Latest Updates
-
ಅಮಾವಾಸ್ಯೆಯ ದಿನ ಜಗಳ ಬೇಡ: ದಂಪತಿಗಳ ನಡುವಿನ ಪ್ರೀತಿ ಹೆಚ್ಚಿಸಲು ಈ ಸಂಭಾಷಣೆ ಸೂತ್ರಗಳು -
ಆರೆಂಜ್ ಅಲರ್ಟ್: ಭಾರಿ ಮಳೆಯಿಂದ ಮನೆ ರಕ್ಷಿಸಲು ಈ 5 ಟಿಪ್ಸ್ ಪಾಲಿಸಿ, ಸುರಕ್ಷಿತವಾಗಿರಿ! -
ಪ್ರೊಟೀನ್ ಪೌಡರ್ನಲ್ಲಿ ಹುಳುಗಳು! ಬಾಲಿವುಡ್ ನಟಿಯ ಆತಂಕ, ಎಫ್ಡಿಎ ತನಿಖೆ ಮತ್ತು ನೀವು ತಿಳಿಯಲೇಬೇಕಾದ ಸುರಕ್ಷತಾ ಟಿಪ್ಸ್ -
BRICS ಶೃಂಗಸಭೆ: ದೆಹಲಿಯಲ್ಲಿ ಟ್ರಾಫಿಕ್ ನಿರ್ಬಂಧ, ಪ್ರಯಾಣಕ್ಕೂ ಮುನ್ನ ಈ ರೂಟ್ ಮ್ಯಾಪ್ ನೋಡಿ! -
ತೆಲಂಗಾಣದಲ್ಲಿ ಭಾರಿ ಮಳೆ: ಮಳೆಯಲ್ಲಿ ವಾಕಿಂಗ್ ಹೋಗುವ ಮುನ್ನ ಈ ಸುರಕ್ಷತಾ ಟಿಪ್ಸ್ ಮರೆಯದಿರಿ -
ಮದುವೆಯಾದ ತಕ್ಷಣ ಸ್ವಾತಂತ್ರ್ಯ ಕೊನೆಗೊಳ್ಳುವುದಿಲ್ಲ: ದಾಂಪತ್ಯದಲ್ಲಿ 'ಸಮ್ಮತಿ'ಯ ಮಹತ್ವವೇನು? -
ಕೇರಳದಲ್ಲಿ ಭಾರೀ ಮಳೆ: ಯೆಲ್ಲೋ ಅಲರ್ಟ್ ಘೋಷಣೆ; ನಿಮ್ಮ ಮನೆ ಮತ್ತು ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳು ಅತ್ಯಗತ್ಯ -
ಗಣೇಶ ಹಬ್ಬದ ಪ್ರಸಾದ ತಯಾರಿಸುತ್ತಿದ್ದೀರಾ? ಕಲಬೆರಕೆ ತಡೆಯಲು ಮತ್ತು ಸುರಕ್ಷಿತ ಪ್ರಸಾದಕ್ಕೆ ಇಲ್ಲಿದೆ ಮಹತ್ವದ ಟಿಪ್ಸ್ -
ಐಫೋನ್ 18 ಪ್ರೋ ಮತ್ತು ಡ್ಯುವೋ ಭಾರತದಲ್ಲಿ ಲಾಂಚ್: ಬೆಲೆ, ಆಫರ್ ಮತ್ತು ಪ್ರಿ-ಆರ್ಡರ್ ಮಾಹಿತಿ ಇಲ್ಲಿದೆ! -
ವಿಶ್ವ ಆತ್ಮಹತ್ಯೆ ತಡೆ ದಿನ: ಮಾನಸಿಕ ಆರೋಗ್ಯ ಸುಧಾರಿಸಲು 10 ನಿಮಿಷದ ಸಿಂಪಲ್ ಮಾರ್ನಿಂಗ್ ರೂಟೀನ್ ಮತ್ತು ಹೆಲ್ಪ್ಲೈನ್ ವಿವರಗಳು
Nelamangala National Highway 48: ನೆಲಮಂಗಲ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಖಾಸಗಿ ಬಸ್ ಅಪಘಾತ: 40 ಜನ ಪಾರು
Nelamangala National Highway 48: ಕರ್ನಾಟಕದಲ್ಲಿ ಖಾಸಗಿ ಬಸ್‌ಗಳಲ್ಲಿ ಅವಘಡ ಸಂಭವಿಸುವುದು ಮುಂದುವರಿದಿದೆ. ಬೆಂಕಿ ಅವಘಡ ಹಾಗೂ ಅಪಘಾತಗಳು ಮುಂದುವರಿದಿವೆ. ರಾಜ್ಯ ಕಾಂಗ್ರೆಸ್ ಸರ್ಕಾರವು ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆಯಾದರೂ, ಈ ಮಾರ್ಗಸೂಚಿಗಳ ಅನುಷ್ಠಾನ ಆಗುತ್ತಿದೆಯೇ ಎನ್ನುವುದನ್ನು ಪರಿಶೀಲನೆ ಮಾಡುತ್ತಿಲ್ಲ. ಹೀಗಾಗಿ, ಕರ್ನಾಟಕದಲ್ಲಿ ಖಾಸಗಿ ಬಸ್‌ಗಳಲ್ಲಿ ಅವಘಡಗಳು ಸಂಭವಿಸುವುದು ಮುಂದುವರಿದಿದೆ. ಇದೀಗ ನೆಲಮಂಗಲದ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಅಪಘಾತ ಸಂಭವಿಸಿದ್ದು, ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ ವಿದ್ಯುತ್ ಕಂಬಕ್ಕೆ ಡಿಕ್ಕಿ ಆಗಿದೆ. ಇದರಿಂದ ಬಸ್ ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದೆ. ಅದೃಷ್ಟವಶಾತ್ ಯಾವುದೇ ಸಾವು - ನೋವು ಸಂಭವಿಸಿಲ್ಲ. ಈ ಅಪಘಾತದಲ್ಲಿ 40 ಜನ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ನೆಲಮಂಗಲ ಸಮೀಪದ ಹನುಮಂತಪುರ ಗೇಟ್ ಸಮೀಪಲ್ಲಿ ಫೆಬ್ರವರಿ 6ರ ಶುಕ್ರವಾರ ನಸುಕಿನ ವೇಳೆ ಖಾಸಗಿ ಬಸ್ ಅಪಘಾತ ಸಂಭವಿಸಿದೆ. ತುಮಕೂರು - ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಮಾರ್ಗವಾಗಿ ಸಂಚರಿಸುತ್ತಿದ್ದ ಸಂಜನಾ ಟ್ರಾವೆಲ್ಸ್ ಎನ್ನುವ ಸಂಸ್ಥೆಗೆ ಸೇರಿದ್ದ ಬಸ್ ಇದಾಗಿದೆ. ಹನುಮಂತಪುರ ಗೇಟ್ ಸಮೀಪಕ್ಕೆ ಬರುವ ಸಂದರ್ಭದಲ್ಲಿ ಚರಂಡಿಯ ಸ್ಲಾಬ್‌ಗೆ ಡಿಕ್ಕಿ ಹೊಡೆದಿದ್ದು, ಡಿಕ್ಕಿಯ ರಭಸಕ್ಕೆ ಚಾಲಕನ ನಿಯಂತ್ರಣ ತಪ್ಪಿದ ಬಸ್ ವೇಗವಾಗಿ ವಿದ್ಯುತ್ ಕಂಬಕ್ಕೆ ಗುದ್ದಿದೆ. ಡಿಕ್ಕಿ ಹೊಡೆದ ಕೂಡಲೇ ಬಸ್ಸಿನಲ್ಲಿ ಬೆಂಕಿ ಕಾಣಿಸಿಕೊಂಡ್ದು, ಬಸ್ ಹೊತ್ತಿ ಉರಿದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಬಸ್‌ನಲ್ಲಿದ್ದ ಪ್ರಯಾಣಿಕರು ಬಸ್ಸಿನಿಂದ ಬೇಗ ಇಳಿದು ಓಡಿದ್ದಾರೆ.

ಪ್ರಕರಣ ದಾಖಲು
ಇನ್ನು ಬಸ್ ಅವಘಡಕ್ಕೆ ಸಂಬಂಧಿಸಿದಂತೆ ನೆಲಮಂಗಲ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಮಾಹಿತಿ ತಿಳಿದ ತಕ್ಷಣ ಅಗ್ನಿಶಾಮಕ ಸಿಬ್ಬಂದಿ ಕೂಡಲೇ ಸ್ಥಳಕ್ಕೆ ಧಾವಿಸಿದ್ದು, ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆದರೆ ಅಗ್ನಿಶಾಮಕ ಸಿಬ್ಬಂದಿ ಬರುವಷ್ಟರಲ್ಲಿ ಬೆಂಕಿಯ ಧಗೆಗೆ ಬಸ್ ಸಂಪೂರ್ಣ ಸುಟ್ಟು ಭಸ್ಮವಾಗಿದೆ.
Shivamogga Bus Accident: ಶಿವಮೊಗ್ಗ ಬಸ್ ದುರಂತ: ಚಾಲಕನ ಸಮಯ ಪ್ರಜ್ಞೆಯಿಂದ ಉಳಿಯಿತು 36 ಅಮೂಲ್ಯ ಜೀವ
ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್
ಖಾಸಗಿ ಬಸ್ ಬೆಂಕಿ ಅವಘಡ ಹಿನ್ನೆಲೆಯಲ್ಲಿ ನೆಲಮಂಗಲ ರಾಷ್ಟ್ರೀಯ ಹೆದ್ದಾರಿ ಸುತ್ತಮುತ್ತಲಿನ ಪ್ರದೇಶದಲ್ಲಿ ಟ್ರಾಫಿಕ್ ಜಾಮ್ ಉಂಟಾಗಿತ್ತು. ಅಪಘಾತದ ಹಿನ್ನೆಲೆಯಲ್ಲಿ ಹೆದ್ದಾರಿಯಲ್ಲಿ ವಾಹನ ಸಂಚಾರ ಅಸ್ತವ್ಯಸ್ತವಾಗಿದ್ದು, ಸಂಚಾರ ಪೊಲೀಸರು ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ.
Sleeper Bus New Rules: ಸ್ಲೀಪರ್ ಬಸ್ ದುರಂತ; ಸುರಕ್ಷತಾ ಮಾನದಂಡ ಬಿಗಿ: ಈ ಎಲ್ಲಾ ನಿಯಮದಲ್ಲಿ ಬದಲಾವಣೆ
ಕರ್ನಾಟಕದಲ್ಲಿ ಹೆಚ್ಚುತ್ತಿದೆ ಖಾಸಗಿ ಬಸ್ ಅವಘಡ
ಕರ್ನಾಟಕದ ಖಾಸಗಿ ಬಸ್‌ಗಳಲ್ಲಿ ಅಪಘಾತಗಳು ಸಂಭವಿಸುವುದು ಹೆಚ್ಚಾಗಿದೆ. ಈಚೆಗೆ ಶಿವಮೊಗ್ಗ ಹಾಗೂ ಚಿತ್ರದುರ್ಗ ಮಾರ್ಗಗಳಲ್ಲಿ ಖಾಸಗಿ ಬಸ್ ಅಪಘಾತಗಳು ಸಂಭವಿಸಿದ್ದವು. ಶಿವಮೊಗ್ಗದಲ್ಲಿ ಸಂಭವಿಸಿದ್ದ ಬಸ್ ದುರಂತದಲ್ಲಿ ಯಾವುದೇ ಸಾವು ಸಂಭವಿಸಿರಲಿಲ್ಲ. ಪ್ರಯಾಣಿಕನ ಸಮಯ ಪ್ರಜ್ಞೆಯಿಂದ ದುರಂತ ತಪ್ಪಿತ್ತು. ಆದರೆ ಚಿತ್ರದುರ್ಗದಲ್ಲಿ ಸಂಭವಿಸಿದ್ದ ಭೀಕರ ಬಸ್ ಅಪಘಡದಲ್ಲಿ 9 ಜನ ಸಜೀವ ದಹನವಾಗಿದ್ದರು. ಇಷ್ಟೆಲ್ಲ ದುರಂತ ಸಂಭವಿಸಿದರೂ ಕರ್ನಾಟಕ ಸರ್ಕಾರ ಎಚ್ಚೆತ್ತುಕೊಂಡಿಲ್ಲ.
Credit: Oneindia



Click it and Unblock the Notifications
