Latest Updates
-
ತೆಲಂಗಾಣದಲ್ಲಿ ಭಾರಿ ಮಳೆ: ಮಳೆಯಲ್ಲಿ ವಾಕಿಂಗ್ ಹೋಗುವ ಮುನ್ನ ಈ ಸುರಕ್ಷತಾ ಟಿಪ್ಸ್ ಮರೆಯದಿರಿ -
ಮದುವೆಯಾದ ತಕ್ಷಣ ಸ್ವಾತಂತ್ರ್ಯ ಕೊನೆಗೊಳ್ಳುವುದಿಲ್ಲ: ದಾಂಪತ್ಯದಲ್ಲಿ 'ಸಮ್ಮತಿ'ಯ ಮಹತ್ವವೇನು? -
ಕೇರಳದಲ್ಲಿ ಭಾರೀ ಮಳೆ: ಯೆಲ್ಲೋ ಅಲರ್ಟ್ ಘೋಷಣೆ; ನಿಮ್ಮ ಮನೆ ಮತ್ತು ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳು ಅತ್ಯಗತ್ಯ -
ಗಣೇಶ ಹಬ್ಬದ ಪ್ರಸಾದ ತಯಾರಿಸುತ್ತಿದ್ದೀರಾ? ಕಲಬೆರಕೆ ತಡೆಯಲು ಮತ್ತು ಸುರಕ್ಷಿತ ಪ್ರಸಾದಕ್ಕೆ ಇಲ್ಲಿದೆ ಮಹತ್ವದ ಟಿಪ್ಸ್ -
ಐಫೋನ್ 18 ಪ್ರೋ ಮತ್ತು ಡ್ಯುವೋ ಭಾರತದಲ್ಲಿ ಲಾಂಚ್: ಬೆಲೆ, ಆಫರ್ ಮತ್ತು ಪ್ರಿ-ಆರ್ಡರ್ ಮಾಹಿತಿ ಇಲ್ಲಿದೆ! -
ವಿಶ್ವ ಆತ್ಮಹತ್ಯೆ ತಡೆ ದಿನ: ಮಾನಸಿಕ ಆರೋಗ್ಯ ಸುಧಾರಿಸಲು 10 ನಿಮಿಷದ ಸಿಂಪಲ್ ಮಾರ್ನಿಂಗ್ ರೂಟೀನ್ ಮತ್ತು ಹೆಲ್ಪ್ಲೈನ್ ವಿವರಗಳು -
ವಿಚ್ಛೇದನದ ನಂತರವೂ ಜೀವನಾಂಶ ಪಡೆಯಬಹುದೇ? ಮಧ್ಯಪ್ರದೇಶ ಹೈಕೋರ್ಟ್ನಿಂದ ಮಹತ್ವದ ತೀರ್ಪು! -
ದೆಹಲಿ ವಾಯು ಮಾಲಿನ್ಯ: ಮನೆಯಲ್ಲಿ ಶುದ್ಧ ಗಾಳಿ ಪಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ಪ್ಯಾಕ್ ಮಾಡಿದ ಆಹಾರದ ಮೇಲೆ 'ರೆಡ್ ಹೆಕ್ಸಗನ್' ಎಚ್ಚರಿಕೆ: ಇನ್ಮುಂದೆ ತಿನ್ನುವ ಮುನ್ನ ಈ ವಿಷಯ ಗಮನಿಸಿ! -
ಆಪಲ್ 'ಸರ್ಪ್ರೈಸ್ ಆಂಡ್ ಶೈನ್' ಈವೆಂಟ್: ಐಫೋನ್ 18 ಪ್ರೋ ಮತ್ತು ಫೋಲ್ಡಬಲ್ ಆಲ್ಟ್ರಾ ಲಾಂಚ್, ಭಾರತದಲ್ಲಿ ಬೆಲೆ ಎಷ್ಟು?
ಕಳಪೆ ಎಂದು ಕರೆಯುವಂತಿಲ್ಲ: ಪವರ್ ತೋರಿಸಿದ ನಂ.1 ಮಾರುತಿ ಸುಜುಕಿ.. 5-ಸ್ಟಾರ್ ಕಾರುಗಳಿವು!
ಮಾರುತಿ ಸುಜುಕಿ (Maruti Suzuki) ನಂಬರ್ 1 ಕಾರು ತಯಾರಕ ಕಂಪನಿ ಎಂದೇ ಹೆಸರುವಾಸಿಯಾಗಿದ್ದು, ಅತಿ ಹೆಚ್ಚಿನ ಸಂಖ್ಯೆಯಲ್ಲಿ ಕಾರುಗಳನ್ನು ಮಾರಾಟಗೊಳಿಸುತ್ತಿದೆ. ದೇಶದ ವಾಹನಗಳಿಗೆ ಸುರಕ್ಷತಾ ಪರೀಕ್ಷೆ ನಡೆಸುವ ಸಂಸ್ಥೆ ಭಾರತ್ ಎನ್‌ಸಿಎಪಿ (Bharat NCAP) ಕಂಪನಿಯ ಡಿಜೈರ್, ವಿಕ್ಟೋರಿಸ್ ಹಾಗೂ ಇನ್ವಿಕ್ಟೋಗಳನ್ನು ಅತಿ ಸುರಕ್ಷಿತ ಕಾರುಗಳೆಂದು ತೀರ್ಮಾನಿಸಿದ್ದು, 5 ಸ್ಟಾರ್ ಸೇಫ್ಟಿ ರೇಟಿಂಗ್‌ನ್ನು ಘೋಷಣೆ ಮಾಡಿದೆ. ಬನ್ನಿ.. ಆ ಬಗ್ಗೆ ಹೆಚ್ಚಿನ ವಿವರಗಳನ್ನು ತಿಳಿಯೋಣ.
ಮಾರುತಿ ಸುಜುಕಿ ಡಿಜೈರ್ (Maruti Suzuki Dzire):
ಇದು ಜನಮೆಚ್ಚಿದ ಸೆಡಾನ್ ಆಗಿದೆ. ಭಾರತ್ ಎನ್‌ಸಿಎಪಿಯಿಂದ 5-ಸ್ಟಾರ್ ಸೇಫ್ಟಿ ರೇಟಿಂಗ್‌ನ್ನು ಪಡೆದಿದೆ. ವಯಸ್ಕರ ರಕ್ಷಣೆ ವಿಭಾಗದಲ್ಲಿ 32ಕ್ಕೆ 29.46 ಅಂಕಗಳನ್ನು ಗಳಿಸಿದೆ. ಮಕ್ಕಳ ರಕ್ಷಣೆ ವಿಭಾಗದಲ್ಲಿ 49ಕ್ಕೆ 41.57 ಅಂಕಗಳನ್ನು ಪಡೆದಿದೆ. ಪ್ರಯಾಣಿಕರ ರಕ್ಷಣೆಗಾಗಿ 6-ಏರ್‌ಬ್ಯಾಗ್, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಕ್ರೂಸ್ ಕಂಟ್ರೋಲ್ ಮತ್ತು 360-ಡಿಗ್ರಿ ಕ್ಯಾಮೆರಾವನ್ನು ಒಳಗೊಂಡಿದೆ.

ನೂತನ 'ಡಿಜೈರ್' ರೂ.6.26 ಲಕ್ಷದಿಂದ ರೂ.9.31 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. ತುಂಬಾ ಚೆನ್ನಾಗಿರುವ ವಿನ್ಯಾಸವನ್ನು ಪಡೆದಿದೆ. ಸ್ಪ್ಲೆಂಡಿಡ್ ಸಿಲ್ವರ್, ಬ್ಲ್ಯೂಯಿಶ್ ಬ್ಲ್ಯಾಕ್, ಆರ್ಕ್ಟಿಕ್ ವೈಟ್ ಹಾಗೂ ಮ್ಯಾಗ್ಮಾ ಗ್ರೇ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ. 163 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಮತ್ತು 2,450 ಮಿ.ಮೀ ವೀಲ್‌ಬೇಸ್‌ನ್ನು ಒಳಗೊಂಡಿದೆ.
ಈ ಕಾರು 5 ಆಸನ ಆಯ್ಕೆ ವ್ಯವಸ್ಥೆಯನ್ನು ಪಡೆದಿದೆ. ಹೆಚ್ಚಿನ ಲಗೇಜ್ ಕೊಂಡೊಯ್ಯಲು ಸಾಧ್ಯವಾಗುವಂತೆ 382 ಲೀಟರ್‌ನಷ್ಟು ಬೂಟ್ ಸ್ಪೇನ್‌ನ್ನು ಹೊಂದಿದೆ. 1.2-ಲೀ. ಪೆಟ್ರೋಲ್ ಮತ್ತು 1.2-ಲೀ. ಸಿಎನ್‌ಜಿ ಎಂಜಿನ್‌ನ್ನು ಹೊಂದಿದೆ. 24 ರಿಂದ 34 ಕಿಲೋಮೀಟರ್‌ವರೆಗೆ ಮೈಲೇಜ್ ನೀಡುತ್ತದೆ. 160 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಒಳಗೊಂಡಿದೆ. 9-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ರೇರ್ ಎಸಿ ವೆಂಟ್‌ಗಳು ಮತ್ತು ಸನ್‌ರೂಫ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿದೆ.
ಮಾರುತಿ ಸುಜುಕಿ ವಿಕ್ಟೋರಿಸ್ (Maruti Suzuki Victoris):
ಇದೊಂದು ಪ್ರಖ್ಯಾತ ಎಸ್‌ಯುವಿಯಾಗಿದ್ದು, ಭಾರತ್ ಎನ್‌ಸಿಎಪಿಯು 5-ಸ್ಟಾರ್ ಸೇಫ್ಟಿ ರೇಟಿಂಗ್‌ನ್ನು ನೀಡಿದೆ. ವಯಸ್ಕರ ರಕ್ಷಣೆ ವಿಭಾಗದಲ್ಲಿ 32ಕ್ಕೆ 31.66 ಅಂಕಗಳನ್ನು ಪಡೆದಿದೆ. ಮಕ್ಕಳ ರಕ್ಷಣೆ ವಿಭಾಗದಲ್ಲಿ 49ಕ್ಕೆ 43 ಅಂಕಗಳನ್ನು ಗಳಿಸಿದೆ. 6-ಏರ್‌ಬ್ಯಾಗ್, ಲೆವೆಲ್-2 ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್), ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಹಾಗೂ 360-ಡಿಗ್ರಿ ಕ್ಯಾಮೆರಾವನ್ನು ಒಳಗೊಂಡಿದೆ.
ಹೊಸ 'ವಿಕ್ಟೋರಿಸ್' ರೂ.10.50 ಲಕ್ಷದಿಂದ ರೂ.19.99 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. 1.5-ಲೀ. ಪೆಟ್ರೋಲ್, 1.5-ಲೀ. ಸ್ಟ್ರಾಂಗ್ ಹೈಬ್ರಿಡ್ & 1.5-ಲೀ. ಸಿಎನ್‌ಜಿ ಎಂಜಿನ್‌ನ್ನು ಒಳಗೊಂಡಿದೆ. 21.06 ರಿಂದ 28.65 ಕಿಲೋಮೀಟರ್‌ವರೆಗೆ ಮೈಲೇಜ್ ಕೊಡುತ್ತದೆ. 5 ಆಸನಗಳನ್ನು ಒಳಗೊಂಡಿದೆ. 10.1-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಹಾಗೂ ಪನೋರಮಿಕ್ ಸನ್‌ರೂಫ್‌ನಂತಹ ವೈಶಿಷ್ಟ್ಯಗಳನ್ನು ಹೊಂದಿದೆ.
ಮಾರುತಿ ಸುಜುಕಿ ಇನ್ವಿಕ್ಟೋ (Maruti Suzuki Invicto):
ಈ ಕಾರನ್ನು ಗ್ರಾಹಕರನ್ನು ಮೆಚ್ಚಿಕೊಂಡಿದ್ದಾರೆ. ಭಾರತ್ ಎನ್‌ಸಿಎಪಿಯಿಂದ 5-ಸ್ಟಾರ್ ಸೇಫ್ಟಿ ರೇಟಿಂಗ್‌ನ್ನು ಪಡೆದಿದೆ. ವಯಸ್ಕರ ರಕ್ಷಣೆ ವಿಭಾಗದಲ್ಲಿ 32ಕ್ಕೆ 30.43 ಅಂಕಗಳನ್ನು ಗಳಿಸಿದೆ. ಮಕ್ಕಳ ರಕ್ಷಣೆ ವಿಭಾಗದಲ್ಲಿ 49ಕ್ಕೆ 45 ಅಂಕಗಳನ್ನು ಪಡೆದಿದೆ. 6-ಏರ್‌ಬ್ಯಾಗ್, ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ಮುಂಭಾಗ (ಫ್ರಂಟ್) ಹಾಗೂ ಹಿಂಭಾಗ (ರೇರ್) ಪಾರ್ಕಿಂಗ್ ಸೆನ್ಸರ್‌ಗಳನ್ನು ಒಳಗೊಂಡಿದೆ.
ಇದು ರೂ.24.97 ಲಕ್ಷದಿಂದ ರೂ.28.61 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. 2-ಲೀಟರ್ ಸ್ಟ್ರಾಂಗ್ ಹೈಬ್ರಿಡ್ ಎಂಜಿನ್‌ನ್ನು ಒಳಗೊಂಡಿದೆ. 23 ಕಿಲೋಮೀಟರ್‌ವರೆಗೆ ಮೈಲೇಜ್ ನೀಡುತ್ತದೆ. 5 ಆಸನ ಆಯ್ಕೆ ವ್ಯವಸ್ಥೆಯನ್ನು ಪಡೆದಿದೆ. 7/ 8 ಆಸನಗಳನ್ನು ಹೊಂದಿದೆ. 10.1-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡುಯಲ್ ಝೋನ್ ಕ್ಲೇಮೇಟ್ ಕಂಟ್ರೋಲ್ ಮತ್ತು ಸನ್‌ರೂಫ್ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಪಡೆದಿದೆ.
Credit: Drivespark



Click it and Unblock the Notifications


