Latest Updates
-
ಮದುವೆಯಾದ ತಕ್ಷಣ ಸ್ವಾತಂತ್ರ್ಯ ಕೊನೆಗೊಳ್ಳುವುದಿಲ್ಲ: ದಾಂಪತ್ಯದಲ್ಲಿ 'ಸಮ್ಮತಿ'ಯ ಮಹತ್ವವೇನು? -
ಕೇರಳದಲ್ಲಿ ಭಾರೀ ಮಳೆ: ಯೆಲ್ಲೋ ಅಲರ್ಟ್ ಘೋಷಣೆ; ನಿಮ್ಮ ಮನೆ ಮತ್ತು ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳು ಅತ್ಯಗತ್ಯ -
ಗಣೇಶ ಹಬ್ಬದ ಪ್ರಸಾದ ತಯಾರಿಸುತ್ತಿದ್ದೀರಾ? ಕಲಬೆರಕೆ ತಡೆಯಲು ಮತ್ತು ಸುರಕ್ಷಿತ ಪ್ರಸಾದಕ್ಕೆ ಇಲ್ಲಿದೆ ಮಹತ್ವದ ಟಿಪ್ಸ್ -
ಐಫೋನ್ 18 ಪ್ರೋ ಮತ್ತು ಡ್ಯುವೋ ಭಾರತದಲ್ಲಿ ಲಾಂಚ್: ಬೆಲೆ, ಆಫರ್ ಮತ್ತು ಪ್ರಿ-ಆರ್ಡರ್ ಮಾಹಿತಿ ಇಲ್ಲಿದೆ! -
ವಿಶ್ವ ಆತ್ಮಹತ್ಯೆ ತಡೆ ದಿನ: ಮಾನಸಿಕ ಆರೋಗ್ಯ ಸುಧಾರಿಸಲು 10 ನಿಮಿಷದ ಸಿಂಪಲ್ ಮಾರ್ನಿಂಗ್ ರೂಟೀನ್ ಮತ್ತು ಹೆಲ್ಪ್ಲೈನ್ ವಿವರಗಳು -
ವಿಚ್ಛೇದನದ ನಂತರವೂ ಜೀವನಾಂಶ ಪಡೆಯಬಹುದೇ? ಮಧ್ಯಪ್ರದೇಶ ಹೈಕೋರ್ಟ್ನಿಂದ ಮಹತ್ವದ ತೀರ್ಪು! -
ದೆಹಲಿ ವಾಯು ಮಾಲಿನ್ಯ: ಮನೆಯಲ್ಲಿ ಶುದ್ಧ ಗಾಳಿ ಪಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ಪ್ಯಾಕ್ ಮಾಡಿದ ಆಹಾರದ ಮೇಲೆ 'ರೆಡ್ ಹೆಕ್ಸಗನ್' ಎಚ್ಚರಿಕೆ: ಇನ್ಮುಂದೆ ತಿನ್ನುವ ಮುನ್ನ ಈ ವಿಷಯ ಗಮನಿಸಿ! -
ಆಪಲ್ 'ಸರ್ಪ್ರೈಸ್ ಆಂಡ್ ಶೈನ್' ಈವೆಂಟ್: ಐಫೋನ್ 18 ಪ್ರೋ ಮತ್ತು ಫೋಲ್ಡಬಲ್ ಆಲ್ಟ್ರಾ ಲಾಂಚ್, ಭಾರತದಲ್ಲಿ ಬೆಲೆ ಎಷ್ಟು? -
ಟಾಟಾ ಮುಂಬೈ ಮ್ಯಾರಥಾನ್ ಡ್ರೀಮ್ ರನ್: ಇಂದೇ ನೋಂದಣಿ ಮುಕ್ತಾಯ, ಓಟಕ್ಕೆ ಸಜ್ಜಾಗಲು 20 ನಿಮಿಷದ ಪ್ಲಾನ್ ಇಲ್ಲಿದೆ!
Lentil Price Hike: ಗ್ರಾಹಕರ ಜೇಬು ಸುಡುತ್ತಿದೆ ತೊಗರಿ ಬೇಳೆ: ದಿಢೀರ್ ಬೆಲೆ ಏರಿಕೆಗೆ, ಕಾರಣವೇನು
Lentil Price Hike: ಕರ್ನಾಟಕದಲ್ಲಿ ಬೇಸಿಗೆಗೆ ಮೊದಲೇ ತೊಗರಿ ಬೇಳೆ ಬೆಲೆ ಭರ್ಜರಿ ಹೆಚ್ಚಳವಾಗಿದೆ. ಮುಂದಿನ ದಿನಗಳಲ್ಲಿ ತೊಗರಿ ಬೇಳೆ ಬೆಲೆ ಇನ್ನಷ್ಟು ಹೆಚ್ಚಳವಾಗುವ ಸಾಧ್ಯತೆ ಇದೆ. ಬೇಸಿಗೆ ಪ್ರಾರಂಭವಾಗುವುದಕ್ಕಿಂತ ಮುಂಚೆಯೇ ಕರ್ನಾಟಕದಲ್ಲಿ ವಿವಿಧ ತಳಿಯ ತೊಗರಿ ಬೇಳೆ ಸೇರಿದಂತೆ ಬೇಳೆ, ಕಾಳುಗಳ ಬೆಲೆ ಹೆಚ್ಚಳವಾಗಿದೆ.
ಕರ್ನಾಟಕದಲ್ಲಿ ತೊಗರಿ ಬೇಳೆ ದರ ಏರಿಕೆಯಾಗಿದ್ದು, ಚಿಲ್ಲರೆ ಮಾರುಕಟ್ಟೆಯಲ್ಲಿ ಪ್ರತಿ ಕೆಜಿಗೆ ತೊಗರಿ ಬೇಳೆ ಬೆಲೆಯು 135 ರೂಪಾಯಿಯವರೆಗೆ ತಲುಪಿದೆ. ಬೇಸಿಗೆಯ ಆರಂಭಕ್ಕೂ ಮುನ್ನವೇ ಗ್ರಾಹಕರಿಗೆ ಬೆಲೆ ಏರಿಕೆಯ ಬಿಸಿ ಮುಟ್ಟಿದಂತೆ ಆಗಿದೆ. ಕಲಬುರಗಿ, ವಿಜಯಪುರ ಸೇರಿದಂತೆ ವಿವಿಧ ಭಾಗದಲ್ಲಿ ಬೆಂಬಲ ಬೆಲೆ ಯೋಜನೆಯಡಿ ತೊಗರಿ ಬೇಳೆಗೆ ಕ್ವಿಂಟಾಲ್‌ಗೆ 8,000 ರೂ. ನಿಗದಿಪಡಿಸಲಾಗಿದೆ. ಮಾರುಕಟ್ಟೆಯಲ್ಲಿ ಪ್ರತಿ ಕ್ವಿಂಟಲ್ ತೊಗರಿ ಬೇಳೆ ಬೆಲೆಯು ಕಳೆದ ಒಂದು ತಿಂಗಳ ಅವಧಿಯಲ್ಲೇ 1,300 ರೂಪಾಯಿಯಷ್ಟು ಹೆಚ್ಚಳವಾಗಿದೆ. ತೊಗರಿ ಬೇಳೆ ಬೆಲೆಯು ರೈತರಲ್ಲಿ ಮಂದಹಾಸ ಮೂಡಿಸಿದ್ದರೆ, ಗ್ರಾಹಕರಿಗೆ ಹೊರೆಯಾಗಿ ಬದಲಾಗಿದೆ.

ತೊಗರಿ ಬೇಳೆಯು ಕರ್ನಾಟಕದ ವಿವಿಧ ಭಾಗದಲ್ಲಿ ಪ್ರತಿ ಕೆಜಿಗೆ 110 ರೂಪಾಯಿಯಿಂದ 135 ರೂಪಾಯಿಗೆ ಹೆಚ್ಚಳವಾಗಿದೆ. ಕರ್ನಾಟಕ ಸರ್ಕಾರವು 2025 - 2026ನೇ ಸಾಲಿಗೆ ಪ್ರತಿ ಕ್ವಿಂಟಾಲ್ ತೊಗರಿಗೆ 7,550 ಕನಿಷ್ಠ ಬೆಂಬಲ ಬೆಲೆ ಹಾಗೂ 450 ರೂಪಾಯಿ ಹೆಚ್ಚುವರಿ ಪ್ರೋತ್ಸಾಹಧನ ಸೇರಿದಂತೆ ಒಟ್ಟು 8,000 ರೂಪಾಯಿ ನಿಗದಿಪಡಿಸಿದೆ. ತೊಗರಿ ಬೇಳೆಯ ಈ ಹಂಗಾಮಿನ ಕಟಾವು ರಾಜ್ಯದ ಬಹುತೇಕ ಪ್ರದೇಶಗಳಲ್ಲಿ ಅಂತಿಮ ಹಂತಕ್ಕೆ ಬಂದಿದೆ. 2025ರ ಡಿಸೆಂಬರ್‌ನಿಂದಲೇ ಆವಕ ಶುರುವಾಗಿದೆ.
ಬೇಸಿಗೆಗೂ ಮುನ್ನವೇ ಬೆಲೆ ಏರಿಕೆ ಬಿಸಿ: ಅಕ್ಕಿ, ಬೇಳೆ ತುಟ್ಟಿ
ತೊಗರಿ ಬೇಳೆ ಬೆಲೆ ಹೆಚ್ಚಳಕ್ಕೆ ಕಾರಣವೇನು
ಇನ್ನು ತೊಗರಿ ಬೇಳೆ ಬೆಲೆಯು ಮಾರುಕಟ್ಟೆಯಲ್ಲಿ ಏಕಾಏಕಿ ಹೆಚ್ಚಳವಾಗಿರುವುದಕ್ಕೆ ಎರಡು ಕಾರಣಗಳಿವೆ. ಮೊದಲನೆಯದಾಗಿ ಈ ಬಾರಿ ತೊಗರಿ ಬೇಳೆ ಇಳುವರಿ ಕಡಿಮೆಯಾಗಿದೆ. ಅಲ್ಲದೇ ತೊಗರಿ ಬೇಳೆಗೆ ಈ ಬಾರಿ ಮಾರುಕಟ್ಟೆಯಲ್ಲಿ ಹೆಚ್ಚು ಬೇಡಿಕೆಯೂ ಇರುವುದರಿಂದ ಬೆಲೆ ಹೆಚ್ಚಳವಾಗುತ್ತಿದೆ. ಈಗಾಗಲೇ ವಿವಿಧ ಬೇಳೆಕಾಳುಗಳು ಹಾಗೂ ತರಕಾರಿಗಳ ಬೆಲೆಯೂ ಹೆಚ್ಚಳವಾಗಿದ್ದು, ಬೇಸಿಗೆಗೆ ಮೊದಲೇ ಗ್ರಾಹಕರ ಜೇಬು ಸುಡುತ್ತಿದೆ.
LPG Price: ಕೇಂದ್ರ ಬಜೆಟ್ 2026 ಮಂಡನೆಗೂ ಮನ್ನ ಎಲ್‌ಪಿಜಿ ಸಿಲಿಂಡರ್ ದರ ಭಾರಿ ಏರಿಕೆ
ತೊಗರಿ ಬೆಳೆಗೆ 12000 ಬೆಂಬಲ ಬೆಲೆ ನಿಗದಿಗೆ ಆಗ್ರಹ
ಇನ್ನು ಕರ್ನಾಟಕ ಸರ್ಕಾರವು 2025 - 2026ನೇ ಸಾಲಿನ ಬಜೆಟ್‌ನಲ್ಲಿ ತೊಗರಿ ಬೆಳೆಗಾರರಿಗೆ ಬಲ ತುಂಬುವ ಉದ್ದೇಶದಿಂದಾಗಿ ಹೆಚ್ಚುವರಿ ಪ್ರೋತ್ಸಾಹ ಧನವನ್ನು ನೀಡಿತ್ತು. ಕನಿಷ್ಠ ಬೆಂಬಲ ಬೆಲೆ ಯೋಜನೆಯ ಅಡಿಯಲ್ಲಿ ತೊಗರಿ ಬೇಳೆಯ ಪ್ರತಿ ಕ್ವಿಂಟಾಲ್‌ಗೆ 7,550 ರೂಪಾಯಿಯೊಂದಿಗೆ 450 ರೂಪಾಯಿ ಹೆಚ್ಚುವರಿ ಪ್ರೋತ್ಸಾಹ ಧನ ನಿಗದಿ ಮಾಡಲಾಗಿತ್ತು. ಅಲ್ಲದೇ ಇದಕ್ಕಾಗಿ ಬರೋಬ್ಬರಿ 138 ಕೋಟಿ ರೂಪಾಯಿ ಅನುದಾನ ಮೀಸಲಿರಿಸಿರುವುದಾಗಿಯೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದರು. ರೈತರು ಕಳೆದ ವರ್ಷವೇ ತೊಗರಿ ಬೇಳೆಗೆ ಕನಿಷ್ಠ 12,000 ಬೆಂಬಲ ಬೆಲೆ ನಿಗದಿ ಮಾಡಬೇಕು ಎಂದು ಆಗ್ರಹಿಸಿದ್ದರು. ಈಗಲೂ ರೈತರು ಕರ್ನಾಟಕ ಸರ್ಕಾರವು ತೊಗರಿ ಬೇಳೆಗೆ ನಿಗದಿ ಮಾಡಿರುವ ಬೆಂಬಲ ಬೆಲೆ ಸಾಕಾಗುತ್ತಿಲ್ಲ. ಕನಿಷ್ಠ 12,000 ರೂ.ರಿಂದ 12,500 ರೂ. ನಿಗದಿ ಮಾಡಬೇಕು ಎಂದು ರೈತರು ಆಗ್ರಹಿಸುತ್ತಿದ್ದಾರೆ.
Credit: Oneindia



Click it and Unblock the Notifications
