು ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
Credit: Goodreturns



Click it and Unblock the Notifications