Latest Updates
-
ಬೆಲೆ ಏರಿಕೆಯ ಬಿಸಿ: ಜೂನ್ CPI ವರದಿ ಮತ್ತು ನಿಮ್ಮ ಕಿಚನ್ ಬಜೆಟ್ ಉಳಿಸುವ ಸ್ಮಾರ್ಟ್ ಟಿಪ್ಸ್ -
ಸ್ವಿಗ್ಗಿ ಇನ್ಸ್ಟಾಮಾರ್ಟ್ ಗ್ರಾಹಕರಿಗೆ ಎಚ್ಚರಿಕೆ: ಹಾಲು, ಮೊಟ್ಟೆ ಖರೀದಿಸುವಾಗ ಈ ತಪ್ಪು ಮಾಡಬೇಡಿ! -
4-0 ಸೋಲಿನ ಆಘಾತದಲ್ಲಿ ಭಾರತೀಯ ಫ್ಯಾನ್ಸ್: ಏಕದಿನ ಸರಣಿಗೆ ಕಮ್ಬ್ಯಾಕ್ ಸಾಧ್ಯವೇ? ಇಲ್ಲಿದೆ ಪಂದ್ಯಗಳ ವೇಳಾಪಟ್ಟಿ ಮತ್ತು ಹೆಲ್ತ್ ಟಿಪ್ಸ್! -
ಮಾಸಿಕ ಶಿವರಾತ್ರಿ ಉಪವಾಸ: ಸುಸ್ತಾಗದಂತೆ ಇರಲು 6 ನಿಮಿಷದ ಸರಳ ವ್ಯಾಯಾಮ ಮತ್ತು ಟಿಪ್ಸ್ -
ಮನೆಯವರ ವಿರೋಧದ ನಡುವೆ ಮದುವೆ: ಅಲಹಾಬಾದ್ ಹೈಕೋರ್ಟ್ನಿಂದ ಜೋಡಿಗಳಿಗೆ ಸಿಕ್ಕಿತು ಭರ್ಜರಿ ರಕ್ಷಣೆ! -
ಮಳೆ ನಂತರ ದೆಹಲಿ-ಎನ್ಸಿಆರ್ನಲ್ಲಿ ಶುದ್ಧ ಗಾಳಿ: ನಿಮ್ಮ ಮನೆಯನ್ನು ಫ್ರೆಶ್ ಆಗಿಡಲು ಈ ಸರಳ ಟಿಪ್ಸ್ ಪಾಲಿಸಿ! -
ಯೋಗಿನಿ ಏಕಾದಶಿ: ಮಧುಮೇಹಿಗಳು ಉಪವಾಸ ಮಾಡುವಾಗ ಈ ಆರೋಗ್ಯ ಟಿಪ್ಸ್ ಮರೆಯದಿರಿ! -
ವಿಶ್ವ ಜನಸಂಖ್ಯಾ ದಿನ: ಉಚಿತ ಗರ್ಭನಿರೋಧಕಗಳು ಮತ್ತು ನಿಮ್ಮ ಗೌಪ್ಯತೆ ಬಗ್ಗೆ ತಿಳಿಯಲೇಬೇಕಾದ ಸತ್ಯಗಳು -
ಭಾರತ-ಇಂಗ್ಲೆಂಡ್ ಟಿ20 ಪಂದ್ಯದ ರೋಚಕತೆ ನಡುವೆ ಫಿಟ್ ಆಗಿರಲು ಈ 7 ನಿಮಿಷದ ಟಿಪ್ಸ್ ಮಿಸ್ ಮಾಡ್ಬೇಡಿ! -
ಮಳೆಗಾಲದ ಡೇಟಿಂಗ್: ಬಜೆಟ್ ಸ್ನೇಹಿ ಐಡಿಯಾಗಳು ಮತ್ತು ಸುರಕ್ಷಿತವಾಗಿರಲು ಇಲ್ಲಿವೆ ಬೆಸ್ಟ್ ಟಿಪ್ಸ್!
ಸಹ ಕೈದಿಗಳಿಗೆ ಮಾನಸಿಕ, ದೈಹಿಕ ಕಿರುಕುಳ ; ಜೈಲಿನಲ್ಲಿ ದರ್ಶನ್ ರಂಪ - ಕೆರಳಿದ ವಿಜಯಲಕ್ಷ್ಮಿ ಹೇಳಿದ್ದೇನು ?
ದಾಂಪತ್ಯದಲ್ಲಿ ಚಿಕ್ಕ-ಚಿಕ್ಕ ವಿರಸಗಳು ಸಾಂಗತ್ಯದ ಅರ್ಥವನ್ನು ಗಟ್ಟಿ ಮಾಡುತ್ತವೆ. ಇಬ್ಬರ ನಡುವಿನ ಹೊಂದಾಣಿಕೆಯನ್ನು ಹೆಚ್ಚಿಸುತ್ತವೆ. ಇಬ್ಬರ ನಡುವೆ ಇರುವ ತಪ್ಪು ಅಭಿಪ್ರಾಯಗಳನ್ನು-ಗ್ರಹಿಕೆಗಳನ್ನು ಸರಿಪಡಿಸಿಕೊಂಡು ಹೋಗುವುದರಲ್ಲಿಯೇ ದಾಂಪತ್ಯದ ಅರ್ಥ ಅಡಗಿದೆ ಎನ್ನುವುದಕ್ಕೆ ಜ್ವಲಂತ ಉದಾಹರಣೆಯಂತೆ ಇರುವವರು ದರ್ಶನ್ ಮತ್ತು ವಿಜಯಲಕ್ಷ್ಮಿ. ಒಮ್ಮೆ ಬೈದಾಡಿಕೊಂಡು ಆ ನಂತರ ಮತ್ತೆ ಒಂದಾಗಿ ಇನ್ಯಾವತ್ತೋ ಇನ್ಯಾವುದೋ ಕಾರಣಕ್ಕೆ ಮುನಿಸಿಕೊಳ್ಳುತ್ತಾ ಮತ್ತೆ ಒಂದಾಗುತ್ತಾನೇ...
ದರ್ಶನ್ ಜೊತೆ 22 ವರ್ಷ ಕಳೆದ ವಿಜಯಲಕ್ಷ್ಮಿ ಕಳೆದ ವರ್ಷ ತಮ್ಮ ಗಂಡನನ್ನು ಜೈಲಿಂದ ಹೊರ ತರಲು ಮಾಡಿದ ಪ್ರಯತ್ನ ಅಷ್ಟಿಷ್ಟಲ್ಲ. ದರ್ಶನ್ ಜೈಲು ಪಾಲಾದ ಕ್ಷಣದಿಂದ ಹಿಡಿದು ಹೊರ ಬರುವ ತನಕ ವಿರಮಿಸದ ವಿಜಯಲಕ್ಷ್ಮಿ ಕೊಲ್ಲೂರಿಂದ ಹಿಡಿದು ಅಸ್ಸಾಂನ ಕಾಮಾಕ್ಯ ದೇವಸ್ಥಾನದವರೆಗೆ ಸುತ್ತಾಡಿದರು. ಪ್ರಾರ್ಥನೆ ಸಲ್ಲಿಸಿದರು. ಹರಕೆಯನ್ನು ಹೊತ್ತರು.

ವಿಜಯಲಕ್ಷ್ಮಿ ಅವರ ಈ ಪ್ರಾರ್ಥನೆಯ ಫಲ ಎಂಬಂತೆ ದರ್ಶನ್ ಜೈಲಿಂದ ಹೊರ ಬಂದರು ಕೂಡ.ಆ ನಂತರ ದರ್ಶನ್ ಜೈಲಿಂದ ಹೊರ ಬರುತ್ತಿದ್ದಂತೆಯೇ ಸಂಕಷ್ಟಗಳಿಂದ ಪಾರು ಮಾಡುವಂತೆ ಕೇರಳದ ಕಣ್ಣೂರಿನಲ್ಲಿರುವ ಮಾಡಾಯಿಕಾವು ಶ್ರೀಭಗವತೀ ದೇವಸ್ಥಾನಕ್ಕೆ ಕೂಡ ಹೋದ ವಿಜಯಲಕ್ಷ್ಮಿ ಶತ್ರು ಸಂಹಾರ ಪೂಜೆಯನ್ನು ಕೂಡ ಮಾಡಿಸಿದರು. ಮೈಸೂರಿಗೆ ತೆರಳಿ ಚಾಮುಂಡಿ ಬೆಟ್ಟದಲ್ಲಿ ಹರಿಕೆಯನ್ನು ತೀರಿಸಿದ್ದರು. ಕಾಮಾಕ್ಯ ದೇವಸ್ಥಾನಕ್ಕೆ ಕೂಡ ತೆರಳಿ ಹರಕೆ ತೀರಿಸಿದರು.
ದರ್ಶನ್ ಇನ್ನು ಮತ್ತೆ ಜೈಲಿಗೆ ಹೋಗಲಾರರು ಎನ್ನುವ ನಂಬಿಕೆ ಸಹಜವಾಗಿ ವಿಜಯಲಕ್ಷ್ಮಿ ಅವರಲ್ಲಿತ್ತು. ಹೀಗಾಗಿಯೇ ಪತಿಯ ಜೊತೆ ನೆಮ್ಮದಿಯಿಂದ ವಿಜಯಲಕ್ಷ್ಮಿ ದರ್ಶನ್ ಇದ್ದರು. ಸಂಭ್ರಮದಿಂದ ಹಬ್ಬ ಹರಿದಿನಗಳನ್ನು ಆಚರಿಸಿದರು. ನೆರಳಿನಂತೆ ತಮ್ಮ ಪತಿಯನ್ನು ಹಿಂಬಾಲಿಸಿದರು.
ಆದರೆ ಈಗ ವಿಜಯಲಕ್ಷ್ಮಿ ನೆಮ್ಮದಿಗೆ ಮತ್ತೊಮ್ಮೆ ಬೆಂಕಿ ಬಿದ್ದಿದೆ. ದುರಾದೃಷ್ಟ ಮತ್ತೆ ಬೆನ್ನು ಹತ್ತಿದೆ. ದರ್ಶನ್ ಮತ್ತೆ ಜೈಲು ಪಾಲಾಗಿದ್ದಾರೆ. ನರಕಯಾತನೆ ಅನುಭವಿಸುತ್ತಿದ್ದಾರೆ. ಪರಪ್ಪನ ಅಗ್ರಹಾರದಲ್ಲಿ ಅಕ್ಷರಶಃ ಹೈರಾಣಾಗಿದ್ದಾರೆ.
ಹೀಗಿರುವಾಗ ಮೊನ್ನೆ..ಮೊನ್ನೆ..ಜೈಲಿನಲ್ಲಿರುವ ದರ್ಶನ್ ಕುರಿತು ಸುದ್ದಿಯೊಂದು ಹಬ್ಬಿತ್ತು. ಸಹಕೈದಿಗಳಿಗೆ ದರ್ಶನ್ ಮಾನಸಿಕ ಮತ್ತು ದೈಹಿಕ ಕಿರುಕುಳ ಕೊಡುತ್ತಿದ್ದಾರೆ ಎನ್ನುವ ಸುದ್ದಿ ಅದು. ರೇಣುಕಾಸ್ವಾಮಿ ಕೇಸ್‌ನಲ್ಲಿ ಆರೋಪಿಗಳಾಗಿರುವ ಅನುಕುಮಾರ್, ಜಗ್ಗ, ನಾಗರಾಜು, ಪ್ರದೋಶ್, ಲಕ್ಷ್ಮಣ್ ಅವರ ಮೇಲೆ ದರ್ಪ ತೋರುತ್ತಿದ್ದಾರೆ ಎಂದು ಹಲವು ಮಾಧ್ಯಮಗಳಲ್ಲಿ ವರದಿಯಾಗಿತ್ತು.
ಸಹಜವಾಗಿ ''ಡೆವಿಲ್'' ಚಿತ್ರದ ಬಿಡುಗಡೆಯನ್ನು ಜಾತಕ ಪಕ್ಷಿಯಂತೆ ಎದುರು ನೋಡುತ್ತಿರುವ ದರ್ಶನ್ ಅವರ ಅಸಂಖ್ಯಾತ ಅಭಿಮಾನಿಗಳಿಗೆ ಈ ಸುದ್ದಿಯಿಂದ ಮತ್ತೊಮ್ಮೆ ಬರಸಿಡಿಲು ಬಡಿದಂತಾಗಿತ್ತು. ಸುದ್ದಿಯ ಸತ್ಯಾಸತ್ಯತೆಯ ಕುರಿತು ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ ಕೂಡ ಶುರುವಾಗಿತ್ತು. ಇದೀಗ ಈ ಸುದ್ದಿ ನಿಜಾನಾ..? ಸುಳ್ಳಾ..? ಎನ್ನುವುದನ್ನು ಖುದ್ದು ವಿಜಯಲಕ್ಷ್ಮೀ ಅವರೇ ಹೇಳಿದ್ದಾರೆ. ತಮ್ಮ ಅಸಮಾಧಾನವನ್ನು ಕೂಡ ಹೊರ ಹಾಕಿದ್ದಾರೆ.
ಈ ಕುರಿತು ತಮ್ಮ ಇನ್‌ಸ್ಟಾಗ್ರಾಮ್ ಸ್ಟೋರಿಯಲ್ಲಿ ಬರೆದುಕೊಂಡಿರುವ ವಿಜಯಲಕ್ಷ್ಮಿ,ಇಂದು ನಾನು ಜೈಲಿಗೆ ಭೇಟಿ ನೀಡಿದಾಗ, ನಾನು ಅಧಿಕಾರಿಗಳೊಂದಿಗೆ, ನನ್ನ ಪತಿಯೊಂದಿಗೆ ಮತ್ತು ಅವರಿಂದ ಹಲ್ಲೆಗೊಳಗಾದ ವ್ಯಕ್ತಿಗಳೊಂದಿಗೆ ವೈಯಕ್ತಿಕವಾಗಿ ಮಾತನಾಡಿದೆ ಎಂದು ಹೇಳಿದ್ದಾರೆ. ವದಂತಿಗಳಿಂದಲ್ಲ, ಊಹಾಪೋಹಗಳಿಂದಲ್ಲ, ವಿಕೃತ ನಿರೂಪಣೆಗಳಿಂದಲ್ಲ, ಎಲ್ಲವನ್ನೂ ನೇರವಾಗಿ ಅರ್ಥಮಾಡಿಕೊಳ್ಳಲು ನಾನು ಬಯಸಿದ್ದೆ ಎಂದಿದ್ದಾರೆ.
ಮುಂದುವರೆದು ಎಲ್ಲರನ್ನೂ ಮಾತನಾಡಿಸಿ ಅವರ ಮಾತುಗಳನ್ನು ಕೇಳಿದ ನಂತರ, ಒಂದು ವಿಷಯ ನನಗೆ ಸಂಪೂರ್ಣವಾಗಿ ಸ್ಪಷ್ಟವಾಯಿತು, ಈ ಆರೋಪಗಳು ನಕಲಿ, ಆಧಾರರಹಿತ ಮತ್ತು ದುರುದ್ದೇಶಪೂರಿತ ಉದ್ದೇಶದಿಂದ ಸೃಷ್ಟಿಸಲ್ಪಟ್ಟಿವೆ ಎಂದು ವಿಜಯಲಕ್ಷ್ಮಿ ತಮ್ಮ ಸೋಶಿಯಲ್ ಮೀಡಿಯಾ ಮೂಲಕ ಹೇಳಿದ್ದಾರೆ.
ಇನ್ನೂ ಇದೇ ಸಮಯದಲ್ಲಿ ಕೆಲ ಮಾಧ್ಯಮಗಳ ವಿರುದ್ದ ಕಿಡಿ ಕಾರಿರುವ ವಿಜಯಲಕ್ಷ್ಮಿ, ಸತ್ಯವು ಸ್ವಲ್ಪ ಸಮಯದವರೆಗೆ ಮೌನವಾಗಿರಬಹುದು. ಆದರೆ ಅದು ಎಂದಿಗೂ ತಲೆಬಾಗುವುದಿಲ್ಲ. ಸುಳ್ಳುಗಳು ಜೋರಾಗಿ ಕೂಗುತ್ತವೆ.. ತಮ್ಮದೇ ಆದ ಭಾರಕ್ಕೆ ಕುಸಿಯುವ ಮೊದಲು ಎಂದು ಕೂಡ ಬರೆದುಕೊಂಡಿದ್ದಾರೆ. ಈ ಮೂಲಕ ದರ್ಶನ್ ಜೈಲಿನಲ್ಲಿ ಗಲಾಟೆ ಮಾಡಿದ್ದಾರೆ ಎನ್ನುವ ಸುದ್ದಿ ಸಂಪೂರ್ಣ ಸುಳ್ಳು ಎನ್ನುವುದನ್ನು ವಿಜಯಲಕ್ಷ್ಮಿ ಸ್ಪಷ್ಟಪಡಿಸಿದ್ದಾರೆ.
Credit: Filmibeat



Click it and Unblock the Notifications

