Latest Updates
-
ಮಳೆಗಾಲದಲ್ಲಿ ಫಿಟ್ ಆಗಿರಬೇಕೆ? ಬೆಂಗಳೂರು, ಚೆನ್ನೈ, ಕೊಚ್ಚಿ ಜನರಿಗಾಗಿ ಇಲ್ಲಿದೆ 20 ನಿಮಿಷದ ಸಿಂಪಲ್ ವರ್ಕೌಟ್! -
2026ರ ನವರಾತ್ರಿ ಗರ್ಬಾ: ಪಾಸ್ ವಂಚನೆಗೆ ಬಲಿಯಾಗದಿರಿ, ಸುರಕ್ಷಿತವಾಗಿ ಆನಂದಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ದೆಹಲಿಯಲ್ಲಿ ಕಠಿಣ GRAP ನಿಯಮ ಜಾರಿ: ಮನೆಯ ಗಾಳಿ ಶುದ್ಧವಾಗಿಡಲು ಮತ್ತು ಮಾಲಿನ್ಯ ತಡೆಯಲು ಇಲ್ಲಿವೆ ಸರಳ ಟಿಪ್ಸ್ -
ಹಬ್ಬದ ಸಿಹಿ ಕೊಳ್ಳುವ ಮುನ್ನ ಎಚ್ಚರ: FSSAI ಕಟ್ಟುನಿಟ್ಟಿನ ಕಾರ್ಯಾಚರಣೆ ಮತ್ತು ಹೊಸ ನಿಯಮಗಳೇನು? -
ಮೈಸೂರು ದಸರಾ 2026: ಟಿಕೆಟ್ ಬುಕ್ಕಿಂಗ್ ಆರಂಭ, ಕಂಬಳ ನೋಂದಣಿಗೆ ಇಂದೇ ಕೊನೆಯ ದಿನ! -
ಗಾಂಧಿ ಜಯಂತಿ ವಿಶೇಷ: ಫಿಟ್ನೆಸ್ ಮತ್ತು ಸಮಾಜ ಸೇವೆ ಬೆಸೆಯುವ 'ಪ್ಲಾಗಿಂಗ್'ಗೆ ಸಿದ್ಧರಾಗಿ! -
ಡೇಟಿಂಗ್ ಆ್ಯಪ್ ಹನಿಟ್ರ್ಯಾಪ್: ಪಬ್ಗಳಲ್ಲಿ ನಡೆಯುವ ಈ ದಂಧೆಯಿಂದ ಪಾರಾಗುವುದು ಹೇಗೆ? -
IMD ಮಳೆ ಅಲರ್ಟ್: ಬೆಂಗಳೂರು, ಚೆನ್ನೈ, ಕೇರಳದಲ್ಲಿ ಭಾರೀ ಮಳೆ; ಮನೆಯನ್ನು ಸುರಕ್ಷಿತವಾಗಿರಿಸಲು ಈ ಟಿಪ್ಸ್ ಪಾಲಿಸಿ! -
ಇಂದಿನಿಂದ ಎನರ್ಜಿ ಡ್ರಿಂಕ್ಸ್ ನಿಯಮ ಬದಲಾವಣೆ: ಕ್ಯಾನ್ ಖರೀದಿಸುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ಅಪಾರ್ಟ್ಮೆಂಟ್ ಗೇಟ್ನಲ್ಲಿ ಟ್ರಾಫಿಕ್ ಜಾಮ್? ಈ ಸರಳ ಟಿಪ್ಸ್ ಪಾಲಿಸಿದರೆ 5 ನಿಮಿಷದಲ್ಲಿ ಹೊರಬರಬಹುದು!
Karnataka-Ration Card: ರೇಷನ್ ಕಾರ್ಡ್ ಬಳಕೆದಾರರಿಗೆ ಬಂಪರ್! ಇನ್ಮೇಲೆ ಮನೆ ಬಾಗಿಲಿಗೆ ಬರಲಿದೆ ಅಕ್ಕಿ
ಬಡವರ ಪಾಲಿಗೆ ಸರ್ಕಾರ ತಂದ ಯೋಜನೆಗಳಲ್ಲಿ ಅನ್ನಭಾಗ್ಯ (Anna B ಕೂಡಾ ಒಂದು. ಕಡಿಮೆ ದರದಲ್ಲಿ ಅಕ್ಕಿ, ಇನ್ನಿತರ ಸೌಲಭ್ಯಗಳನ್ನು ನೀಡುವುದು ಇದರ ಮುಖ್ಯ ಉದ್ದೇಶವಾಗಿದ್ದು, ಅದಕ್ಕಾಗಿ ಬಿಪಿಎಲ್ ಕಾರ್ಡ್ (BPL Card) ಅನ್ನೂ ಜಾರಿಗೆ ತಂದಿದೆ. ಇದೀಗ ಸರ್ಕಾರ ಬಡವರ ಪಾಲಿಗೆ ಅದೃಷ್ಟದಂತೆ, ಹಿರಿಯರ ಪಾಲಿಗೆ ದೇವರಂತೆ ಬಂದು ಮತ್ತೊಂದು ಯೋಜನೆಯನ್ನು ಜಾರಿಗೆ ತಂದಿದೆ. ಅದೇ "ಅನ್ನ ಸುವಿಧಾ ಯೋಜನೆ" (Anna Suvidha Scheme). ರೇಷನ್ ಅಂಗಡಿಯಲ್ಲಿ ಪ್ರಸ್ತುತ ದೊಡ್ಡ ಸಮಸ್ಯೆಯೆಂದರೆ, ಸರತಿ ಸಾಲು, ಮತ್ತೊಂದು ಸರ್ವರ್ ಸಮಸ್ಯೆ. ಇದರಿಂದ ಹೆಚ್ಚು ಸಮಸ್ಯೆಗೀಡಾಗೋದೆ ಹಿರಿಯ ನಾಗರಿಕರು. ಆದ್ರೆ ಇದೀಗ ಹಿರಿಯ ನಾಗರಿಕರ ಸಮಸ್ಯೆಗೆ ಪರಿಹಾರ ನೀಡಲು ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ ನೋಡಿ.

ಹೌದು, 75 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರ ಅನುಕೂಲಕ್ಕೆ ಸರಕಾರ ಮಹತ್ವದ ಕ್ರಮ ಕೈಗೊಂಡಿದೆ. ಆ ಪ್ರಕಾರ ಇನ್ಮೇಲೆ ಉಚಿತವಾಗಿ ಮನೆ ಮನೆಗೆ ಪಡಿತರ ಆಹಾರ ಪದಾರ್ಥಗಳನ್ನು ಪೂರೈಕೆಯಾಗಲಿದೆ. ಈ ಯೋಜನೆಯನ್ನು "ಅನ್ನ ಸುವಿಧಾ" ಯೋಜನೆ ಎಂದು ಹೆಸರಿಸಲಾಗಿದೆ.
ಏನಿದು ಅನ್ನ ಸುವಿಧಾ ಯೋಜನೆ?
ಹಿರಿಯ ನಾಗರಿಕರ ಅನುಕೂಲಕ್ಕಾಗಿ ಸರ್ಕಾರ ಅನ್ನಭಾಗ್ಯ ಯೋಜನೆಯ ಉಪಕ್ರಮವಾಗಿ ಅನ್ನ ಸುವಿಧಾ ಯೋಜನೆಯನ್ನು ಜಾರಿಗೆ ತಂದಿದೆ. ಆದರೆ ಪ್ರಸ್ತುತ ಅದೆಷ್ಟೋ ಹಿರಿಯ ನಾಗರಿಕರು ಒಬ್ಬಂಟಿಯಾಗಿ ಮನೆಯಲ್ಲಿ ವಾಸಿಸುತ್ತಿರುತ್ತಾರೆ. ಆದರೆ ಕೆಲವರಿಗೆ ಆರೋಗ್ಯದ ಸಮಸ್ಯೆಯಿಂದಲೂ, ಇನ್ನಿತರ ಸಮಸ್ಯೆಗಳಿಂದಲೋ ಅನ್ನಭಾಗ್ಯ ಯೋಜನೆಯಡಿ ಸಬ್ಸಿಡಿ ದರದಲ್ಲಿ ಅಕ್ಕಿ, ಇನ್ನಿತರ ಆಹಾರ ಪದಾರ್ಥಗಳನ್ನು ಪಡೆಯಲು ಸಾಧ್ಯವಾಗುವುದಿಲ್ಲ. ಅದೇ ಕಾರಣದಿಂದ ಇದೀಗ ಅನ್ನ ಸುವಿಧಾ ಯೋಜನೆಯಡಿ ಸರ್ಕಾರ, ಅಶಕ್ತರಾದ ಫಲಾನುಭವಿಗಳ ಮನೆ ಬಾಗಿಲಿಗೆ ಈ ಅನ್ನಭಾಗ್ಯ ಸೌಲಭ್ಯವನ್ನು ಒದಗಿಸಲು ಮುಂದಾಗಿದೆ.
75 ವರ್ಷ ಅಥವಾ ಅದಕ್ಕಿಂತ ಮೇಲ್ಪಟ್ಟ ಹಿರಿಯ ನಾಗರಿಕರು ಮಾತ್ರ ಇರುವ ಕುಟುಂಬಗಳಿಗೆ ಸ್ಥಳೀಯ ನ್ಯಾಯಬೆಲೆ ಅಂಗಡಿಯಬರು ಪಡಿತರ ಸೌಲಭ್ಯವನ್ನು ಮನೆ ಬಾಗಿಲಿಗೆ ತಂದು ಕೊಡುತ್ತಾರೆ. ಇದರಿಂದ ಹಿರಿಯ ನಾಗರಿಕರು ಹೋಗಿ ನ್ಯಾಯಬೆಲೆ ಅಂಗಡಿ ಮುಂದೆ ಗಂಟೆಗಟ್ಟಲೆ ನಿಲ್ಲುವುದು ತಪ್ಪಲಿದೆ.
2025ರ ಮೇ ತಿಂಗಳಲ್ಲಿ ಜಾರಿಗೆ ಬಂದ ಈ ಸೇವೆ ಸದ್ಯ ಜಿಲ್ಲೆ ಜಿಲ್ಲೆಗಳಲ್ಲಿ ಅನುಷ್ಠಾನಕ್ಕೆ ಮುಂದಾಗಿದೆ. ಅಲ್ಲದೇ ಮನೆ ಬಾಗಿಲಿಗೆ ಸೇವೆ ನೀಡುವ ನ್ಯಾಯಬೆಲೆ ಅಂಗಡಿ ಮಾಲೀಕರಿಗೆ, ಪ್ರತೀ ಕುಟುಂಬಕ್ಕೆ ಸರ್ಕಾರವು 50 ರೂ. ಪಾವತಿ ಮಾಡುತ್ತದೆ. ಅಲ್ಲದೇ ಈ ಯೋಜನೆಯ ಫಲಾನುಭವಿಗಳು ಆಗಬೇಕೆಂದರೆ, ಕಡ್ಡಾಯವಾಗಿ ನೋಂದಣಿ ಮಾಡಿಕೊಳ್ಳಬೇಕಾಗುತ್ತದೆ.
ಮಂಡ್ಯ ಜಿಲ್ಲೆಯಲ್ಲಿ ಆರಂಭ
ಇದೀಗ ಮಂಡ್ಯ ಜಿಲ್ಲೆಯಲ್ಲಿ ಸರ್ಕಾರದ ಅನ್ನ ಸುವಿಧಾ ಯೋಜನೆಯಡಿ 75 ವರ್ಷಕ್ಕಿಂತ ಮೇಲ್ಪಟ್ಟ ಪಡಿತರ ಚೀಟಿ ಹೊಂದಿರುವ ಒಂಟಿ ಸದಸ್ಯರ ಕುಟುಂಬಗಳಿಗೆ ಶೀಘ್ರದಲ್ಲೇ ಮನೆ ಬಾಗಿಲಿಗೆ ಪಡಿತರ ಆಹಾರ ಪದಾರ್ಥಗಳನ್ನು ನೀಡಲು ಮುಂದಾಗಲಿದೆ ಎಂದು ಮಂಡ್ಯ ಜಿಲ್ಲಾ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಕೆ.ಆರ್. ನಂದಿನಿ ತಿಳಿಸಿದ್ದಾರೆ.
Credit: Goodreturns



Click it and Unblock the Notifications
