Latest Updates
-
ಗಣೇಶೋತ್ಸವದ ಸೌಂಡ್ ಕಿರಿಕಿರಿ: ನೆರೆಹೊರೆಯವರ ಜೊತೆ ಜಗಳವಿಲ್ಲದೆ ನೆಮ್ಮದಿಯ ನಿದ್ರೆ ಪಡೆಯುವುದು ಹೇಗೆ? -
ದೆಹಲಿ ಮಳೆ: ನಿಮ್ಮ ಮನೆಯಲ್ಲಿ ಬೂಷ್ಟು ಮತ್ತು ತೇವಾಂಶ ತಡೆಯಲು 45 ನಿಮಿಷದ ಸಿಂಪಲ್ ಪ್ಲಾನ್! -
ಗಣೇಶ ಹಬ್ಬದ ಮೋದಕ: ಶುಗರ್ ಏರಿಕೆಯಾಗದಂತೆ ಸವಿಯಲು ಇಲ್ಲಿವೆ 5 ಆರೋಗ್ಯಕರ ಟಿಪ್ಸ್ -
ಐಫೋನ್ 18 ಪ್ರೋ ಪ್ರೀ-ಆರ್ಡರ್: ₹7,000 ಕ್ಯಾಶ್ಬ್ಯಾಕ್ ಪಡೆಯುವುದು ಹೇಗೆ? ನಕಲಿ ಆಫರ್ಗಳಿಂದ ಎಚ್ಚರ! -
ದೆಹಲಿ ಮಳೆ: ಜಾರಿ ಬೀಳದಂತೆ ಎಚ್ಚರ, ಬೆನ್ನುನೋವಿನಿಂದ ಮುಕ್ತಿ ಪಡೆಯಲು 12 ನಿಮಿಷದ ವರ್ಕೌಟ್ ರೂಟಿನ್! -
ಗಣೇಶೋತ್ಸವದ ಸಂಭ್ರಮದಲ್ಲಿ ದಂಪತಿಗಳ ಜಗಳ ಬೇಡ: ಸಮಯ ಮತ್ತು ಬಜೆಟ್ ನಿರ್ವಹಣೆಗೆ ಇಲ್ಲಿದೆ ಸಿಂಪಲ್ ಪ್ಲಾನ್! -
ಗಣೇಶೋತ್ಸವ 2026: ಮಳೆಯ ನಡುವೆಯೂ ಪರಿಸರ ಸ್ನೇಹಿ ಹಬ್ಬ ಆಚರಣೆಗೆ ಇಲ್ಲಿದೆ ಸರಳ ಟಿಪ್ಸ್! -
ಪ್ಯಾಕ್ ಮಾಡಿದ ಆಹಾರದಲ್ಲಿ ಸಕ್ಕರೆ, ಉಪ್ಪು ಹೆಚ್ಚಿದ್ದರೆ ಕೆಂಪು ಲೇಬಲ್: ಸುಪ್ರೀಂ ಕೋರ್ಟ್ ಪ್ರಶ್ನೆ, ಗ್ರಾಹಕರಿಗೆ ಸಿಗುತ್ತಾ ಪರಿಹಾರ? -
ಝೊಮ್ಯಾಟೋದಲ್ಲಿ 'ಪೇ ಆನ್ ಡೆಲಿವರಿ' ಶುಲ್ಕದ ಶಾಕ್: ನಿಮ್ಮ ಬಿಲ್ ಹೆಚ್ಚಾಗುತ್ತಿದೆಯೇ? ಬಚಾವ್ ಆಗೋದು ಹೇಗೆ? -
ಗಣೇಶೋತ್ಸವದ ಮಳೆ ಮತ್ತು ದರ್ಶನದ ಕ್ಯೂ: ಆಯಾಸವಿಲ್ಲದೆ ಬಪ್ಪನ ದರ್ಶನ ಪಡೆಯಲು ಇಲ್ಲಿದೆ ಬೆಸ್ಟ್ ಟಿಪ್ಸ್!
ಗಟ್ಟಿಮುಟ್ಟದ ಬೈಕ್‌ಯಿದು! ಭಾರತದಲ್ಲಿ ಹೊಸ ರಾಯಲ್ ಎನ್‌ಫೀಲ್ಡ್ ಬುಲೆಟ್ 650 ಅನಾವರಣ.. ಬೆಲೆ & ವಿಶೇಷತೆಗಳೇನು?
ಗೋವಾದಲ್ಲಿ ಜರುಗುತ್ತಿರುವ ಮೋಟೋವರ್ಸ್-2025 (MotoVerse-2025) ಕಾರ್ಯಕ್ರಮದಲ್ಲಿ ನೂತನ ರಾಯಲ್ ಎನ್‌ಫೀಲ್ಡ್ ಬುಲೆಟ್ 650 (Royal Enfield Bullet 650) ಮೋಟಾರ್‌ಸೈಕಲ್‌ನ್ನು ಅದ್ದೂರಿಯಾಗಿ ಅನಾವರಣಗೊಳಿಸಲಾಗಿದೆ. ಇದು ಹೆಚ್ಚು ಅತ್ಯಾಧುನಿಕವಾದ ವಿನ್ಯಾಸ ಹೊಂದಿದ್ದು, ಹಲವು ವಿನೂತನ ವೈಶಿಷ್ಟ್ಯಗಳಿಗೂ ಸಾಕ್ಷಿಯಾಗಿದೆ. ಬಹುಮುಖ್ಯವಾಗಿ ಯುವ ಗ್ರಾಹಕರನ್ನು ಗಮನದಲ್ಲಿಟ್ಟುಕೊಂಡು ಸಿದ್ದಪಡಿಸಲಾಗಿದೆ. ಬನ್ನಿ, ಈ ಬೈಕ್‌ನ ನಿರೀಕ್ಷಿತ ಬೆಲೆ ಎಷ್ಟು.. ವಿಶೇಷತೆಗಳೇನು ಕುರಿತಂತೆ ಸಂಪೂರ್ಣವಾದ ವಿವರಗಳನ್ನು ತಿಳಿಯೋಣ.
ಹೊಚ್ಚ ಹೊಸ 'ರಾಯಲ್ ಎನ್‌ಫೀಲ್ಡ್ ಬುಲೆಟ್ 650' ಮೋಟಾರ್‌ಸೈಕಲ್, ಕೈಗೆಟುಕುವ ಬೆಲೆಯಲ್ಲಿ ಖರೀದಿಗೆ ಲಭ್ಯವಾಗುವ ಸಾಧ್ಯತೆಯಿದೆ. ಕನಿಷ್ಠ ರೂ.2.80 ಲಕ್ಷ ಹಾಗೂ ಗರಿಷ್ಠ ರೂ.2.90 ಲಕ್ಷ (ಎಕ್ಸ್-ಶೋರೂಂ - ನವದೆಹಲಿ) ದರವನ್ನು ಒಳಗೊಂಡಿರಬಹುದು ಎಂದು ಅಂದಾಜಿಸಲಾಗಿದೆ. 2026ರ ಆರಂಭದಲ್ಲಿ ಮಾರಾಟಕ್ಕೆ ಬರಬಹುದು ಎಂದು ಹೇಳಲಾಗಿದೆ.

ಇದು ಹೆಚ್ಚು ಅತ್ಯಾಧುನಿಕವಾದ ವಿನ್ಯಾಸವನ್ನು ಹೊಂದಿದೆ. ಬಹುತೇಕ 'ರಾಯಲ್ ಎನ್‌ಫೀಲ್ಡ್ ಬುಲೆಟ್ 350'ಗೆ ಹೋಲಿಕೆಯಾಗುತ್ತಿದೆ. ಉತ್ತಮವಾದ ಎಲ್ಇಡಿ ಹೆಡ್‌ಲ್ಯಾಂಪ್, ಎಲ್ಇಡಿ ಟೈಲ್ ಲ್ಯಾಂಪ್, ಟರ್ನ್ ಸಿಗ್ನಲ್ ಲ್ಯಾಂಪ್ & ಸಿಂಗಲ್-ಪೀಸ್ ಸೀಟ್‌ನ್ನು ಪಡೆದಿದೆ. ಕ್ಯಾನನ್ ಬ್ಲ್ಯಾಕ್ ಹಾಗೂ ಬ್ಯಾಟಲ್‌ಶಿಪ್ ಬ್ಲೂ ಎಂಬ ಬಣ್ಣಗಳ ಆಯ್ಕೆಯಲ್ಲಿಯೂ ಲಭ್ಯವಿದೆ.
ಈ ಬೈಕ್ ಹೆಚ್ಚು ವಿಶಾಲವಾಗಿದೆ. 2,318 ಮಿ.ಮೀ ಉದ್ದ, 892 ಮಿ.ಮೀ ಅಗಲ ಹಾಗೂ 1,137 ಮಿ.ಮೀ ಎತ್ತರವಿದೆ. ಜೊತೆಗಿದು 154 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಮತ್ತು 1,475 ಮಿ.ಮೀ ವೀಲ್‌ಬೇಸ್‌ನ್ನು ಒಳಗೊಂಡಿದೆ. ಸರಿ ಸುಮಾರು 243 ಕೆಜಿ ತೂಕವಿದೆ.
ನೂತನ 'ರಾಯಲ್ ಎನ್‌ಫೀಲ್ಡ್ ಬುಲೆಟ್ 650' ಮೋಟಾರ್‌ಸೈಕಲ್, ಬಲಿಷ್ಠವಾದ ಪವರ್‌ಟ್ರೇನ್‌ನ್ನು ಪಡೆದಿದೆ. 648 ಸಿಸಿ ಏರ್/ಆಯಿಲ್ ಕೂಲ್ಡ್ ಪೆಟ್ರೋಲ್ ಎಂಜಿನ್‌ನ್ನು ಒಳಗೊಂಡಿದೆ. 7,250 ಆರ್‌ಪಿಎಂನಲ್ಲಿ 47 ಬಿಹೆಚ್‌ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 5,650 ಆರ್‌ಪಿಎಂನಲ್ಲಿ 52 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ. 6-ಸ್ಪೀಡ್ ಗೇರ್‌ಬಾಕ್ಸ್‌ನ್ನು ಹೊಂದಿದೆ. 30 ಕಿ.ಮೀವರೆಗೆ ಮೈಲೇಜ್ ಕೊಡಬಹುದು ಎನ್ನಲಾಗಿದೆ.
ಇದು ಹಲವು ಆಕರ್ಷಕ ವೈಶಿಷ್ಟ್ಯಗಳನ್ನು ಪಡೆದುಕೊಂಡಿದೆ. ಸೆಮಿ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಚಾರ್ಜಿಂಗ್ ಪೋರ್ಟ್ ಮತ್ತು ಎಲೆಕ್ಟ್ರಿಕ್ ಸ್ಟಾರ್ಟ್‌ನ್ನು ಹೊಂದಿದೆ. ಬಲಿಷ್ಠವಾದ ಟೈರ್ಗಳನ್ನು ಒಳಗೊಂಡಿದೆ. 14.8 ಲೀಟರ್ ಸಾಮರ್ಥ್ಯದ ಫ್ಯುಯೆಲ್ ಟ್ಯಾಂಕ್‍ನ್ನು ಒಳಗೊಂಡಿದೆ.
ಈ ಮೋಟಾರ್‌ಸೈಕಲ್ ಸವಾರರಿಗೆ ಗರಿಷ್ಠ ಮಟ್ಟದಲ್ಲಿ ರಕ್ಷಣೆ ಒದಗಿಸುತ್ತದೆ. ಸುರಕ್ಷತೆಯ ದೃಷ್ಟಿಯಿಂದ ಮುಂಭಾಗ (ಫ್ರಂಟ್) 43 ಮಿ.ಮೀ ಟೆಲಿಸ್ಕೋಪಿಕ್ ಫೋರ್ಕ್ ಹಾಗೂ ಹಿಂಭಾಗ (ರೇರ್) ಟ್ವಿನ್ ಶಾಕ್ ಸಸ್ಪೆನ್ಷನ್ ಸೆಟಪ್‌ನ್ನು ಹೊಂದಿದೆ. ಡುಯಲ್ ಚಾನೆಲ್ ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್) ಮತ್ತು ಡಿಸ್ಕ್ ಬ್ರೇಕ್‌ಗಳನ್ನು ಪಡೆದಿದೆ.
ರಾಯಲ್ ಎನ್‌ಫೀಲ್ಡ್ ಹಿಮಾಲಯನ್ 450 ಮನಾ ಬ್ಲ್ಯಾಕ್ ಎಡಿಷನ್ ಕೂಡ ಬಿಡುಗಡೆಯಾಗಿದೆ:
ಇದು ರೂ.3.37 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. ತುಂಬಾ ಅಚ್ಚುಕಟ್ಟಾದ ವಿನ್ಯಾಸವನ್ನು ಒಳಗೊಂಡಿದೆ. ಬಾಡಿ ಪ್ಯಾನೆಲ್‌ಗಳು 'ಬ್ಲ್ಯಾಕ್' ಕಲರ್‌ನಿಂದ ಆವೃತ್ತವಾಗಿವೆ. ಬ್ಲ್ಯಾಕ್ ರ‍್ಯಾಲಿ ಸೀಟ್, ಬ್ಲ್ಯಾಕ್ ರ‍್ಯಾಲಿ ಹ್ಯಾಂಡ್‌ಗಾರ್ಡ್‌ಗಳು, ರ‍್ಯಾಲಿ ಮಡ್‌ಗಾರ್ಡ್, ವೈರ್-ಸ್ಪೋಕ್ಡ್ ವೀಲ್‌ಗಳು ಹಾಗೂ ಟ್ಯೂಬ್‌ಲೆಸ್ ಟೈರ್ಗಳನ್ನು ತನ್ನದಾಗಿಸಿಕೊಂಡಿದೆ. 230 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 1,510 ಮಿ.ಮೀ ವೀಲ್‌ಬೇಸ್‌ನ್ನು ಪಡೆದಿದೆ.
ನೂತನ 'ಮನಾ ಬ್ಲ್ಯಾಕ್ ಎಡಿಷನ್' 452 ಸಿಸಿ ಲಿಕ್ವಿಡ್-ಕೋಲ್ಡ್, ಸಿಂಗಲ್-ಸಿಲಿಂಡರ್ ಪೆಟ್ರೋಲ್ ಎಂಜಿನ್‌ನ್ನು ಹೊಂದಿದೆ. 6-ಸ್ಪೀಡ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. 30 ಕಿ.ಮೀವರೆಗೆ ಮೈಲೇಜ್ ಕೊಡುತ್ತದೆ. 4-ಇಂಚಿನ ರೌಂಡ್ ಟಿಎಫ್‌ಟಿ ಡಿಸ್‌ಪ್ಲೇ ಹಾಗೂ ಫೋನ್ ಕನೆಕ್ಟಿವಿಟಿ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ. ಪ್ರಯಾಣಿಕರ ರಕ್ಷಣೆಗಾಗಿ ಡಿಸ್ಕ್ ಬ್ರೇಕ್‌ಗಳನ್ನು ಹೊಂದಿದೆ.
Credit: Drivespark



Click it and Unblock the Notifications


