Latest Updates
-
ಕಿರೀಟ ಯಾರ ಪಾಲಾಗಲಿದೆ? ದೆಹಲಿಯಲ್ಲಿ ಮಿಸ್ ಗ್ರ್ಯಾಂಡ್ ಇಂಡಿಯಾ 2026 ಫಿನಾಲೆ ಸಂಭ್ರಮದ ಕ್ಷಣಗಳು -
ಹವಾಮಾನದಲ್ಲಿ ಭಾರಿ ಬದಲಾವಣೆ: ಮೇ 12-13 ರಂದು ಹೊರಗೆ ಹೋಗುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ದೆಹಲಿ ಮದುವೆ ಸೀಸನ್: ಮಳೆ ಮತ್ತು ಬಿರುಗಾಳಿಯಿಂದ ನಿಮ್ಮ ಸಂಭ್ರಮವನ್ನು ಕಾಪಾಡಿಕೊಳ್ಳುವುದು ಹೇಗೆ? -
ಬಿಸಿಗಾಳಿ-ಮಳೆ ಎಚ್ಚರಿಕೆ: ನಿಮ್ಮ ಮನೆ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ ಟಿಪ್ಸ್ ಫಾಲೋ ಮಾಡಿ! -
ಬಿಸಿಗಾಳಿಯ ಆರ್ಭಟಕ್ಕೆ ಸುಸ್ತಾಗಿದ್ದೀರಾ? ಈ ಆಹಾರ ಕ್ರಮ ಪಾಲಿಸಿದರೆ ಬಿಸಿಲು ನಿಮ್ಮನ್ನೇನೂ ಮಾಡಲ್ಲ! -
ಕಾನ್ 2026: ರೆಡ್ ಕಾರ್ಪೆಟ್ ಮೇಲೆ ಭಾರತೀಯರ ಅಬ್ಬರ, ಈ ಬಾರಿ ಫ್ಯಾಷನ್ ಲೋಕವೇ ದಂಗು! -
ಪ್ರಧಾನಿ ಮೋದಿ ಭೇಟಿಯ ನಂತರ ಟ್ರೆಂಡಿಂಗ್: ಕೇವಲ 15 ನಿಮಿಷದಲ್ಲಿ ನಿಮ್ಮ ದಿನವನ್ನು ಬದಲಾಯಿಸುವ ಮ್ಯಾಜಿಕ್ ಯೋಗ ಟಿಪ್ಸ್! -
ಮದರ್ಸ್ ಡೇ 2026: ಅಮ್ಮ ಮತ್ತು ಅತ್ತೆಯ ನಡುವೆ ಸಿಲುಕಿದ್ದೀರಾ? ಈ ಟ್ರಿಕ್ಸ್ ಫಾಲೋ ಮಾಡಿ! -
ಬಿರುಗಾಳಿ ಅಪ್ಪಳಿಸುವ ಮುನ್ನ ಎಚ್ಚರ: ನಿಮ್ಮ ಮನೆಯನ್ನು ಸುರಕ್ಷಿತವಾಗಿಡಲು ಈ ಕೆಲಸಗಳನ್ನು ಇಂದೇ ಮಾಡಿ! -
ಬಿಸಿಗಾಳಿಯ ಆರ್ಭಟಕ್ಕೆ ಸುಸ್ತಾಗಿದ್ದೀರಾ? ದೇಹವನ್ನು ತಂಪಾಗಿಡಲು ಈ ಸರಳ ಟಿಪ್ಸ್ ಮಿಸ್ ಮಾಡ್ಬೇಡಿ!
Rain Alert: ಕರ್ನಾಟಕದಲ್ಲಿ ಮುಂದಿನ 5 ದಿನ ಮಳೆಯಬ್ಬರ ಫಿಕ್ಸ್! ಚೆನ್ನೈನಲ್ಲಿ ಶಾಲಾ-ಕಾಲೇಜುಗಳಿಗೆ ರಜೆ
ಒಂದು ಕಡೆ ಚಳಿ, ಮತ್ತೊಂದು ಕಡೆ ಮಳೆ, ಜನರಂತೂ ಹವಾಮಾನ ಬದಲಾವಣೆಯಿಂದ ತತ್ತರಿಸಿ ಹೋಗಿದ್ದಾರೆ. ಕೆಲವರು ಬೆಳೆ ಹಾನಿಯ ಬಗ್ಗೆ ಚಿಂತೆ ಮಾಡುತ್ತಿದ್ದರೆ, ಇನ್ನೂ ಕೆಲವರು ಆರೋಗ್ಯದ ಚಿಂತೆಯಲ್ಲಿದ್ದಾರೆ. ಅದರಲ್ಲೂ ದಿತ್ವಾ ಚಂಡಮಾರುತಕ್ಕೆ (Ditwah Cyclone) ಶ್ರೀಲಂಕಾವಂತೂ ಅಕ್ಷರಶಃ ನಲುಗಿ ಹೋಗಿದೆ. ನೂರಾರು ಮಂದಿ ನಾಪತ್ತೆ, ನೂರಾರು ಮನೆಗಳು ನೆಲಸಮವಾಗಿಬಿಟ್ಟಿದೆ. ಇದೀಗ ಚಂಡಮಾರುತದ ಪರಿಣಾಮ ತಮಿಳುನಾಡು, ಚೆನ್ನೈ, ಕರ್ನಾಟಕ, ಕೇರಳಕ್ಕೂ ತಟ್ಟಿದೆ. ಚೆನ್ನೈನಲ್ಲಿ ವಿಪರೀತ ಮಳೆಯಾಗುತ್ತಿದ್ದು, ಶಾಲಾ-ಕಾಲೇಜುಗಳಿಗೂ ರಜೆ (School-College Holiday) ಘೋಷಣೆ ಮಾಡಲಾಗಿದೆ. ಇನ್ನು ಕರ್ನಾಟಕದಲ್ಲೂ ಈ ವಾರವಿಡೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಎಲ್ಲೆಲ್ಲಿ ಮಳೆ?
ರಾಜ್ಯದಲ್ಲಿ ಮುಂದಿನ 5 ದಿನ ಭಾರೀ ಮಳೆಯಾಗಲಿದೆ ಎಂದು ಕರ್ನಾಟಕ ರಾಜ್ಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಆ ಪ್ರಕಾರ ವಿಜಯನಗರ, ಚಿತ್ರದುರ್ಗ, ಚಿಕ್ಕಮಗಳೂರು, ಹಾಸನ, ಮೈಸೂರು, ಚಾಮರಾಜನಗರ, ಕೋಲಾರ, ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ಶಿವಮೊಗ್ಗ, ದಾವಣಗೆರೆ, ತುಮಕೂರು, ಕೊಡಗು, ಮಂಡ್ಯ, ಚಿಕ್ಕಬಳ್ಳಾಪುರ, ರಾಮನಗರ ಜಿಲ್ಲೆಗಳಲ್ಲಿ ಸಾಧಾರಣದಿಂದ ಸಣ್ಣ ಮಳೆಯಾಗಬಹುದು. ಇನ್ನು ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಗುಡು ಸಹಿತ ಮಳೆಯಾಗಲಿದೆ ಎಂದು ಎಚ್ಚರಿಕೆ ನೀಡಿದೆ.
ಬೆಂಗಳೂರಿನ ಹವಾಮಾನ:
ಬೆಂಗಳೂರಿನಲ್ಲೂ ವರುಣನ ಅಬ್ಬರ ಇರಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ಬೆಂಗಳೂರು ನಗರದಲ್ಲಿ ಇಂದು ಸಾಧಾರಣ ಮಳೆಯಾಗಲಿದ್ದು, ದಿನವಿಡೀ ಮೋಡಕವಿದ ವಾತಾವರಣ ಕಂಡುಬರಲಿದೆ. ಇನ್ನು ತಾಪಮಾನ ಗರಿಷ್ಠ 26 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 18 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ವರದಿಯಾಗಿದೆ.
ತಮಿಳುನಾಡಿಗೂ ತಟ್ಟಿದ ಚಂಡಮಾರುತ!
ದಿತ್ವಾ ಚಂಡಮಾರುತದ ಪರಿಣಾಮ ದೇಶದ ಹಲವೆಡೆ ಭಾರೀ ಮಳೆಯಾಗುತ್ತಿದೆ. ಅದರಲ್ಲೂ ಚೆನ್ನೈನಲ್ಲಿ ಮಳೆಯಬ್ಬರ ಜೋರಾಗಿಯೇ ಇದೆ. ಈ ಹಿನ್ನೆಲೆ ಗುರುವಾರ (ಡಿ.04) ಚೆನ್ನೈ ಮತ್ತು ತಿರುವಲ್ಲೂರು ಜಿಲ್ಲಾಧಿಕಾರಿಗಳು ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದ್ದಾರೆ.
ಗುರುವಾರ ಮಧ್ಯಾಹ್ನದವರೆಗೂ ಚೆನ್ನೈ, ತಿರುವಲ್ಲೂರು, ಚೆಂಗಲ್ಪಟ್ಟು ಮತ್ತು ಕಾಂಚೀಪುರಂ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಸೂಚನೆ ನೀಡಿದೆ. ನೈಋತ್ಯ ಬಂಗಾಳಕೊಲ್ಲಿಯಲ್ಲಿ ದಿತ್ವಾ ಚಂಡಮಾರುತದಿಂದ ಉಂಟಾದ ವಾಯುಭಾರ ಕುಸಿತವು ದುರ್ಬಲಗೊಂಡು ಈ ಮಳೆಗೆ ಕಾರಣವಾಗಿದೆ. ಇನ್ನು ವಿಲ್ಲುಪುರಂ, ಕಡಲೂರು ಮತ್ತು ತಿರುವಣ್ಣಾಮಲೈ ಸೇರಿ ಹಲವು ಕಡೆಗಳಲ್ಲಿ ಹಲವು ದಿನಗಳ ನಂತರ ಮತ್ತೆ ಭಾರಿ ಮಳೆ ಸುರಿಯುತ್ತಿದೆ. ಸಾರ್ವಜನಿಕ ಸುರಕ್ಷತೆಯನ್ನು ಕಾಪಾಡುವ ನಿಟ್ಟಿನಲ್ಲಿ ಮತ್ತು ಅಪಾಯಗಳನ್ನು ತಡೆಗಟ್ಟಲು ಅಧಿಕಾರಿಗಳು ನದಿಗಳು ಮತ್ತು ತಗ್ಗು ಪ್ರದೇಶಗಳಲ್ಲಿನ ನೀರಿನ ಮಟ್ಟವನ್ನು ನಿರಂತರವಾಗಿ ಮೇಲ್ವಿಚಾರಣೆ ಮಾಡುತ್ತಿದ್ದಾರೆ.
ಇನ್ನು ಮದ್ರಾಸ್ ವಿಶ್ವವಿದ್ಯಾಲಯವು ಭಾರಿ ಮಳೆಯಿಂದಾಗಿ ಬುಧವಾರದಂದು ನಿಗದಿಪಡಿಸಲಾಗಿದ್ದ ಎಲ್ಲಾ ಯುಜಿ, ಪಿಜಿ ಮತ್ತು ವೃತ್ತಿಪರ ಪದವಿ ಪರೀಕ್ಷೆಗಳನ್ನು ಮುಂದೂಡಿದೆ. ಪರೀಕ್ಷೆಗಳ ಪರಿಷ್ಕೃತ ದಿನಾಂಕಗಳನ್ನು ಶೀಘ್ರದಲ್ಲೇ ಪ್ರಕಟಿಸಲಾಗುವುದು ಎಂದು ರಿಜಿಸ್ಟ್ರಾರ್ ಪ್ರೊ. ರೀಟಾ ಜಾನ್ ತಿಳಿಸಿದ್ದಾರೆ.
Credit: Goodreturns



Click it and Unblock the Notifications