Latest Updates
-
ಹಬ್ಬಕ್ಕೆ ಮಾಡಿ ಗೋಧಿ ಪಾಯಸ: ಚೂರು ಉಳಿಯದಂತೆ ಖಾಲಿ ಮಾಡೋಡು ಖಚಿತ! -
ಈರುಳ್ಳಿ ಬೇಡ.. ಬೆಳ್ಳುಳ್ಳಿ ಬೇಡ..!! ಬ್ರಾಹ್ಮಣ ಶೈಲಿಯ ವೆಜ್ ಕುರ್ಮಾ ಮಾಡೋದು ಹೇಗೆ? ಇಲ್ಲಿದೆ ಸೀಕ್ರೆಟ್ -
ಯುಗಾದಿ ಹಬ್ಬದಲ್ಲಿ ಮಾಡಿ ಬದನೆಕಾಯಿ ಗೊಜ್ಜು! ಅದ್ಭುತ ರುಚಿ ರೆಸಿಪಿ -
Happy Ugadi 2026: ಯುಗಾದಿ ಶುಭಾಶಯಗಳು! ನಿಮ್ಮ ಪ್ರೀತಿಪಾತ್ರರಿಗೆ ಕಳುಹಿಸಿ ಈ ಹಾರ್ಟ್ ಟಚಿಂಗ್ ಶುಭಾಶಯ, ಮೆಸೇಜ್ಗಳು -
ಮಾರ್ಚ್ 21ಕ್ಕೆ ಶನಿ ನಕ್ಷತ್ರ ಬದಲಾವಣೆ: ಈ 4 ರಾಶಿಯವರ ಜೀವನದಲ್ಲಿ ಬರಲಿದೆ ಬಯಸಿದ ಭಾಗ್ಯ! -
ಯುಗಾದಿಗೆ ಸ್ಪೆಷಲ್.. ತೆಲಂಗಾಣ ಶೈಲಿಯ ಸಾಫ್ಟ್ ನೇತಿ ಒಬ್ಬಟ್ಟು ಮಾಡಿ! ಬಾಯಲ್ಲಿ ಇಟ್ಟರೆ ಕರಗುವ ರುಚಿ -
ಮಾಮೂಲಿ ಅಲ್ಲ ಆಂಧ್ರ ಶೈಲಿಯ ಬೇವು-ಬೆಲ್ಲ ಮಾಡಿ: ಯುಗಾದಿ ಸಂಭ್ರಮ ದುಪ್ಪಟ್ಟಾಗಿಸಿ! -
ಸಮ್ಮರ್ ಸ್ಪೆಷಲ್.. ಈ ಹೊಸ ರುಚಿಯ ಕಪ್ಪು ದ್ರಾಕ್ಷಿ ಲೆಮನೇಡ್ ಮಾಡಿ! ಬೇಸಿಗೆಯಲ್ಲಿ ಕೂಲ್ ಕೂಲ್ ಆಗಿ -
Ugadi 2026: ಯುಗಾದಿ ಹಬ್ಬದಂದು ಬೇವು-ಬೆಲ್ಲ ಸವಿಯುವುದರ ವೈಜ್ಞಾನಿಕ ಕಾರಣ ಏನು ಗೊತ್ತಾ? -
ದಶಕಗಳ ಬಳಿಕ ಅಪರೂಪದ ರಾಜಯೋಗ! ಈ ರಾಶಿಗಳಿಗೆ ಹರಿದು ಬರಲಿದೆ ಸಂಪತ್ತು.. ನಿಮ್ಮ ಕಷ್ಟಗಳೆಲ್ಲಾ ದೂರ!
Mark Box Office Day 7 ; 'ಮಾರ್ಕ್' ಮೆರವಣಿಗೆ, ಸುದೀಪ್ ಹವಾ-ಒಂದು ವಾರದಲ್ಲಿ ಲೂಟಿಯಾಗಿದ್ದೆಷ್ಟು ಕೋಟಿ ?
ಈಗೀಗ ಸುಮಾರು ಸಿನಿಮಾಗಳು ಬರುತ್ತಿವೆ, ಹೋಗುತ್ತಿವೆ. ಆದರೆ ಗೆಲುವು ಮಾತ್ರ ಬಹುತೇಕರ ಕೈಗೆ ಸಿಗುತ್ತಿಲ್ಲ. ಹೇಗಾದರೂ ಮಾಡಿ ಪ್ರೇಕ್ಷಕರನ್ನು ಚಿತ್ರಮಂದಿರಕ್ಕೆ ಎಳೆದುತರಲು ಚಿತ್ರತಂಡಗಳು ಹರಸಾಹಸ ಮಾಡುತ್ತಿವೆ. ನಾನಾ ಕಸರತ್ತುಗಳನ್ನು ಮಾಡುತ್ತಿವೆ. ಇನ್ನೂ ಕೆಲ ಚಿತ್ರತಂಡಗಳ ಪ್ರೇಕ್ಷಕರನ್ನು ಸೆಳೆಯಲು ಮಾಡಬಾರದ ಗಿಮಿಕ್ಗಳನ್ನೆಲ್ಲ ಮಾಡುತ್ತಾವೆ. ಆದರೆ.. ಪ್ರೇಕ್ಷಕರು ಮಾತ್ರ ಬರುವುದಿಲ್ಲ. ಬದಲಿಗೆ ಅಲ್ಲೊಂದು.. ಇಲ್ಲೊಂದು ಸಿನಿಮಾಗಳು ಮಾತ್ರ ಸದ್ದು ಮಾಡುತ್ತಾವೆ. ಗೆಲ್ಲುತ್ತಾವೆ. ಉದಾಹರಣೆಗೆ ''ಮಾರ್ಕ್''.
ಹೌದು, ''ಮಾರ್ಕ್''.. ಕೇವಲ ಆರು ತಿಂಗಳಿನಲ್ಲಿ ಸುದೀಪ್ ಮಾಡಿರುವ ಮಹಾಯಜ್ಞ. ಬಿಡುಗಡೆಗೆ ಮುನ್ನ ಸಾಕಷ್ಟು ಸದ್ದು ಮಾಡಿದ್ದ ಈ ಸಿನಿಮಾ ಸದ್ಯ ಬಾಕ್ಸಾಫೀಸ್ನಲ್ಲಿ ಸದ್ದು ಮಾಡುತ್ತಿದೆ. ''ಸ್ಯಾಕ್ನಿಲ್'' ಹಂಚಿಕೊಂಡ ಮಾಹಿತಿಯ ಪ್ರಕಾರ ನಿನ್ನೆ ( ಡಿಸೆಂಬರ್ 31) ₹77 ಲಕ್ಷವನ್ನು ಈ ಚಿತ್ರ ಕೊಳ್ಳೆ ಹೊಡೆದಿದೆ. ಈ ಮೂಲಕ ಬಾಕ್ಸಾಫೀಸ್ನಲ್ಲಿ ಒಂದು ವಾರದಲ್ಲಿ ₹21.22 ಕೋಟಿ ಗಳಿಸಿದೆ.

ಸ್ಯಾಕ್ನಿಲ್ ಪ್ರಕಾರ ''ಮಾರ್ಕ್'' ಚಿತ್ರದ 7 ದಿನದ ಗಳಿಕೆ ಈ ಕೆಳಗಿನಂತೆ ಇದೆ.
ಮೊದಲ ದಿನ [ಗುರುವಾರ] - ₹ 8.6 ಕೋಟಿ
ಎರಡನೇ ದಿನ [ಶುಕ್ರವಾರ] - ₹3.2 ಕೋಟಿ
ಮೂರನೇ ದಿನ [ಶನಿವಾರ] - ₹3.2 ಕೋಟಿ
ನಾಲ್ಕನೇ ದಿನ [ಭಾನುವಾರ]- ₹3.4 ಕೋಟಿ
ಐದನೇ ದಿನ [ಸೋಮವಾರ ]-₹ 1.15 ಕೋಟಿ
ಆರನೇ ದಿನ [ಮಂಗಳವಾರ]- ₹90 ಲಕ್ಷ
ಏಳನೇ ದಿನ [ಬುಧವಾರ] - ₹77 ಲಕ್ಷ *ಅಂದಾಜು
ಒಟ್ಟು ಗಳಿಕೆ - ₹21.23 ಕೋಟಿ
ಇನ್ನು ಆಕ್ಯುಪೆನ್ಸಿ ವಿಚಾರಕ್ಕೆ ಬಂದರೆ ಬೆಂಗಳೂರಿನಲ್ಲಿ 15.50% ಆಕ್ಯುಪೆನ್ಸಿ ಕಂಡು ಬಂದಿದ್ದು, ಹುಬ್ಬಳ್ಳಿಯಲ್ಲಿ 19.50% ಮೈಸೂರಿನಲ್ಲಿ 22.00% ರಾಯಚೂರಿನಲ್ಲಿ 18.00% ತುಮಕೂರಿನಲ್ಲಿ 25.50% ಶಿವಮೊಗ್ಗದಲ್ಲಿ 29.00% ಮಂಗಳೂರಿನಲ್ಲಿ 11.00% ಕಲ್ಬುರ್ಗಿಯಲ್ಲಿ 10.25% ಕಂಡು ಬಂದಿದೆ. ಬಹುತೇಕ ಕಡೆ ಬೆಳಗ್ಗೆ ಮತ್ತು ಮಧ್ಯಾಹ್ನದ ಪ್ರದರ್ಶನಕ್ಕಿಂತ ಸಂಜೆಯ ಪ್ರದರ್ಶನದ ಸಮಯದಲ್ಲಿ ಜನಸಂದಣಿ ಹೆಚ್ಚು ಕಂಡು ಬಂದಿದ್ದು ವಿಶೇಷ.
ಅಂದ್ಹಾಗೇ ''45'' ಚಿತ್ರದಂತೆಯೇ ''ಮಾರ್ಕ್'' ಕೂಡ ಪ್ಯಾನ್ ಇಂಡಿಯಾ ಸಿನಿಮಾ. ಕಳೆದ ವಾರ ಕರ್ನಾಟಕದಲ್ಲಿ ಒಟ್ಟಿಗೆ ಬಿಡುಗಡೆಯಾಗಿದ್ದ ಈ ಎರಡು ಸಿನಿಮಾಗಳು ಈ ವಾರ ಕೂಡ ಬೇರೆ ಬೇರೆ ಭಾಷೆಯಲ್ಲಿ ಒಟ್ಟಿಗೆ ಬಿಡುಗಡೆಯಾಗುತ್ತಿರುವುದು ವಿಶೇಷ. ಇನ್ನೂ ಎಲ್ಲರಿಗೆ ಗೊತ್ತಿರುವಂತೆ ಸುದೀಪ್ ಆ ಕಾಲದಲ್ಲಿಯೇ ನ್ಯಾಷನಲ್ ಸ್ಟಾರ್ ಆದವರು. ಬೇರೆ ಬೇರೆ ಭಾಷೆಗಳಲ್ಲಿ ಮಿಂಚಿದವರು. ಈ ಹಿನ್ನೆಲೆ ಚಿತ್ರದ ಗಳಿಕೆಯಲ್ಲಿ ಇಂದು ಏರಿಕೆಯಾಗುವ ಸಾಧ್ಯತೆ ಇದೆ. ಆ ವಿಶ್ವಾಸ ಕೂಡ ಚಿತ್ರತಂಡಕ್ಕೆ ಇದೆ.
ಒಟ್ನಲ್ಲಿ ಸದ್ಯ ಏಳು ದಿನದಲ್ಲಿ ''ಮಾರ್ಕ್'' ₹ 20.23 ಕೋಟಿ ಹಣವನ್ನು ಗಳಿಸಿದೆ ಎಂದು ''ಸ್ಯಾಕ್ನಿಲ್'' ವರದಿ ಮಾಡಿದೆ. ಈ ವಾರಾಂತ್ಯದಲ್ಲಿ ಚಿತ್ರ ಎಷ್ಟು ಗಳಿಸುತ್ತೆ ಎನ್ನುವುದನ್ನು ಕಾದು ನೋಡಬೇಕಿದೆ. ಇನ್ನು ಆರಂಭದಲ್ಲಿ ಚಿತ್ರತಂಡ ಚಿತ್ರದ ಗಳಿಕೆಯ ಕುರಿತು ಮಾತನಾಡಿತ್ತು. ಬಾಕ್ಸಾಫೀಸ್ನ ಟ್ರ್ಯಾಕರ್ಗಳು ಹಂಚಿಕೊಳ್ಳುವ ಲೆಕ್ಕಕ್ಕಿಂತ ಚಿತ್ರದ ಗಳಿಕೆ ಹೆಚ್ಚಿದೆ ಎಂದು ಹೇಳಿತ್ತು. ಸದ್ಯ ''ಮಾರ್ಕ್'' ಮೊದಲ ವಾರದ ಪ್ರದರ್ಶನ ಮುಕ್ತಾಯಗೊಳಿಸಿದೆ. ಈ ಹಿನ್ನೆಲೆ ಚಿತ್ರತಂಡ ಅಧಿಕೃತವಾಗಿ ಬಾಕ್ಸಾಫೀಸ್ನ ಅಂಕಿ ಅಂಶಗಳನ್ನು ಹಂಚಿಕೊಳ್ಳುತ್ತಾ ಎನ್ನುವುದನ್ನು ಕಾದು ನೋಡಬೇಕಿದೆ.
Disclaimer: ಈ ವರದಿಯಲ್ಲಿ ನೀಡಲಾಗಿರುವ ಸಿನಿಮಾದ ಬಾಕ್ಸ್ ಆಫೀಸ್ ಅಂಕಿ ಅಂಶಗಳ ಮಾಹಿತಿಯನ್ನು https://www.sacnilk.com/, https://x.com/taran_adarsh, https://x.com/rameshlaus?lang=en, ನಿರ್ಮಾಣ ಸಂಸ್ಥೆಗಳು ಹಾಗೂ ಸಾರ್ವಜನಿಕವಾಗಿ ಲಭ್ಯವಿರುವ ಹಲವು ವೇದಿಕೆಗಳಿಂದ ತೆಗೆದುಕೊಳ್ಳಲಾಗಿದೆ. ಸಿನಿಮಾಗೆ ಸಂಬಂಧಿಸಿದ ಬಾಕ್ಸ್ ಆಫೀಸ್ ಕಲೆಕ್ಷನ್ಗಳ ಕುರಿತು ಪ್ರಕಟಿಸುವ ವರದಿಗಳಿಗೆ ಫಿಲ್ಮಿಬೀಟ್ ಯಾವುದೇ ಜವಾಬ್ದಾರಿಯನ್ನು ತೆಗೆದುಕೊಳ್ಳುವುದಿಲ್ಲ.
Credit: Filmibeat



Click it and Unblock the Notifications












